ಮೇ.16 : ರೈತಸಂಘದಿಂದ ಬೃಹತ್ ಪ್ರತಿಭಟನೆ

ಕೊರಟಗೆರೆ: ಶಾಸಕರಾದ ಡಾ.ಜಿ.ಪರಮೇಶ್ವರ್ ಇಚ್ಚಾಶಕ್ತಿ ಕೊರತೆ ಮತ್ತು ಅಭಿವೃದ್ದಿ ನಿರ್ಲಕ್ಷದಿಂದ ಶಾಶ್ವತ ಯೋಜನೆಯ ಅನುಷ್ಠಾನವೇ ಸ್ಥಗೀತವಾಗಿ ಕೊರಟಗೆರೆ ಕ್ಷೇತ್ರವು ಅಭಿವೃದ್ದಿಯಿಂದ ಸಂಪೂರ್ಣವಾಗಿ ವಂಚಿತವಾಗಿದೆ ಎಂದು ಮಾಜಿ ತೆಂಗುನಾರು ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ವೆಂಕಟಾಚಲಯ್ಯ ಆರೋಪ ಮಾಡಿದರು. ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಯಮಂಗಳಿ ಮತ್ತು ಸುವರ್ಣಮುಖಿ ನದಿಪಾತ್ರದ ರೈತರ ಶಾಶ್ವತ ನೀರಿಗಾಗಿ ಹೋರಾಟ ಸಮಿತಿ ಮತ್ತು ರೈತಸಂಘದಿಂದ ಇತ್ತೀಚಿಗೆ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು. ಬಯಲುಸೀಮೆ ಕ್ಷೇತ್ರವಾದ ಕೊರಟಗೆರೆಗೆ ಈಗಾಗಲೇ ಹೇಮಾವತಿ ನೀರು ಮರೀಚಿಕೆ ಆಗಿದೆ. ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ನಿರ್ಲಕ್ಷದಿಂದ ಈಗ ಎತ್ತಿನಹೊಳೆ ಯೋಜನೆಯ ಬಫರ್‍ಡ್ಯಾಂ ಸಹ ದೊಡ್ಡಬಳ್ಳಾಪುರ ಕ್ಷೇತ್ರಕ್ಕೆ ಸ್ಥಳಾಂತರ ಮಾಡುವ ಹುನ್ನಾರ ನಡೆಯುತ್ತೀದೆ. ಮೇ.16ರಂದು ಕೊರಟಗೆರೆ ಪಟ್ಟಣದಲ್ಲಿ ಶಾಶ್ವತ ನೀರಿಗಾಗಿ ಸಾವಿರಾರು ರೈತರಿಂದ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ರೈತಸಂಘದ ಕೊರಟಗೆರೆ ಅಧ್ಯಕ್ಷ ಕೋಡ್ಲಹಳ್ಳಿ ಸಿದ್ದರಾಜು ಮಾತನಾಡಿ ಬಹುರ್ ಹುಕ್ಕುಂ…

ಮುಂದೆ ಓದಿ...

ನರ್ಸಿಂಗ್ ಕ್ಷೇತ್ರದಲ್ಲಿ ಸೇವಾ ಮನೋಭಾವ ಬೆಳೆಸಿಕೊಳ್ಳಿ

ತುಮಕೂರು : ರೋಗಿಗಳನ್ನು ಆರೈಕೆ ಮಾಡುವಾಗ ಅವರ ಸಮಸ್ಯೆಯನ್ನು ಗುರುತಿಸಿ, ಮಾನವೀಯ ನೆಲೆಗಟ್ಟಿನಲ್ಲಿ ಸೇವೆ ಮಾಡಬೇಕು, ದಾದಿಯರು ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಹಾಗೂ ರೋಗಿಗಳ ಸೇವೆ ಮಾಡಲು ಸದಾ ಸಿದ್ದರಿರಬೇಕು. ಕೋವಿಡ್- 19 ಸಂದರ್ಭದಲ್ಲಿ ದಿನದ 24 ಗಂಟೆಯೂ ಕೆಲಸ ನಿರ್ವಹಿಸುತ್ತಿದ್ದ ನಿಜಕ್ಕೂ ಶ್ಲಾಘನೀಯವಾಗಿದೆ. ಅತ್ಯುತ್ತಮ ಕೆಲಸ ನಿರ್ವಹಿಸುತ್ತಿರುವ 5 ಜನ ನರ್ಸ್‍ರವರಿಗೆ 10 ಸಾವಿರ ರೂ ನಗದು ಮತ್ತು ಚಿನ್ನದ ಪದಕ ನೀಡ ಗೌರವಿಸಲಾಗುವುದು ಎಂದು ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್‍ರವರು ತಿಳಿಸಿದರು. ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ ಯನ್ನು ಮೇ 12 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಶ್ರೀದೇವಿ ಅಡಿಟೋರಿಯಂ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶ್ರೀದೇವಿ ವೈದ್ಯಕೀಯ ನಿದೇಶಕರಾದ ಡಾ.ರಮಣ್ ಆರ್ ಹುಲಿನಾಯ್ಕರ್‍ರವರು ಮಾತನಾಡುತ್ತಾ ವೃತ್ತಿ ಜೀವನದಲ್ಲಿ ಸೇವಾ ಮನೋಭಾವದಿಂದ…

ಮುಂದೆ ಓದಿ...

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ : ಲೋಪದೋಷಗಳಿಗೆ ಆಸ್ಪದ ನೀಡದಂತೆ ಜಿಲ್ಲಾಧಿಕಾರಿ ಎಚ್ಚರಿಕೆ

ತುಮಕೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ಮೇ 21 ಹಾಗೂ 22, 2022ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯು ಜಿಲ್ಲೆಯ 11 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಅತ್ಯಂತ ಗೌಪ್ಯತೆ, ಸುರಕ್ಷತೆ ಮತ್ತು ವ್ಯವಸ್ಥಿತವಾಗಿ ಯಾವುದೇ ಸಣ್ಣ ಲೋಪದೋಷಕ್ಕೂ ಆಸ್ಪದ ನೀಡದಂತೆ ನಿಯಮಾನುಸಾರ ನಡೆಸಲು ಸಕಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಎಲ್ಲಾ ಕೇಂದ್ರಗಳ ಪ್ರತಿಯೊಂದು ಪರೀಕ್ಷಾ ಆವರಣ ಮತ್ತು ಕೊಠಡಿಗಳಲ್ಲೂ ಸಹ ಸಿಸಿ ಕ್ಯಾಮೆರಾ ಅಳವಡಿಸುವಂತೆ ಮತ್ತು ಎಲ್ಲಾ ಕೇಂದ್ರಗಳಲ್ಲೂ ಮೆಟಲ್ ಡಿಟೆಕ್ಟರ್ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಶಿಕ್ಷಣ ಇಲಾಖೆಯ ಜಿಲ್ಲಾ ನೋಡಲ್ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ…

ಮುಂದೆ ಓದಿ...

ಕಾಂಗ್ರೆಸ್ ಪಕ್ಷದ ಒಳಜಗಳ ಬಿಜೆಪಿಗೆ ವರದಾನ: ಬಿ.ವೈ ವಿಜಯೇಂದ್ರ

ತುಮಕೂರು: ಸಚಿವ ಸಂಪುಟಕ್ಕೆ ವಿಜಯೇಂದ್ರ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ, ರಾಜ್ಯ ನಾಯಕರ ಅಪೇಕ್ಷೆ ಏನಿದೆ. ಸಮಯ ಸಂದರ್ಭ ನೋಡಿಕೊಂಡು ನಿರ್ಧಾರ ಮಾಡುತ್ತಾರೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದ್ದರೂ ನಿಭಾಯಿಸುತ್ತೀನಿ ಎಂದರು. ತುಮಕೂರಿನ ಕಾರ್ಯಕ್ರಮವೊಂದಕ್ಕೆ ಭಾಗಿಯಾಗಿ ಮಾತನಾಡಿದ ಅವರು, ಮುಂದಿನ ಬಾರಿ ತುಮಕೂರಿನಲ್ಲಿ ತಮ್ಮ ಸ್ಪರ್ಧೆ ವಿಚಾರಕ್ಕೆ ಸಂಬಂಧಪಟ್ಟಂತೆ ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ. ಶಿರಾ ಮತ್ತು ಕೆ.ಆರ್ ಪೇಟೆ ಚುನಾವಣೆಯಲ್ಲಿ ಕೆಲಸ ಮಾಡಿದ್ದೆ ಕಾರ್ಯಕರ್ತರ ಜೊತೆ ಕೆಲಸ ಮಾಡಿದ್ದಕ್ಕೆ ಸಂತೋಷ ಸಿಕ್ಕಿದೆ. ಸ್ವಾಮೀಜಿ ಹುಟ್ಟುಹಬ್ಬದ ನೆಪದಲ್ಲಿ ರಾಜಕೀಯ ಮಾಡುವ ಪ್ರಮೇಯ ಉದ್ಭವ ಆಗಿಲ್ಲ ಎಂದರು. ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮದ ವಿಚಾರಕ್ಕೆ ಪ್ರತಿಕ್ರಿಯಿಸಿ ಕಾಂಗ್ರೆಸ್ ಪಕ್ಷದ ಮುಖಂಡರು ಮೂರ್ಖರಿದ್ದಾರೆ. 50 ರಿಂದ 60 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರುವ ಮಾನಸಿಕತೆಯಲ್ಲಿ ಇಲ್ಲ. ಹೀಗಾಗಿ…

ಮುಂದೆ ಓದಿ...