ಬಗರ್ ಹುಕ್ಕುಂ ಸಾಗುವಳಿದಾರರಿಂದ ಹಕ್ಕು ಪತ್ರಕ್ಕೆ ಒತ್ತಾಯ

ಗುಬ್ಬಿ: ಬಗರ್ ಹುಕ್ಕುಂ ಸಾಗುವಳಿದಾರರ ಹೋರಾಟ ಸಮಿತಿಗಳು ಮತ್ತು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾ ಮಟ್ಟದ ಭೂ ಸಮಾವೇಶವನ್ನು ಗುಬ್ಬಿ ತಾಲ್ಲೂಕಿನ ಚೇಳೂರು ಹೋಬಳಿ ಕೇಂದ್ರದಲ್ಲಿ ನಡೆಸಲಾಯಿತು. ಸಮಾವೇಶವನ್ನು ಉದ್ಘಾಟಿಸಿದ ಕೆ.ಪಿ.ಆರ್.ಎಸ್ ನ ರಾಜ್ಯ ಕಾರ್ಯದರ್ಶಿ ಯಶವಂತ್ ಮತನಾಡಿ ರೈತ ಹೋರಾಟಗಳನ್ನು ರಾಜ್ಯ ಸರ್ಕಾರ ಗುರುತಿಸಬೇಕು ಬರಿ ಬಾಯಿಮಾತಿನಿ ರೈತ ಪರ ಕಾಳಜಿ ಬಿಟ್ಟು ಬಗರ್ ಹುಕ್ಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಲು ಒತ್ತಾಯಿಸಿದರು. ಪ್ರಸ್ತಾವಿಕ ಮತನಾಡಿದ ಜಿಲ್ಲಾ ಸಂಚಾಲಕ ಅಜ್ಜಪ್ಪ ಮತನಾಡಿ ಅರಣ್ಯ ಇಲಾಖೆಯ ಅಧಿಕಾರಿಗಳ ಮೂಲಕ ಸರ್ಕಾರ ಕಿರುಕುಳ ನೀಡುವದನ್ನು ನಿಲ್ಲಿಸಬೇಕು ಹಿಂದಿನ ಉಸ್ತುವಾರಿ ಸಚಿವರ ಬರವಸೆಯೆಂತೆ ರೈತ ಮತ್ತು ಅರಣ್ಯ ಇಲಾಖೆಯ ನಡುವೆ ಇರುವ ಭುವಿವಾದ ಪರಿಹಾರಕ್ಕೆ ಸರ್ವೆ ಮೂಲಕ ಪರಿಹಾರ ಮಾಡಬೇಕೆಂದರು. ಕೆ.ಪಿ.ಆರ್ ಎಸ್‍ನ ರಾಜ್ಯಧ್ಯಕ್ಷ ಜಿ.ಸಿ ಬಯ್ಯರೆಡ್ಡಿ ರವರು ಮತನಾಡಿ ಹಿಂದಿನ ಕಂಧಾಯ ಸಚಿವ…

ಮುಂದೆ ಓದಿ...

ಸಾಂಸ್ಕೃತಿಕ ಪ್ರಜ್ಞೆ ಮಕ್ಕಳಲ್ಲಿ ಮೂಡಿದರೆ ಸತ್ಪ್ರಜೆಗಳಾಗುತ್ತಾರೆ

ತುಮಕೂರು: ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಪರಿಸರ ಪ್ರಜ್ಞೆಯ ಜೊತೆಗೆ, ನಮ್ಮ ಸಂಸ್ಕøತಿ, ಸಾಂಸ್ಕøತಿಕ ಪ್ರಜ್ಞೆಯನ್ನು ಮೂಡಿಸುವುದರಿಂದ ಭವಿಷ್ಯದಲ್ಲಿ ಅವರು ಜವಾಬ್ದಾರಿಯುತ ಸತ್ಪ್ರಜೆಗಳಾಗಿ ರೂಪುಗೊಳ್ಳಲು ಅನುಕೂಲವಾಗುತ್ತದೆ ಎಂದು ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ. ನಗರದ ಕನ್ನಡ ಭವನದಲ್ಲಿ ಮಕ್ಕಳಿಗಾಗಿ ಆಯೋಜಿಸಿದ್ದ ಕನ್ನಡ ಕಲರವ ಮಕ್ಕಳ ಬೇಸಿಗೆ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡುತಿದ್ದ ಅವರು,ಇಂದು ಜನರಲ್ಲಿ ಪರಿಸರ ಪ್ರಜ್ಞೆ ಕಡಿಮೆಯಾಗುತ್ತಿರುವುದರ ಭಾಗವಾಗಿ ಪ್ರಾಕೃತಿಕ ವಿಕೋಪಗಳನ್ನು ಕಾಣುತ್ತಿದ್ದವೆ. ಇಂತಹ ಅವಘಡಗಳನ್ನು ತಡೆಗಟ್ಟಲು ಮಕ್ಕಳಿಗೆ ಚಿಕ್ಕಂದಿನದಲ್ಲಿಯೇ ಪರಿಸರ ಪ್ರಜ್ಞೆ ಬೆಳೆಸುವುದು ಸೂಕ್ತ ಎಂದರು. ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ವಿವಿಧ ಕಲಾ ಪ್ರಕಾರಗಳ ಪರಿಚಯದ ಜೊತೆಗೆ, ತುಮಕೂರು ಅಮಾನಿಕೆರೆಯಲ್ಲಿ ಪಕ್ಷಿಗಳ ವೀಕ್ಷಣೆಗೆ ಅವಕಾಶ ಕಲ್ಪಿಸಿರುವುದು ಒಳ್ಳೆಯ ಬೆಳವಣಿಗೆ,ಮಕ್ಕಳಿಗೆ ತಮ್ಮ ಸುತ್ತಮುತ್ತಲಿನ ಕೆರೆ,ಕಟ್ಟೆಗಳು,ಪಕ್ಷಿಗಳ ಪರಿಚಯವಾದರೆ, ಅವುಗಳೊಂದಿಗೆ ಅನುಸಂಧಾನ ನಡೆಸಲು ಸಹಕಾರಿಯಾಗುತ್ತವೆ.ಕಳೆದ ಎರಡು ವರ್ಷಗಳಿಂದ ಬೌತಿಕ ತರಗತಿಗಳಿಲ್ಲದೆ,ಸ್ನೇಹಿತರ ಒಡನಾಟವಿಲ್ಲದೆ ಇದ್ದ ಮಕ್ಕಳಿಗೆ…

ಮುಂದೆ ಓದಿ...

ಅಂಬೇಡ್ಕರ್ ತತ್ವಗಳನ್ನು ಪಾಲಿಸಿದ್ದರೆ ಇಂದು ದೇಶದಲ್ಲಿ ಅಸ್ಪ್ರಶ್ಯತೆ ಇರುತ್ತಿರಲಿಲ್ಲ: ಡಾ.ಜಿ.ಪರಮೇಶ್ವರ್

ತುಮಕೂರು: ನಾವುಗಳು ಮೇಲ್ನೋಟಕ್ಕೆ ಅಂಬೇಡ್ಕರ್ ಅನುಯಾಯಿಗಳಾಗುವುದರಿಂದ ಸಮಾಜಕ್ಕೆ ಯಾವುದೇ ಪ್ರಯೋಜನವಿಲ್ಲ. ಅವರ ತತ್ವಗಳನ್ನು ಪಾಲಿಸಿದ್ದರೆ ಇಂದು ದೇಶದಲ್ಲಿ ಅಸ್ಪøಷ್ಯತೆ ಎಂಬುದೇ ಇರುತ್ತಿರಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ. ನಗರದ ಬಾಲಭವನದಲ್ಲಿ ತುಮಕೂರು ಜಿಲ್ಲಾ ಛಲವಾದಿ ಸಂಘಟನೆಗಳ ಒಕ್ಕೂಟದವತಿಯಿಂದ ಆಯೋಜಿಸಿದ್ದ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು,ಅಂಬೇಡ್ಕರ್ ಅವರ ಸಿದ್ದಾಂತಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡರೆ ಮಾತ್ರ ದೇಶದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂದರು. ನಾನು ತಿಳಿದಂತೆ ಪ್ರಪಂಚದ ಯಾವುದೇ ದೇಶದಲ್ಲಿ ಈ ರೀತಿಯ ಶ್ರೇಣಿಕೃತ ಜಾತಿ ವ್ಯವಸ್ಥೆ ಇಲ್ಲ.ಮೊದಲು ಕುಲಕಸುಬನ ಗಳಾಗಿದ್ದ ಸಮಾಜಗಳು ನಂತರ ಜಾತಿಗಳಾಗಿ ಪರಿವರ್ತನೆಯಾಗಿದ್ದು ವಿಪರ್ಯಾಸ.ಅದರಿಂದಾಗುವ ತೊಂದರೆಗಳು ಅಪಾರ. ಇಡೀ ವಿಶ್ವವೇ ಅಂಬೇಡ್ಕರ್ ಅವರ ವಿದ್ವತ್‍ಗೆ ಮಾರು ಹೋಗಿ,ವಿಶ್ವನಾಯಕ ಎಂದು ಕೋಡಾಡಿದರೂ ಸಹ ಭಾರತದಲ್ಲಿ ಮಾತ್ರ ಅಂಬೇಡ್ಕರ್ ಅವರನ್ನು ಇಂದಿಗೂ ಜಾತಿಯ ಹೆಸರಿನಲ್ಲಿಯೇ ಗುರುತಿಸಲಾಗುತ್ತಿದೆ.ಇದಕ್ಕಿಂತ…

ಮುಂದೆ ಓದಿ...

ರೋಗವಾಹಕ ಆಶ್ರಿತ ರೋಗಗಳ ಬಗ್ಗೆ ಎಚ್ಚರಿಕೆ ಅಗತ್ಯ

ತುಮಕೂರು; ಮಲೇರಿಯಾ, ಡೆಂಗ್ಯೂ, ಚಿಕನ್‍ಗುನ್ಯ, ಮೆದುಳು ಜ್ವರದಂತಹ ರೋಗವಾಹಕ ಆಶ್ರಿತ ರೋಗಗಳ ಬಗ್ಗೆ ನಾವು ಈಗಾಗಲೇ ಸಾಕಷ್ಟು ಪಾಠ ಕಲಿತಿದ್ದೇವೆ. ಮಳೆಗಾಲ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಮೇ ತಿಂಗಳಿನಿಂದ ಡಿಸೆಂಬರ್‍ವರೆಗೆ ಇಂತಹ ರೋಗಗಳು ಹರಡುವ ಸಾಧ್ಯತೆ ಇದ್ದು, ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ವಹಿಸಿ, ತಮ್ಮ ಸುತ್ತ-ಮುತ್ತಲಿನ ಪರಿಸರದ ಸ್ವಚ್ಛತೆ ಬಗ್ಗೆ ಗಮನಹರಿಸಿ ರೋಗ ನಿಯಂತ್ರಣಕ್ಕೆ ಸಹಕರಿಸುವಂತೆ ಜಿಲ್ಲಾ ಮುಖ್ಯ ಕಾರ್ಯನಿವಾಹಕಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ ನೀಡಿದರು. ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಚೇರಿ ವತಿಯಿಂದ “ರಾಷ್ಟ್ರೀಯ ಡೆಂಗ್ಯೂ ದಿನ”ದ ಪ್ರಯುಕ್ತ ನಡೆದ ‘ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಕೋವಿಡ್-19ರಿಂದ ನಾವು ಅನೇಕ ಸಮಸ್ಯೆಗಳನ್ನು ಈಗಾಗಲೇ ಎದುರಿಸಿದ್ದೇವೆ. ಜೀವನ…

ಮುಂದೆ ಓದಿ...