ವೀರಶೈವ ಲಿಂಗಾಯತ ಸಮುದಾಯವನ್ನು ಓಬಿಸಿಗೆ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸ್ಸುಗೊಳಿಸಲು ಒತ್ತಾಯ


ತುಮಕೂರು: ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಉಪಪಂಗಡಗಳನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸಬೇಕೆಂದು ಆಗ್ರಹಿಸಿ ಇಂದು ಅಖಿಲ ಭಾರತ ವೀರಶೈವ, ಲಿಂಗಾಯಿತ ಮಹಾಸಭಾದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ವಿವಿಧ ಮಠಗಳ ಸ್ವಾಮೀಜಿಗಳ ನೇತೃತ್ವದಲ್ಲಿ ನಂದಿ ದ್ವಜ, ವೀರಗಾಸೆ ಕಲಾ ಪ್ರದರ್ಶನದ ಜೊತೆಗೆ,ಸಾವಿರಾರು ಸಂಖ್ಯೆಯಲ್ಲಿದ್ದ ಲಿಂಗಾಯಿತ,ವೀರಶೈವ ಸಮುದಾಯದ ಮುಖಂಡರುಗಳು ನಗರದ ಟೌನ್‍ಹಾಲ್ ವೃತ್ತದಿಂದ ಜಿಲ್ಲಾಧಿ ಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ,ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು. ಪ್ರತಿಭಟನಾನಿರತ ವೀರಶೈವ, ಲಿಂಗಾಯಿತ ಸಮುದಾಯದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಚಿಕ್ಕತೊಟ್ಲುಕೆರೆಯ ಶ್ರೀಅಟವಿ ಶಿವಲಿಂಗಸ್ವಾಮೀಜಿ, ಗೊಲ್ಲಹಳ್ಳಿಮಠದ ಶ್ರೀವೀಭವ ವಿದ್ಯಾಶಂಕರ ಸ್ವಾಮೀಜಿ, ಮಾಕನಹಳ್ಳಿ ಮಠದ ಶ್ರೀಗಂಗಾಧರ ಸ್ವಾಮೀಜಿ, ಬೆಳ್ಳಾವಿಯ ಶ್ರೀಕಾರದೇಶ್ವರ ಮಠದ ಶ್ರೀಕಾರದ ವೀರಬಸವಸ್ವಾಮೀಜಿ, ಶ್ರೀರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ, ಹರಳೂರು ಮಠದ ಶ್ರೀ ಚನ್ನಬಸವಸ್ವಾಮೀಜಿಗಳು,ರಾಜ್ಯ…


ಮುಂದೆ ಓದಿ...