ತುಮಕೂರು: ನಮ್ಮ ಯುವಜನರು ಶಿಕ್ಷಣ ಪೂರೈಸಿದ ನಂತರ ಕೆಲಸ ಹುಡುಕುವ ಬದಲು ಅವರೇ ಉದ್ಯಮ ಸ್ಥಾಪಿಸಿ ಇತರರಿಗೆ ಉದ್ಯೋಗ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಮಾಹಿತಿ ಒದಗಿಸಲು ಕೈಗಾರಿಕಾ ಇಲಾಖೆಯು ತುಮಕೂರಿನಲ್ಲಿ ಜೂನ್ 23ರಂದು ಒಂದು ದಿನದ ಕಾರ್ಯಾಗಾರ ಆಯೋಜಿಸಲಿದೆ ಎಂದು ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ತಿಳಿಸಿದರು. ಈ ಕುರಿತು ಇಂದು ತುಮಕೂರಿನ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಗೂ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದರು. ತುಮಕೂರಿನ ಗಂಗಾಧರಯ್ಯ ಮೆಮೋರಿಯಲ್ ಹಾಲ್ನಲ್ಲಿ ‘ಉದ್ಯಮಿಯಾಗು ಉದ್ಯೋಗ ನೀಡು’ ಹಾಗೂ ‘ಕೈಗಾರಿಕಾ ಅದಾಲತ್’ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ. ಮುರುಗೇಶ ಆರ್ ನಿರಾಣಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಳೆದ ವರ್ಷ ಅಕ್ಟೋಬರ್ 11ರಂದು ಬೆಂಗಳೂರಿನಲ್ಲಿ…
ಮುಂದೆ ಓದಿ...