ಹೊಸಪುರ ಗ್ರಾಮದ ವ್ಯಕ್ತಿ ಕಾಣೆ


ತುಮಕೂರು: ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಪುರ ಗ್ರಾಮದ 22 ವರ್ಷದ ಅಜಿತ್ ಕುಮಾರ್ ಕಾಣೆಯಾಗಿದ್ದು, ಈತನ ಪತ್ನಿ ಶ್ವೇತ ಎನ್.ಜೆ. ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯು ಅಂಗಡಿಗೆ ಹೋಗಿ ಬರುವುದಾಗಿ ಮನೆಯಿಂದ ಹೋದವನು ಮರಳಿ ಬಂದಿಲ್ಲದಿರುವುದರಿಂದ ಈತನ ಸ್ನೇಹಿತ ಹರ್ಷನಿಗೆ ಕರೆ ಮಾಡಿದರೂ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಈತನ ಬಗ್ಗೆ ಸುಳಿವು ಸಿಕ್ಕಿರುವುದಿಲ್ಲ. ಕಾಣೆಯಾದ ವ್ಯಕ್ತಿಯು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ದುಂಡು ಮುಖ, ಗೋಧಿ ಮೈಬಣ್ಣ, ಮನೆಯಿಂದ ಹೋಗುವಾಗ ಕಪ್ಪು ಮತ್ತು ನೀಲಿಯ ಬಣ್ಣದ ಶರ್ಟ್ ಹಾಗೂ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಈತನು ತೆಲುಗು ಮತ್ತು ತಮಿಳು ಭಾಷೆ ಮಾತನಾಡುತ್ತಾನೆ. ಈತನ ಬಗ್ಗೆ ಮಾಹಿತಿ ಸಿಕ್ಕವರು ದೂ.ವಾ. 08132-225229/220294, 0816-2278000 ಅಥವಾ ಮೊ.ಸಂ. 9480802963/36/00ಯನ್ನು ಸಂಪಕಿಸಬಹುದೆಂದು ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಮನವಿ ಮಾಡಿದ್ದಾರೆ.


ಮುಂದೆ ಓದಿ...

ಮಕ್ಕಳೊಂದಿಗೆ ತಾಯಿ ಕಾಣೆ


ತುಮಕೂರು: ಕುಣಿಗಲ್ ತಾಲ್ಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಮೃತೂರು ಗ್ರಾಮದ ಸುಮಾರು 26 ವರ್ಷದ ನಾಗರತ್ನ ಎಂಬ ಮಹಿಳೆಯು 6 ವರ್ಷದ ಪ್ರಭಾಸ್, 5 ವರ್ಷದ ಪ್ರವೀಣ್ ಕುಮಾರ್ ಎಂಬ ತನ್ನ ಮಕ್ಕಳೊಂದಿಗೆ ಕಾಣೆಯಾಗಿದ್ದಾಳೆ ಎಂದು ಪತಿ ಮಂಜು ಠಾಣೆಗೆ ದೂರು ನೀಡಿದ್ದಾರೆ. ಈಕೆಯು ತನ್ನ ಮಕ್ಕಳೊಂದಿಗೆ ಅಮೃತೂರು ಸರ್ಕಾರಿ ಆಸ್ಪತ್ರೆಯ ಲ್ಯಾಬ್ ಬಳಿ ಹೋಗಿ ಬರುವುದಾಗಿ ಮನೆಯಿಂದ ಹೋದವರು ಮರಳಿ ಮನೆಗೆ ಬಂದಿರುವುದಿಲ್ಲ. ನಾಗರತ್ನ :- ಕಾಣೆಯಾದ ಮಹಿಳೆಯು 4.5 ಅಡಿ ಎತ್ತರ, ಕಪ್ಪು ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಹಸಿರು ಹೂಗಳಿರುವ ಬಿಳಿ ಬಣ್ಣದ ಟಾಪ್, ಕಪ್ಪು ಬಣ್ಣದ ಲೆಗ್ಗಿನ್ಸ್, ಕಪ್ಪು ಬಣ್ಣದ ವೇಲ್ ಧರಿಸಿದ್ದಾಳೆ. ಪ್ರಭಾಸ್ :- 3.5 ಅಡಿ ಎತ್ತರ, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ, ತೆಳ್ಳನೆ ಮೈಕಟ್ಟು ಹೊಂದಿದ್ದು, ಬಿಳಿ ಬಣ್ಣದ ಶರ್ಟ್, ನೀಲಿ ಬಣ್ಣದ…


ಮುಂದೆ ಓದಿ...

ರಾಜ್ಯದಲ್ಲಿ ಅಗತ್ಯವಿರುವಷ್ಟು ರಕ್ತ ಪೂರೈಕೆ ಆಗುತ್ತಿಲ್ಲ


ಚಿಕ್ಕನಾಯಕನಹಳ್ಳಿ: ಅಗತ್ಯವಿರುವಷ್ಟು ರಕ್ತ ಪೂರೈಕೆ ಆಗುತ್ತಿಲ್ಲ ಇದರಿಂದ ಪ್ರತಿ ಜೀವದ ಮೌಲ್ಯ ಎಲ್ಲರೂ ಅರಿಯುವ ಮೂಲಕ ರಕ್ತದಾನ ಅತ್ಯವಶ್ಯಕ ಎಂದು ಜಿಲ್ಲಾ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಕೆ.ಎಸ್ ಇಂದು ಹೇಳಿದರು. ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾಲೂಕು ವೈದ್ಯಾಧಿಕಾರಿಗಳ ಕಛೇರಿ ಸಾರ್ವಜನಿಕ ಆಸ್ಪತ್ರೆ ಜಿಲ್ಲಾ ರಕ್ತನಿಧಿ ಕೇಂದ್ರ ಪುರಸಭೆ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ನಡೆಸಿದ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ರಾಜ್ಯದಲ್ಲಿ ಏಳು ಕೋಟಿ ಜನಸಂಖ್ಯೆ ಹೊಂದಿದ್ದರೂ ಕೇವಲ ಒಂದು ಪರ್ಸೆಂಟ್ ರಕ್ತ ಕೂಡ ಶೇಖರಣೆ ಆಗುತ್ತಿಲ್ಲ ನಮಗೆ ಅಗತ್ಯವಿರುವ ಸುಮಾರು 8ಲಕ್ಷ ಯುನಿಟ್ ರಕ್ತ ಅಗತ್ಯತೆ ಹೊಂದಿದ್ದು 2 ಲಕ್ಷ ಯುನಿಟ್ ರಕ್ತ ಕೊರತೆ ಎದ್ದುಕಾಣುತ್ತಿದೆ. ರಕ್ತ ನೀಡುವ ಕಾರ್ಯದಲ್ಲಿ ಪುರುಷರಷ್ಟೇ ಮಹಿಳೆಯರೂ ಸಮಾನಾರ್ ಇದ್ದಾರೆ ಮಹಿಳೆಯರು ಯಾರು ಆತಂಕಕ್ಕೆ ಒಳಗಾಗಬಾರದು ಅವರು ರಕ್ತ ನೀಡುವುದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುವುದರ…


ಮುಂದೆ ಓದಿ...

ಪಕ್ಷ ಸಂಘಟನೆ: ಜೂ.18 ರಂದು ಎಎಪಿ ಸಮಾವೇಶ


ತುಮಕೂರು ದೆಹಲಿಯಲ್ಲಿ ನಿರಂತರ ಮೂರನೆ ಬಾರಿಗೆ ಅಧಿಕಾರಕ್ಕೆ ಬಂದಿರುವ ನಂತರ ಪಂಜಾಬಿನಲ್ಲಿ ಈ ಬಾರಿ ಅಧಿಕಾರ ಗದ್ದುಗೆ ಏರಿರುವ ಆಮ್ ಆದ್ಮಿ ಪಾರ್ಟಿ ಕರ್ನಾಟಕದಲ್ಲೂ ಕೂಡ ಸಂಘಟನೆ ಚುರುಕುಗೊಳಿಸಿದ್ದು ಜೂ.18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಡಾ. ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಪಕ್ಷದ ಸಮಾವೇಶ ಹಮ್ಮಿಕೊಂಡಿರುವುದಾಗಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಬಿ.ಎಲ್.ವಿಶ್ವನಾಥ್ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ದೆಹಲಿ ಮುಖ್ಯಮಂತ್ರಿ ಕೆಜ್ರಿವಾಲ್ ಅವರ ಭ್ರಷ್ಟಾಚಾರರಹಿತ ನಿಷ್ಪಕ್ಷಪಾತ ಹಾಗೂ ಪಾರದರ್ಶಿಕ ಆಡಳಿತ ನೋಡಿ ದೇಶದ ಜನ ಬದಲಾವಣೆ ಬಯಸಿದ್ದು, ಎಎಪಿ ಪಕ್ಷ ಸೇರ್ಪಡೆಗೊಳ್ಳುವ ಮೂಲಕ ವ್ಯಾಪಕ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ ಎಂದರು. ದೇಶದ ಪ್ರಮುಖ 3 ರಾಜಕೀಯ ಪಕ್ಷಗಳಿಗಿಂತ ವೇಗವಾಗಿ ಬೆಳೆಯುತ್ತಿರುವ ಎಎಪಿಗೆ ಸಾಕಷ್ಟು ಜನಬೆಂಬಲ ವ್ಯಕ್ತವಾಗುತ್ತಿದ್ದು, ತುಮಕೂರು ಜಿಲ್ಲೆಯಾದ್ಯಂತ ಜೂ.18 ರಿಂದ ಸೆ.15ರವರೆಗೆ ಗ್ರಾಮ ಸಂಪರ್ಕ ಅಭಿಯಾನವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.…


ಮುಂದೆ ಓದಿ...

ನಾಳೆ ನಗರಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ


ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಘಟಕದ ಅಧಿಕಾರ ಸ್ವೀಕಾರ ಹಾಗೂ ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಗೆ ಹೆಚ್ಚು ನೆರವು ನೀಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನಾ ಸಮಾರಂಭವನ್ನು ಜೂ.15ರಂದು ಬುಧವಾರ ಬೆಳಿಗ್ಗೆ 10.30ಕ್ಕೆ ನಗರದ ಡಾ.ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ. ಸಿದ್ಧಗಂಗಾ ಮಠಾಧ್ಯಕ್ಷ ಶ್ರೀಸಿದ್ಧಲಿಂಗಸ್ವಾಮೀಜಿ ಸಾನಿಧ್ಯದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಿ ಅಭಿನಂದನೆ ಸ್ವೀಕರಿಸುವರು. ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿನಂದನಾ ನುಡಿಯಾಡಲಿದ್ದು, ಗೃಹಸಚಿವ ಆರಗ ಜ್ಞಾನೇಂದ್ರ ನೂತನ ಸದಸ್ಯರಿಗೆ ಪ್ರಮಾಣ ಪತ್ರ ವಿತರಿಸುವರು. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಅಧ್ಯಕ್ಷತೆ ವಹಿಸುವರು. ಐಎಫ್‍ಡಬ್ಲ್ಯೂಜೆ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ನೂತನ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದು, ಮುಖ್ಯ ಅತಿಥಿಯಾಗಿ ಸಂಸದ ಜಿ.ಎಸ್.ಬಸವರಾಜು, ಶಾಸಕ ಜಿ.ಬಿ.ಜ್ಯೋತಿಗಣೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಮಾಜಿ ಶಾಸಕರಾದÀ ಶಿವಣ್ಣ, ಗಂಗಹನುಮಯ್ಯ, ಡಿಸಿ ವೈ.ಎಸ್.ಪಾಟೀಲ್, ಎಸ್ಪಿ ರಾಹುಲ್‍ಕುಮಾರ್‍ಶಹಾಪುರವಾಡ್, ಆಯುಕ್ತೆ ರೇಣುಕಾ ಪಾಲ್ಗೊಳ್ಳುವರು. ,…


ಮುಂದೆ ಓದಿ...

ಬಗರ್ ಹುಕಂ ಸಾಗುವಳಿದಾರರು ಹಕ್ಕುಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ


ತುಮಕೂರು: ದೌರ್ಜನ್ಯ, ದಬ್ಬಾಳಿಕೆ ಬಳಸಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಂಡಿರುವ ಬಗರ್ ಹುಕಂ ಸಾಗುವಳಿ ಭೂಮಿ ಮರಳಿಸಲು ಹಾಗೂ ಎಲ್ಲಾ ಬಗರ್ ಹುಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರಾಂತ ರೈತ ಸಂಘ ನಗರದ ಜಿಲ್ಲಾಧಿಕಾರಿ ಅನಿರ್ಧಿಷ್ಠಾವಧಿ ಧರಣಿ ಆರಂಭಿಸಿದೆ. ಸಾಗುವಳಿ ಮಂಜೂರಾತಿ ಆದೇಶ ಪಡೆದಿರುವ ಎಲ್ಲಾ ಬಗರ್ ಹುಕಂ ರೈತರಿಗೆ ದುರಸ್ತು ಮಾಡಿ ಪಹಣಿ ವಿತರಿಸಬೇಕು. ಬಗರ್ ಹುಕಂ ಸಕ್ರಮ ಕೋರಿ ಅರ್ಜಿ ಸಲ್ಲಿಸಲು ಅವಕಾಶವನ್ನು ವಿಳಂಬ ಮಾಡದೇ ಕಲ್ಪಿಸಬೇಕು. ವಸತಿ ರಹಿತರಿಗೆ ಮನೆ-ನಿವೇಶನಕ್ಕಾಗಿ ಸರ್ಕಾರಿ ಭೂಮಿ ಲಭ್ಯ ಇಲ್ಲದ ಕಡೆ ಭೂ ಸ್ವಾಧೀನದ ಮೂಲಕ ಮನೆ-ನಿವೇಶನ ಒದಗಿಸಬೇಕು. ವಿವಿಧ ಯೋಜನೆಗಳಿಗೆ ಭೂ ಸ್ವಾಧೀನಕ್ಕೆ ಒಳಗಾದ ಬಗರ್ ಹುಕುಂ ಸಾಗುವಳಿದಾರರು ಸೇರಿದಂತೆ ಎಲ್ಲಾ ರೈತರಿಗೆ ಪರಿಹಾರದ ಹಣ ನೀಡುವಂತೆ ಒತ್ತಾಯಿಸಿ ಅನಿರ್ಧಿಷ್ಟ ಧರಣಿ ನಡೆಸಲಾಗುತ್ತಿದೆ. ಪ್ರತಿಭಟನಾ ಧರಣಿಗೆ ಚಾಲನೆ ನೀಡಿ ಮಾತಾನಾಡಿದ ಕರ್ನಾಟಕ ಪ್ರಾಂತ ರೈತ…


ಮುಂದೆ ಓದಿ...