ಸ್ಲಂ ನಿವಾಸಿಗಳಿಗೆ ಪುನರ್ ವಸತಿ ಕಲ್ಪಿಸಲು ಕ್ರಮ: ಜಿಲ್ಲಾಧಿಕಾರಿ


ತುಮಕೂರು: ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ನಗರದ ಅಮಾನಿಕೆರೆ ಕೋಡಿಹಳ್ಳದ 30 ಬಡಕುಟುಂಬಗಳಿಗೆ ಪುನರ್‍ವಸತಿ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ತುಮಕೂರು ಮಹಾನಗರ ಪಾಲಿಕೆಯ ವಾರ್ಡ್ ನಂ, 3ರಲ್ಲಿ ಬರುವ ಶಿರಾಗೇಟ್ ತುಮಕೂರು ಅಮಾನಿಕೆರೆ ಕೋಡಿಹಳ್ಳದಲ್ಲಿ ಸುಮಾರು 70 ವರ್ಷಗಳಿಗೂ ಮೇಲ್ಪಟ್ಟು 30 ಕುಟುಂಬಗಳು ಹಿಂದುಳಿದ ಮತ್ತು ದಲಿತ ಜನಾಂಗದ ಮಡಿವಾಳ, ಕುರುಬ, ಮೊದಲಿಯರ್ಸ್ ಮತ್ತು ಎಸ್‍ಸಿ/ಎಸ್‍ಟಿ ಇತರೆ ಜಾತಿಯ ಬಡಜನರು ಮನೆ ನಿರ್ಮಿಸಿಕೊಂಡು ವಾಸಿಸುತ್ತಿದ್ದು ಇತ್ತೀಚೆಗೆ ಭಾರಿ ಮಳೆಯಿಂದ ತುಮಕೂರು ಅಮಾನಿಕೆರೆ ಕೋಡಿ ಹೊಡೆದಿರುವುದರಿಂದ ಇಲ್ಲಿರುವ ಎಲ್ಲಾ ಮನೆಗಳಿಗೂ ನೀರು ನುಗ್ಗಿ ದಿನಾಂಕ:30-7-2022 ರ ಮಧ್ಯರಾತ್ರಿ ಇಲ್ಲಿದ್ದ ಎಲ್ಲಾ ಕುಟುಂಬಗಳನ್ನು ಜಿಲ್ಲಾಡಳಿತ ತುಮಕೂರು ಮಹಾನಗರ ಪಾಲಿಕೆಯ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿದೆ ಕಳೆದ 8 ತಿಂಗಳಿಂದ 2ನೇ ಬಾರಿ ಇಂತಹ ಘಟನೆ ಸಂಭವಿಸಿದ್ದು ಕೋಡಿ ಹಳ್ಳದಲ್ಲಿ ಈ ಕುಟುಂಬಗಳು ವಾಸಿಸುತ್ತಿರುವುದರಿಂದ ಪದೇ ಪದೇ ಇಂತಹ ಘಟನೆಗಳಾಗುವ…


ಮುಂದೆ ಓದಿ...

ನೈಲಾನ್, ಪಾಲಿಸ್ಟರ್ ಧ್ವಜಕ್ಕೆ ಅವಕಾಶ: ನೇಕಾರರ ಹೊಟ್ಟೆ ಪಾಡಿಗೆ ತೊಂದರೆ


ತುಮಕೂರು: ಕೇಂದ್ರ ಸರಕಾರ ಧ್ವಜ ಸಂಹಿತೆಗೆ ತಿದ್ದುಪಡಿ ತರುವ ಮೂಲಕ ನೈಲಾನ್ ಮತ್ತು ಪಾಲಿಸ್ಟರ್ ವಸ್ತುಗಳಿಂದ ತಯಾರಿಸಿದ ರಾಷ್ಟ್ರದ್ವಜ ಬಳಕೆಗೆ ಅವಕಾಶ ಮಾಡಿಕೊಡುವ ಮೂಲಕ, ನೇಕಾರರ ಹೊಟ್ಟೆಯ ಮೇಲೆ ಒಡೆದಿದೆ ಎಂದು ಜಿಲ್ಲಾ ನೇಕಾರರ ಸಮುದಾಯಗಳ ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ. ನಗರದ ಖಾಸಗಿ ಹೊಟೇಲ್‍ನಲ್ಲಿ ಆಗಸ್ಟ್ 17 ರಂದು ನಡೆಸಲು ಉದ್ದೇಶಿಸಿರುವ 8ನೇ ಅಂತರರಾಷ್ಟ್ರೀಯ ನೇಕಾರರ ದಿವಸ ಕಾರ್ಯಕ್ರಮದ ಅಂಗವಾಗಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ನೇಕಾರರ ಸಮುದಾಯದÀ ಕುರುಹಿನ ಶೆಟ್ಟಿ, ತೋಗಟವೀರ, ಪದ್ಮಶಾಲಿ, ದೇವಾಂಗ ಸಮುದಾಯದ ಮುಖಂಡರಾದ ರಾಮಕೃಷ್ಣಯ್ಯ, ಧನಿಯಕುಮಾರ್, ಅನಿಲ್‍ಕುಮಾರ್, ಎಸ್.ವಿ.ವೆಂಕಟೇಶ್, ಎಸ್.ಎನ್.ರಂಗಸ್ವಾಮಿ, ಯೋಗಾನಂದ, ಕರಿಯಪ್ಪ ಮತ್ತಿತರರು ಸರಕಾರದ ನಡೆಯನ್ನು ಖಂಡಿಸಿದರು. ಜಿಲ್ಲಾ ನೇಕಾರರ ಸಮುದಾಯದ ಕಾರ್ಯದರ್ಶಿ ಧನಿಯಕುಮಾರ್, ರಾಷ್ಟ್ರಧ್ವಜಕ್ಕೆ ತನ್ನದೇ ಆದ ಘನತೆ,ಗೌರವವಿದೆ.ಹತ್ತಿಯ ಬಟ್ಟೆಯಿಂದ ತಯಾರಿಸಿದ ರಾಷ್ಟ್ರದ್ವಜವನ್ನು ಮಾತ್ರ ಬಳಕೆ ಮಾಡಬೇಕೆಂಬ ನಿಯಮವಿದ್ದ ಕಾರಣ, ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ನೇಕಾರರಿಗೆ ಧ್ವಜ ನೇಯ್ಗೆ…


ಮುಂದೆ ಓದಿ...

ಆ.16, 17: ಅಂತಾರಾಷ್ಟ್ರೀಯ ಯುವ ಸಮ್ಮೇಳನ


ತುಮಕೂರು: ನಗರದ ಶೇಷಾದ್ರಿಪುರಂ ಪದವಿ ಕಾಲೇಜಿನ ವಿವೇಕಾನಂದ ಅಧ್ಯಯನ ಕೇಂದ್ರ ಮತ್ತು ಆಂತರಿಕ ಗುಣಮಟ್ಟದ ಭದ್ರತಾ ಘಟಕವು ರಾಮಕೃಷ್ಣ-ವಿವೇಕಾನಂದ ಆಶ್ರಮದ ಸಂಯುಕ್ತಾಶ್ರಯದಲ್ಲಿ ಆ. 16 ಮತ್ತು 17 ರಂದು ‘ಆರೋಹ’ ಎಂಬ ಶೀರ್ಷಿಕೆಯಡಿಯಲ್ಲಿ ‘ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಅಂಗವಾಗಿ ಎರಡು ದಿನಗಳ ಅಂತಾರಾಷ್ಟ್ರೀಯ ಯುವ ಸಮ್ಮೇಳನವನ್ನು ಗಂಗಸಂದ್ರ ರಸ್ತೆಯ ಶೇಷಾದ್ರಿಪುರಂ ಪದವಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಸ್ವಾಮಿ ವೀರೇಶಾನಂದ ಸರಸ್ವತೀ ಅವರು ತಿಳಿಸಿದರು. ರಾಮಕೃಷ್ಣ ಮಠ ಮತ್ತು ಮಿಷನ್‍ನ ಉಪಾಧ್ಯಕ್ಷರಾದ ಸ್ವಾಮಿ ಗೌತಮಾನಂದಜೀ ಮಹಾರಾಜ್ ರವರು ಯುವ ಸಮ್ಮೇಳನವನ್ನು ಉದ್ಘಾಟಿಸುವರು. ಕರ್ನಾಟಕ-ಕೇರಳ ವಿಭಾಗದ ಸಿಬ್ಬಂದಿ ನೇಮಕಾತಿ ಆಯೋಗದ ಪ್ರಾದೇಶಿಕ ನಿರ್ದೇಶಕರಾದ ಎಸ್.ಎನ್. ಗಿರೀಶ್, ಶೇಷಾದ್ರಿಪುರಂ ಶಿಕ್ಷಣ ದತ್ತಿಯ ಪ್ರಧಾನ ಕಾರ್ಯದರ್ಶಿ ನಾಡೋಜ ಡಾ. ವೂಡೆ ಪಿ. ಕೃಷ್ಣ, ತುಮಕೂರು ವಿಭಾಗದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವ ಡಬ್ಲ್ಯೂ.ಡಿ. ಅಶೋಕ್ ಅಂತಾರಾಷ್ಟ್ರೀಯ ಯುವ…


ಮುಂದೆ ಓದಿ...

ಮಾರ್ಕೋನಹಳ್ಳಿ ಜಲಾಶಯಕ್ಕೆ ಸಚಿವ ಕಾರಜೋಳ ಭೇಟಿ


ತುಮಕೂರು: ಸತತ ಮಳೆಯಿಂದ ಜಿಲ್ಲೆಯ ವಿವಿಧ ಕೆರೆ ಕಟ್ಟೆಗಳು, ಅಣೆಕಟ್ಟೆಗಳು ತುಂಬಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಎಂ.ಕಾರಜೋಳ ಅವರು ಜಿಲ್ಲೆಯ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯದಲ್ಲಿ ಸತತವಾಗಿ ಮುಂಗಾರು ಮಳೆಯಾಗುತ್ತಿರುವ ಹಾಗೆಯೇ ತುಮಕೂರು ಜಿಲ್ಲೆಯಲ್ಲಿಯೂ ನಿರಂತರವಾಗಿ ಮಳೆಯಾಗುತ್ತಿದ್ದು,ಜಿಲ್ಲೆಯಲ್ಲಿ ಹುಟ್ಟುವ ಶಿಂಸಾ,ಜಯಮಂಗಲಿ, ಗರುಡದ್ವಜ, ಉತ್ತರ ಪಿನಾಕಿನಿ, ದಕ್ಷಿಣ ಪಿನಾಕಿನಿ ನದಿಗಳು ತುಂಬಿ ಹರಿದ್ದ ಪರಿಣಾಮ ನದಿಪಾತ್ರಗಳ ಕೆರೆ, ಕಟ್ಟೆಗಳು ಸಹ ತುಂಬಿ ಕೋಡಿ ಬಿದ್ದಿವೆ.ಶಿಂಷಾ ನದಿ ನೀರಿನಿಂದ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿಯ ಮಂಗಳ ಜಲಾಶಯ ತುಂಬಿದ್ದು, ಜಲಾಶಯದಿಂದ ನದಿ ಪಾತ್ರಗಳಿಗೆ ನೀರು ಬಿಡುಗಡೆ ಮಾಡಲಾಗಿದೆ. ಮಳೆಯಿಂದ ಜನಜೀವನದ ಮೇಲಾಗಿರುವ ದುಷ್ಪರಿಣಾಮಗಳ ಅಧ್ಯಯನದಲ್ಲಿ ಸರಕಾರ ತೊಡಗಿದೆ.ಈ ಹಿನ್ನೆಲೆಯಲ್ಲಿ ಸರಕಾರದ ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ.ಕಾರಜೋಳ ಅವರು ಇಂದು ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯಕ್ಕೆ ಭೇಟಿ ನೀಡಿ,ಹೇಮಾವತಿ ನಾಲಾವಲಯದ ಹಿರಿಯ…


ಮುಂದೆ ಓದಿ...

ಆ.13ರಿಂದ 15ರವರೆಗೆ ಹರ್ ಘರ್ ತಿರಂಗಾ ಅಭಿಯಾನ


ತುಮಕೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೂಚನೆಯಂತೆ, 75ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಆಗಸ್ಟ್ 13 ರಿಂದ 15, 2022ರವರೆಗೆ “ಹರ್ ಘರ್ ತಿರಂಗಾ” ಅಭಿಯಾನ ಕಾರ್ಯಕ್ರಮವನ್ನು ದೇಶದಾದ್ಯಂತ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ರಾಜ್ಯದಲ್ಲಿರುವ ಎಲ್ಲಾ ಮನೆಗಳು, ಸರ್ಕಾರಿ ಕಟ್ಟಡಗಳು, ಅರೆ ಸರ್ಕಾರಿ ಕಟ್ಟಡಗಳು, ಸಂಘ-ಸಂಸ್ಥೆಗಳ ಕಟ್ಟಡಗಳು ಹಾಗೂ ಇತರೆ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಪ್ರೇಮವನ್ನು ಅಭಿವ್ಯಕ್ತಗೊಳಿಸಬೇಕಿದೆ. ಈ ಹಿನ್ನಲೆಯಲ್ಲಿ ದಿನಾಂಕ:12-08-2022ರಂದು ಜಿಲ್ಲಾಡಳಿತ, ತುಮಕೂರು ವತಿಯಿಂದ ತುಮಕೂರು ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ “ಶ್ರೀ ನುಲಿಯ ಚಂದಯ್ಯ” ಜಯಂತಿಯಲ್ಲಿ “ಹರ್ ಘರ್ ತಿರಂಗಾ ಅಭಿಯಾನ” ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾನ್ಯ ಉಪಕಾರ್ಯದರ್ಶಿಗಳಾದ ಶ್ರೀ ಗೋಪಾಲ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಡಿ.ಎಂ.ರವಿಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ…


ಮುಂದೆ ಓದಿ...

ಜಿಲ್ಲಾಸ್ಪತ್ರೆಯ ಹಣ ದುರುಪಯೋಗ : ಶಸ್ತ್ರಚಿಕಿತ್ಸಕ, ಎಫ್‍ಡಿಎ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯ


ತುಮಕೂರು: ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಟಿ.ಎ. ವೀರಭದ್ರಯ್ಯ ಮತ್ತು ಎಫ್.ಡಿ.ಎ ಹರೀಶ್ ಇಬ್ಬರೂ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಹಣವನ್ನು ದುರುಪಯೋಗ ಮಾಡಿಕೊಂಡಿದ್ದು, ಇವರಿಬ್ಬರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ಕರುನಾಡ ವಿಜಯಸೇನೆ ಗೌರವಾಧ್ಯಕ್ಷ ಬಿ.ಬಿ.ಮಹದೇವಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿರುವ ಕರುನಾಡ ವಿಜಯಸೇನೆ ಗೌರವಾಧ್ಯಕ್ಷ ಬಿ.ಬಿ.ಮಹದೇವಪ್ಪ ಅವರು, ದಿನನಿತ್ಯ ರೋಗಿಗಳಿಂದ ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಖಾತೆಗೆ ಜಮಾ ಮಾಡದೇ 2018 ನೇ ಸಾಲಿನಿಂದ 2025 ರವರೆಗೆ ಒಟ್ಟು ರೂ.4,32,00,000 ಹಣ ಸಂಗ್ರಹವಾಗಿದ್ದು, ಬ್ಯಾಂಕ್ ಖಾತೆಗೆ ರೂ.3,75,00,000 ಮಾತ್ರ ಸಂದಾಯ ಮಾಡಿರುತ್ತಾರೆ. ಇನ್ನುಳಿದ ರೂ. 57,46,000 ರೂ.ಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ಆಡಿಟ್‍ಗೆ ಬಂದಂತಹವರನ್ನು ಲಂಚದ ಆಮಿಷ ತೋರಿಸಿ ಸದರಿ ವಿಚಾರವನ್ನು ಮುಚ್ಚಿ ಹಾಕಲಾಗಿದೆ. ಸದರಿ ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಮಾಹಿತಿ ಇರುವ ಡಿ.ವಿ.ಡಿ ಹಾಗೂ ಮಾಹಿತಿ…


ಮುಂದೆ ಓದಿ...