BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
  • ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ
  • ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ
  • ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ
  • ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ
  • ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ
  • ೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ
  • ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪ್ರತಿದಿನ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ಲೋಕ್ ಅದಾಲತ್
Trending

ಪ್ರತಿದಿನ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ಲೋಕ್ ಅದಾಲತ್

By News Desk BenkiyabaleUpdated:November 19, 2020 6:56 pm

ತುಮಕೂರು:

      ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳ ಸಹಯೋಗದಲ್ಲಿ ಡಿಸೆಂಬರ್ 19ರಂದು “ಬೃಹತ್ ಲೋಕ್ ಅದಾಲತ್” (ಜನತಾ ನ್ಯಾಯಾಲಯ)ಅನ್ನು ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಎಸ್.ಸಂಗ್ರೇಶಿ ತಿಳಿಸಿದರು.

      ನ್ಯಾಯಾಲಯ ಸಭಾಂಗಣದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಈ ಬೃಹತ್ ಲೋಕ್ ಅದಾಲತ್ ಮೂಲಕ ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ/ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಅತೀ ಶೀಘ್ರವಾಗಿ ಇತ್ಯರ್ಥಗೊಳಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ. ಪ್ರತಿದಿನ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳನ್ನು ನಡೆಸಲಾಗುತ್ತಿದ್ದು, ಸಾರ್ವಜನಿಕರು ಈ ಅದಾಲತ್‍ನ ಸದುಪಯೋಗ ಪಡೆಯಬೇಕೆಂದು ಅವರು ಮನವಿ ಮಾಡಿದರು.

      ಸರ್ವರಿಗೂ ನ್ಯಾಯ ಎಂಬುದು ಭಾರತದ ಕಾನೂನು ಸೇವೆಗಳ ಧ್ಯೇಯವಾಗಿದೆ. ಯಾವೊಬ್ಬ ಪ್ರಜೆಯು ತನ್ನ ಆರ್ಥಿಕ ಅಥವಾ ಇತರೆ ದೌರ್ಬಲ್ಯಗಳ ಕಾರಣಗಳಿಂದಾಗಿ ನ್ಯಾಯ ಪಡೆಯುವುದರಿಂದ ವಂಚಿತನಾಗಬಾರದೆಂದು ಉಚಿತ ಮತ್ತು ಸಕ್ಷಮ ಕಾನೂನು ಸೇವೆಗಳನ್ನು ಸಮಾಜದ ದುರ್ಬಲ ವರ್ಗಗಳಿಗೆ ಒದಗಿಸುವ ಸಲುವಾಗಿ ಜನತಾ ನ್ಯಾಯಾಲಯಗಳನ್ನು ವ್ಯವಸ್ಥೆಗೊಳಿಸಲು ಹಾಗೂ ಸಮಾನ ಅವಕಾಶಗಳ ಆಧಾರದ ಮೇಲೆ ನ್ಯಾಯಾಂಗ ವ್ಯವಸ್ಥೆ ಕಾರ್ಯ ನಿರ್ವಹಿಸಿ ನ್ಯಾಯ ಒದಗಿಸುವ ಉದ್ದೇಶದಿಂದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸ್ಥಾಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅದಾಲತ್‍ಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.

      ಜನಸಾಮಾನ್ಯರಿಗೆ ಅತೀ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ದೊರಕಿಸುವುದು ಈ ಜನತಾ ನ್ಯಾಯಾಲಯದ ಉದ್ದೇಶವಾಗಿದೆ. ಡಿಸೆಂಬರ್ 19ರಂದು ಹಮ್ಮಿಕೊಂಡಿರುವ ಸದರಿ ಬೃಹತ್ ಲೋಕ್ ಅದಾಲತ್‍ನಲ್ಲಿ ಎಲ್ಲಾ ರೀತಿಯ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಈ ಜನತಾ ನ್ಯಾಯಾಲಯವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿಗಳು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ ಹಮ್ಮಿಕೊಳ್ಳಲಾಗುತ್ತದೆ.

      ಅದಾಲತ್‍ನಲ್ಲಿ ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ (Excluding non-compoundable)ಗಳು, ಇತರೆ ಪ್ರಕರಣ(ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಹಾಗೂ ಇತರೆ ಸಿವಿಲ್ ಪ್ರಕರಣ)ಗಳನ್ನು ಇತ್ಯರ್ಥಪಡಿಸಲಾಗುವುದು.  

(Visited 9 times, 1 visits today)
Previous Articleನ.26 : ರೈತ – ಕಾರ್ಮಿಕ ಮಹಾ ಮುಷ್ಕರಕ್ಕೆ ಜೆಸಿಟಿಯು ಜಿಲ್ಲಾ ಸಮಾವೇಶ
Next Article ಬಿಎಸ್‍ವೈ ಬರಿಗೈಯಲ್ಲಿ ವಾಪಸ್ಸಾಗಿರುವುದು ಸಿ.ಎಂ.ಬದಲಾವಣೆ ಮುನ್ಸೂಚನೆ
News Desk Benkiyabale

Related Posts

ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

June 13, 2026 5:26 pm news

ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ

June 13, 2026 5:23 pm ಇತರೆ ಸುದ್ಧಿಗಳು

ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ

June 13, 2026 5:19 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು

ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

June 13, 2026 5:26 pm

ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ

June 13, 2026 5:23 pm

ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ

June 13, 2026 5:19 pm

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm
Our Youtube Channel
Our Picks

ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

June 13, 2026 5:26 pm

ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ

June 13, 2026 5:23 pm

ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ

June 13, 2026 5:19 pm

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

By News Desk BenkiyabaleJune 13, 2026 5:26 pm

ತುರುವೇಕೆರೆ: ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪಟ್ಟಣದ ಬೆಸ್ಕಾಂ ಇಲಾಕೆ ಸಿಬ್ಬಂದಿಗಳು, ಗುತ್ತಿಗೆದಾರ, ಜಿವಿ.ಪಿ ಸಿಬ್ಬಂದಿಗಳು ಬೆಸ್ಕಾಂ ಮುಂಭಾಗದಲ್ಲಿ ಶುಕ್ರವಾರ…

ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ

June 13, 2026 5:23 pm

ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ

June 13, 2026 5:19 pm

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.