ತುಮಕೂರು 75ನೇ ಸ್ವಾತಂತ್ರ್ಯೋತ್ಸವವನ್ನು ವಿಶೇಷ ಮತ್ತು ಅರ್ಥ ಪೂರ್ಣವಾಗಿ ಆಚರಿಸಲು ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆ ವತಿಯಿಂದ ದೇಶಕ್ಕಾಗಿ ನಡಿಗೆ ರಾಷ್ಟ್ರ ಜಾಗೃತಿ ಅಭಿಯಾನವನ್ನು ನಗರದಲ್ಲಿ ನಡೆಸಲಾಯಿತು. ಇಲ್ಲಿನ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಿಂದ ಆರಂಭವಾದ ದೇಶಕ್ಕಾಗಿ ನಡಿಗೆ(ವಾಕಥಾನ್)ಗೆ ಬಿಗ್ಬಾಸ್ ಖ್ಯಾತಿಯ ಹಾಗೂ ಕಿರುತೆರೆ ನಟಿ ಕುಮಾರಿ ಚಂದನ ಅನಂತಕೃಷ್ಣ ಚಾಲನೆ ನೀಡಿದರು. ನಂತರ ಮಾತನಾಡಿದ ಕು. ಚಂದನ ಅವರು, ನಾವೆಲ್ಲರೂ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದೇವೆ. ಭಾರತ ಎಂದಾಕ್ಷಣ ನಮಗೆಲ್ಲ ಹೆಮ್ಮೆಯಾಗುತ್ತದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿ, ದೇಶದ 75ನೇ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ರಾಷ್ಟ್ರ ಜಾಗೃತಿ ಅಭಿಮಾನ ಮಾಡುತ್ತಿರುವುದು ದೇಶದಲ್ಲಿ 75 ವರ್ಷದ ಹಿಂದೆ ಇದ್ದಂತಹ ಸ್ವಾತಂತ್ರ್ಯದ ಕಿಚ್ಚಿನ ವಾತಾವರಣವನ್ನು ಮತ್ತೊಮ್ಮೆ ನಮ್ಮೆಲ್ಲರ ನಡುವೆ ನಿರ್ಮಾಣವಾಗಿದೆ ಎಂದರು. ಮುಂದಿನ ದಿನಗಳಲ್ಲಿ ನಮ್ಮ…
ಮುಂದೆ ಓದಿ...