ಏಪ್ರಿಲ್ ಒಳಗೆ ಆಸ್ತಿ ತೆರಿಗೆ ಪಾವತಿಸಿದರೆ 5% ರಿಯಾಯತಿ

 ತುಮಕೂರು :       ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಮಾಲೀಕರು ತಮ್ಮ ಆಸ್ತಿ ತೆರಿಗೆಯನ್ನು ಏಪ್ರಿಲ್ ಮಾಹೆಯೊಳಗೆ ಪಾವತಿಸಿದಲ್ಲಿ ಪಾವತಿಸಬೇಕಾಗಿರುವ ಆಸ್ತಿ ತೆರಿಗೆ ಮೇಲೆ ಶೇ. 5 ರಷ್ಟು ರಿಯಾಯತಿಯನ್ನು ನೀಡಲಾಗುವುದು ಎಂದು ಆಯುಕ್ತೆ ರೇಣುಕಾ ತಿಳಿಸಿದ್ದಾರೆ.       ಆಸ್ತಿ ತೆರಿಗೆ, ನೀರಿನ ಶುಲ್ಕ, ಯುಜಿಡಿ ಶುಲ್ಕವನ್ನು ಪಾಲಿಕೆಯ ಅಧಿಕೃತ ವೆಬ್‍ಸೈಟ್ www.tumkurucitycorp.org  ಮೂಲಕ ತುಮಕೂರು ಒನ್ ಕೇಂದ್ರ/ ಮಹಾನಗರಪಾಲಿಕೆ ಕಚೇರಿಯಲ್ಲಿ ಪಾವತಿಸಬಹುದಾಗಿದೆ.      ನಾಗರಿಕರು ಸಕಾಲದಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಿ ನಗರದ ಅಭಿವೃದ್ಧಿಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಮುಂದೆ ಓದಿ...

ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ನಾನೇ ಮುಖ್ಯಮಂತ್ರಿ: ಶಾಮನೂರು ಶಿವಶಂಕರಪ್ಪ

ದಾವಣಗೆರೆ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನು ಮುಖ್ಯಮಂತ್ರಿಯಾಗುವುದು ಖಚಿತ. ದಾವಣಗೆರೆ ದಕ್ಷಿಣದಿಂದ ಮುಂದೆ ಸ್ಪರ್ಧಿಸೋಕೆ ನನ್ನ ಬಳಿ ಹಣ ಇಲ್ವಾ?, ನನ್ನ ಬಳಿ ಶಕ್ತಿ ಇಲ್ವಾ..? ಮುಂದೆ ಪಕ್ಷ ಅಧಿಕಾರಕ್ಕೆ ಬಂದ್ರೆ ನಾನು ಮುಖ್ಯಮಂತ್ರಿ ಆಕಾಂಕ್ಷಿ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ತಿಳಿಸಿದರು. ಮಾಧ್ಯಮದೊಂದಿಗೆ ಮಾತನಾಡಿದ ಶಾಸಕ ಶಾಮನೂರು ಶಿವಶಂಕರಪ್ಪ ಡಿಕೆ ಶಿವಕುಮಾರ್- ಸಿದ್ದರಾಮಯ್ಯ ಜೊತೆ ನನ್ನದೂ ಸ್ಪರ್ಧೆ ಇದೆ. ದಾವಣಗೆರೆ ಉತ್ತರದಿಂದ ಸ್ಪರ್ಧೆ ಮಾಡೋ ಬಗ್ಗೆ ಸಿಎಂ ಬೊಮ್ಮಾಯಿ ನನ್ನ ಜೊತೆ ಮಾತನಾಡಿಲ್ಲ. ಅವರು ವಿರೋಧ ಪಕ್ಷದವರು ನನ್ನ ಜೊತೆ ಯಾಕೆ ಮಾತಾಡ್ತಾರೆ. ಮುಂದಿನ ತಿಂಗಳು ಏಪ್ರೀಲ್ 16ಕ್ಕೆ ಮೊಮ್ಮಗಳ ಮದುವೆಗೆ ಸಿಎಂ ಬರುತ್ತಾರೆ ಊಹಾಪೋಹಕ್ಕೆ ಎಡೆಮಾಡಿಕೊಡದಿರಿ ಎಂದರು.

ಮುಂದೆ ಓದಿ...

ಚುನಾವಣೆ ನಂತರ ಇಂಧನ ಬೆಲೆ ಏರಿಕೆ ಎಂಬ ಟೀಕೆಗೆ ಟಾಂಗ್ ಕೊಟ್ಟ ಸಿ.ಟಿ.ರವಿ!

ಬೆಂಗಳೂರು: ಪಂಚರಾಜ್ಯ ಚುನಾವಣೆ ಮುಗಿದ ಬೆನ್ನಲ್ಲೆ ಇಂಧನ ಬೆಲೆ‌ ಏರಿಕೆಯಾಗಿದೆ ಎಂದು ಟೀಕಿಸುವವರನ್ನು ಬಾವಿ ಒಳಗಿನ ಕಪ್ಪೆ ಎಂದು ಕರೆಯಬೇಕೋ, ಪೊಟರೆ ಒಳಗಿನ ಕಪ್ಪೆ ಎನ್ನಬೇಕೋ ತಿಳಿಯುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಗಿ ಮಾತನಾಡಿದರು. ಜಗತ್ತಿನಾದ್ಯಂತ ಏರಿಕೆಯಾಗುತ್ತಿದೆ. ಬರೀ ಈ ನಾಲ್ಕು ರಾಜ್ಯದ ಚುನಾವಣೆಯಿಂದ ದರ ಏರಿಕೆಯಾಗುತ್ತಿದೆ ಎನ್ನುವುದು ತಪ್ಪು ವ್ಯಾಖ್ಯಾನ. ಅವರನ್ನು ಶತ ಮೂರ್ಖರು ಎಂದು ಕರೆಯಬೇಕಾಗುತ್ತದೆ ಎಂದು ಕಿಡಿಕಾರಿದರು. ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮಾಧ್ಯಮದವರು ಯಾರು ಯಾರನ್ನು ಬದಲಾಯಿಸುತ್ತೀರಾ? ನಿಮ್ಮ ಹೇಳಿಕೆಗೆ ಉತ್ತರ ಕೊಡಲು ಆಗುತ್ತಾ? ಎಂದು ಉತ್ತರಿಸಿದರು. ಸಿ.ಟಿ.ರವಿ ಆಕಾಂಕ್ಷಿ ಎಂಬುದಕ್ಕೆ ನಗುತ್ತಾಲೇ ಉತ್ತರಿಸಿದ ಅವರು ನಮ್ಮಲ್ಲಿ ಆಸೆ, ಆಕಾಂಕ್ಷೆ ಏನು ನಡೆಯಲ್ಲ. ನಾನು ಕಾರ್ಯಕರ್ತ, ಕಾರ್ಯಕರ್ತನಾಗಿ ಕೆಲಸ ಮಾಡಬೇಕು. ಜವಾಬ್ದಾರಿ ಬದಲಾಗುತ್ತದೆ, ಕಾರ್ಯಕರ್ತನೆಂಬ ಭಾವನೆ ಬದಲಾಗದು. ಚೆನ್ನಾಗಿರುವ ಸಂಸಾರಕ್ಕೆ ಹುಳಿ ಹಿಂಡಬೇಡಿ ಎಂದು ಚಟಾಕಿ…

ಮುಂದೆ ಓದಿ...

ಭಾರತದ ಅತಿ ದೊಡ್ಡ ಫ್ಯಾಷನ್ ತಾಣ ‘ಟ್ರೆಂಡ್ಸ್’ ಮಳಿಗೆ  ಪಾವಗಡದಲ್ಲಿ ಆರಂಭ

ತುಮಕೂರು: ಭಾರತದ ಅತಿದೊಡ್ಡ ಮತ್ತು ವೇಗವಾಗಿ ಬೆಳೆಯುತ್ತಿರುವ ಉಡುಪು ಮತ್ತು ಪರಿಕರಗಳ ವಿಶೇಷ ಸರಣಿಯಾದ ರಿಲಯನ್ಸ್ ರಿಟೇಲ್ನ  ಟ್ರೆಂಡ್ಸ್, ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ತನ್ನ ಹೊಸ ಮಳಿಗೆ ಆರಂಭಿಸಿದೆ. ಟ್ರೆಂಡ್ಸ್ ಭಾರತದಲ್ಲಿ ತನ್ನ ವ್ಯಾಪ್ತಿಯನ್ನು ಮೆಟ್ರೊ ನಗರಗಳಿಂದ ಹಿಡಿದು ಮಿನಿ ಮೆಟ್ರೋಗಳು, 1ನೇ ಹಾಗೂ 2ನೇ ಶ್ರೇಣಿಯ ಪಟ್ಟಣಗಳು ಮತ್ತು ಅದರಾಚೆಗೆ ಬಲಪಡಿಸುವ ಮೂಲಕ ದೇಶದ ಗ್ರಾಹಕರೊಂದಿಗೆ ಸಂಪರ್ಕ ಸಾಧಿಸಿ ನೆಚ್ಚಿನ ಫ್ಯಾಷನ್ ತಾಣವಾಗಿದ್ದು, ನಿಜವಾಗಿಯೂ ಪ್ರಜಾಪ್ರಭುತ್ವವನ್ನು ಪ್ರಜಾಪ್ರಭುತ್ವಗೊಳಿಸುತ್ತಿದೆ. ಪಾವಗಡದ ಟ್ರೆಂಡ್ಸ್ ಮಳಿಗೆ, ಆಧುನಿಕ ನೋಟ ಮತ್ತು ವಾತಾವರಣ ಹೊಂದಿದ್ದು, ಈ ಪ್ರದೇಶದ ಗ್ರಾಹಕರಿಗೆ ಸಂಬಂಧಿಸಿದ ಮತ್ತು ಕೈಗೆಟುಕುವ ಬೆಲೆಯಲ್ಲಿ ದೊರಕುವ ಮತ್ತು ಹಣಕ್ಕೆ ಹೆಚ್ಚಿನ ಮೌಲ್ಯವನ್ನು ಒದಗಿಸುವ ಅತ್ಯಾಕರ್ಷಕ ಶ್ರೇಣಿಯ ಉತ್ತಮ ಗುಣಮಟ್ಟದ ಮತ್ತು ಫ್ಯಾಶನ್ ಸರಕುಗಳನ್ನು ಒಳಗೊಂಡಿದೆ. ಈ ಪಟ್ಟಣದ ಗ್ರಾಹಕರು ಟ್ರೆಂಡಿ ವುಮೆನ್ಸ್ ವೇರ್, ಮೆನ್ಸ್ ವೇರ್, ಕಿಡ್ಸ್ ವೇರ್ ಮತ್ತು…

ಮುಂದೆ ಓದಿ...

ವೈದ್ಯಕೀಯ ಕಾಲೇಜುಗಳಲ್ಲಿ ಸೆಮಿಸ್ಟರ್‌ಗೆ ಅನುಗುಣವಾಗಿ ವಿದ್ಯಾಭ್ಯಾಸಕ್ಕೆ ಅವಕಾಶ ನೀಡುವಂತೆ ಮನವಿ

ತುಮಕೂರು: ಉಕ್ರೇನ್‌ ದೇಶದಿಂದ ರಾಜ್ಯಕ್ಕೆ ಮರಳಿ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಸೆಮಿಸ್ಟರ್‌ಗೆ ಅನುಗುಣವಾಗಿ ವಿದ್ಯಾಭ್ಯಾಸಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಉಕ್ರೇನ್‌ನಿಂದ ವಾಪಸ್‌ ಆಗಿರುವ ಜಿಲ್ಲೆಯ 26 ವಿದ್ಯಾರ್ಥಿಗಳು ಮತ್ತು ಅವರವರ ಪೋಷಕರು ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ್ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಉಕ್ರೇನ್‌ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದು, ಸದ್ಯ ವಿದ್ಯಾ ಭ್ಯಾಸದಿಂದ ವಂಚಿತರಾಗಿದ್ದಾರೆ. ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಹಾಗೂ ಮಾನವೀಯ ಆಧಾರದ ಮೇಲೆ ರಾಜ್ಯ ಮತ್ತು ದೇಶದ ಯಾವುದಾದರೂ ವೈದ್ಯಕೀಯ ಕಾಲೇಜಿನಲ್ಲಿ ಸೆಮಿಸ್ಟರ್‌ಗೆ ಅನುಗುಣವಾಗಿ ದಾಖಲಾತಿ ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು, ಭವಿಷ್ಯದ ಹಿತದೃಷ್ಟಿಯಿಂದ ನಮಗೆಲ್ಲ ಮುಂದಿನ ವಿದ್ಯಾಭ್ಯಾಸವನ್ನು ರಾಜ್ಯದಲ್ಲಿ ಮುಂದುವರೆಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್‌ .ಪಾಟೀಲ್‌,…

ಮುಂದೆ ಓದಿ...

ವಿಶ್ವ ಜಲ ದಿನ: ಕೆರೆಗಳನ್ನು ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ

ತುಮಕೂರು: ಜಿಲ್ಲೆಯಲ್ಲಿರುವ ಕೆರೆಗಳನ್ನು ಮಲಿನಗೊಳಿಸದೆ ಸಂರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿಗಾರ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ‘ವಿಶ್ವ ಜಲ ದಿನಾಚರಣೆ’ ಪ್ರಯುಕ್ತ ಮಂಗಳವಾರ ನಗರದ ಮರಳೂರು ಕೆರೆ ದಂಡೆಯಲ್ಲಿ ಏರ್ಪಡಿಸಿದ್ದ ಕೆರೆ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಶ್ವಸಂಸ್ಥೆಯ ಆಶಯದಂತೆ ನೀರಿನ ಮಹತ್ವ ಮತ್ತು ಜಲ ಸಂರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಈ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಅಂತರ್ಜಲ ಬತ್ತಿ ಹೋಗುತ್ತಿದ್ದು, ಕೆರೆಗಳಲ್ಲಿ ನೀರು ಭರ್ತಿಯಾಗುತ್ತಿಲ್ಲ. ಗಿಡ-ಮರಗಳನ್ನು ಕಡಿಯುತ್ತಿರುವುದರಿಂದ ಉತ್ತಮ ಮಳೆ ಬಾರದಾಗಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕಾರ್ಯಕ್ರಮಗಳ…

ಮುಂದೆ ಓದಿ...