ಕಾಂಗ್ರೆಸ್‍ನಲ್ಲಿ ಅಸಮಾಧಾನ ಸ್ಫೋಟ; ತಿರುಗಿಬಿದ್ದ ಎಂಡಿಎಲ್!


ತುಮಕೂರು: ಕಾಂಗ್ರೆಸ್‍ನಲ್ಲಿ ಅಸಮಾಧಾನ ಸೋಟಗೊಂಡಿದೆ. ಮಾಜಿ ಶಾಸಕ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ.ಡಿ. ಲಕ್ಷ್ಮೀನಾರಾಯಣ ನಾಯಕರ ವಿರುದ್ಧ ಬಹಿರಂಗವಾಗಿಯೇ ಅಸಮಧಾನ ಹೊರ ಹಾಕಿದ್ದಾರೆ. ವಿಧಾನಪರಿಷತ್ ಸದಸ್ಯ ಸ್ಥಾನ ಸಿಗದ ಕಾರಣಕ್ಕೆ ಮಾಜಿ ಸಚಿವ ಎಂ.ಆರ್.ಸೀತಾರಾಂ ಇತ್ತೀಚೆಗಷ್ಟೆ ಬೆಂಬಲಿಗರ ಸಭೆ ನಡೆಸಿ ನಾಯಕರ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಅದರ ಬೆನ್ನಲ್ಲೆ ಎಂ.ಡಿ.ಲಕ್ಷ್ಮೀನಾರಾಯಣ ಕೂಡ ವಿಧಾನ ಪರಿಷತ್ ಸ್ಥಾನ ಸಿಗದ ಕಾರಣಕ್ಕೆ ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದಿದ್ದು ಪಕ್ಷ ತೊರೆಯುವ ಸಿದ್ಧತೆಯಲ್ಲಿದ್ದಾರೆ. ನನ್ನಹುಟ್ಟುಹಬಕ್ಕೆ ಬಂದು ನೀವು ಮಾತು ಕೊಟ್ಟಿದ್ದೇನು? ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದ್ದಾರೆ. ನಾನು ತುರುವೇಕೆರೆ ಕ್ಷೇತ್ರದ ಟಿಕೆಟ್ ಬಯಸಿದ್ದೆ, ನೀವೇ ನನ್ನನ್ನ ಸಮಾಧಾನ ಪಡಿಸಿದ್ದಿರಿ. ಕಾಂತರಾಜುಗೆ ತುರುವೇಕೆರೆ ಟಿಕೆಟ್ ನೀಡುವ ಭರವಸೆ ನೀಡಿದ್ದೇನೆ. ನೀವು ಪಕ್ಷದ ಸಂಘಟನೆಯಲ್ಲಿ ಚೆನ್ನಾಗಿ ಕೆಲಸ ಮಾಡುತ್ತಿದ್ದೀರಾ. ನಿಮ್ಮನ್ನು ವಿಧಾನ ಪರಿಷತ್ ಸದಸ್ಯನ್ನಾಗಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದೀರಿ.…


ಮುಂದೆ ಓದಿ...

ಸ್ಮಾರ್ಟ್‍ಸಿಟಿ ಲಿಮಿಟೆಡ್‍ನ 132 ಕಾಮಗಾರಿಗಳು ಪೂರ್ಣ!


ತುಮಕೂರು: ರಾಷ್ಟ್ರ ಮಟ್ಟದಲ್ಲಿ ಆಯ್ಕೆಯಾಗಿರುವ 100 ಸ್ಮಾರ್ಟ್‍ಸಿಟಿಗಳಲ್ಲಿ ತುಮಕೂರು ಸ್ಮಾರ್ಟ್‍ಸಿಟಿ ಲಿಮಿಟೆಡ್ ದೇಶದಲ್ಲಿಯೇ 7ನೇ ಶ್ರೇಣಿಯಲ್ಲಿದ್ದು, ಕರ್ನಾಟಕದ 7 ಸ್ಮಾರ್ಟ್‍ಸಿಟಿಗಳ ಪೈಕಿ ಒಂದನೇ ಸ್ಥಾನದಲ್ಲಿದೆ. ಒಟ್ಟು 178 ಕಾಮಗಾರಿಗಳ ಪೈಕಿ 132 ಕಾಮಗಾರಿಗಳನ್ನು ಸುಮಾರು 462 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದ್ದು, ಪ್ರಗತಿಯ ಹಂತದಲ್ಲಿರುವ 50 ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಗೆ ಸಂಬಂಧಿಸಿದಂತೆ ಕರೆಯಲಾದ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಳಗುಂಬ ಮತ್ತು ಚಾಮುಂಡಿ ರಸ್ತೆಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿಗೆ ಕಟ್ಟಡ ತೆರವುಗೊಳಿಸಬೇಕಾಗಿರುವುದರಿಂದ, ತುಮಕೂರು ಮಹನಾಗರಪಾಲಿಕೆ ವತಿಯಿಂದ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಅಡಚಣೆಗಳ ನಿವಾರಣೆ ಹಾಗೂ ಭೂ-ಸ್ವಾಧೀನದ ಬಗ್ಗೆ ಪಾಲಿಕೆ ವತಿಯಿಂದ ನಿರ್ಣಯ ತೆಗೆದುಕೊಂಡು ಸೂಕ್ತ ಕ್ರಮ ಜರುಗಿಸಲು ತುಮಕೂರು ಸ್ಮಾರ್ಟ್‍ಸಿಟಿ ಲಿಮಿಟೆಡ್ ಅವರಿಗೆ ತಿಳಿಸಲು ಸಭೆಯಲ್ಲಿ ಉಪಸ್ಥಿತರಿದ್ದ ಮಹಾನಗರಪಾಲಿಕೆ ಆಯುಕ್ತರಾದ…


ಮುಂದೆ ಓದಿ...

ಟೈಲರ್ ಹತ್ಯೆ: ಕೊಲೆಗಾರರ ಗಲ್ಲು ಶಿಕ್ಷೆಗೆ ಒತ್ತಾಯ


ತುಮಕೂರು: ರಾಜಸ್ಥಾನದ ಉದಯಪುರದಲ್ಲಿ ಹಾಡಹಗಲೇ ಹಿಂದೂ ಟೈಲರ್ ಕನ್ನಯ್ಯಲಾಲ್ ಅವರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ ಹಾಗೂ ಇಬ್ಬರು ಕೊಲೆಗಾರರನ್ನು ಶೀಘ್ರ ಗಲ್ಲು ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಟೌನ್‍ಹಾಲ್ ವೃತ್ತದಲ್ಲಿ ಜಮಾಯಿಸಿದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಕನ್ನಯ್ಯಲಾಲ್ ಶಿರಚ್ಛೇದ ಮಾಡಿರುವ ಮಹಮ್ಮದ್ ರಿಯಾಜ್ ಹಾಗೂ ಮಹಮಗ್ ಗೌಸ್ ಎಂಬುವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರ ಹಾಕಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿದ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗಳದ ಮಂಜು ಭಾರ್ಗವ್, ರಾಜಸ್ಥಾನದ ಉದಯಪುರದ ಕನ್ನಯ್ಯಲಾಲ್ ಟೈಲರ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದಿರುವ ಈ ಇಬ್ಬರು ಹಂತಕರು ಬಟ್ಟೆ ಅಳತೆ ಕೊಡುವ ನಾಟಕವಾಡಿ ತಮ್ಮ ಸೊಂಟದಲ್ಲಿ ಇಟ್ಟುಕೊಂಡಿದ್ದ ಕತ್ತಿಯನ್ನು ತೆಗೆದು ಅಮಾನುಷವಾಗಿ ಕನ್ನಯ್ಯಲಾಲ್ ಕತ್ತಿಗೆ ಇರಿದು…


ಮುಂದೆ ಓದಿ...