ಅಭಿವೃದ್ದಿಯಲ್ಲಿ ಪಂಚಾಯತ್ ವ್ಯವಸ್ಥೆಯ ಕೊಡುಗೆ ಅಪಾರ: ಸಿಇಓ ವಿದ್ಯಾಕುಮಾರಿ

ತುಮಕೂರು ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ಮಹಾತ್ಮಗಾಂಧೀಜಿ ಅವರ ಗ್ರಾಮ ಸ್ವರಾಜ್ ಕನಸನ್ನು ನನಸು ಮಾಡುವಲ್ಲಿ ಕರ್ನಾಟಕದಲ್ಲಿ ಬಹು ಹಿಂದಿನಿಂದಲೇ ಪ್ರಯತ್ನಗಳು ನಡೆದಿವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ: ಕೆ.ವಿದ್ಯಾಕುಮಾರಿ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ರಾಜ್ಯ ಪಂಚಾಯತ್ ರಾಜ್ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಂವಿಧಾನಕ್ಕೆ 73ನೇ ತಿದ್ದುಪಡಿ ಮಾಡಿ ದೇಶದಾದ್ಯಂತ ಮೂರು ಹಂತದ ವಿಕೇಂದ್ರಿಕರಣ ವ್ಯವಸ್ಥೆಯನ್ನು ಭಾರತ ಸರ್ಕಾರ ಶಾಸನಬದ್ದವಾಗಿ ಜಾರಿಗೊಳಿಸಿದ್ದು, ಈ ಕೀರ್ತಿಯು ಕರ್ನಾಟಕ ರಾಜ್ಯಕ್ಕೆ ಸಲ್ಲುತ್ತದೆ ಎಂದ ಅವರು 1993ರ ಮೇ 10 ರಂದು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ ಅಧಿಕೃತವಾಗಿ ಆಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಪಂಚಾಯತ್ ರಾಜ್ ದಿನವನ್ನು ಆಚರಿಸಲಾಗುತ್ತದೆ ಎಂದು ವಿವರಿಸಿದರು. ಸಂವಿಧಾನದ 73ನೇ ತಿದ್ದುಪಡಿಯನ್ವಯ 3 ಹಂತದ ಆಡಳಿತ ವ್ಯವಸ್ಥೆಗಳಾದ ಗ್ರಾಮಪಂಚಾಯತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಆಸ್ತಿತ್ವಕ್ಕೆ…

ಮುಂದೆ ಓದಿ...

ಮೇ.16: ವಿದ್ಯುತ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ತುಮಕೂರು: ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ, ರಾಜ್ಯ ಸರಕಾರದ ರೈತವಿರೋಧಿ ನೀತಿಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಮೇ.16ರ ಸೋಮವಾರ ಬೆಳಗ್ಗೆ 11 ಗಂಟೆಗೆ ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಕಚೇರಿ ಎದುರು ರೈತರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದ್ದಾರೆ. ಜನಚಳವಳಿ ಕೇಂದ್ರದಲ್ಲಿ ಆಯೋಜಸಿದ್ದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತಂದು,ಸೇವಾ ಕ್ಷೇತ್ರವಾಗಿದ್ದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದರಿಂದ ಇದುವರೆಗೂ ಉಚಿತ ವಿದ್ಯುತ್ ಪಡೆಯುತ್ತಿದ್ದ ರೈತರ ಪಂಪ್‍ಸೆಟ್‍ಗಳಿಗೆ,ಭಾಗ್ಯ ಜೋತಿ,ಕುಟೀರ ಜೋತಿ ಯೋಜನೆಗಳ ಮನೆಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವ ಹುನ್ನಾರ ನಡೆದಿದೆ.ಇದನ್ನು ಎಲ್ಲಾ ರೈತರು, ಬಡವರು ವಿರೋಧಿಸಬೇಕಿದೆ. ಈ ಹಿನ್ನೇಲೆಯಲ್ಲಿ ಮೇ.16ರ ಬೃಹತ್ ಹೋರಾಟವನ್ನು ರೂಪಿಸಲಾಗಿದೆ ಎಂದರು. ರಾಜ್ಯ ಸರಕಾರ ರೈತರಿಗೆ ಪ್ರತಿದಿನ ಏಳು ಗಂಟೆ ನಿರಂತರವಾಗಿ ವಿದ್ಯುತ್ ಸರಬರಾಜು…

ಮುಂದೆ ಓದಿ...

ಭೀಕರ ಮಳೆಗಾಳಿಗೆ ಮನೆಗಳ ಮೇಲ್ಚಾವಣಿ ಚೆಲ್ಲಾಪಿಲ್ಲಿ: ಗುಮ್ಮಘಟ್ಟದಲ್ಲಿ ಬೀದಿಗೆ ಬಂದ ನೇಕಾರರ ಕುಟುಂಬ

ಪಾವಗಡ: ತಾಲ್ಲೂಕಿನ ಗುಮ್ಮಘಟ್ಟ ಗ್ರಾಮದಲ್ಲಿ  ಮಳೆ ಹಾಗೂ ಗಾಳಿ ಆರ್ಭಟಕ್ಕೆ  ಮೂರು ಕುಟುಂಬಗಳ  ಮನೆಯ ಚಾವಣಿ ಶೀಟ್‍ಗಳು ಹಾರಿ ಹೋಗಿದ್ದು, ಮೂರು ಕುಟುಂಬಗಳು ನೇಕಾರ ವೃತ್ತಿಯನ್ನು ಅವಲಂಬಿಸಿದ್ದು, ಈಗ ಎರಡು ಲಕ್ಷಕ್ಕೂ ಅಧಿಕ ಪ್ರಮಾಣದ ನಷ್ಟ ಉಂಟಾಗಿದೆ. ದೊಮ್ಮತಮರಿ ಗ್ರಾ.ಪಂ.ವ್ಯಾಪ್ತಿಯ ಗುಮ್ಮಘಟ್ಟ ಗ್ರಾಮದ ಮುರುಳಿ, ಶ್ರೀನಿವಾಸ,  ಶಂಕರ ಅವರಿಗೆ ಸೇರಿದ ಮನೆ ಚಾವಣಿಯ ಸಿಮೆಂಟ್ ಸೀಟುಗಳು ಇದ್ದಕ್ಕಿದ್ದಂತೆ ಬೀಸಿದ ಗಾಳಿಗೆ ಹಾರಿ ಪುಡಿಪುಡಿಯಾಗಿವೆ. ನೇಕಾರರಾದ ಮುರುಳಿ ಮತ್ತು   ಶ್ರೀನಿವಾಸ್ ಅವರ ಮನೆಗಳ ಚಾವಣಿ ಶೀಟ್‍ಗಳು ವಿದ್ಯುತ್ ಮಗ್ಗದ ಮೇಲೆ ಬಿದ್ದಿದ್ದು, ಡಿಸೈನ್ ಕಾರ್ಡ್, ವಾರ್ಪು, ಪಾಗಡಿಗಳು, ರೇಷ್ಮೆ, ಕೋನ್ ಗಳು ಸಂಪೂರ್ಣ ಹಾಳಾಗಿದ್ದು, ಅಪಾರ ನಷ್ಟವಾಗಿದೆ. ಇದರಿಂದಾಗಿ ನೇಕಾರರ ಕುಟುಂಬ ಬೀದಿಗೆ ಬಿದ್ದಂತಾಗಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜಯ್ ಕುಮಾರ್, ರೆವಿನ್ಯೂ ಸೆಕರೇಟರಿ ಶ್ರೀನಿವಾಸ್, ತಾಲ್ಲೂಕು  ಆರ್ ಎಂಸಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಡಿ.ಎನ್. ವಿಶ್ವೇಶ್ವರಯ್ಯ…

ಮುಂದೆ ಓದಿ...

ಮಕ್ಕಳಿಗೆ ಹೇಮರೆಡ್ಡಿ ಮಲ್ಲಮ್ಮಳ ಆದರ್ಶಗಳು ಅಗತ್ಯ

ತುಮಕೂರು: ಇಂದಿನ ಮಕ್ಕಳಿಗೆ ಹೇಮರೆಡ್ಡಿ ಮಲ್ಲಮ್ಮಳ ಆದರ್ಶಗಳನ್ನು ಕಲಿಸುವುದು ಬಹಳ ಮುಖ್ಯವಾಗಿದೆ ಎಂದು ಸಂಸದರಾದ ಜಿ.ಎಸ್. ಬಸವರಾಜು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ರೆಡ್ಡಿ ಜನಸಂಘ(ರಿ) ಇವರ ಸಂಯುಕ್ತಾಶ್ರಯದಲ್ಲಿ ಶಿವಶರಣೆ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕಾರ್ಯಕ್ರಮವನ್ನು ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿಂದು ಭಾವಚಿತ್ರಕ್ಕೆ ಪುμÁ್ಪರ್ಚನೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಸಮಾಜದಲ್ಲಿ ಕುಟುಂಬಗಳಲ್ಲಿ ಹೊಂದಾಣಿಕೆ ಇಲ್ಲದೆ ವೃದ್ಧಾಶ್ರಮಗಳು, ಅನಾಥಾಶ್ರಮಗಳು ಹೆಚ್ಚಾಗಿವೆ. ಹೇಮರೆಡ್ಡಿ ಮಲ್ಲಮ್ಮ ಸಂಪದ್ಭರಿತವಾದ ಸಮಾಜವನ್ನು ಕಟ್ಟಿದವರು. ಇಂದಿನ ಯುವಜನರು ಹೇಮರೆಡ್ಡಿ ಮಲ್ಲಮ್ಮ ಮತ್ತು ಮಹಾಯೋಗಿ ವೇಮನರ ಜೀವನ ಆದರ್ಶಗಳನ್ನು ತಿಳಿದುಕೊಳ್ಳಬೇಕು ಎಂದರು. ಕರ್ನಾಟಕದಲ್ಲಿ ಮನೆ ಮಾತಾಗಿರುವ ಶರಣೆಯರಾದ ಅಕ್ಕ ಮಾಹಾದೇವಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಮಹಾಸಾಧ್ವಿಯರಾಗಿದ್ದರು. ಸಮಾಜದಲ್ಲಿ ಬಡತನ,…

ಮುಂದೆ ಓದಿ...