ತುಮಕೂರು: ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಮಾಯಸಂದ್ರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ ಗ್ರಾಮ ವಾಸ್ತವ್ಯದ ಸವಿ ನೆನಪಿಗಾಗಿ ಮಾಯಸಂದ್ರ ಗ್ರಾಮದ ಅಭಿವೃದ್ಧಿ ಕೆಲಸಕ್ಕೆ 1 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವುದಾಗಿ ಕಂದಾಯ ಸಚಿವರಾದ ಆರ್. ಆಶೋಕ್ ಅವರು ಇಂದಿಲ್ಲಿ ಘೋಷಿಸಿದರು. ತುರುವೇಕೆರೆ ತಾಲ್ಲೂಕು ಮಾಯಸಂದ್ರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ನಡೆಯಲಿರುವ ಗ್ರಾಮ ಸಭೆಯಲ್ಲಿ ಒಂದು ಕೋಟಿ ರೂ.ಗಳನ್ನು ಯಾವ ಕಾಮಗಾರಿಗೆ ಬಳಸಿಕೊಳ್ಳಬೇಕು ಎಂಬುದನ್ನು ತೀರ್ಮಾನಿಸಲಾಗುವುದು ಎಂದರು. ರಾಜ್ಯದ ಜನತೆ ಪಿಂಚಣಿ, ವಿಧವಾ ವೇತನ, ವೃದ್ಧಾಪ್ಯ ವೇತನ ಮುಂತಾದ ಯೋಜನೆಗಳಿಗೆ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರ ಕಚೇರಿಗೆ ಅಲೆಡಾಡಬೇಕಿತ್ತು. ಗ್ರಾಮಸ್ಥರ ಈ ಅಲೆದಾಟವನ್ನು ತಪ್ಪಿಸಲೆಂದೇ ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳನ್ನು ಗ್ರಾಮದ ಮನೆ ಬಾಗಿಲಿಗೆ ಕರೆತರುವ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಯೋಜನೆಯನ್ನು ಜಾರಿಗೆ…
ಮುಂದೆ ಓದಿ...