ದಲಿತ ಯುವಕರ ಕೊಲೆಗೆ ಸಿಪಿಐಎಂ ಖಂಡನೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಪೆದ್ದನ ಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಬರ್ಬರ ಹತ್ಯೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ ( ಮಾಕ್ರ್ಸವಾದಿ) ತುಮಕೂರು ಜಿಲ್ಲಾ ಸಮಿತಿ ಬಲವಾಗಿ ಖಂಡಿಸುತ್ತದೆ. ಕೂಡಲೇ ಪ್ರಮುಖ ಅಪರಾಧಿಗಳನ್ನು ಬಂಧಿಸಿ ನಿಕ್ಷಪಾತವಾಗಿ ತನಿಕೆ ನಡೆಸಿ ಸೂಕ್ತ ಕಾನೂನಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರವನ್ನು ಬಲವಾಗಿ ಒತ್ತಾಯಿಸುತ್ತದೆ. ಯುವಕರು ತಪ್ಪು ಮಾಡಿದ್ದಾರೆಂಬ ಕಾರಣ ನೀಡಿ, ಕೊಲೆಗಳ ಸಮರ್ಥನೆಗೆ ಮುಂದಾಗುವುದನ್ನು ಒಪ್ಪಲಾಗದು. ಭೀಕರ ಕೊಲೆಯ ಪರಿಸ್ಥಿತಿಯನ್ನು ಗಮನಿಸಿದರೆ ಅದರ ಹಿಂದೆ ವ್ಯವಸ್ಥಿತ ಸಂಚು ಮತ್ತು ತಂಡ ಇರುವುದು ಕಂಡು ಬರುತ್ತದೆ. ಸಂಚನ್ನು ಭೇಧಿಸಿ ರಾಜ್ಯದ ಜನತೆಗೆ ನಿಜವೇನೆಂದು ತಿಳಿಸಲು ರಾಜ್ಯ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ಕೊಲೆಯಾದ ಕುಟುಂಬಗಳಿಗೆ ತಕ್ಷಣವೇ ಅಗತ್ಯ ಪರಿಹಾರವನ್ನು ಘೋಷಿಸುವಂತೆ ಸಿಪಿಐ(ಎಂ) ಜಿಲ್ಲಾ ಸಮಿತಿ ರಾಜ್ಯ ಸರಕಾರವನ್ನು ಒತ್ತಾಯಿಸುತ್ತದೆ.

ಮುಂದೆ ಓದಿ...

ದಲಿತ ಯುವಕರ ಕೊಲೆಗೆ ಸಿಪಿಐಎಂ ಖಂಡನೆ

ತುಮಕೂರು : ಜಿಲ್ಲೆಯ ಗುಬ್ಬಿ ತಾಲೂಕಿನ ಪೆದ್ದನ ಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಬರ್ಬರ ಹತ್ಯೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ ( ಮಾಕ್ರ್ಸವಾದಿ) ತುಮಕೂರು ಜಿಲ್ಲಾ ಸಮಿತಿ ಬಲವಾಗಿ ಖಂಡಿಸುತ್ತದೆ. ಕೂಡಲೇ ಪ್ರಮುಖ ಅಪರಾಧಿಗಳನ್ನು ಬಂಧಿಸಿ ನಿಕ್ಷಪಾತವಾಗಿ ತನಿಕೆ ನಡೆಸಿ ಸೂಕ್ತ ಕಾನೂನಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರವನ್ನು ಬಲವಾಗಿ ಒತ್ತಾಯಿಸುತ್ತದೆ. ಯುವಕರು ತಪ್ಪು ಮಾಡಿದ್ದಾರೆಂಬ ಕಾರಣ ನೀಡಿ, ಕೊಲೆಗಳ ಸಮರ್ಥನೆಗೆ ಮುಂದಾಗುವುದನ್ನು ಒಪ್ಪಲಾಗದು. ಭೀಕರ ಕೊಲೆಯ ಪರಿಸ್ಥಿತಿಯನ್ನು ಗಮನಿಸಿದರೆ ಅದರ ಹಿಂದೆ ವ್ಯವಸ್ಥಿತ ಸಂಚು ಮತ್ತು ತಂಡ ಇರುವುದು ಕಂಡು ಬರುತ್ತದೆ. ಸಂಚನ್ನು ಭೇಧಿಸಿ ರಾಜ್ಯದ ಜನತೆಗೆ ನಿಜವೇನೆಂದು ತಿಳಿಸಲು ರಾಜ್ಯ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ಕೊಲೆಯಾದ ಕುಟುಂಬಗಳಿಗೆ ತಕ್ಷಣವೇ ಅಗತ್ಯ ಪರಿಹಾರವನ್ನು ಘೋಷಿಸುವಂತೆ ಸಿಪಿಐ(ಎಂ) ಜಿಲ್ಲಾ ಸಮಿತಿ ರಾಜ್ಯ ಸರಕಾರವನ್ನು ಒತ್ತಾಯಿಸುತ್ತದೆ.

ಮುಂದೆ ಓದಿ...

ದಲಿತರ ಮೇಲಿನ ದೌರ್ಜನ್ಯ ಮಡುಗಟ್ಟುತ್ತಿದೆ!

ತುಮಕೂರು: ಗುಬ್ಬಿ ತಾಲ್ಲೂಕಿನ ಕಡಬ ಹೋಬಳಿ ಪೆದ್ದನಹಳ್ಳಿಯಲ್ಲಿ ಕಳ್ಳತನದ ಶಂಕೆ ಮೇಲೆ ಇಬ್ಬರು ದಲಿತ ಯುವಕರ ಹತ್ಯೆ ಆಘಾತಕಾರಿಯಾಗಿದೆ. ಗ್ರಾಮಸ್ಥರ ತೋಟದಲ್ಲಿ ಪಂಪ್‍ಸೆಟ್ ಕದಿಯಲು ಬಂದಿದ್ದಾರೆ ಎಂದು ಶಂಕಿಸಿ ಮಂಚಲದೊರೆ ಗ್ರಾಮದ ಗಿರೀಶ್ ಮತ್ತು ಪಿ.ಎಂ.ಗಿರೀಶ್ ಎಂಬ ಇಬ್ಬರು ಯುವಕರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ. ಇಂತಹ ಅಮಾನವೀಯ ಕೃತ್ಯ ಎಸಗಿರುವ ದುರುಳರ ಮೇಲೆ ಕಠಿಣ ಕ್ರಮ ಜರುಗಿಸಬೇಕೆಂದು ಡಾ. ರಫೀಕ್ ಅಹ್ಮದ್ ಒತ್ತಾಯಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮನುಷ್ಯತ್ವಕ್ಕಿಂತ ಜಾತಿ ಎಂಬ ವಿಕೃತಿ ಮೇಲುಗೈ ಸಾಧಿಸಿ ದೌರ್ಜನ್ಯಗಳ ರುದ್ರನರ್ತನವಾಡುತ್ತಿದೆ. ದಿನೇ ದಿನೇ ದಲಿತರ ಮೇಲೆ ದೌರ್ಜನ್ಯ ಮಾಡುವ ಪ್ರಕರಣಗಳು ಹೆಚ್ಚುತ್ತಿದೆ. ದಿನೇ ದಿನೇ ದಲಿತರ ಮೇಲಿನ ದೌರ್ಜನ್ಯ ಮಡುಗಟ್ಟುತ್ತಿದೆ. ದಲಿತರು ಸಮಾಜದಲ್ಲಿ ಎಲ್ಲರಂತೆ ಬದುಕಲು ಸಾಧ್ಯವಾಗದ ದುಸ್ಥಿತಿ ನಮ್ಮ ದೇಶಕ್ಕೆ ಬಂದೊದಗಿದೆ ಎಂದು ಮಾಜಿ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವವನ್ನು ಕಡೆಗಣಿಸುತ್ತಿರುವ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ದಲಿತರ…

ಮುಂದೆ ಓದಿ...

ಭಾರತ-ಚೀನಾ ಆರ್ಥಿಕ ಮಾರುಕಟ್ಟೆಗೆ ಲಗ್ಗೆ ಹಾಕುವ ಶಪಥವಾಗಲಿ!

ತುಮಕೂರು: ಭಾರತಕ್ಕೆ ಮೊಘಲರು ಮತ್ತು ಬ್ರಿಟಿಷರು ಬರುವ ಮುಂಚೆ ದೇಶದ ಜಿಡಿಪಿಗೆ ಶೇ49ರಷ್ಟು ಕೊಡುಗೆ ನೀಡುತಿದ್ದ ಭಾರತೀಯ ಅರ್ಥಿಕತೆ, ಭಾರತದ ಸಂಪತ್ತನ್ನು ಮುಸ್ಲಿಂ ರಾಷ್ಟ್ರಗಳು ಮತ್ತು ಯುರೋಪಿಯನ್ ರಾಷ್ಟ್ರಗಳು ಕಬಳಿಸಿದ ಪರಿಣಾಮ ಇಂದು ಶೇ4 ರಷ್ಟು ಮಾತ್ರ ಜಿಡಿಪಿ ನೀಡಲು ಸಾಧ್ಯವಾಗಿದೆ ಎಂದು ವಿಶ್ವ ಹಿಂದು ಪರಿಷತ್‍ನ ರಾಷ್ಟ್ರ ಜಂಟಿ ಕಾರ್ಯದರ್ಶಿ ಹಾಗೂ ಹಿಂದು ಅರ್ಥಿಕ ವೇದಿಕೆ ಶ್ರೀಶ್ರೀವಿಜ್ಞಾನಾನಂದ ಸ್ವಾಮೀಜಿ ತಿಳಿಸಿದ್ದಾರೆ. ನಗರದ ಸಿದ್ದಗಂಗಾ ಆಸ್ಪತ್ರೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಹಿಂದೂ ಅರ್ಥಿಕ ವೇದಿಕೆಯ ತುಮಕೂರು ಘಟಕಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಹಿಂದೂ ಪರ ವ್ಯಾಪಾರಸ್ಥರನ್ನು ಒಗ್ಗೂಡಿಸಿ, ಅವರಿಗೆ ಇಂದಿನ ಭಾರತ ಆರ್ಥಿಕ ದುಸ್ಥಿತಿಗೆ ಕಾರಣಗಳೇನು, ಅವುಗಳನ್ನು ಹೇಗೆ ಮೆಟ್ಟಿನಿಂತು, 15ನೇ ಶತಮಾನದ ಅರ್ಥಿಕ ಗತವೈಭವವನ್ನು ಭಾರತದಲ್ಲಿ ಸ್ಥಾಪಿಸುವುದೇ ಹಿಂದೂ ಅರ್ಥಿಕ ವೇದಿಕೆ ಹುಟ್ಟು ಹಾಕುವುದೇ 2009ರಲ್ಲಿ ಸ್ಥಾಪನೆಗೊಂಡ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದರು. ವಿಶ್ವದ ಶೇ2 ರಷ್ಟು…

ಮುಂದೆ ಓದಿ...

ಡಾ.ರಾಜ್ ಚಿತ್ರಗಳ ಸಾಮಾಜಿಕ ಸಂದೇಶ ಯುವಜನತೆಗೆ ದಾರಿದೀಪ

ತುಮಕೂರು: ಕನ್ನಡ ಚಿತ್ರರಂಗದ ಮೇರು ನಟ ಡಾ.ರಾಜ್‍ಕುಮಾರ್ ಅವರು ಅಭಿನಯಿಸಿದ ಚಿತ್ರಗಳಲ್ಲಿ, ಕಲೆಯ ಜೊತೆಗೆ ಕನ್ನಡ ಸಾಹಿತ್ಯ, ಸಂಸ್ಕøತಿಗೆ ಹೆಚ್ಚು ಮೆರಗನ್ನು ನೀಡಿವೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಕರಿಬಸವೇಶ್ವರ ಮಠದ ಆವರಣದಲ್ಲಿ,ಶ್ರೀಚನ್ನಬಸವರಾಜೇಂದ್ರ ಸ್ವಾಮೀಜಿಗಳ ನೇತೃತ್ವದಲ್ಲಿ ಶತಶೃಂಗ ಡಾ.ರಾಜ್ ಅಭಿಮಾನಿ ಬಳಗದವತಿಯಿಂದ ಆಯೋಜಿಸಿದ್ದ ಡಾ.ರಾಜ್ ಕುಮಾರ್ ಅವರ ಹುಟ್ಟು ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಅವರ ಚಿತ್ರಗಳಲ್ಲಿ ಬಳಸಿರುವ ಭಾಷೆ, ಗೀತೆಗಳಲ್ಲಿರುವ ಸಾಹಿತ್ಯ ಎಲ್ಲವನ್ನು ಅವಲೋಕಿಸಿ ದಾಗ, ಕನ್ನಡ ಸಾಹಿತ್ಯ ಲೋಕಕ್ಕೆ ಆಪಾರ ಕೊಡುಗೆಯನ್ನು ಡಾ.ರಾಜ್ ಚಿತ್ರಗಳು ನೀಡಿವೆ. ಅಲ್ಲದೆ ಉತ್ತಮ ಸಾಮಾಜಿಕ ಸಂದೇಶವನ್ನು ನೀಡುವ ಮೂಲಕ ಅಂದಿನ ಯುವಜನತೆ ದಾರಿ ದೀಪವಾಗಿವೆ ಎಂದರು. ಪದ್ಮಭೂಷಣ ಡಾ.ರಾಜಕುಮಾರ್ ಅವರು ನಟಿಸಿದ ಬಂಗಾರದ ಮನುಷ್ಯ, ಬಂಗಾರದ ಪಂಜರ,ಬಲೆ ಬಸವ, ಜೀವನ ಜೈತ್ರ ಸೇರಿದಂತೆ ಹಲವಾರು ಸಿನಿಮಾಗಳನ್ನು ನೋಡಿ,ಲಕ್ಷಾಂತರ ತಮ್ಮ ಮನಃ ಪರಿವರ್ತನೆ ಮಾಡಿಕೊಂಡಿದ್ದನ್ನು ನಾವು…

ಮುಂದೆ ಓದಿ...

ಮಲೇರಿಯಾ ಜಾಗೃತಿ ಜಾಥಾಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ

ತುಮಕೂರು: ವಿಶ್ವ ಮಲೇರಿಯಾ ದಿನದ ಅಂಗವಾಗಿ ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರ ಯದಲ್ಲಿ ಜನಸಾಮಾನ್ಯರಲ್ಲಿ ಮಲೇರಿಯಾ ರೋಗದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿಶ್ವ ಮಲೇರಿಯಾ ದಿನದ ಜಾಗೃತಿ ಜಾಥಾವನ್ನು ನಡೆಸಲಾಯಿತು. ನಗರದ ಟೌನ್‍ಹಾಲ್ ವೃತ್ತದಲ್ಲಿ ಜಮಾಯಿಸಿದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ನಡೆದ ಮಲೇರಿಯಾ ಜಾಗೃತಿ ಜಾಥಾಕ್ಕೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಂತರ ಮಾತನಾಡಿದ ಜಿ.ಪಂ. ಸಿಇಓ ಡಾ. ಕೆ. ವಿದ್ಯಾಕುಮಾರಿ ಅವರು, ಮಲೇರಿಯಾ ಜ್ವರದ ರೂಪದಲ್ಲಿ ಕಾಣಿಸಿಕೊಳ್ಳುತ್ತಿದೆ. ಒಂದು ಸೊಳ್ಳೆಯಿಂದ ಬರುವಂತಹ ಕಾಯಿಲೆ ಇದಾಗಿದೆ. ಈ ಹಿಂದೆ ಈ ಕಾಯಿಲೆಯಿಂದ ಅನೇಕ ಜನ ಸಾವನ್ನಪ್ಪಿದ್ದಾರೆ. ಆದರೆ ಇಂದು ಚಿಕಿತ್ಸೆಯಿಂದಾಗಿ ಸಾವು ಸಂಭವಿಸುತ್ತಿಲ್ಲ. ಇದನ್ನು…

ಮುಂದೆ ಓದಿ...