ಉಪವಿಭಾಗಾಧಿಕಾರಿಗಳ ವ್ಯಾಪ್ತಿಗೆ ಜನನ-ಮರಣ ಪ್ರಮಾಣಪತ್ರ ವಕೀಲರ ಆಕ್ರೋಶ


ತುಮಕೂರು: ದಿನಾಂಕ 18-7-2022ರಂದು ಕರ್ನಾಟಕ ಸರ್ಕಾರವು ಜನನ ಮತ್ತು ಮರಣ ಸಮರ್ಥನಾ ಪತ್ರಗಳನ್ನು ಪಡೆಯಲು ಕಾಯ್ದೆಗೆ ತಿದ್ದುಪಡಿ ತಂದು ಅಧಿಸೂಚನೆ ಹೊರಡಿಸಿದ್ದು ಸದರಿ ಅಧಿಸೂಚನೆಯಂತೆ ಸಿವಿಲ್ ನ್ಯಾಯಾಲಯದ ಕಾರ್ಯವ್ಯಾಪ್ತಿಯಿಂದ ಕಂದಾಯ ಇಲಾಖೆಯ ಉಪವಿಭಾಗಾಧಿಕಾರಿಗಳಿಗೆ ಅಧಿಕಾರವನ್ನು ನೀಡಿರುವುದರಿಂದ ಸದರಿ ಕಾಯ್ದೆಯು ಸಾರ್ವಜನಿಕರಿಗೆ ಮತ್ತು ವಕೀಲ ಸಮುದಾಯಕ್ಕೆ ಮಾರಕ ಕಾಯ್ದೆಯಾಗಿರುತ್ತದೆ. ಈಗಾಗಲೇ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಕಂದಾಯ ಪ್ರಕರಣಗಳು ಸಾಕಷ್ಟು ಪ್ರಮಾಣದಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇದ್ದು,ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಬಹಳ ಕಾಲ ವಿಳಂಬವಾಗಿರುತ್ತದೆ. ಸದರಿ ಕಾಯ್ದೆಯು ಜಾರಿಗೊಂಡರೆ ಜನನ ಮತ್ತು ಮರಣ ಸಮರ್ಥನಾ ಪ್ರಮಾಣಪತ್ರ ಪಡೆಯಲು ಸಾಕಷ್ಟು ವಿಳಂಬವಾಗುವುದರ ಜೊತೆಗೆ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಟ್ಟಂತಾಗುತ್ತದೆ. ಜೊತೆಗೆ ಮಧ್ಯವರ್ತಿಗಳ ಹಾವಳಿಗೆ ಸಾರ್ವಜನಿಕರು ತುತ್ತಾಗುವ ಸಾಧ್ಯತೆ ಹೆಚ್ಚುವುದರ ಜೊತೆಗೆ ಈ ಕಾಯ್ದೆಯು ದುರುಪಯೋಗವಾಗುತ್ತದೆ. ಆದ್ದರಿಂದ ಈ ಕಾಯ್ದೆಗೆ ಸರ್ಕಾರವು ಹಸ್ತಕ್ಷೇಪ ಮಾಡದೇ ಜನನ ಮತ್ತು ಮರಣ ಸಮರ್ಥನಾ ಪ್ರಮಾಣಪತ್ರ ಪಡೆಯಲು ಕಾಯ್ದೆಯ ಕಾರ್ಯವ್ಯಾಪ್ತಿಯನ್ನು ಹಿಂದಿನಂತೆಯೇ ಸಿವಿಲ್ ನ್ಯಾಯಾಲಯದ…


ಮುಂದೆ ಓದಿ...

ಗೃಹ ಸಚಿವರ ರಾಜೀನಾಮೆಗೆ ಒತ್ತಾಯ!


ತುಮಕೂರು: ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಸಮರ್ಥರಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಅಧ್ಯಕ್ಷ ತಾಜುದ್ದೀನ್ ಶರೀಫ್ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಅರಗ ಜ್ಞಾನೇಂದ್ರ ಅವರು ಗೃಹ ಮಂತ್ರಿಯಾದ ನಂತರ ಹಿಂದು, ಮುಸ್ಲಿಂ ಎನ್ನದೆ ಸಾಲು ಸಾಲು ಹೆಣಗಳು ಉರುಳುತ್ತಿವೆ. ಅದರಲ್ಲಿಯೂ ಕುಟುಂಬಕ್ಕೆ ಆಧಾರಸ್ತಂಬವಾಗಿದ್ದ ಹದಿ ಹರೆಯದ ಯುವಕರು ಕೊಲೆಗೀಡಾಡುತ್ತಿರುವುದು ತುಂಬಾ ಆತಂಕಕಾರಿ ವಿಚಾರವಾಗಿದೆ. ಈ ಹಿಂದಿನ ಘಟನೆಗಳಲ್ಲಿ ಸರಿಯಾದ ಕ್ರಮವನ್ನು ತೆಗೆದುಕೊಂಡಿದ್ದರೆ, ಇಂದು ಬೆಳ್ಳಾರದಲ್ಲಿ ಎರಡು ಹೆಣಗಳು ಬೀಳುತ್ತಿರಲಿಲ್ಲ. ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಜವಾಬ್ದಾರಿ ನಿಭಾಯಿಸಲು ಅಸಮರ್ಥರಾಗಿದ್ದಾರೆ ಎಂಬುದನ್ನು ಈ ಎರಡು ಘಟನೆಗಳು ಮತ್ತೆ ಸಾಬೀತು ಪಡಿಸಿವೆ.ಮÀುತ್ತಷ್ಟು ಯುವಕರ ಹತ್ಯೆ ಆಗುವುದಕ್ಕೂ ಮೊದಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬುದು ವೆಲ್ಪೇರ್ ಪಾರ್ಟಿ ಅಪ್…


ಮುಂದೆ ಓದಿ...

ಸಂಭ್ರಮದಿಂದ ಸ್ವಾತಂತ್ರ್ಯ ದಿನ ಆಚರಿಸೋಣ: ಜಿಲ್ಲಾಧಿಕಾರಿ


ತುಮಕೂರು: 75ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ಭಾರತದ ಪ್ರಜೆಗಳಾದ ನಾವೆಲ್ಲರೂ ಒಗ್ಗೂಡಿ ರಾಷ್ಟ್ರಪ್ರೇಮ ಮತ್ತು ರಾಷ್ಟ್ರಭಕ್ತಿಯನ್ನು ಬಿಂಬಿಸುವ ಮೂಲಕ ಅತ್ಯಂತ ವಿಜೃಂಭಣೆಯಿಂದ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸೋಣ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಕರೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಂದು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದು, ಎಲ್ಲರೂ ಸೇರಿ ಒಳ್ಳೆಯ ರೀತಿಯಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಚರಿಸೋಣ ಎಂದು ಅಧಿಕಾರಿಗಳಿಗೆ ತಿಳಿಸಿದರು. ಅಂದು ನಗರದ ಪ್ರಮುಖ ವೃತ್ತಗಳಲ್ಲಿ ರಾಷ್ಟ್ರಧ್ವಜ, ದೀಪಾಲಂಕಾರ, ಬಾಳೆಕಂದು, ತಳಿರು ತೋರಣ, ದೇಶಭಕ್ತಿ ಗೀತೆಗಳನ್ನು ಎಲ್ಲರಿಗೂ ಕೇಳಿಸುವ ಮೂಲಕ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸೋಣ ಎಂದು ತಿಳಿಸಿದರು. ಸಂಜೆ ಸಾಂಸ್ಕøತಿಕ ಕಾರ್ಯಕ್ರದಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು…


ಮುಂದೆ ಓದಿ...

ಪ್ರವೀಣ್ ಹಂತಕರನ್ನು ಎನ್‍ಕೌಂಟರ್ ಮಾಡಿ: ಋಷಿಕುಮಾರ ಸ್ವಾಮೀಜಿ


ತುಮಕೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆ ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ವತಿಯಿಂದ ಋಷಿಕುಮಾರ ಸ್ವಾಮೀಜಿ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಟೌನ್‍ಹಾಲ್ ವೃತ್ತದಲ್ಲಿ ಜಮಾವೇಶಗೊಂಡ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರವೀಣ್ ಹತ್ಯೆಗೈದಿರುವ ಆರೋಪಿಗಳ ಭಾವಚಿತ್ರಗಳನ್ನು ಸುಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಹತ್ಯೆ ಪ್ರಕರಣಗಳು ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಬೆಂಗಳೂರಿನ ಋಷಿಕುಮಾರ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಹಿಂದೂಗಳ ಹತ್ಯೆ ನಿರಂತರವಾಗಿ ನಡೆಯುತ್ತಿದೆ. ಅದರಲ್ಲಿ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಹಿಂದೂಗಳ ಹತ್ಯೆ ನಡೆಯುತ್ತಿದೆ. ಪ್ರವೀಣ್ ಅವರದ್ದು 35ನೇ ಹತ್ಯೆಯಾಗಿದೆ ಎಂದರು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಲ್ಲೂ ಹಿಂದೂ ಕಾರ್ಯಕರ್ತರಿದ್ದಾರೆ. ಆದರೂ ಬಿಜೆಪಿಯಲ್ಲಿರುವ ಹಿಂದೂಗಳನ್ನೇ ಮಾತ್ರ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು. ನಿಮಗೆ ಧಮ್…


ಮುಂದೆ ಓದಿ...