ಎರಡು ವರ್ಷದ ನಂತರದಲ್ಲಿ ಶಾಲೆಗಳ ಆರಂಭ ಸಂತಸ ತಂದಿದೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ


ತುಮಕೂರು: ಎರಡು ವರ್ಷದ ನಂತರ ಪೂರ್ಣ ಪ್ರಮಾಣದಲ್ಲಿ ಶಾಲೆಗಳು ಪ್ರಾರಂಭವಾಗುತ್ತಿರುವುದು ಸಂತಸ ತಂದಿದೆ. ಕೋವಿಡ್‍ನಿಂದಾಗಿ ಶಾಲೆಗಳಲ್ಲಿ ಭೌತಿಕವಾಗಿ ತರಗತಿಗಳು ನಿರಂತರವಾಗಿ ನಡೆಯದ ಕಾರಣ ಪಠ್ಯ ಕ್ರಮ ಹಿಂದುಳಿದಿದ್ದು, ಇದನ್ನು ಸರಿದೂಗಿಸಿ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಕಲಿಕಾ ಅಂತರವನ್ನು ಸರಿದೂಗಿಸಲೆಂದೇ 2022-23ನೇ ಶೈಕ್ಷಣಿಕ ವರ್ಷವನ್ನು “ಕಲಿಕಾ ಚೇತರಿಕೆ” ವರ್ಷ ಎಂದು ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ ಅವರು ತಿಳಿಸಿದರು. ನಗರದ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಏರ್ಪಡಿಸಲಾಗಿದ್ದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ, ಉಚಿತ ಪಠ್ಯ ಪುಸ್ತಕ ವಿತರಣೆ ಹಾಗೂ ಕಲಿಕಾ ಚೇತರಿಕೆ ವರ್ಷದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು. ಶಾಲಾ ಪ್ರಾರಂಭೋತ್ಸವ ಒಂದು ಮಹತ್ವದ ಕಾರ್ಯಕ್ರಮ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಕರುನಾಡ ಮಕ್ಕಳಿಗೆ ಗುಣಮಟ್ಟದ ಮೂಲಭೂತ…


ಮುಂದೆ ಓದಿ...

ಆಲದಮರ ಪಾರ್ಕ್ ನಿರ್ವಹಣೆ ಜವಾಬ್ದಾರಿ: ಪ್ರೆಸ್ ಕ್ಲಬ್ ಗೆ ಸಿಎಂ ಹಸ್ತಾಂತರ


ತುಮಕೂರು: ನಗರದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಆಲದಮರ ಪಾರ್ಕ್ ನಿರ್ವಹಣೆ ಜವಾಬ್ದಾರಿಯನ್ನು ಪ್ರೆಸ್ ಕ್ಲಬ್‍ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಸ್ತಾಂತರಿಸಿದರು. ನಗರದ ಜ್ಯೂನಿಯರ್ ಕಾಲೇಜು ಆವರಣದಲ್ಲಿರುವ ಆಲದಮರದ ಪಾರ್ಕ್‍ನಲ್ಲಿ ಆಲದ ಸಸಿ ನೆಟ್ಟು ನೀರೆರೆಯುವ ಮೂಲಕ ಪ್ರೆಸ್‍ಕ್ಲಬ್ ಕಾರ್ಯ ಚಟುವಟಿಕೆಗೆ ವಿದ್ಯುಕ್ತ ಚಾಲನೆ ನೀಡಿದರು. ಆಲದಮರದ ಪಾರ್ಕ್‍ನಲ್ಲಿ ಸಿದ್ದಗೊಳಿಸಿದ್ದ ವೇದಿಕೆಯಲ್ಲಿ ಪ್ರೆಸ್‍ಕ್ಲಬ್‍ನ ಉಪಾಧ್ಯಕ್ಷರುಗಳಾದ ಶ್ರೀನಿವಾಸರೆಡ್ಡಿ, ಕರುಣಾಕರ್, ಮಾರುತಿ ಗಂಗಹನುಮಯ್ಯ ಹಾಗೂ ಪ್ರಧಾನ ಕಾರ್ಯದರ್ಶಿ ಯೋಗೀಶ್ ಅವರಿಗೆ ಆಲದ ಮರದ ಪಾರ್ಕ್ ನಿರ್ವಹಣೆ ಹೊಣೆಯನ್ನು ದಾಖಲಾತಿ ಹಸ್ತಾಂತರಿಸುವ ಮೂಲಕ ಮುಖ್ಯಮಂತ್ರಿಗಳು ನೀಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸ್ಮಾರ್ಟ್‍ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಆಲದ ಮರದ ಪಾರ್ಕ್‍ನ ನಿರ್ವಹಣೆಯ ಜವಾಬ್ದಾರಿಯನ್ನು ಪ್ರೆಸ್‍ಕ್ಲಬ್‍ಗೆ ವಹಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಇದರಿಂದ ಪ್ರೆಸ್‍ಕ್ಲಪ್‍ನವರಿಗೆ ಸಾಮಾಜಿಕ ಹೊಣೆಗಾರಿಕೆ, ಪರಿಸರ ಕಾಳಜಿ ಎಷ್ಟಿದೆ ಎಂಬುದು ಗೊತ್ತಾಗುತ್ತದೆ ಎಂದರು. ಸಾಮಾಜಿಕ ಹೊಣೆಗಾರಿಕೆ ಎಂಬುದು ಬಹಳ…


ಮುಂದೆ ಓದಿ...

ಪತ್ರಕರ್ತರ ಹಿತಕಾಯಲು ಸರ್ಕಾರ ಬದ್ಧ: ಸಿ.ಎಂ. ಬೊಮ್ಮಾಯಿ


ತುಮಕೂರು: ಪತ್ರಕರ್ತರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಬಾಳನಕಟ್ಟೆಯ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ಪಕ್ಕದಲ್ಲಿರುವ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಜಿಲ್ಲಾ ಸಂಘದಿಂದ ಸೋಮವಾರ ಹಮ್ಮಿಕೊಂಡಿದ್ದ ಪತ್ರಿಕಾ ಭವನ ನವೀಕರಣ ಕಾಮಗಾರಿಗೆ ಚಾಲನೆ ನೀಡಿ, ಪತ್ರಕರ್ತರ ನಾಮಫಲಕ ಅನಾವರಣಗೊಳಿಸಿ ಮಾತನಾಡಿದ ಅವರು, ರಾಜ್ಯದ ಗ್ರಾಮೀಣ ಪ್ರದೇಶದ ಪತ್ರಕರ್ತರ ಸಮಸ್ಯೆಗಳನ್ನು ಬಗೆ ಹರಿಸುವುದರ ಜೊತೆಗೆ ನಗರ ಪ್ರದೇಶದ ಪತ್ರಕರ್ತರ ಸಮಸ್ಯೆಗಳನ್ನೂ ಬಗೆ ಹರಿಸಲು ಮುಂದಾಗಿರುವುದಾಗಿ ತಿಳಿಸಿದರು. ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತುಮಕೂರು ಜಿಲ್ಲಾ ಪತ್ರಿಕಾ ಭವನ ನಿರ್ಮಾಣಕ್ಕೆ 25 ಲಕ್ಷ ರೂ. ಅನುದಾನ ನೀಡಿದ್ದರ ಹಿನ್ನಲೆಯಲ್ಲಿ ಪತ್ರಿಕಾ ಭವನ ನಿರ್ಮಾಣವಾಗಿತ್ತು. ತಂತ್ರಜ್ಞಾನ ಬೆಳೆದಂತೆಲ್ಲಾ ಸಮಾಜದ ಓರೆ ಕೋರೆಗಳನ್ನು ತಿದ್ದುವ ಪತ್ರಕರ್ತರ ಸಂಖ್ಯೆಯೂ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿರುವ ಪತ್ರಿಕಾ ಭವನ ಇನ್ನೂ ಉತ್ತಮ ರೀತಿಯಲ್ಲಿ ನಿರ್ಮಾಣವಾಗಬೇಕೆಂಬ ಕರ್ನಾಟಕ ಕಾರ್ಯನಿರತ…


ಮುಂದೆ ಓದಿ...