ಮಧ್ಯರಾತ್ರಿ 12 ರಂದು ಧ್ವಜಾರೋಹಣ


ತುಮಕೂರು: ಹೋರಿಮುದ್ದಪ್ಪ ನಾಗರೀಕ ಹಿತರಕ್ಷಣಾ ಸಮಿತಿ ವತಿಯಿಂದ ನಗರದ ಹೋರಿಮುದ್ದಪ್ಪ ಕಾಂಪೌಂಡ್‍ನಲ್ಲಿರುವ ಕನ್ನಡ ಧ್ವಜಸ್ತಂಭದ ಆವರಣದಲ್ಲಿ ಮಧ್ಯರಾತ್ರಿ 12ರ ಸಮಯದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಧ್ವಜಾರೋಹಣ ನೆರವೇರಿಸುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಮಧ್ಯರಾತ್ರಿ ನಡೆದ 75ನೇ ಸ್ವಾತಂತ್ರ್ಯೋತ್ಸವದಲ್ಲಿ ಹಿರಿಯರಾದ ಗಂಗಮ್ಮ ಧ್ವಜಾರೋಹಣ ನೆರವೇರಿಸಿದರು. ಹೋರಿಮುದ್ದಪ್ಪ ನಾಗರೀಕ ಹಿತರಕ್ಷಣಾ ಸಮಿತಿ ನಿರ್ದೇಶಕ ಗುರುಮೂರ್ತಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಕೊಟ್ಟಿದ್ದು ಮಧ್ಯರಾತ್ರಿಯಾಗಿದ್ದು ಅದರ ಸವಿನೆನಪಿಗಾಗಿ ಇಲ್ಲೂ ಕೂಡ ಮಧ್ಯರಾತ್ರಿಯೇ ಆಚರಣೆ ಮಾಡುತ್ತಿರುವುದು ಶ್ಲಾಘನೀಯ ಎಂದರು. ಇಂದಿನ ಯುವಕರಿಗೆ ಹಿಂದಿನವರ ಮಾರ್ಗದರ್ಶನ ಅಗತ್ಯವಿದ್ದು ರಾಷ್ಟ್ರನಾಯಕರ ಅದರ್ಶ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡು ದೇಶದ ಪ್ರಗತಿಗೆ ಮುಂದಾಗಿ ಎಂದು ಕರೆ ನೀಡಿದರು. ಶಿಕ್ಷಕ ವಿಶ್ವನಾಥ್ ಮಾತನಾಡಿ, ಧಾರ್ಮಿಕ ಸಂಸ್ಕಾರದ ಹಿನ್ನಲೆಯಲ್ಲಿ ವೈಜ್ಞಾನಿಕ ಬೆಳವಣಿಗೆಯಾಗಬೇಕು. ಧಾರ್ಮಿಕ ಸಂಸ್ಕಾರದ ಮೂಲಕ ಸಮಾನತೆ, ಸದಾಚಾರ, ಮಾನವೀಯತೆ ಬೆಳೆಸಿಕೊಳ್ಳಿ ಎಂದು ಹೇಳಿದರು. ಸ್ವರ ಸಿಂಚನ ಸುಗಮ ಸಂಗೀತ ಸಂಸ್ಥೆಯ ಕೆಂಕೆರೆ…


ಮುಂದೆ ಓದಿ...

ಸಿದ್ಧಾರ್ಥ ಸಂಸ್ಥೆಯಲ್ಲಿ ವನ ಮಹೋತ್ಸವ, ಆರೋಗ್ಯ ತಪಾಸಣೆ


ತುಮಕೂರು: ಸಿದ್ಧಾರ್ಥ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 75ನೇ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ವನಮಹೋತ್ಸವ, ಆರೋಗ್ಯ ತಪಾಸಣೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ ಸೇರಿದಂತೆ ಹತ್ತು ಹಲವು ಸಾಂಸ್ಕøತಿಕ ಕಾರ್ಯಕ್ರಮಗಳ ಮೂಲಕ ರಾಷ್ಟ್ರೀಯ ಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜಿನಲ್ಲಿಂದು 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸಾಹೇ ವಿಶ್ವ ವಿದ್ಯಾಲಯದ ಕುಲಾಧಿಪತಿಗಳಾದ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ ನೇರವೆರಿಸಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ ಮಾತನಾಡಿದರು. ದೇಶಕ್ಕಾಗಿ ಮಣಿದ ವೀರ ಯೋಧರನ್ನು ಸ್ಮರಿಸುತ್ತಾ ಅವರ ಹೋರಾಟ, ಬಲಿದಾನದ ಫಲವಾಗಿ ಇಂದು ನಾವು ನೆಮ್ಮದಿಯಿಂದ ಜೀವಿಸುತ್ತಿದ್ದೇವೆ. ಅವರ ತ್ಯಾಗ ಬಲಿದಾನವನ್ನು ಸ್ಮರಿಸಿದರು. ಸಮಾಜದ ಅಭಿವೃದ್ಧಿ ಪೂರಕವಾದ ಶೈಕ್ಷಣಿಕ ಕ್ಷೇತ್ರದ ಸುಧಾರಣೆಗೆ ನಾವೆಲ್ಲರೂ ಬದ್ಧರಾಗಬೇಕು. ಹಿಂದುಳಿದ ಪ್ರದೇಶದ ಮಕ್ಕಳಿಗೆ ಶಿಕ್ಷಣ ಸಿಗಬೇಕು. ಈ ನಿಟ್ಟಿನಲ್ಲಿ ನಮ್ಮ ತಂದೆ ಸ್ಥಾಪಿಸಿದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯನ್ನು…


ಮುಂದೆ ಓದಿ...

‘ಕ್ಯಾಂಪಸ್ ಕಹಾನಿ’ ಪುಸ್ತಕದಲ್ಲಿ ನವಿರಾದ ಅಭಿವ್ಯಕ್ತಿಯಿದೆ!: ಸಿಬಂತಿ ಪದ್ಮನಾಭ


ತುಮಕೂರು: ‘ಕ್ಯಾಂಪಸ್ ಕಹಾನಿ’ ಲೇಖಕ ಯೋಗೇಶ್ ಮಲ್ಲೂರು ಅವರ ಮೊದಲ ಪುಸ್ತಕವಾಗಿದ್ದು, ನವಿರಾದ ಅಭಿವ್ಯಕ್ತಿಯಿಂದ ಕೂಡಿದೆ. ಪುಸ್ತಕದ ನಿರೂಪಣೆ ಓದುಗರನ್ನು ಸೆಳೆಯುತ್ತವೆ ಎಂದು ತುಮಕೂರು ವಿಶ್ವವಿದ್ಯಾನಿಲಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ ಸಹಾಯಕ ಪ್ರಾಧ್ಯಾಪಕ ಹಾಗೂ ಲೇಖಕ ಡಾ. ಸಿಬಂತಿ ಪದ್ಮನಾಭ ಕೆ.ವಿ ತಿಳಿಸಿದರು. ನಗರದ ತುಮಕೂರು ವಿಶ್ವವಿದ್ಯಾನಿಲಯದ ಸದಾನಂದಮಯ ಕಟ್ಟಡದಲ್ಲಿರುವ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ನಡೆದ ಯೋಗೇಶ್ ಮಲ್ಲೂರು ಅವರ ಕ್ಯಾಂಪಸ್ ಕಹಾನಿ ಪುಸ್ತಕದ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಯೋಗೇಶ್ ನನ್ನ ಹಳೆಯ ವಿದ್ಯಾರ್ಥಿ, ಅವರ ಬರವಣಿಗೆಯ ಆಸಕ್ತಿಯನ್ನು ಪದವಿ ಹಂತದಿಂದಲೇ ನೋಡಿಕೊಂಡು ಬಂದಿದ್ದೆ. ಉತ್ತಮವಾದ ಬರಹಗಳನ್ನು ಬರೆಯುತ್ತಿದ್ದರು ಎಂದರು. ಹದಿಹರೆಯದ ಮನಸ್ಸಿನ ತುಡಿತಗಳು, ಭಾವನೆಗಳನ್ನು ಪುಸ್ತಕದಲ್ಲಿ ಕಾಣುತ್ತೇವೆ. ಯುವ ವಯಸ್ಸಿಗೆ ಈ ತರಹದ ಭಾವನೆಗಳು ಸಹಜವಾದರೂ ಅದನ್ನು ಅಭಿವ್ಯಕ್ತಿ ಪಡಿಸುವುದು ಮುಖ್ಯ. ಪುಸ್ತಕದಲ್ಲಿ ಸುಮಾರು 40 ರಷ್ಟು ಬರಹಗಳಿದ್ದು,…


ಮುಂದೆ ಓದಿ...

ಮನೆ-ಮನಗಳಲ್ಲಿ ರಾಷ್ಟ್ರಾಭಿಮಾನ ಮೂಡಿಸಲು ಸೈಕ್ಲೋಥಾನ್


ತುಮಕೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮನೆ-ಮನಗಳಲ್ಲಿ ರಾಷ್ಟ್ರದ ಬಗ್ಗೆ ಅಭಿಮಾನ ಮೂಡಿಸಲು ಜಿಲ್ಲಾಡಳಿತದ ವತಿಯಿಂದ ಸೈಕ್ಲೋಥಾನ್ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿಂದ ಸ್ವಾತಂತ್ರ್ಯ ಚೌಕ, ಅಶೋಕ ರಸ್ತೆ, ಬಿ.ಜಿ.ಎಸ್. ವೃತ್ತ, ಶಿವಕುಮಾರಸ್ವಾಮಿ ವೃತ್ತ, ಭದ್ರಮ್ಮ ವೃತ್ತದ ಮೂಲಕ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದವರೆಗೂ ಸಂಚರಿಸಿದ ಸೈಕ್ಲೋಥಾನ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, 75ನೇ ಆಜಾದಿ ಕಾ ಅಮೃತ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ವಿನೂತನ ರೀತಿಯಲ್ಲಿ ಆಚರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಹರ್ ಘರ್ ತಿರಂಗಾ ಅಭಿಯಾನದಡಿ ಜಿಲ್ಲೆಯ 4.5 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸುವ ಉದ್ದೇಶವನ್ನು ಹೊಂದಲಾಗಿತ್ತು. ಆದರೆ 5 ಲಕ್ಷಕ್ಕೂ ಹೆಚ್ಚಿನ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರದ ಮೇಲೆ ಜನರು ಅಭಿಮಾನ ತೋರಿದ್ದಾರೆ. ಅಭಿಮಾನ ತೋರಿದ…


ಮುಂದೆ ಓದಿ...

ಎಲ್ಲರಿಗೂ ಸವಲತ್ತು ಸಿಕ್ಕಾಗ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ


ತುಮಕೂರು: ದೇಶದ ಪ್ರತಿಯೊಬ್ಬರಿಗೂ ಸರ್ಕಾರದ ಸವಲತ್ತು ಸಿಕ್ಕಾಗ ಮಾತ್ರ ಸ್ವಾತಂತ್ರ್ಯಕ್ಕೆ ನಿಜವಾದ ಅರ್ಥ ಬರುತ್ತದೆ ಎಂದು ನಗರ ಕ್ಷೇತ್ರದ ಶಾಸಕ ಜಿ.ಬಿ.ಜ್ಯೋತಿಗಣೇಶ್ ತಿಳಿಸಿದರು. ನಗರದ ಬಿಜಿಎಸ್ ಟೌನ್ ಹಾಲ್ ವೃತ್ತದಲ್ಲಿ ಕಾರ್ಪೊರೇಷನ್ ಪರಿಮಿತಿಯಲ್ಲಿ ಭಾನುವಾರ ಕೆನರಾ ಬ್ಯಾಂಕ್ ವತಿಯಿಂದ ನಡೆದ ವಸ್ತುಪ್ರದರ್ಶನ ಹಾಗೂ ಜೀರೋ ಬ್ಯಾಲೆನ್ಸ್ ಖಾತೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇಂದು ಸ್ವಾತಂತ್ರ್ಯದ ಅರ್ಥ ತಿಳಿಯಬೇಕಾದರೆ ಸರ್ಕಾರ ಮತ್ತು ನಮ್ಮ ದೇಶ ಶ್ರಮಿಕರಿಗೆ, ಜನರಿಗೆ ಸೌಕರ್ಯ ಕೊಟ್ಟಾಗ ಮಾತ್ರ ಸ್ವಾತಂತ್ರ್ಯದ ಬಗ್ಗೆ ಅರಿವು ಬರುತ್ತದೆ ಎಂದರು. ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ ಸಾಕಷ್ಟು ಜನಪರ ಯೋಜನೆಗಳು ಜಾರಿಗೆ ತಂದಿದ್ದು, ಆ ಯೋಜನೆಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೂಡ ತಲುಪುತ್ತಿವೆ ಎಂದರೆ ಅದಕ್ಕೆ ನಾವು ಹೆಮ್ಮೆ ಪಡಬೇಕಾಗುತ್ತದೆ. ಇಂದು ಜನ್ ಧನ್ ಯೋಜನೆ, ಸಾಮಾಜಿಕ ಭದ್ರತೆ ಯೋಜನೆ, ಅಟಲ್ ಪಿಂಚಣಿ ಯೋಜನೆ, ಉಜ್ವಲ ಯೋಜನೆ,…


ಮುಂದೆ ಓದಿ...

ನಿರ್ಲಕ್ಷ್ಯಕ್ಕೆ ಒಳಗಾದ ಮಹಾತ್ಮಗಾಂಧಿ ಸ್ಮಾರಕ!


ತುಮಕೂರು: ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಮಹಾತ್ಮಗಾಂಧಿ ಸ್ಮಾರಕ ಭವನ ಇಂದು ಬಹಳ ನಿರ್ಲಕ್ಷ್ಯಕ್ಕೆ ಒಳಗಾಗಿರುವುದು ಬೇಸರದ ಸಂಗತಿ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದರು. ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಮಹಾತ್ಮಗಾಂಧಿ ಸ್ಮಾರಕ ಭವನಕ್ಕೆ ಭಾನುವಾರ ಭೇಟಿ ನೀಡಿ ಮಾತನಾಡಿದ ಅವರು, 1932 ಮತ್ತು 1937 ರಲ್ಲಿ ಗಾಂಧೀಜಿಯವರು ತುಮಕೂರಿಗೆ ಎರಡು ಭಾರಿ ಭೇಟಿ ನೀಡುತ್ತಾರೆ. ಆ ಸಂದರ್ಭದಲ್ಲಿ ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿರುವ ಕೊಠಡಿಯೊಂದರಲ್ಲಿ ತಂಗಿರುತ್ತಾರೆ. ಇದು ಇಂದು ಬಹಳ ನಿರ್ಲಕ್ಷಕ್ಕೆ ಒಳಗಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಮಹಾತ್ಮ ಗಾಂಧಿಜಿಯ ಸ್ಮಾರಕವಾಗಿರುವ ಇದನ್ನು ಅಭಿವೃದ್ಧಿ ಪಡಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸರ್ಕಾರ ಇದಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಪಡಿಸಬೇಕು, ಇಲ್ಲವೇ ಕಾರ್ಪೊರೇಷನ್‍ನವರಿಗೆ ಸೂಚನೆ ಕೊಟ್ಟು ಅವರ ಮುಖಾಂತರವಾದರೂ ಅಭಿವೃದ್ಧಿಪಡಿಸಬೇಕು, ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಈಗಲಾದರೂ ಎಚ್ಚೆತ್ತುಕೊಂಡು…


ಮುಂದೆ ಓದಿ...

ಸೌಹಾರ್ಧ ಭಾರತ ಕಟ್ಟಬೇಕಿದೆ!


ತುಮಕೂರು: ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತದ ಐಕ್ಯತೆ ಮತ್ತು ಸಮಗ್ರತೆ ಉಳಿಯುವ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆ ಅಸಮಾನತೆ, ಅಸ್ಪøಷ್ಯತೆ ರಹಿತ, ಸೌಹಾರ್ಧ ಭಾರತವನ್ನು ಕಟ್ಟಬೇಕಿದೆ ಎಂದು ಸರ್ವೋದಯ ಪಿಯು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಮೇಜರ್ ಹೆಚ್.ನಾರಾಯಣಪ್ಪ ಅಭಿಪ್ರಾಯಪಟ್ಟಿದ್ದಾರೆ. ನಗರದ ವಿಜಯನಗರ ಸರ್ವೋದರ್ಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸರ್ವೋದಯ ಶಿಕ್ಷಣ ಸಂಸ್ಥೆವತಿಯಿಂದ ಆಯೋಜಿಸಿದ್ದ 75ನೇ ಸ್ವಾತಂತ್ರ ದಿನದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವವಂಧನೆ ಸ್ವೀಕರಿಸಿ ಮಾತನಾಡುತ್ತಿದ್ದ ಅವರು, ಹಲವಾರು, ಭಾಷೆ, ಜಾತಿ, ಧರ್ಮಗಳ ಸಮ್ಮೀಲನವಾಗಿರುವ ಭಾರತ ಮತ್ತಷ್ಟು ಉಜ್ವಲ ಭವಿಷ್ಯ ಕಾಣಬೇಕಾದರೆ,ಭಾರತೀಯರೆಲ್ಲರೂ ಒಂದೇ ಎಂಬ ಭಾವನೆ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಮೂಡುವಂತೆ ಮಾಡಬೇಕಿದೆ ಎಂದರು. ಇಂದು ಇಡೀ ದೇಶವೇ ಭಾರತದ ಸ್ವಾತಂತ್ರದಿನದ ಅಮೃತ ಮಹೋತ್ಸವದ ಆಚರಣೆಯಲ್ಲಿ ತೊಡಗಿದೆ.ಇಂತಹ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ಸುದೈವ ಎಂದು ನಾನು ಭಾವಿಸಿದ್ದೇನೆ.ದೇಶದ ಸ್ವಾತಂತ್ರಕ್ಕಾಗಿ ಒಟ್ಟಾರೆ ದೇಶದ ಶೇ5ರಷ್ಟು ಜನ ಮಾತ್ರ ಹೋರಾಟ…


ಮುಂದೆ ಓದಿ...

ವಿಶ್ವದ ಬಲಾಡ್ಯ ರಾಷ್ಟ್ರಗಳ ಸಾಲಿಗೆ ಭಾರತ: ಅರಗ ಜ್ಞಾನೇಂದ್ರ


ತುಮಕೂರು: ವಿಶ್ವದ ಬಲಾಡ್ಯ ರಾಷ್ಟ್ರಗಳ ಪೈಕಿ ಭಾರತವು ಸಹ ಒಂದಾಗಿದ್ದು, ಜಿ-20 ರಾಷ್ಟ್ರಗಳ ಗುಂಪಿನಲ್ಲಿ ‘ಭಾರತ ನಾಯಕ ರಾಷ್ಟ್ರ’ವೆನಿಸಿದೆ. ಇಂದು ಇಡೀ ಜಗತ್ತೇ ನಮ್ಮ ದೇಶವನ್ನು ಗೌರವಿಸುವಂತಹ ನಾಯಕತ್ವ ನಮ್ಮ ದೇಶಕ್ಕಿದ್ದು, ಇದು ನಮ್ಮೆಲ್ಲರಿಗೂ ಹೆಮ್ಮೆ ತರುವ ವಿಷಯವಾಗಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಬಾಹ್ಯಕಾಶ ತಂತ್ರಜ್ಞಾನದಲ್ಲಿ ನಾವು ಸ್ವಾವಲಂಭನೆಯನ್ನು ಸಾಧಿಸಿದ್ದು, ಮಾಹಿತಿ ತಂತ್ರಜ್ಞಾನದಲ್ಲಿ ನಮ್ಮ ದೇಶ ಮುಂಚೂಣಿಯಲ್ಲಿದೆ. ಅತ್ಯಾಧುನಿಕ ಸಬ್‍ಮೆರಿನ್‍ಗಳು ಮತ್ತು ಶಸ್ತ್ರಾಸ್ತ್ರಗಳನ್ನು ಹೊಂದಿದ್ದೇವೆ. ಅಂತೆಯೇ ವಿಶ್ವದಲ್ಲಿಯೇ ನಾಲ್ಕನೇ ಅತಿದೊಡ್ಡ ಸೈನ್ಯ ನಮ್ಮದಾಗಿದ್ದು, ಇದು ಸಹ ನಾವೆಲ್ಲರೂ ಹೆಮ್ಮೆ ಪಡುವ ಸಂಗತಿಯಾಗಿದೆ ಎಂದರು. ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆದ 76ನೇ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದ ನಂತರ, ಜಿಲ್ಲೆಯ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಣ್ಣಿಗೆ ಕಾಣದ ವೈರಾಣು ಕೋವಿಡ್-19ನಿಂದ ಇಡೀ ಜಗತ್ತೇ ತತ್ತರಿಸಿದ್ದು, ಈ…


ಮುಂದೆ ಓದಿ...