800 ಅಡಿ ಪ್ರಪಾತಕ್ಕೆ ಬಿದ್ದ ಭಾರತೀಯ ದಂಪತಿ

ಕ್ಯಾಲಿಫೋರ್ನಿಯಾ:

      ಅಮೆರಿಕದ ಕ್ಯಾಲಿಫೋರ್ನಿಯಾದ ಯೂಸೆಮೈಟ್ ನ್ಯಾಶ್ನಲ್ ಪಾರ್ಕ್ ಎಂಬಲ್ಲಿ 800 ಅಡಿ ಎತ್ತರದಿಂದ ಬಿದ್ದು ಭಾರತೀಯ ದಂಪತಿ ಸಾವನ್ನಪ್ಪಿದ ಘಟನೆ ಅ.25 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

      ಕ್ಯಾಲಿಫೋರ್ನಿಯಾದ ಯೋಸೆಮೈಟ್‌ ನ್ಯಾಷನಲ್‌ ಪಾರ್ಕ್‌ನಲ್ಲಿ  ಆಕ್ಟೋಬರ್‌ 25 ರಂದು ವಿಷ್ಣು ವಿಶ್ವನಾಥ್‌ (29) ಮತ್ತು ಪತ್ನಿ ಮೀನಾಕ್ಷಿ ಮೂರ್ತಿ (30) ಅವರು 800 ಅಡಿ ಆಳಕ್ಕೆ ಬಿದ್ದು  ದಾರುಣವಾಗಿ ಸಾವನ್ನಪ್ಪಿದ್ದಾರೆ.       ದಂಪತಿಗಳ ಶವ ಮೊದಲೇ ಸಿಕ್ಕಿದ್ದರೂ ಅವರನ್ನು ಗುರುತಿಸುವುದಕ್ಕೆ ಬಹಳ ಸಮಯ ಹಿಡಿದಿತ್ತು.  ಅವರ ಶವಗಳನ್ನು ಸೋಮವಾರ ಮೇಲಕ್ಕೆತ್ತಿ ಗುರುತು ಪತ್ತೆ ಹಚ್ಚಲಾಗಿದೆ ಎಂದು ತಿಳಿದು ಬಂದಿದೆ.

      ಸಿಸ್ಕೊ ಸಂಸ್ಥೆಯಲ್ಲಿ ಸಿಸ್ಟಮ್​ ಇಂಜಿನಿಯರ್​ ಆಗಿ ಕೆಲಸ ಸಿಕ್ಕಮೇಲೆ ಮೃತ ದಂಪತಿ ನ್ಯೂಯಾರ್ಕ್​ನಿಂದ ಅಮೆರಿಕಕ್ಕೆ ತೆರಳಿದ್ದರು ಎನ್ನಲಾಗಿದ್ದು, ಈ ದಂಪತಿಗೆ ವಿಶ್ವ ಸುತ್ತುವ ಕನಸಿತ್ತು ಎಂಬುದನ್ನು ಅವರೇ ‘Holidays and HappilyEverAfters’ ಎಂಬ ಬ್ಲಾಗ್​ನಲ್ಲಿ ಬರೆದಿಕೊಂಡಿದ್ದಾರೆ.

      ದಂಪತಿ ಪ್ರಪಾತಕ್ಕೆ ಬಿದ್ದಿರುವುದರ ಕುರಿತು ನಮಗಿನ್ನೂ ಕಾರಣ ತಿಳಿದು ಬಂದಿಲ್ಲ. ಘಟನೆ ಹೇಗೆ ಸಂಭವಿಸಿತು ಎಂಬುದನ್ನು ಇನ್ನೂ ಅರ್ಥೈಸಿಕೊಳ್ಳುತ್ತಿದ್ದೇವೆ. ಸದ್ಯದ ಪರಿಸ್ಥಿತಿ ನೋಡಿದರೆ ಈ ಕುರಿತು ಸ್ಪಷ್ಟ ಮಾಹಿತಿ ಸಿಗುವುದಿಲ್ಲ ಎಂದೆನಿಸುತ್ತದೆ. ಆದರೆ ಇದೊಂದು ದುರಂತ ಅಂತ್ಯ ಎಂದು ನ್ಯಾಷನಲ್​ ಪಾರ್ಕ್​ನ ವಕ್ತಾರ ಜೇಮ್​ ರಿಚರ್ಡ್​ ತಿಳಿಸಿದ್ದಾರೆ.

      ವಿಷ್ಣು ವಿಶ್ವನಾಥ್ ಅವರು ಸಿಸ್ಕೋ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಪತಿ-ಪತ್ನಿ ಇಬ್ಬರೂ ಒಂದೇ ಕಾಲೇಜಿನಲ್ಲಿ ಓದಿ ಸಾಫ್ಟ್ ವೇರ್ ಎಂಜಿನಿಯರ್ ಗಳಾಗಿದ್ದರು. ದಂಪತಿಯ ಸಾವಿಗೆ ಅವರು ಓದುತ್ತಿದ್ದ ಚೆಂಗನ್ನೂರ್ ಕಾಲೇಜ್ ಆಫ್ ಇಂಜಿನಿಯರಿಂಗ್ ವಿಷಾದ ವ್ಯಕ್ತಪಡಿಸಿದ್ದು, ಅವರ ಆತ್ಮಕ್ಕೆ ಶಾಂತಿ ಕೋರಿದೆ. 

 

 

 

(Visited 61 times, 1 visits today)

Related posts