ಉಪವಿಭಾಗಾಧಿಕಾರಿಗಳ ವ್ಯಾಪ್ತಿಗೆ ಜನನ-ಮರಣ ಪ್ರಮಾಣಪತ್ರ ವಕೀಲರ ಆಕ್ರೋಶ


ತುಮಕೂರು: ದಿನಾಂಕ 18-7-2022ರಂದು ಕರ್ನಾಟಕ ಸರ್ಕಾರವು ಜನನ ಮತ್ತು ಮರಣ ಸಮರ್ಥನಾ ಪತ್ರಗಳನ್ನು ಪಡೆಯಲು ಕಾಯ್ದೆಗೆ ತಿದ್ದುಪಡಿ ತಂದು ಅಧಿಸೂಚನೆ ಹೊರಡಿಸಿದ್ದು ಸದರಿ ಅಧಿಸೂಚನೆಯಂತೆ ಸಿವಿಲ್ ನ್ಯಾಯಾಲಯದ ಕಾರ್ಯವ್ಯಾಪ್ತಿಯಿಂದ ಕಂದಾಯ ಇಲಾಖೆಯ ಉಪವಿಭಾಗಾಧಿಕಾರಿಗಳಿಗೆ ಅಧಿಕಾರವನ್ನು ನೀಡಿರುವುದರಿಂದ ಸದರಿ ಕಾಯ್ದೆಯು ಸಾರ್ವಜನಿಕರಿಗೆ ಮತ್ತು ವಕೀಲ ಸಮುದಾಯಕ್ಕೆ ಮಾರಕ ಕಾಯ್ದೆಯಾಗಿರುತ್ತದೆ. ಈಗಾಗಲೇ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಕಂದಾಯ ಪ್ರಕರಣಗಳು ಸಾಕಷ್ಟು ಪ್ರಮಾಣದಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇದ್ದು,ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಬಹಳ ಕಾಲ ವಿಳಂಬವಾಗಿರುತ್ತದೆ. ಸದರಿ ಕಾಯ್ದೆಯು ಜಾರಿಗೊಂಡರೆ ಜನನ ಮತ್ತು ಮರಣ ಸಮರ್ಥನಾ ಪ್ರಮಾಣಪತ್ರ ಪಡೆಯಲು ಸಾಕಷ್ಟು ವಿಳಂಬವಾಗುವುದರ ಜೊತೆಗೆ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ. ಜೊತೆಗೆ ಮಧ್ಯವರ್ತಿಗಳ ಹಾವಳಿಗೆ ಸಾರ್ವಜನಿಕರು ತುತ್ತಾಗುವ ಸಾಧ್ಯತೆ ಹೆಚ್ಚುವುದರ ಜೊತೆಗೆ ಈ ಕಾಯ್ದೆಯು ದುರುಪಯೋಗವಾಗುತ್ತದೆ. ಆದ್ದರಿಂದ ಈ ಕಾಯ್ದೆಗೆ ಸರ್ಕಾರವು ಹಸ್ತಕ್ಷೇಪ ಮಾಡದೇ ಜನನ ಮತ್ತು ಮರಣ ಸಮರ್ಥನಾ ಪ್ರಮಾಣಪತ್ರ ಪಡೆಯಲು ಕಾಯ್ದೆಯ ಕಾರ್ಯವ್ಯಾಪ್ತಿಯನ್ನು ಹಿಂದಿನಂತೆಯೇ ಸಿವಿಲ್ ನ್ಯಾಯಾಲಯದ…


ಮುಂದೆ ಓದಿ...

ಗೃಹ ಸಚಿವರ ರಾಜೀನಾಮೆಗೆ ಒತ್ತಾಯ!


ತುಮಕೂರು: ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಸಮರ್ಥರಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಅಧ್ಯಕ್ಷ ತಾಜುದ್ದೀನ್ ಶರೀಫ್ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಅರಗ ಜ್ಞಾನೇಂದ್ರ ಅವರು ಗೃಹ ಮಂತ್ರಿಯಾದ ನಂತರ ಹಿಂದು, ಮುಸ್ಲಿಂ ಎನ್ನದೆ ಸಾಲು ಸಾಲು ಹೆಣಗಳು ಉರುಳುತ್ತಿವೆ. ಅದರಲ್ಲಿಯೂ ಕುಟುಂಬಕ್ಕೆ ಆಧಾರಸ್ತಂಬವಾಗಿದ್ದ ಹದಿ ಹರೆಯದ ಯುವಕರು ಕೊಲೆಗೀಡಾಡುತ್ತಿರುವುದು ತುಂಬಾ ಆತಂಕಕಾರಿ ವಿಚಾರವಾಗಿದೆ. ಈ ಹಿಂದಿನ ಘಟನೆಗಳಲ್ಲಿ ಸರಿಯಾದ ಕ್ರಮವನ್ನು ತೆಗೆದುಕೊಂಡಿದ್ದರೆ, ಇಂದು ಬೆಳ್ಳಾರದಲ್ಲಿ ಎರಡು ಹೆಣಗಳು ಬೀಳುತ್ತಿರಲಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಜವಾಬ್ದಾರಿ ನಿಭಾಯಿಸಲು ಅಸಮರ್ಥರಾಗಿದ್ದಾರೆ ಎಂಬುದನ್ನು ಈ ಎರಡು ಘಟನೆಗಳು ಮತ್ತೆ ಸಾಬೀತು ಪಡಿಸಿವೆ.ಮÀುತ್ತಷ್ಟು ಯುವಕರ ಹತ್ಯೆ ಆಗುವುದಕ್ಕೂ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬುದು ವೆಲ್ಪೇರ್ ಪಾರ್ಟಿ ಅಪ್…


ಮುಂದೆ ಓದಿ...

ಸಂಭ್ರಮದಿಂದ ಸ್ವಾತಂತ್ರ್ಯ ದಿನ ಆಚರಿಸೋಣ: ಜಿಲ್ಲಾಧಿಕಾರಿ


ತುಮಕೂರು: 75ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಭಾರತದ ಪ್ರಜೆಗಳಾದ ನಾವೆಲ್ಲರೂ ಒಗ್ಗೂಡಿ ರಾಷ್ಟ್ರಪ್ರೇಮ ಮತ್ತು ರಾಷ್ಟ್ರಭಕ್ತಿಯನ್ನು ಬಿಂಬಿಸುವ ಮೂಲಕ ಅತ್ಯಂತ ವಿಜೃಂಭಣೆಯಿಂದ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸೋಣ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಕರೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಂದು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದು, ಎಲ್ಲರೂ ಸೇರಿ ಒಳ್ಳೆಯ ರೀತಿಯಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಚರಿಸೋಣ ಎಂದು ಅಧಿಕಾರಿಗಳಿಗೆ ತಿಳಿಸಿದರು. ಅಂದು ನಗರದ ಪ್ರಮುಖ ವೃತ್ತಗಳಲ್ಲಿ ರಾಷ್ಟ್ರಧ್ವಜ, ದೀಪಾಲಂಕಾರ, ಬಾಳೆಕಂದು, ತಳಿರು ತೋರಣ, ದೇಶಭಕ್ತಿ ಗೀತೆಗಳನ್ನು ಎಲ್ಲರಿಗೂ ಕೇಳಿಸುವ ಮೂಲಕ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸೋಣ ಎಂದು ತಿಳಿಸಿದರು. ಸಂಜೆ ಸಾಂಸ್ಕøತಿಕ ಕಾರ್ಯಕ್ರದಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು…


ಮುಂದೆ ಓದಿ...

ಪ್ರವೀಣ್ ಹಂತಕರನ್ನು ಎನ್‍ಕೌಂಟರ್ ಮಾಡಿ: ಋಷಿಕುಮಾರ ಸ್ವಾಮೀಜಿ


ತುಮಕೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ವತಿಯಿಂದ ಋಷಿಕುಮಾರ ಸ್ವಾಮೀಜಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಟೌನ್‍ಹಾಲ್ ವೃತ್ತದಲ್ಲಿ ಜಮಾವೇಶಗೊಂಡ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರವೀಣ್ ಹತ್ಯೆಗೈದಿರುವ ಆರೋಪಿಗಳ ಭಾವಚಿತ್ರಗಳನ್ನು ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಹತ್ಯೆ ಪ್ರಕರಣಗಳು ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಬೆಂಗಳೂರಿನ ಋಷಿಕುಮಾರ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಹಿಂದೂಗಳ ಹತ್ಯೆ ನಿರಂತರವಾಗಿ ನಡೆಯುತ್ತಿದೆ. ಅದರಲ್ಲಿ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಹಿಂದೂಗಳ ಹತ್ಯೆ ನಡೆಯುತ್ತಿದೆ. ಪ್ರವೀಣ್ ಅವರದ್ದು 35ನೇ ಹತ್ಯೆಯಾಗಿದೆ ಎಂದರು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಲ್ಲೂ ಹಿಂದೂ ಕಾರ್ಯಕರ್ತರಿದ್ದಾರೆ. ಆದರೂ ಬಿಜೆಪಿಯಲ್ಲಿರುವ ಹಿಂದೂಗಳನ್ನೇ ಮಾತ್ರ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು. ನಿಮಗೆ ಧಮ್…


ಮುಂದೆ ಓದಿ...

ಮತದಾರರು ನಮೂನೆ-6ಬಿ ರಲ್ಲಿ ಆಧಾರ್ ಸಂಖ್ಯೆಯನ್ನು ದೃಢೀಕರಿಸಿ: ಜಿಲ್ಲಾಧಿಕಾರಿ


ತುಮಕೂರು: ಹಾಲಿ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಂಡಿರುವ ಮತದಾರರು ಸ್ವಯಂ ಪ್ರೇರಿತರಾಗಿ ತಮ್ಮ ಹೆಸರು, ವಿಳಾಸ ಇತ್ಯಾದಿಗಳನ್ನು ದೃಢಿüೀಕರಿಸುವ ಸಲುವಾಗಿ ಆಧಾರ್ ಸಂಖ್ಯೆಯನ್ನು ಆನ್‍ಲೈನ್ ಮತ್ತು ಆಫ್‍ಲೈನ್ ಮೂಲಕ ನಮೂನೆ-6ಬಿ ರಲ್ಲಿ ಭರ್ತಿ ಮಾಡಿ ದೃಢೀಕರಿಸಲು ಭಾರತ ಚುನಾವಣಾ ಆಯೋಗವು ಸೂಚಿಸಿರುತ್ತದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ‘ಮತದಾರರ ವಿವರಗಳಿಗೆ ಆಧಾರ್ ನಂಬರ್ ಸಂಗ್ರಹಣೆ, ಜೋಡಣೆ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ’ ಕುರಿತು ಚರ್ಚಿಸಲು ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ದೃಢೀಕರಣ ಕಾರ್ಯವು ಆಗಸ್ಟ್ 01, 2022ರಿಂದ ಮಾರ್ಚ್ 31, 2023 ರವರೆಗೆ ನಡೆಯಲಿದ್ದು, ಜಿಲ್ಲೆಯ ಎಲ್ಲಾ ನೋಂದಾಯಿತ ಮತದಾರರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಆನ್‍ಲೈನ್/ಆಫ್‍ಲೈನ್ ಮೂಲಕ ನಮೂನೆ-6ಬಿ ರಲ್ಲಿ ತಮ್ಮ ಆಧಾರ್ ನಂಬರ್‍ಗಳನ್ನು ನಮೂದಿಸಿ, ದೃಢೀಕರಿಸಿಕೊಳ್ಳಬಹುದಾಗಿದೆ ಎಂದು…


ಮುಂದೆ ಓದಿ...

ದೇಶದಲ್ಲಿ ಹಸಿವು, ನಿರುದ್ಯೋಗದ್ದೇ ತಾಂಡವ: ಕಾಂಗ್ರೆಸ್‍ನಿಂದ ಮೌನ ಪ್ರತಿಭಟನೆ


ತುಮಕೂರು: ಬೆಲೆ ಹೆಚ್ಚಳ, ನಿರುದ್ಯೋಗ ಸಮಸ್ಯೆ, ಆರ್ಥಿಕ ಕುಸಿತದಂತಹ ವಿಷಯಗಳಿಂದ ಜನರ ಮನಸ್ಸನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಕೇಂದ್ರ ಸರಕಾರ ಇಡಿ ಮೂಲಕ ಸೋನಿಯಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಆರೋಪಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ಮತ್ತು ಕೆಪಿಸಿಸಿ ಕರೆಯ ಮೇರೆಗೆ, ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯ ಗಾಂಧಿ ಅವರಿಗೆ ವಿಚಾರಣೆಗಾಗಿ ನೋಟಿಸ್ ನೀಡಿರುವುದನ್ನು ಖಂಡಿಸಿ ಹಮ್ಮಿಕೊಂಡಿದ್ದ ಮೌನ ಪ್ರತಿಭಟನೆಯ ವೇಳೆ ಮಾತನಾಡಿದ ಅವರು, ದೇಶದಲ್ಲಿ ಬಡತನ, ನಿರುದ್ಯೋಗ, ಹಸಿವು ತಾಂಡವವಾಡುತ್ತಿದೆ.ಅಪೌಷ್ಟಿಕತೆಯಿಂದ ಹಿಂದೆಂಗಿ ತ್ತಲೂ ಹೆಚ್ಚು ಜನರು ಬಳಲುತಿದ್ದಾರೆ.ತನ್ನ ವೈಫಲ್ಯತೆಯನ್ನು ಮುಚ್ಚಿಕೊಳ್ಳಲು ಈಗಾಗಲೇ ಮುಚ್ಚಿ ಹೋಗಿರುವ ಕೇಸನ್ನು ರೀ ಓಪನ್ ಮಾಡಿ, ಅನಗತ್ಯ ತೊಂದರೆ ನೀಡುತ್ತಿದೆ ಎಂದರು. ಇಂಧನ ಬೆಲೆ ಹೆಚ್ಚಳದಿಂದ ಜನಸಾಮಾನ್ಯರು, ಅದರಲ್ಲಿಯೂ ಮದ್ಯಮ ವರ್ಗದ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿ ದ್ದಾರೆ. ಪೆಟ್ರೋಲ್ ಮತ್ತು ಡಿಸೇಲ್…


ಮುಂದೆ ಓದಿ...

ಗೊತ್ತು ಗುರಿ ಇಲ್ಲದ ಡಬ್ಬಲ್ ಸ್ಟಿಯರಿಂಗ್ ಪಕ್ಷ ಕಾಂಗ್ರೆಸ್: ಸಚಿವ ಡಾ.ಕೆ. ಸುಧಾಕರ್ ಲೇವಡಿ


ತುಮಕೂರು: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಅಭಿವೃದ್ಧಿಯ ಡಬಲ್ ಇಂಜಿನ್ ಸರ್ಕಾರ ಬೇಕಾ ಅಥವಾ ಗೊತ್ತು ಗುರಿ ಇಲ್ಲದ ಡಬ್ಬಲ್ ಸ್ಟಿಯರಿಂಗ್ ಸರ್ಕಾರ ಬೇಕಾ ಎಂಬುದನ್ನು ಜನರೇ ನಿರ್ಧರಿಸಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅಭಿಪ್ರಾಯಪಟ್ಟರು. ತುಮಕೂರು ಗ್ರಾಮಾಂತರ ಮತ್ತು ನೆಲಮಂಗಲದಲ್ಲಿ ಮಂಗಳವಾರ ಆಯೋಜಿಸಿದ್ದ ಜನೋತ್ಸವ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಮ್ಮದು ಡಬಲ್ ಇಂಜಿನ್ ಸರ್ಕಾರ. ಇದರಿಂದಾಗಿಯೇ ರೈತರಿಗೆ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಸೇರಿದಂತೆ ಎಲ್ಲ ವರ್ಗದ ಜನರಿಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳು ತಲುಪುತ್ತಿವೆ. ಆದರೆ ಕಾಂಗ್ರೆಸ್ ನಲ್ಲಿ ಪರಿಸ್ಥಿತಿಯೇ ಭಿನ್ನವಾಗಿದೆ ಎಂದರು. ಕೆಪಿಸಿಸಿ ಅಧ್ಯಕ್ಷರು ಏರಿಗೆ ಎಳೆದರೆ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ನೀರಿಗೆ ಎಳೆಯುತ್ತಿದ್ದಾರೆ. ಇಂತಹ ಪಕ್ಷದಿಂದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವೇ ಎಂದು ಪ್ರಶ್ನಿಸಿದ ಸಚಿವರು, ನಮ್ಮದು ಜನಪರ ಸರ್ಕಾರ, ಜನರಿಗಾಗಿ ಜಾರಿಗೊಳಿಸಿದ ಯೋಜನೆಗಳು ಜನರಿಗೆ ತಲುಪಿವೆ. ಹಾಗಾಗಿ ಜನರ ಮಧ್ಯೆ…


ಮುಂದೆ ಓದಿ...

ರೋಟರಿಗೆ ಪಕ್ಷಾತೀತ ಬೆಂಬಲ ದೊರೆತಿದೆ: ಆರ್.ರಾಜೇಂದ್ರ


ತುಮಕೂರು: ರೋಟರಿ ಸಂಸ್ಥೆ ಹಲವಾರು ವರ್ಷಗಳಿಂದ ಸಮಾಜ ಸೇವೆಗೆ ಹೆಸರಾದ ಸಂಸ್ಥೆ. ಹಾಗಾಗಿ ರೋಟರಿ ಕೈಗೊಳ್ಳುವ ಎಲ್ಲಾ ಕಾರ್ಯಕ್ರಮಗಳಿಗೆ ಪಕ್ಷಾತೀತವಾಗಿ ಬೆಂಬಲ ದೊರೆತಿದೆ ಎಂದು ವಿಧಾನಪರಿಷತ್ ಸದಸ್ಯ ಆರ್.ರಾಜೇಂದ್ರ ಅಭಿಪ್ರಾಯಪಟ್ಟಿದ್ದಾರೆ. ನಗರದ ಹೆಚ್.ಆರ್.ಹೊಟೇಲ್ ಸಭಾಂಗಣದಲ್ಲಿ ಕನ್ನಡ ಸೇನೆ ಕರ್ನಾಟಕದ ತುಮಕೂರು ಜಿಲ್ಲಾ ಶಾಖೆ ವತಿಯಿಂದ ರೋಟರಿ 3190ರ ಅಧ್ಯಕ್ಷರಾಗಿ ಆಯ್ಕೆಯಾದ ಕನ್ನಡಸೇನೆಯ ರಾಜ್ಯ ಉಪಾಧ್ಯಕ್ಷ ಮಲ್ಲಸಂದ್ರ ಶಿವಣ್ಣ ಹಾಗೂ ಇನ್ನರ್ ವ್ಹಿಲ್ ಕ್ಲಬ್‍ನ ಅಧ್ಯಕ್ಷೆ ಪರಿಮಳ ಮಲ್ಲಿಕ್ ಅವರ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ರಾಜ್ಯ, ಜಿಲ್ಲಾ ಮಟ್ಟದಲ್ಲಿರುವ ರೋಟರಿ ಸಂಸ್ಥೆ ತನ್ನ ಸೇವಾ ಕಾರ್ಯಕ್ರಮಗಳನ್ನು ಹೋಬಳಿ ಮತ್ತು ಗ್ರಾಮಗಳ ಮಟ್ಟಕ್ಕೂ ವಿಸ್ತರಿಸಿದರೆ ಬಡವರಿಗೆ ಹೆಚ್ಚಿನ ಅನುಕೂಲ ಕಲ್ಪಿಸಿದಂತಾಗುತ್ತದೆ ಎಂದರು. ಮಲ್ಲಸಂದ್ರ ಶಿವಣ್ಣ ಅವರು ಸಮಾಜ ಸೇವೆಯಲ್ಲಿ ಸದಾ ಮುಂದಿರುವ ವ್ಯಕ್ತಿ. ಅವರು ರೋಟರಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಅವರ ಸಾಮಾಜಿಕ ಸೇವೆಯನ್ನು ಮತ್ತಷ್ಟು ವಿಸ್ತರಿಸಿಕೊಳ್ಳಲು ಅವಕಾಶ…


ಮುಂದೆ ಓದಿ...

ಮಹಿಳೆಯರಿಗೆ ಅಗತ್ಯ ಕಾನೂನು ನೆರವನ್ನು ಒದಗಿಸಬೇಕು: ಸಿಇಓ


ತುಮಕೂರು: ವರದಕ್ಷಿಣೆ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಸೇರಿದಂತೆ ವಿವಿಧ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸಮಲೋಚನೆ ಮತ್ತು ಅಗತ್ಯ ಕಾನೂನು ನೆರವನ್ನು ಒದಗಿಸಲು ಸಾಂತ್ವನ ಕೇಂದ್ರಗಳನ್ನು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಅನುμÁ್ಠನಗೊಳಿಸಲಾಗುತ್ತಿದ್ದು, ದಿನದ 24 ಗಂಟೆಗಳ ಕಾಲ ಸಂಕಷ್ಟಕ್ಕೊಳಗಾದ ಮಹಿಳೆಯರಿಗೆ ನೆರವನ್ನು ಒದಗಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯತಿಗಳು ಮಕ್ಕಳ ಗ್ರಾಮ ಸಭೆಯನ್ನು ನಡೆಸಬೇಕು. ಗಮನಾರ್ಹ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ಬಗೆಹರಿಸಲು ಪಿಡಿಓ ಮತ್ತು ಇತರೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು. ಮಹಿಳೆಯರು ಆರ್ಥಿಕವಾಗಿ ಮುಂದುವರೆಯಲು ಬೇಕಾದ ಉದ್ಯಮ ಶೀಲತೆಯ ಬಗ್ಗೆ ಅರ್ಹರನ್ನು ಗುರುತಿಸಿ ಅವರಿಗೆ ತರಬೇತಿಯನ್ನು ನೀಡಿ, ಆರ್ಥಿಕ ಸದೃಢರನ್ನಾಗಿ ಮಾಡಬೇಕು ಎಂದು ತಿಳಿಸಿದರು.…


ಮುಂದೆ ಓದಿ...

ಭೂಹಗರಣ ತನಿಖೆಗೆ ವಹಿಸದಿದ್ದರೆ ತಾಲೂಕು ಕಚೇರಿಗೆ ಮುತ್ತಿಗೆ


ತುಮಕೂರು: ಗುಬ್ಬಿ ತಾಲೂಕು ಕಚೇರಿಯ ಕಂದಾಯ ಇಲಾಖೆಯ ಅಧಿಕಾರಿಗಳು, ಭೂಗಳ್ಳರ ಜೊತೆ ಸೇರಿ ನಡೆಸಿರುವ ಅವ್ಯವಹಾರವನ್ನು ಪತ್ತೆ ಹಚ್ಚಿ ತನಿಖೆ ನಡೆಸುವ ನಿಟ್ಟಿನಲ್ಲಿ ಸರಕಾರ ಪ್ರಕರಣವನ್ನು ಮುಂದಿನ 15 ದಿನಗಳಲ್ಲಿ ಸಿಒಡಿ ತನಿಖೆಗೆ ವಹಿಸದಿದ್ದರೆ ಆಗಸ್ಟ್ 08 ರಂದು ಗುಬ್ಬಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡಸಲಾಗುವುದು ಎಂದು ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದ್ದಾರೆ. ನಗರದ ವಿಜ್ಞಾನಕೇಂದ್ರದಲ್ಲಿ ಆಯೋಜಿಸಿದ್ದ ರೈತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಗುಬ್ಬಿ ತಾಲೂಕಿನ 137 ಜನರಿಗೆ 450 ಎಕರೆ ಭೂಮಿಯನ್ನು ಅಕ್ರಮವಾಗಿ ಖಾತೆ ಮಾಡಿಕೊಟ್ಟಿದ್ದಾರೆ. 50-53ಯಲ್ಲಿ ಅರ್ಜಿ ಸಲ್ಲಿಸದೆ ಇದ್ದರೂ ಸಹ ಹಳೆಯ ಪಹಣಿಗಳನ್ನು ತಿದ್ದಿ, ಉಳ್ಳವರಿಗೆ ಅದರಲ್ಲಿಯೂ ಕಂದಾಯ ಇಲಾಖೆಯ ನೌಕರರ ಅಪ್ಪ, ಅಮ್ಮ, ತಂಗಿ, ಅಕ್ಕ, ಭಾವ, ತಮ್ಮ, ಅಣ್ಣನ ಸೇರಿದಂತೆ ಸಂಬಂಧಿಕರ ಹೆಸರಿಗೆ ಕೋಟ್ಯಾಂತರ ರೂ ಬೆಲೆ ಬಾಳುವ ಜಮೀನು…


ಮುಂದೆ ಓದಿ...