ಜಲ ಜೀವನ ಮಿಷನ್: ಅಧ್ಯಕ್ಷರು, ಪಿಡಿಓಗಳಿಗೆ ಕಾರ್ಯಾಗಾರ


ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಜಲ ಜೀವನ್ ಮಿಷನ್ ಯೋಜನೆಯಡಿ ಇಂದು ತಿಪಟೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರುಗಳಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸ್ನೇಹ ಜೀವನ ಫೌಂಡೇಶನ್ (ಗುಬ್ಬಿ) ಇವರುಗಳ ಸಂಯುಕ್ತಾಶ್ರಯದಲ್ಲಿಂದು ತಿಪಟೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಕಾರ್ಯ ನಿರ್ವಾಹಕ ಅಧಿಕಾರಿ ಸುದರ್ಶನ್ ಅವರು, ಪ್ರತಿಯೊಂದು ಮನೆಗೂ ಕಾರ್ಯಾತ್ಮಕ ನಳ ಸಂಪರ್ಕ ಕಲ್ಪಿಸುವುದು ಸಮರ್ಪಕವಾದ ಶುದ್ಧವಾದ ನೀರನ್ನು ಎಲ್ಲರಿಗೂ ಸಹ ಒದಗಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಪ್ರತಿ ಗ್ರಾಮಗಳಲ್ಲೂ ಸರಿಯಾದಂತಹ ನೀರು ಸರಬರಾಜು ವ್ಯವಸ್ಥೆಯನ್ನು ಮಾಡುವಂತಹ ಕೆಲಸಗಳಲ್ಲಿ ಗ್ರಾಮಪಂಚಾಯಿತಿಯ ಪಾತ್ರ ಅತ್ಯಂತ ಮಹತ್ವವಾಗಿದ್ದು, ಗ್ರಾಮ ಪಂಚಾಯಿತಿಯ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಧ್ಯಕ್ಷರುಗಳು ಹೆಚ್ಚಿನ ಆಸಕ್ತಿ ವಹಿಸಿ, ಯೋಜನೆಯ…


ಮುಂದೆ ಓದಿ...

ಶಿಶುಪಾಲನಾ ಕೇಂದ್ರ ಉದ್ಘಾಟನೆ


ತುಮಕೂರು: ಜಿಲ್ಲಾ ಪಂಚಾಯಿತಿ ತುಮಕೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಕಚೇರಿಗಳಲ್ಲಿನ ಶಿಶುಪಾಲನಾ ಕೇಂದ್ರ ತೆರೆಯ ಬೇಕೆಂಬ ರಾಜ್ಯ ಸರಕಾರದ ನಿರ್ದೇಶನದ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಮರ್ಥ್ ಪೌಂಢೇಷನ್ ಸಹಯೋಗದಲ್ಲಿ ಶಿಶುಪಾಲನಾ ಕೇಂದ್ರವನ್ನು ಉದ್ಘಾಟಿಸಲಾಯಿತು. ಜಿಲ್ಲಾ ಪಂಚಾಯತ್ ಕಚೇರಿಯ ಮೂರನೇ ಮಹಡಿಯಲ್ಲಿ ಶಿಶುಪಾಲನಾ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಸಿಇಓ ಡಾ.ಕೆ.ವಿದ್ಯಾಕುಮಾರಿ, ಸರಕಾರದ ನಿರ್ದೇಶನದಂತೆ ಮಹಿಳಾ ಸರಕಾರಿ ನೌಕರರ ಅನುಕೂಲಕ್ಕಾಗಿ ನಗರದಲ್ಲಿ ಎರಡು ಕಡೆ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲು ಮುಂದಾಗಿದ್ದು,ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿಯೂ ಇದೇ ರೀತಿಯೇ ಕೇಂದ್ರವನ್ನು ತೆರೆಯಲು ಸಿದ್ದತೆಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ಖಾಸಗಿ ಕ್ಷೇತ್ರದಲ್ಲಿರುವ ಉದ್ಯೋಗಸ್ತ ಮಹಿಳೆಯರ 0-6 ವರ್ಷದವರೆಗಿನ ಮಕ್ಕಳ ಪಾಲನೆಗಾಗಿ ಜಿಲ್ಲೆಯಲ್ಲಿ ಎರಡು ಕಡೆ ಇದೇ ರೀತಿಯ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲು ಈಗಾಗಲೇ ಜಾಗ ಗುರುತಿಸಿ, ರಾಜ್ಯ ಸರಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ. ಅನುಮೋಧನೆ…


ಮುಂದೆ ಓದಿ...

ಮಾನವ ಪರಿಸರ ಸಂರಕ್ಷಣಾ ಪಡೆಯ ಕಚೇರಿ ಉದ್ಘಾಟನೆ


ತುಮಕೂರು: ನಗರದ ಸಪ್ತಗಿರಿ ಬಡಾವಣೆಯ ರಾಘವೇಂದ್ರ ನಗರದ ಟಿ.ಪಿ.ಕೈಲಾಸಂ ರಸ್ತೆಯಲ್ಲಿ ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆಯ ಕಚೇರಿಯನ್ನು ಉದ್ಘಾಟಿಸಲಾಯಿತು. ಭಾರತಾಂಭೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆಯ ಕಚೇರಿಯನ್ನು ಅಧಿಕೃತವಾಗಿ ಚಾಲನೆಗೆ ದೊರೆಯಿತು. ರಾಷ್ಟ್ರೀಯ ಗೌರವಾಧ್ಯಕ್ಷ ಎಸ್.ಪಿ.ಚಿದಾನಂದ ಮಾತನಾಡಿ, ನಮ್ಮ ಪಡೆಯನ್ನು ಕಟ್ಟಿರುವ ಪ್ರಮುಖ ಉದ್ದೇಶವೆಂದರೆ, ಮಾನವ ಹಕ್ಕುಗಳು ಮತ್ತು ಮಕ್ಕಳ ಹಕ್ಕುಗಳ ಸಂರಕ್ಷಣೆಯ ಜೊತೆಗೆ, ಭ್ರಷ್ಟಾಚಾರವನ್ನು ಕಿತ್ತೊಗೆಯುವುದು. ಗೋಶಾಲೆಗಳ ನಿರ್ವಹಣೆ ಮತ್ತು ಗೋವು ಹಾಗೂ ಅದರ ಸಂತತಿ ರಕ್ಷಣೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕ್ಷೇತ್ರವನ್ನು ಭ್ರಷ್ಟಾಚಾರ ಮುಕ್ತ ಮಾಡಿ, ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆ ದೊರೆಯುವಂತೆ ಮಾಡುವುದು, ಕೃಷಿ ಮತ್ತು ಅದಕ್ಕೆ ಪೂರಕ ಕ್ಷೇತ್ರಗಳನ್ನು ಬಲಿಷ್ಠಗೊಳಿಸುವುದು, ಪರಿಸರದ ಆಪಾಯಕಾರಿ ತ್ಯಾಜ್ಯಗಳಿಂದಾಗುತ್ತಿರುವ ದುಷ್ಪರಿಣಾಮವನ್ನು ಕಡಿಮೆ ಮಾಡುವುದು. ಪ್ರಾಣಿಗಳ ಹಕ್ಕು ಸಂರಕ್ಷಣೆ, ಗ್ರಾಮೀಣ ಮತ್ತು ನಗರಗಳ ಅಭಿವೃದ್ದಿಯಲ್ಲಿ ತೊಡಗಿಸಿಕೊಳ್ಳುವುದು. ಯುವ…


ಮುಂದೆ ಓದಿ...

ಬಗರ್ ಹುಕುಂ ಸಾಗುವಳಿದಾರರ ಹಕ್ಕು ರಕ್ಷಣೆಗೆ ಆಗ್ರಹ


ತುಮಕೂರು: ರೈತರ ಮೇಲೆ ಅರಣ್ಯ ಇಲಾಖೆಯ ದೌರ್ಜನ್ಯ, ದಬ್ಬಾಳಿಕೆ-ಕಿರುಕುಳ ಖಂಡಿಸಿ, ಬಗರ್ ಹುಕುಂ ಸಾಗುವಳಿದಾರರ ಹಕ್ಕು ರಕ್ಷಣೆಗಾಗಿ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಜೂ. 14 ರಿಂದ ರೈತರ ಬೃಹತ್ ಅನಿರ್ಧಿಷ್ಟಾವಧಿ ಧರಣಿಯನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿದೆ. ದೌರ್ಜನ್ಯ, ದಬ್ಬಾಳಿಕೆ ಬಳಸಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಂಡಿರುವ ಬಗರ್ ಹುಕಂ ಸಾಗುವಳಿ ಭೂಮಿ ಮರಳಿಸಲು, ಎಲ್ಲಾ ಬಗರ್ ಹುಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು, ಸಾಗುವಳಿ ಮಂಜೂರಾತಿ ಆದೇಶ ಪಡೆದಿರುವ ಎಲ್ಲಾ ಬಗರ್‍ಹುಕುಂ ರೈತರಿಗೆ ಪಹಣಿ ವಿತರಿಸಲು, ಬಗರ್ ಹುಕುಂ ಸಕ್ರಮ ಕೋರಿ ಅರ್ಜಿ ಸಲ್ಲಿಸಲು ಅವಕಾಶವನ್ನು ವಿಳಂಬ ಮಾಡದೇ ಕಲ್ಪಿಸಲು, ವಸತಿ ರಹಿತರಿಗೆ ಮನೆ-ನಿವೇಶನಕ್ಕಾಗಿ ಸರ್ಕಾರಿ ಭೂಮಿ ಲಭ್ಯ ಇಲ್ಲದ ಕಡೆ ಭೂ ಸ್ವಾಧೀನದ ಮೂಲಕ ಮನೆ -ನಿವೇಶನ ಒದಗಿಸಲು, ವಿವಿಧ ಯೋಜನೆಗಳಿಗೆ ಭೂ ಸ್ವಾಧೀನಕ್ಕೆ ಒಳಗಾದ ಬಗರ್ ಹುಕುಂ ಸಾಗುವಳಿದಾರರು ಸೇರಿದಂತೆ…


ಮುಂದೆ ಓದಿ...

ಸಿಇಟಿ ಪರೀಕ್ಷೆ: ಅಗತ್ಯ ಕ್ರಮಕ್ಕೆ ಡೀಸಿ ಸೂಚನೆ


ತುಮಕೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜೂನ್ 16 ಮತ್ತು 17, 2022 ರಂದು ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯು ತುಮಕೂರು ನಗರದ 14, ಶಿರಾ 2 ಮತ್ತು ತಿಪಟೂರಿನ 2 ಪರೀಕ್ಷಾ ಕೇಂದ್ರಗಳಂತೆ ಒಟ್ಟು 18 ಕೇಂದ್ರಗಳಲ್ಲಿ ನಡೆಯಲಿದ್ದು, ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಶಿಷ್ಟಾಚಾರವನ್ನು ಕಾಯ್ದುಕೊಂಡು ನಿಯಮಾನುಸಾರ ಪರೀಕ್ಷೆಯನ್ನು ನಡೆಸುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಕರೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯ ವಿಡೀಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಸಿಇಟಿ ಪರೀಕ್ಷೆಗೆ ಸಂಬಂಧಿಸಿದ ವಿಡೀಯೊ ಕಾನ್ಫರೆನ್ಸ್ ಸಭೆಯ ನಂತರ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಉದ್ದೇಶಿಸಿ ಈ ಮೇಲಿನಂತೆ ಸೂಚನೆ ನೀಡಿದರು. ತುಮಕೂರು ನಗರದ 14 ಪರೀಕ್ಷಾ ಕೇಂದ್ರಗಳಲ್ಲಿ 6264, ಶಿರಾ ತಾಲ್ಲೂಕಿನ 2 ಪರೀಕ್ಷಾ ಕೇಂದ್ರಗಳಲ್ಲಿ 984 ಮತ್ತು ತಿಪಟೂರು…


ಮುಂದೆ ಓದಿ...