ಜೂ.14ರಿಂದ ರೈತರ ಬೃಹತ್ ಧರಣಿ


ತುಮಕೂರು ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ, ದಬ್ಬಾಳಿಕೆ-ಕಿರುಕುಳ ಖಂಡಿಸಿ, ಬಗರ್ ಹುಕಂ ಸಾಗುವಳಿದಾರರ ಹಕ್ಕು ರಕ್ಷಣೆಗಾಗಿ ಜಿಲ್ಲಾಧಿಕಾರಿ ಕಛೇರಿ ಎದುರು ಜೂನ್ 14 ರಿಂದ ರೈತರ ಬೃಹತ್ ಅನಿರ್ದಿಷ್ಟ ಧರಣಿ ನಡೆಯಲಿದೆ. ದೌರ್ಜನ್ಯ, ದಬ್ಬಾಳಿಕೆ ಬಳಸಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಂಡಿರುವ ಬಗರ್ ಹುಕಂ ಸಾಗುವಳಿ ಭೂಮಿ ಮರಳಿಸಲು ,ಎಲ್ಲಾ ಬಗರ್ ಹುಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ,ಸಾಗುವಳಿ ಮಂಜೂರಾತಿ ಆದೇಶ ಪಡೆದಿರುವ ಎಲ್ಲಾ ಬಗರ್ ಹುಕಂ ರೈತರಿಗೆ ದುರಸ್ತು ಮಾಡಿ ಪಹಣಿ ವಿತರಿಸಲು, ಬಗರ್ ಹುಕಂ ಸಕ್ರಮ ಕೋರಿ ಅರ್ಜಿ ಸಲ್ಲಿಸಲು ಅವಕಾಶವನ್ನು ವಿಳಂಬ ಮಾಡದೇ ಕಲ್ಪಿಸಲು ,ವಸತಿ ರಹಿತರಿಗೆ ಮನೆ-ನಿವೇಶನಕ್ಕಾಗಿ ಸರ್ಕಾರಿ ಭೂಮಿ ಲಭ್ಯ ಇಲ್ಲದ ಕಡೆ ಭೂ ಸ್ವಾಧೀನದ ಮೂಲಕ ಮನೆ -ನಿವೇಶನ ಒದಗಿಸಲು ,ವಿವಿಧ ಯೋಜನೆಗಳಿಗೆ ಭೂ ಸ್ವಾಧೀನಕ್ಕೆ ಒಳಗಾದ ಬಗರ್ ಹುಕಂ ಸಾಗುವಳಿದಾರರು ಸೇರಿದಂತೆ ಎಲ್ಲಾ ರೈತರಿಗೆ ಪರಿಹಾರದ…


ಮುಂದೆ ಓದಿ...

ಪಠ್ಯಪುಸ್ತಕ ಪರಿಷ್ಕರಣೆ: ಸಚಿವ ನಾಗೇಶ್ ವಜಾಕ್ಕೆ ಸಿಪಿಐಎಂ ಆಗ್ರಹ


ತುಮಕೂರು ಕೆಲವು ಪಠ್ಯಗಳಲ್ಲಿ ಇರಬಹುದಾದ ಸೂಕ್ಷ್ಮ ಸಂಕೀರ್ಣ ವಿಷಯಗಳ ಕುರಿತು ಪರಿಶೀಲಿಸಿ ವರದಿ ನೀಡುವುದಕ್ಕೆ ರಚಿಸಲಾದ ರೋಹಿತ್ ಚಕ್ರವರ್ತಿ ಅಧ್ಯಕ್ಷೀಯ ಸಮಿತಿ ತನಗೆ ವಹಿಸಿದ ಜವಾಬ್ದಾರಿಯನ್ನು ಮೀರಿ, ಪಠ್ಯ ಪುಸ್ತಕ ಪರಿಷ್ಕರಣೆಗೆ ಮುಂದಾದ ದುಷ್ಕøತ್ಯವನ್ನು ಭಾರತ ಕಮ್ಯುನಿಸ್ಟ್ ಪಕ್ಷ ( ಮಾಕ್ರ್ಸವಾದಿ) ತುಮಕೂರು ಜಿಲ್ಲಾ ಸಮಿತಿ ಬಲವಾಗಿ ಖಂಡಿಸುತ್ತದೆ. ಈ ಸರಕಾರದಲ್ಲಿ ಯಾರು ಹೇಗೆ ಬೇಕಾದರೂ ವರ್ತಿಸಬಹುದೆಂಬುದನ್ನು ಮತ್ತು ಆಡಳಿತದ ಮೇಲೆ ಸರಕಾರದ ಯಾವುದೇ ನಿಯಂತ್ರಣವಿಲ್ಲವೆಂಬುದನ್ನು ಮತ್ತೊಮ್ಮೆ ಸ್ಪಷ್ಠ ಪಡಿಸುತ್ತದೆ. ಯಾವುದೇ ಸೂಕ್ತ ವೇದಿಕೆಗಳಲ್ಲಿ ಚರ್ಚಿಸದೇ, ಸೂಕ್ತ ಆದೇಶ ಹೊರಡಿಸದೇ ತಮಗೆ ತಿಳಿದಂತೆ ಕಾರ್ಯ ನಿರ್ವಹಿಸುವುದು, ಇಲ್ಲವೇ ಮತ್ಯಾವುದೋ ಅವಿತಿಟ್ಟುಕೊಂಡ ದುಷ್ಠ ಶಕ್ತಿಯ ನಿಯಂತ್ರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವುದನ್ನು ಇದು ಮತ್ತೊಮ್ಮೆ ಎತ್ತಿ ತೋರಿಸುತ್ತದೆ. ಈ ಅಧಿಕಾರ ದುರುಪಯೋಗದಿಂದ ಮತ್ತು ತಜ್ಞರಲ್ಲದವರ ದುರ್ನಡೆಯಿಂದ ನಾಡಿನ ಗಣ್ಯ ವ್ಯಕ್ತಿಗಳು ಅಪಮಾನಿತರಾಗುವಂತಾಯಿತು. ರಾಜ್ಯದ ದಶ ಲಕ್ಷಾಂತರ ಶಾಲಾ ಮಕ್ಕಳು ಪಠ್ಯ ಪುಸ್ತಕ…


ಮುಂದೆ ಓದಿ...

ಗಂಡಸಾದರೆ ನನ್ನ ಎದುರು ಗೆಲ್ಲಲಿ: ಎಚ್‍ಡಿಕೆ ವಿರುದ್ಧ ತೊಡೆ ತಟ್ಟಿದ ವಾಸಣ್ಣ!


ತುಮಕೂರು: ಗುಬ್ಬಿಯ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಅವರು ತಮ್ಮ ಪಕ್ಷದ ಮುಖಂಡ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, `ಅವನು ಉತ್ತಮನಾ, ಅವನು ಯಾವುದರಲ್ಲಿ ಉತ್ತಮನೆಂದು ಹೇಳಲಿ. ಬೆಳಿಗ್ಗೆ ಒಂದು ಹೇಳುತ್ತಾನೆ, ಸಂಜೆ ಮತ್ತೊಂದು ಹೇಳುತ್ತಾನೆ. ಊಸರವಳ್ಳಿ ಇದ್ದಂತೆ’ ಎಂದು ನಿಂದಿಸಿದರು. ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಶ್ರೀನಿವಾಸ್ ಮತ ಹಾಕಿಲ್ಲ ಎಂಬ ಕಾರಣ ಮುಂದಿಟ್ಟುಕೊಂಡು, ಕುಮಾರಸ್ವಾಮಿ ಹರಿಹಾಯ್ದಿದಿದ್ದರು. ಅಡ್ಡ ಮತದಾನ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿರುವ ಮನೆ ಎದುರು ಶನಿವಾರ ಪ್ರತಿಭಟನೆ ನಡೆಸಿದರು. ಇದಕ್ಕೆ ಪ್ರತಿಯಾಗಿ ಶ್ರೀನಿವಾಸ್ ಟೀಕಾ ಪ್ರಹಾರ ನಡೆಸಿದ್ದಾರೆ. `ಇನ್ನು ಮುಂದೆ ನೋಡಲಿ, ಎಲ್ಲವನ್ನೂ ಬಿಚ್ಚಿಡುತ್ತೇನೆ. ಯಾವುದರಲ್ಲಿ ಪರಿಶುದ್ಧವಾಗಿ ಇದ್ದಾನೆ. ಕಚ್ಚೆ ಸರಿ ಇಲ್ಲ, ಬಾಯಿ ಸರಿ ಇಲ್ಲ. ಇನ್ನೊಬ್ಬರ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ? ಇವನ ವಿರುದ್ಧ ಹೋರಾಟ ಮಾಡುವುದು ನನ್ನ ಮುಂದಿನ ನಡೆ.…


ಮುಂದೆ ಓದಿ...

ಶಾಸಕ ಎಸ್.ಆರ್ ಶ್ರೀನಿವಾಸ್ ರಾಜೀನಾಮೆಗೆ ಒತ್ತಾಯ: ಗುಬ್ಬಿಯಲ್ಲಿ ಸಿಡಿದೆದ್ದ ಜೆಡಿಎಸ್ ಕಾರ್ಯಕರ್ತರು


ಗುಬ್ಬಿ: ಜೆಡಿಎಸ್ ಪಕ್ಷದ ಸದಸ್ಯನಾಗಿ ಹಾಗೂ ನಾಲ್ಕು ಬಾರಿ ಶಾಸಕನಾಗಿ ಪಕ್ಷದ ಎಲ್ಲಾ ಸೌಲಭ್ಯಗಳನ್ನು ಪಡೆದು ಪಕ್ಷಕ್ಕೆ ದ್ರೋಹವೆಸಗಿದ ಶಾಸಕ ಎಸ್.ಆರ್.ಶ್ರೀನಿವಾಸ್ ಕೂಡಲೇ ಪಕ್ಷಕ್ಕೆ ಹಾಗೂ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಜೆ.ಡಿ.ಎಸ್.ಮುಂಖಡ ಬಿ.ಎಸ್.ನಾಗರಾಜು ಒತ್ತಾಯಿಸಿದರು. ಪಟ್ಟಣದ ಜೆ.ಡಿ.ಎಸ್.ಕಛೇರಿಯಿಂದ ನೂರಾರು ಕಾರ್ಯಕರ್ತರೊಡನೆ ಶಾಸಕ ಎಸ್.ಆರ್.ಶ್ರೀನಿವಾಸ್ ವಿರುದ್ದ ಘೋಷಣೆಗಳನ್ನು ಕೂಗುತ್ತಾ ರಸ್ತೆ ತಡೆ ನಡೆಯಿಸಿ ಮಾತನಾಡಿದ ಅವರು ಕಳೆದ ಸುಮಾರು 20 ವರ್ಷಗಳಿಂದ ಗುಬ್ಬಿ ತಾಲ್ಲೂಕಿನ ಮತದಾರರ ಕಣ್ಣಿಗೆ ಮಣ್ಣು ಎರಚಿ ಮತಬ್ಯಾಂಕ್‍ಗಳನ್ನಾಗಿ ಪರಿವರ್ತಿಸಿದ ಖ್ಯಾತಿ ಈ ಶಾಸಕರದ್ದಾಗಿದೆ. ತಾಲ್ಲೂಕಿನ ಜನತೆಯನ್ನು ಮೂರ್ಖರನ್ನಾಗಿ ಮಾಡಿ ಯಾವುದೇ ಗುರುತಿಸುವಂತಹ ಕೆಲಸವನ್ನು ಈ ತಾಲ್ಲೂಕಿನಲ್ಲಿ ನಡೆಯದೇ ಇರುವುದು ಈ ತಾಲ್ಲೂಕಿನ ಮತದಾರರ ದೌಭಾಗ್ಯವೇ ಸರಿ ಎಂದ ಅವರು ಪಕ್ಷಕ್ಕೆ ದ್ರೋಹವೆಸಗಿ ಬೇರೆ ಪಕ್ಷಕ್ಕೆ ಮತ ನೀಡಿ ತಾನು ನಿಷ್ಟಾವಂತ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂದು ಬಿಂಬಿಸುತ್ತಿರುವುದಕ್ಕೆ ಈ ತಾಲ್ಲೂಕಿನ ಜನರೇನು ದಡ್ಡರೇನು…


ಮುಂದೆ ಓದಿ...

ಸಿದ್ದಾರ್ಥ ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!


ತುಮಕೂರು: ತುಮಕೂರು ನಗರದ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ಸಿವಿಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಕವಿತ (21) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ 12.30ರ ಸುಮಾರಿಗೆ ನಡೆದಿದೆ. ಕಾಲೇಜು ಹಾಸ್ಟೆಲ್‍ನ ಸಂಗಮಿತ್ರ ಬ್ಲಾಕ್ ನಲ್ಲಿ ಘಟನೆ ಸಂಭವಿಸಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿರುವುದಿಲ್ಲ. ಮೃತ ವಿದ್ಯಾರ್ಥಿನಿ ಕವಿತ ಮೈಸೂರು ಮೂಲದವರು ಎಂದು ತಿಳಿದು ಬಂದಿದೆ. ತಿಲಕ್‍ಪಾರ್ಕ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಮುಂದೆ ಓದಿ...