ಬಾಲ್ಯ ವಿವಾಹ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ


ತುಮಕೂರು: ಜಾತ್ರೆ, ಉತ್ಸವ, ಹಾಗೂ ಅಕ್ಷಯ ತೃತೀಯ ಮುಂತಾದ ಹಬ್ಬ ಹಾಗೂ ಜಯಂತಿಗಳಲ್ಲಿ ವಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ ವಿವಾಹಗಳು ನಡೆಯುವ ಸಾಧ್ಯತೆ ಹೆಚ್ಚಿದ್ದು, ಸದರಿ ದಿನಗಳಂದು ಯಾವುದೇ ಬಾಲ್ಯ ವಿವಾಹಗಳು ನಡೆಯದಂತೆ ಎಚ್ಚರಿಕೆ ವಹಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಜಿಲ್ಲೆಯ ಎಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕರೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಕರೆಯಲಾಗಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮ ಸಹಾಯಕಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂಚಿತವಾಗಿ ಬಾಲ್ಯ ವಿವಾಹ ನಡೆಯುವ ಬಗ್ಗೆ ವರದಿ ಪಡೆದು, ಬಾಲ್ಯ ವಿವಾಹ ಪ್ರಕರಣ ನಡೆಯದಂತೆ ತಡೆಗಟ್ಟಲು ಶ್ರಮಿಸಬೇಕು ಎಂದು ಕರೆ ನೀಡಿದರು. ಅತ್ಯಾಚಾರ/ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಮತ್ತು…


ಮುಂದೆ ಓದಿ...

ಜೂ.25: ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ


ತುಮಕೂರು: ಕುಂಚಿಟಿಗ ಒಕ್ಕಲಿಗರ ಸಂಘ ಆರಂಭವಾಗಿ 50 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಸಂಘದವತಿ ಯಿಂದ ಜೂನ್ 25 ರಂದು ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ರಾಜ್ಯಮಟ್ಟದ ಕುಂಚಿಟಿಗ ಸಮುದಾಯದ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕುಂಚಿಟಿಗ ಒಕ್ಕಲಿಗರ ವಿದ್ಯಾಭಿವೃದ್ದಿ ಸಂಘದ ಕಾರ್ಯಾಧ್ಯಕ್ಷ ಆರ್.ಕಾಮರಾಜು ತಿಳಿಸಿದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಜೂನ್ 25 ರಂದು ಬೆಳಗ್ಗೆ 10 ಗಂಟೆಗೆ ಕುಂಚಿಟಿಗ ಸಮುದಾಯದ ಎಲ್ಲಾ ಪಂಗಡ, ಉಪಪಂಗಡಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ತುಮಕೂರಿನ ಅಮಾನಿಕೆರೆಯಲ್ಲಿರುವ ಗಾಜಿನ ಮನೆಯಲ್ಲಿ ಕುಂಚಿಟಿಗರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು. ಕುಂಚಿಟಿಗ ಒಕ್ಕಲಿಗರ ವಿದ್ಯಾಭಿವೃದ್ದಿ ಸಂಘವನ್ನು 1963ರಲ್ಲಿ ಸ್ಥಾಪಿಸಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಜನಾಂಗದ ಅಭಿವೃದ್ದಿಗೆ ಶ್ರಮಿಸಿದ ಬಿ.ರಂಗಣ್ಣ ಅವರ ಪುತ್ಥಳಿಯನ್ನು ಕುಂಚಟಿಗ ಭವನದ ಮುಂಭಾಗದಲ್ಲಿ ಆನಾವರಣ ಮಾಡಲಾಗುವುದು. ಅವರು ಸಂಘಕ್ಕೆ ನೀಡಿದ ಜಾಗದಲ್ಲಿ ಇಂದು ಗಂಡು ಮತ್ತು ಹೆಣ್ಣು ಮಕ್ಕಳ ಹಾಸ್ಟಲ್ ನಡೆಯುತ್ತಿದೆ.ಅಲ್ಲದೆ ಸರಕಾರದಿಂದ ಅವರ ಕಾಲದಲ್ಲಿ…


ಮುಂದೆ ಓದಿ...

ಆಯುಷ್ಮಾನ್ ಕಾರ್ಡ್ ವಿತರಿಸುವಂತೆ ಜಿಲ್ಲಾಧಿಕಾರಿ ಸೂಚನೆ


ತುಮಕೂರು: ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿಯಾಗಿ ಚಿಕಿತ್ಸೆ ಪಡೆಯಲು ಬರುವ ಸಾರ್ವಜನಿಕರಿಗೆ ಬಿಪಿಎಲ್/ಎಪಿಎಲ್ ಪಡಿತರ ಚೀಟಿಯನ್ನು ಕಡ್ಡಾಯಗೊಳಿಸಿ ಎಲ್ಲರಿಗೂ ಆಯುμÁ್ಮನ್ ಆರೋಗ್ಯ ಕಾರ್ಡುಗಳನ್ನು ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು. ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು , ಜಿಲ್ಲೆಯಲ್ಲಿ 28 ಲಕ್ಷ ಕಾರ್ಡುಗಳನ್ನು ನೀಡುವ ಗುರಿಯನ್ನು ಹೊಂದಿದ್ದು, ಈವರೆಗೆ 7.4 ಲಕ್ಷ ಕಾರ್ಡುಗಳನ್ನು ವಿತರಿಸಲಾಗಿದೆ. ಇದೇ ಜೂ.8 ರಿಂದ 14 ರವರೆಗೆ ಆಯುμÁ್ಮನ್ ಕಾರ್ಡುಗಳನ್ನು ನೀಡಲು ಅಭಿಯಾನವನ್ನು ಹಮ್ಮಿಕೊಂಡಿದ್ದು, ಒಂದು ತಾಲ್ಲೂಕಿಗೆ 20 ಸಾವಿರ ಕಾರ್ಡುಗಳನ್ನು ವಿತರಿಸಲು ಸೂಚನೆ ನೀಡಲಾಯಿತು. ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳು, ಸಾಮಾನ್ಯ ಸೇವಾ ಕೇಂದ್ರಗಳು, ಸೇವಾಸಿಂಧು ಕೇಂದ್ರಗಳಲ್ಲಿ ಆದ್ಯತೆಯ ಕಾರ್ಡುಗಳನ್ನು ವಿತರಿಸಿ ನಿಗಧಿಪಡಿಸಿರುವ ಗುರಿಯನ್ನು ತಲುಪಬೇಕು…


ಮುಂದೆ ಓದಿ...