ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಗುದ್ದಲಿಪೂಜೆ


ತುಮಕೂರು: ನಗರದ ಅಮಾನಿಕೆರೆ ಸರ್ವೆನಂಬರ್‍ನಲ್ಲಿ ಬರುವ ಗಾರ್ಡನ್ ರಸ್ತೆಯಲ್ಲಿ ಸುಮಾರು 2 ಕೋಟಿ ವೆಚ್ಚದಲ್ಲಿ ಟೂಡಾವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ಬ್ಯಾಡ್ಮಿಂಟನ್ ಮತ್ತು ಲಾನ್ ಟೆನ್ನಿಸ್ ಕೋರ್ಟುಗಳುಳ್ಳ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ಗುದ್ದಲಿಪೂಜೆ ನರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಟೂಡಾ ಅಧ್ಯಕ್ಷರಾದ ಬಿ.ಎಸ್.ನಾಗಣ್ಣ ಅವರ ಮುತ್ತುವರ್ಜಿಯಿಂದಾಗಿ, ಸುಮಾರು 25-30 ಸಾವಿರ ಚದುರ ಅಡಿಗಳಲ್ಲಿ ಈ ಕ್ರೀಡಾಂಗಣಕ್ಕೆ ಚಾಲನೆ ನೀಡಲಾಗಿದೆ. ಇದು ನಗರದ ಕ್ರೀಡಾಪಟುಗಳ ಬಹುದಿನದ ಬೇಡಿಕೆಯಾಗಿತ್ತು. 90 ಲಕ್ಷದಿಂದ 1 ಕೋಟಿ ರೂಗಳಲ್ಲಿ ಕಟ್ಟಡ ಮತ್ತು ಉಳಿದ ಹಣದಲ್ಲಿ ಕೋರ್ಟುಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ಇದೊಂದು ಅಂತರರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣವಾಗಿದೆ ಎಂದರು. ನಗರದ ಕೆಲವು ಕಡೆಗಳಲ್ಲಿ ಟೆನ್ನಿಸ್ ಮತ್ತು ಬ್ಯಾಡ್ಮಿಂಟನ್ ಕೋರ್ಟುಗಳಿದ್ದರೂ ಸಾರ್ವಜನಿಕರಿಗೆ ಪ್ರವೇಶ ಇರಲಿಲ್ಲ. ಸದಸ್ಯರಾದವರಿಗೆ ಮಾತ್ರ ಆಟವಾಡಲು ಅವಕಾಶವಿದೆ.ಹಾಗಾಗಿ ಸಾರ್ವಜನಿಕರಿಗಾಗಿ ಇದನ್ನು ನಿರ್ಮಿಸಲಾಗುತ್ತಿದೆ. ಸಣ್ಣ ಪ್ರಮಾಣದ ಶುಲ್ಕ ವಿಧಿಸಿ,…


ಮುಂದೆ ಓದಿ...

ನನಗೆ ಕೊರಟಗೆರೆಯಲ್ಲಿ ಟಿಕೆಟ್ ವಂಚಿಸುವ ಷಡ್ಯಂತ್ರ: ಕೆ.ಎಂ.ಮುನಿಯಪ್ಪ ಆರೋಪ


ತುಮಕೂರು: ಕಳೆದ 12 ವರ್ಷಗಳಿಂದ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ, ಮೂರು ವರ್ಷಗಳಿಂದ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರೊಂದಿಗೆ ಬೇರೆತು, ಅವರ ಕಷ್ಟ ಸುಖಃಗಳಿಗೆ ಸ್ಪಂದಿಸುತ್ತಿರುವ ನನಗೆ ಮುಂಬರುವ 2023ರ ವಿಧಾನಸಭಾ ಟಿಕೇಟ್ ನೀಡುವಂತೆ ಬಿಜೆಪಿ ಮುಖಂಡ ಕೆ.ಎಂ.ಮುನಿಯಪ್ಪ ಪಕ್ಷವನ್ನು ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಲತಃ ಕೋಲಾರ ಜಿಲ್ಲೆ ಆನೆಕಲ್ ತಾಲೂಕಿನವನಾದ ನಾನು,ಬೋವಿ ಸಮುದಾಯಕ್ಕೆ ಸೇರಿದ್ದೇನೆ. ಕೊರಟಗೆರೆ ಕ್ಷೇತ್ರದ ಪುರುವರ ಗ್ರಾಮದ ಬಳಿ 50 ಎಕರೆಗೂ ಹೆಚ್ಚು ಕೃಷಿ ಜಮೀನು ಹೊಂದಿದ್ದು, ಕೃಷಿಯ ಜೊತೆಗೆ ಗುತ್ತಿಗೆದಾರನಾಗಿ, ರಿಯಲ್ ಎಸ್ಟೇಟ್ ಉದ್ಯಮಿಯಾಗಿ ಕಾರ್ಯನಿರ್ವಹಿಸುತ್ತಿರುತ್ತೇನೆ. ಕೃಷಿಕಾರ್ಯ ಗಳಿಗೆ ಕೊರಟಗೆರೆಗೆ ಬಂದು ಹೋಗುವ ಸಂದರ್ಭದಲ್ಲಿ ರಾಜಕೀಯ ಆಸಕ್ತಿಯಿಂದ ಮೀಸಲು ಕ್ಷೇತ್ರವಾಗಿರುವ ಕೊರಟಗೆರೆ ಯಿಂದ ಸ್ಪರ್ಧಿಸಲು ಅವಕಾಶ ಸಿಗಬಹುದೆ ಎಂಬ ಇಚ್ಚೆಯನ್ನು ಬಿಜೆಪಿ ಜಿಲ್ಲಾ ಮತ್ತು ತಾಲೂಕು ಮುಖಂಡರ ಬಳಿ ವ್ಯಕ್ತಪಡಿಸಿದಾಗ, ಕೊರಟಗೆರೆ ಮಂಡಲ ಅಧ್ಯಕ್ಷರಾದ ಪವನ್ ಕುಮಾರ, ಜಿಲ್ಲಾ…


ಮುಂದೆ ಓದಿ...

ಸಸಿ ನೆಟ್ಟು ಪೋಷಿಸಿ ಮರವಾಗಿ ನೆರಳಾಗುತ್ತದೆ: ಸಚ್ಚಿದಾನಂದ ಸರಸ್ವತಿ ಕರೆ


ತುಮಕೂರು: ಗಿಡಗಳನ್ನು ನೆಟ್ಟು ಒಂದು ಹಂತದವರೆಗೆ ಪೋಷಿಸಿದರೆ ಸಾಕು. ಅವುಗಳು ಮರವಾಗಿ ಮುಂದೆ ನಮಗೆ ನೆರಳಾಗಿ ನಮ್ಮನ್ನು ನೋಡಿಕೊಳ್ಳುತ್ತವೆ ಎಂದು ವಾಸವಿ ಪೀಠದ ಶ್ರೀ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಕರೆ ನೀಡಿದರು. ನಗರದ ಕೋತಿತೋಪಿನ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಸೋಮವಾರ ಕರ್ನಾಟಕ ಆರ್ಯ ವೈಶ್ಯ ಮಹಾಸಭಾ, ಶ್ರೀ ವಾಸವಿ ಸಂಘ ಮತ್ತು ಪ್ರೆಸ್‍ಕ್ಲಬ್ ತುಮಕೂರು ಸಹಯೋಗದಲ್ಲಿ ನಡೆದ ಪರಿಸರ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ನೋಟ್‍ಬುಕ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬರು ಗಿಡಗಳನ್ನು ನೆಟ್ಟು ಉಳಿಸುವ ಪ್ರಯತ್ನ ಮಾಡಬೇಕು. ಶಾಲೆಗೆ ಬಂದಿರುವುದಕ್ಕೆ ಸಂತೋಷವಾಗುತ್ತಿದೆ.ವಿದ್ಯಾರ್ಥಿಗಳು ಚೆನ್ನಾಗಿ ಓದಿಕೊಂಡು ವಿದ್ಯಾವಂತರಾಗಿ ಎಂದು ಕರೆ ನೀಡಿದರು. ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಮಾತನಾಡಿ, ಸಸಿಗಳನ್ನು ನೆಟ್ಟು ಪೋಷಿಸುವುದು, ಗಿಡ-ಮರಗಳನ್ನು ಉಳಿಸುವುದು ಪ್ರತಿಯೊಬ್ಬ ನಾಗರಿಕರ ಜವಬ್ದಾರಿಯಾಗಿದ್ದು, ಎಲ್ಲರೂ ಗಿಡ-ಮರಗಳ ಸಂರಕ್ಷಣೆ ಜವಬ್ದಾರಿ ನಿಭಾಯಿಸಿದರೆ ಖಂಡಿತಾ ಹಸಿರು ತುಮಕೂರು ಸಾಧ್ಯ, ಸಸಿಗಳನ್ನು ನೆಡುವುದರ…


ಮುಂದೆ ಓದಿ...

ಜೆಜೆಎಂ ಕಾಮಗಾರಿ ಪೂರ್ಣಗೊಳಿಸಲು ಸಿಇಓ ಸೂಚನೆ


ತುಮಕೂರು: ಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಗೆ ಪೂರಕವಾಗಿ ಕೈಗೊಂಡಿರುವ ಉಡಿeಥಿ ತಿಚಿಣeಡಿ ಒಚಿಟಿಚಿgemeಟಿಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅವರು ಸೂಚನೆ ನೀಡಿದರು. ಜಿಲ್ಲಾ ಪಂಚಾಯತಿಯಲ್ಲಿ ಸೋಮವಾರ ಜರುಗಿದ ತುಮಕೂರು, ಗುಬ್ಬಿ, ಕೊರಟಗೆರೆ ಮತ್ತು ಕುಣಿಗಲ್ ತಾಲ್ಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಂಃಂಖಏ ಕಾರ್ಡ್ ವಿತರಣೆಗೆ ಕ್ರಮವಹಿಸಲು ಸೂಚಿಸಿದರು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ವಾರಕ್ಕೆ 500 ಕಾರ್ಡ್ ವಿತರಿಸಬೇಕು ಎಂದರಲ್ಲದೆ, ಒಉಓಖಇಉಂ ಸಾಮಾಜಿಕ ಪರಿಶೋಧನೆಯಲ್ಲಿ ವಸೂಲಾತಿಗೆ ಸೂಚಿಸಿರುವ ಕಂಡಿಕೆಗಳನ್ನು ತೀರುವಳಿ ಮಾಡಿಸಬೇಕು. ಒಉಓಖಇಉಂ ನಿಗಧಿತ ವೇಳೆಗೆ ಕೂಲಿ ಮೊತ್ತ ಪಾವತಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ 100 ಕೈತೋಟ ಕಾಮಗಾರಿಗಳನ್ನು ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಅನುμÁ್ಠನ ಮಾಡಬೇಕು ಎಂದು ತಿಳಿಸಿದರು. ಈಗಾಗಲೇ ಆಯ್ಕೆಯಾಗಿರುವ 2010-11 ರಿಂದ 2021-22 ರವರೆಗೆ ಮನೆಗಳನ್ನು…


ಮುಂದೆ ಓದಿ...

ಎಣ್ಣೆಕಾಳು ಬೀಜಗಳ ಬೆಲೆ ದುಪ್ಪಟ್ಟಾಗದಂತೆ ಕ್ರಮ ವಹಿಸಲು ಮನವಿ


ತುಮಕೂರು: ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಬೀಜ ಮತ್ತು ರಸಗೊಬ್ಬರವನ್ನು ಕೊರತೆಯಾಗದಂತೆ ವಿತರಿಸಬೇಕು, ಸೂರ್ಯಕಾಂತಿ ಸೇರಿದಂತೆ ಕೆಲ ಎಣ್ಣೆಕಾಳು ಬೀಜಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದು, ಅಂತಹವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸಿ.ಡಿ.ಜಯಶ್ರೀ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಿ.ಡಿ.ಜಯಶ್ರೀ ಅವರು,ದೇಶ ಕೃಷಿ ಪ್ರಧಾನವಾಗಿದ್ದು, ಇಲ್ಲಿನ ಶೇ 80ರಷ್ಟು ಜನರು ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ.ಕರ್ನಾಟಕದಲ್ಲಿ ಮುಂಗಾರು ಮಳೆ ಉತ್ತಮವಾಗಿ ಆಗುತ್ತಿದ್ದು, ರೈತರು ಬಿತ್ತನೆ ಕಾರ್ಯಕ್ಕೆ ಸಿದ್ದತೆಗಳನ್ನು ನಡೆಸುತ್ತಿದ್ದಾರೆ. ರಸಗೊಬ್ಬರ ಮತ್ತು ಬಿತ್ತನೆ ಬೀಜದ ಸಂಗ್ರಹಣೆಯಲ್ಲಿ ತೊಡಗಿದ್ದಾರೆ.ಇದರಿಂದಾಗಿ ಜಿಲ್ಲಾ ಕೇಂದ್ರಗಳಲ್ಲಿ ಸಹಜವಾಗಿಯೇ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಬೇಡಿಕೆ ಹೆಚ್ಚಿದೆ. ಆದರೆ ಕೆಲ ಕಾಳಸಂತೆಕೋರರು ಇದನ್ನೇ ಲಾಭ ಮಾಡಿಕೊಂಡು ರೈತರಿಗೆ ಅಗತ್ಯವಿರುವ…


ಮುಂದೆ ಓದಿ...

ಸಿದ್ಧರಬೆಟ್ಟದ ತಪ್ಪಲಲ್ಲಿ ಸಾಮೂಹಿಕ ಯೋಗಾಭ್ಯಾಸ


ತುಮಕೂರು: ಹಸಿರಿನ ವನಸಿರಿಯ ನಡುವೆ ಹಕ್ಕಿಗಳ ಕಲರವದೊಂದಿಗೆ ಸೂರ್ಯನ ಮೊದಲ ರಶ್ಮಿ ಭೂರಮೆಗೆ ಮುತ್ತಿಕ್ಕುವ ಸಮಯದಲ್ಲಿ ಸುಕ್ಷೇತ್ರ ಸಿದ್ಧರಬೆಟ್ಟದ ತಪ್ಪಲಲ್ಲಿ ಓಂಕಾರದಿಂದ ಪ್ರಾರಂಭವಾದ ಸಾಮೂಹಿಕ ಯೋಗಾಭ್ಯಾಸ ಎಲ್ಲರಲ್ಲೂ ನವಚೈತನ್ಯ ತಂದುಕೊಟ್ಟಿತು. ಜಿಲ್ಲೆಯ ಕೊರಟಗೆರೆ ತಾಲೂಕು ಸುಕ್ಷೇತ್ರ ಸಿದ್ಧರಬೆಟ್ಟದ ಶ್ರೀ ರಂಭಾಪುರಿ ಖಾಸಾ ಶಾಖಾ ಮಠದ ಆವರಣದಲ್ಲಿ ಮಂಗಳವಾರ ಬೆಳಗಿನ ಜಾವ ಶ್ರೀ ಕ್ಷೇತ್ರದ ಶ್ರೀ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯಸ್ವಾಮಿಗಳು, ಮಠದ ವಿದ್ಯಾರ್ಥಿಗಳು, ವಿವಿಧ ಅಧಿಕಾರಿಗಳು, ಸಂಘ ಸಂಸ್ಥೆಗಳ ಸದಸ್ಯರು ವಿವಿಧ ಯೋಗಾಸನ, ಪ್ರಾಣಾಯಾಮ ಹಾಗು ಧ್ಯಾನಾಭ್ಯಾಸ ಮಾಡುವ ಮೂಲಕ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಸಿದ್ಧರಬೆಟ್ಟದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದ ವೈದ್ಯಾಧಿಕಾರಿ ಡಾ|| ಹೆಚ್.ಬಿ. ಭವ್ಯ ಅವರು ವಿವಿಧ ಆಸನಗಳ ಭಂಗಿಗಳು ಹಾಗೂ ಆಸನಗಳನ್ನು ಅಭ್ಯಾಸ ಮಾಡುವುದರಿಂದಾಗುವ ಪ್ರಯೋಜನಗಳ ಬಗೆ ವಿವರಣೆ ನೀಡಿದರು. ಕಾರ್ಯಕ್ರಮದಲ್ಲಿ ವಜ್ರಾಸನ, ತಾಡಾಸನ, ವೃಕ್ಷಾಸನ, ಪಾದಹಸ್ತಾಸನ,…


ಮುಂದೆ ಓದಿ...