ತುಮಕೂರು: ಭಾರತದ ಪ್ರಜೆಗಳಾದ ನಮ್ಮೆಲ್ಲರಿಗೂ ಗೌರವಯುತವಾಗಿ ಬದುಕುವ ಹಕ್ಕನ್ನು ನಮ್ಮ ಸಂವಿಧಾನವು ಒದಗಿಸಿಕೊಟ್ಟಿದೆ. ಆದರೆ ಮಲ ಹೊರುವ ಪದ್ಧತಿ (ಮ್ಯಾನ್ಯುಯಲ್ ಸ್ಕ್ಯಾವೆಂಜರ್)ಯಂತಹ ಅನಿಷ್ಟ ವ್ಯವಸ್ಥೆಯಿಂದಾಗಿ ಹಲವರು ಇಂದಿಗೂ ಸಹಾ ಈ ಹಕ್ಕಿನಿಂದ ವಂಚಿತರಾಗಿದ್ದಾರೆ. ಗತಕಾಲದಿಂದ ನಡೆಯುತ್ತಿರುವ ಈ ಅನ್ಯಾಯವನ್ನು ಮತ್ತು ಅಗೌರವದ ಬದುಕನ್ನು ಸರಿಪಡಿಸುವ ಸಲುವಾಗಿ ‘ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ 2013’ನ್ನು ಜಾರಿಗೆ ತರಲಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ. ಶಿವಣ್ಣ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಇಂದು ಆಯೋಜಿಸಲಾಗಿದ್ದ, ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ಗಳ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ 2013ರ ಕಾಯ್ದೆ ಹಾಗೂ ನಿಯಮಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಕಾಯ್ದೆಯ ಕುರಿತು ಮನದಟ್ಟು ಮಾಡುತ್ತಾ, ಈ ಮೇಲಿನಂತೆ ಅವರು ತಿಳಿಸಿದರು. ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೆಪ್ಟಿಕ್ ಟ್ಯಾಂಕ್/ಯುಜಿಡಿಗಳನ್ನು ಸಕ್ಕಿಂಗ್…
ಮುಂದೆ ಓದಿ...