ಹಂಚಿಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ವಿಜಯಕುಮಾರಿ ಅವಿರೋಧ ಆಯ್ಕೆ

ಕೊರಟಗೆರೆ ; ತಾಲೂಕಿನ ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನವು ಇತ್ತೀಚೆಗಷ್ಟೇ ತೆರವಾಗಿದ್ದ ಕಾರಣ ನೂತನವಾಗಿ ಅಧ್ಯಕ್ಷ ಉಪಾಧ್ಯಕ್ಷರನ್ನು ಅವಿರೋಧವಾಗಿ ಗ್ರಾಮ ಪಂಚಾಯಿತಿಯ ಸದಸ್ಯರು ತಹಶೀಲ್ದಾರ್ ನಹಿದಾ ಜಮ್ ಜಮ್ ರವರ ಸಮಕ್ಷಮದಲ್ಲಿ ಆಯ್ಕೆ ಮಾಡಿದರು. ತಾಲ್ಲೂಕು ದಂಡಾಧಿಕಾರಿಯಾದ ನಹಿದಾ ಜಮ್ ಜಮ್ ಮಾತನಾಡಿ ಹಂಚಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಯಾವುದೇ ಚುನಾವಣೆ ಇಲ್ಲದೆ ಅವಿರೋಧವಾಗಿ ಅಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ವಿಜಯ ಕುಮಾರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಂಗನಾಥ್ ಬಿ ಎನ್ ರವರನ್ನು ಸದಸ್ಯರೆಲ್ಲರೂ ಸೇರಿ ಆಯ್ಕೆ ಮಾಡಿದ್ದಾರೆ. ಇನ್ನು ಮುಂದೆ ಅಧ್ಯಕ್ಷರಾಗಿ ಶ್ರೀಮತಿ ವಿಜಯ ಕುಮಾರಿ ಉಪಾಧ್ಯಕ್ಷರಾಗಿ ರಂಗನಾಥ್ ರವರು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು. ನೂತನ ಅಧ್ಯಕ್ಷೆ ಶ್ರೀಮತಿ ವಿಜಯಕುಮಾರಿ ಮಾತನಾಡಿ ನನ್ನ ಮೇಲೆ ಭರವಸೆಯಿಟ್ಟು ನನ್ನನ್ನು ಅಧ್ಯಕ್ಷೆಯಾಗಿ ಆಯ್ಕೆ ಮಾಡಿರುವ ಎಲ್ಲಾ ಗ್ರಾಮ ಪಂಚಾಯ್ತಿ ಸದಸ್ಯರಿಗೆ…

ಮುಂದೆ ಓದಿ...

ತಾಂತ್ರಿಕತೆಯಲ್ಲಿ ಕ್ರಾಂತಿ ಮಾಡಲು ಯುವ ಪೀಳಿಗೆ ಸಿದ್ದರಾಗಿ

ತುಮಕೂರು: ತಾಂತ್ರಿಕತೆಯಲ್ಲಿ ಮತ್ತಷ್ಟು ಕ್ರಾಂತಿ ಮಾಡಲು ಯುವ ಪೀಳಿಗೆ ಸಿದ್ಧರಾಗಬೇಕಿದೆ ಎಂದು ಭಾರತ್ ಫೋರ್ಜ್ ಲಿ.,ನ ಛೇರ್ಮನ್ ಬಾಬಾ ಸಾಹೇಬ್ ನೀಲಕಂಠ ಕಲ್ಯಾಣಿ ಸಲಹೆ ನೀಡಿದರು. ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ 12ನೇ ಪದವಿ ಪ್ರದಾನ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ಭಾರತದಲ್ಲಿ ಓದಿದ ಸಾಕಷ್ಟು ಮಂದಿ ವಿದ್ಯಾರ್ಥಿಗಳು ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಭಾರತವು ತಾಂತ್ರಿಕತೆಯಲ್ಲಿ ವಿಶ್ವ ಮಟ್ಟದಲ್ಲಿ ಸಾಧನೆ ಮಾಡುತ್ತಿದೆ. ಈಗ ವ್ಯಾಸಂಗ ಮುಗಿಸಿ ಹೊರಬರುವ ವಿದ್ಯಾರ್ಥಿಗಳು ತಾಂತ್ರಿಕತೆಯಲ್ಲಿ ಮತ್ತಷ್ಟು ಕ್ರಾಂತಿ ಮಾಡಲು ಉತ್ಸುಕರಾಗಬೇಕಿದೆ ಎಂದು ಸಲಹೆ ನೀಡಿದರು. ನಮ್ಮ ದೇಶವು ಹಲವು ರಂಗಗಳಲ್ಲಿ ಅತ್ಯುನ್ನತ ಸಾಧನೆ ಮಾಡಿದೆ. ಇಲ್ಲಿನ ಉತ್ಪಾದನೆ ಮತ್ತು ಉತ್ಪನ್ನಗಳು ಅಮೆರಿಕಾ ಸೇರಿ ಹೊರ ರಾಷ್ಟ್ರಗಳಿಗೆ ರಫ್ತಾಗುತ್ತಿವೆ. ವಿಶ್ವದ ವಿವಿಧ ಕಂಪನಿಗಳಲ್ಲಿ ನಮ್ಮ ಭಾರತೀಯರು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಂತಹ ಉನ್ನತ ಹುದ್ದೆಗಳನ್ನು ನಿರ್ವಹಿಸುತ್ತಿದ್ದಾರೆ. ತಾಂತ್ರಿಕತೆಯಲ್ಲಿ ಅತ್ಯಂತ…

ಮುಂದೆ ಓದಿ...

ನ್ಯಾ.ಕೆಂಪಣ್ಣ ವರದಿ ಹೊರಬಂದರೆ ಸಿದ್ದರಾಮಯ್ಯ ಜೈಲಿಗೆ ಹೋಗಬೇಕಾಗುತ್ತದೆ: ನಳೀನ್ ಕುಮಾರ್ ಕಟೀಲ್

ತುಮಕೂರು: ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಪಕ್ಷದ ಆಡಳಿತ, ಸ್ವಾಮಿ ವಿವೇಕಾನಂದರು ವಿಶ್ವಕುಟುಂಬ ಹಾಗೂ ಗಾಂಧೀಜಿಯವರ ರಾಮರಾಜ್ಯದ ಪರಿಕಲ್ಪನೆಯಲ್ಲಿ ಕೆಲಸ ಮಾಡುತಿದ್ದು, ದೀನದಯಾಳ್ ಉಪಾಧ್ಯಾಯ ಅವರ ಅಂತ್ಯೋದಯದ ಕನಸನ್ನು ಸಕಾರಗೊಳಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನಕುಮಾರ್ ಕಟೀಲ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಗಾಜಿನಮನೆಯಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಮಧುಗಿರಿ ಮತ್ತು ತುಮಕೂರು ಸಂಘಟನಾತ್ಮಕ ಜಿಲ್ಲೆಗಳ ವಿವಿಧ ಪ್ರಕೋಷ್ಠಗಳ ಮುಖಂಡರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಕಾಂಗ್ರೆಸ್ ಪಕ್ಷದ ಒಲೈಕೆ ರಾಜಕಾರಣದಿಂದ ಇಂದು ದೇಶದ ಪ್ರತಿ ಮನೆ ಮನೆಯಲ್ಲಿಯೂ ರಾವಣರಿದ್ದು,ಅವರನ್ನು ಸರಿದಾರಿಗೆ ತರಲು ಗಾಂಧಿಜೀಯ ರಾಮರಾಜ್ಯದ ಕನಸನ್ನು ಸಾಕಾರಗೊಳಿಸುತ್ತಿದೆ ಎಂದರು. ಬಿಜೆಪಿ ಅಡಳಿತವನ್ನು ಸರ್ವವ್ಯಾಪ್ತಿ ಮತ್ತು ಸರ್ವಸ್ಪಷಿಯಾಗಿ ಮಾಡಲು ಬಿಜೆಪಿ ಪಕ್ಷದ ಹುಟ್ಟು ಹಾಕಿರುವ 24 ವಿವಿಧ ಪ್ರಕೋಷ್ಠಗಳ 32 ಸಾವಿರಕ್ಕು ಹೆಚ್ಚು ಕಾರ್ಯಕರ್ತರು ಇಂದಿನಿಂದ ಜಿಲ್ಲೆಯಿಂದ ತಾಲೂಕು, ತಾಲೂಕಿನಿಂದ ಹೋಬಳಿ, ಹೋಬಳಿಯಿಂದ ಗ್ರಾಮ, ಗ್ರಾಮದಿಂದ ಬೂತ್, ಬೂತ್‍ನಿಂದ…

ಮುಂದೆ ಓದಿ...

ಆತ್ಮವಿಶ್ವಾಸದಿಂದ ಪಿಎಸ್ಐ ಮರು ಪರೀಕ್ಷೆ ಬರೆಯಿರಿ: ಅರಗ ಜ್ಞಾನೇಂದ್ರ

ತುಮಕೂರು: ಪಿಎಸ್‍ಐ ನೇಮಕಾತಿ ಪರೀಕ್ಷೆಯನ್ನು ಪ್ರಾಮಾಣಿಕವಾಗಿ ಬರೆದವರು ಮತ್ತೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲಿ. ಈ ಮರು ಪರೀಕ್ಷೆಗೆ ವಯೋಮಿತಿಯನ್ನು ಮಾನದಂಡವಾಗಿ ಪರಿಗಣಿಸುತ್ತಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು. ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದರಿಂದ ಈ ಆಯ್ಕೆ ಪ್ರಕ್ರಿಯೆಯನ್ನು ರದ್ದುಪಡಿಸಿದ್ದೇವೆಯೇ ಹೊರತು ಪರೀಕ್ಷೆಯನ್ನಲ್ಲ. ಹಾಗಾಗಿ ಮತ್ತೆ ಮರು ಪರೀಕ್ಷೆ ನಡೆಸಲಾಗುತ್ತಿದೆ. ಅಭ್ಯರ್ಥಿಗಳು ಎದೆಗುಂದದೆ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು. ಪ್ರಾಮಾಣಿಕತೆ ಇದ್ದಲ್ಲಿ ದೇವರು ಒಳ್ಳೆಯದು ಮಾಡುತ್ತಾನೆ ಎಂದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪರೀಕ್ಷೆ ಬರೆದಿರುವ 54 ಸಾವಿರ ಮಂದಿಗೆ ಮಾತ್ರ ಮರು ಪರೀಕ್ಷೆ ನಡೆಯಲಿದೆ. ಅವರು ಮಾತ್ರ ಪರೀಕ್ಷೆ ಬರೆಯಬಹುದು ಎಂದು ಅವರು ಹೇಳಿದರು. ಕಿಮ್ಮನೆ ರತ್ನಾಕರ ಅವರಂತಹ ಸಿಲ್ಲಿ ರಾಜಕಾರಣಿ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ. ಕಾಂಗ್ರೆಸ್ ಪಕ್ಷದವರಿಗೆ ರಾಜಕೀಯ ಲಾಭ ಪಡೆಯುವುದೇ ಉದ್ದೇಶವಾಗಿದೆ ಎಂದು ಟೀಕಿಸಿದರು. ಕಿಮ್ಮನೆ ರತ್ನಾಕರ…

ಮುಂದೆ ಓದಿ...