BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮರಾಠ ಪ್ರಾಧಿಕಾರ ಕೈ ಬಿಡಲು ಆಗ್ರಹಿಸಿ ಜ.9 ರಂದು ರೈಲು ಬಂದ್ ಚಳವಳಿ
Trending

ಮರಾಠ ಪ್ರಾಧಿಕಾರ ಕೈ ಬಿಡಲು ಆಗ್ರಹಿಸಿ ಜ.9 ರಂದು ರೈಲು ಬಂದ್ ಚಳವಳಿ

By News Desk BenkiyabaleUpdated:December 28, 2020 7:08 pm

ತುಮಕೂರು : 

      ರಾಜ್ಯದಲ್ಲಿ ಮರಾಠ ಪ್ರಾಧಿಕಾರ ರಚನೆ ಮಾಡಿರುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿ ಕನ್ನಡ ಒಕ್ಕೂಟದ ವತಿಯಿಂದ ಜ. 9 ರಂದು ರಾಜ್ಯಾದ್ಯಂತ ರೈಲು ಬಂದ್ ಚಳವಳಿ ಹಮ್ಮಿಕೊಂಡಿರುವುದಾಗಿ ವಾಟಾಳ್ ನಾಗರಾಜ್ ತಿಳಿಸಿದರು.

      ರಾಜ್ಯದಲ್ಲಿ ಮರಾಠ ಪ್ರಾಧಿಕಾರವನ್ನು ರಚನೆ ಮಾಡಿರುವ ಸರ್ಕಾರ ಹಿಂದಕ್ಕೆ ಪಡೆಯುವ ಸೂಚನೆಯನ್ನು ತೋರಿಸುತ್ತಿಲ್ಲ. ಹೀಗಾಗಿ ರಾಜ್ಯದ ಎಲ್ಲ ಕಡೆ ಚಳವಳಿ ನಡೆಸಲಾಗುತ್ತಿದೆ ಎಂದರು.

     ನಗರದ ರೈಲ್ವೆ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ. 9 ರಂದು ರಾಜ್ಯದ 500 ಸ್ಥಳಗಳಲ್ಲಿ ರೈಲು ಸಂಚಾರ ಬಂದ್ ಮಾಡಿ ರೈಲ್ವೆ ಹಳಿಗಳ ಮೇಲೆ ಕುಳಿತು ಸತ್ಯಾಗ್ರಹ ನಡೆಸುವುದಾಗಿ ಹೇಳಿದರು.

      ಜ. 9 ರಂದು ರೈಲುಗಳನ್ನು ಓಡಿಸುವಾಗ ಎಚ್ಚರದಿಂದ ಓಡಿಸಬೇಕು. ಈಗ ನಿಗದಿಪಡಿಸಿರುವ 500 ಸ್ಥಳಗಳು ಮುಂದೆ 1 ಸಾವಿರ ಸ್ಥಳಗಳಾಗಬಹುದು. ಹಾಗಾಗಿ ಅಂದು ರೈಲುಗಳನ್ನು ಚಾಲಕರು ಎಚ್ಚರಿಕೆಯಿಂದ ಓಡಿಸಬೇಕು ಎಂದು ಅವರು ಒತ್ತಾಯಿಸಿದರು.

      ಮರಾಠ ಪ್ರಾಧಿಕಾರ ರಚನೆ ವಿಚಾರದಲ್ಲಿ ರಾಜ್ಯ ಸರ್ಕಾರ ತನ್ನ ದ್ವಂದ್ವ ನೀತಿಯನ್ನು ಕೈ ಬಿಡಬೇಕು. ಮರಾಠ ಪ್ರಾಧಿಕಾರವನ್ನು ರಚನೆಯಿಂದ ಕನ್ನಡಿಗರಿಗೆ ಭಾರೀ ಅಪಾಯ ಇದೆ ಎಂದರು.

      ರಾಜ್ಯದ ಬೆಳಗಾವಿ, ಖಾನಾಪುರ, ಕಾರವಾರ ಇವೆಲ್ಲವನ್ನು ಮಹಾರಾಷ್ಟ್ರಕ್ಕೆ ಸೇರಿಸಲು ಸುಪ್ರೀಂ ಕೋರ್ಟ್‍ನಲ್ಲಿ ದಾವೆ ಹೂಡಲಾಗಿದೆ. ಅವರು ನಮ್ಮ ಮೇಲೆ ದಾಳಿ ಆಗಾಗ್ಗೆ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬೆಳಗಾವಿ ಭಾಗವನ್ನು ಬಿಟ್ಟು ಕೊಡುವುದಿಲ್ಲ ಎಂದರು.

      ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಪ್ರಾಧಿಕಾರ ರಚನೆ ಮಾಡುವಾಗ ಯಾವುದೇ ಚಿಂತನೆ ಮಾಡದೆ, ಶಾಸನ ಸಭೆಯಲ್ಲೂ ಚರ್ಚೆ ಮಾಡದೆ, ಮಂತ್ರಿ ಮಂಡಲದಲ್ಲೂ ಚರ್ಚಿಸದೆ ತಾವೇ ನಿರ್ಧಾರ ಕೈಗೊಂಡು ಪ್ರಾಧಿಕಾರ ರಚನೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಪರಭಾಷೆಯ ಪ್ರಾಧಿಕಾರ ಮಾಡಿ ಮಂತ್ರಿ ಸ್ಥಾನಮಾನ ಕೊಡುತ್ತಿರುವುದು ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲು. ಯಾವ ಮುಖ್ಯಮಂತ್ರಿಗಳು ಇಂಥ ಕೆಲಸವನ್ನು ಮಾಡಿಲ್ಲ. ಈ ಮುಖ್ಯಮಂತ್ರಿಗಳಿಗೆ ಗಡಿನಾಡ ಬಗ್ಗೆ ಚಿಂತನೆ ಇಲ್ಲ, ಕನ್ನಡ ಬೆಳೆಸುವ ಕಾಳಜಿ ಇಲ್ಲ, ಪ್ರಾಮಾಣಿಕತೆಯೂ ಇಲ್ಲ ಎಂದು ಹರಿಹಾಯ್ದರು.

      ಜ. 9 ರಂದು ರಾಜ್ಯದಾದ್ಯಂತ ರೈಲು ಬಂದ್ ಮಾಡಿ ಹೋರಾಟ ನಡೆಸುವ ಜತೆಗೆ ಬೆಳಗಾವಿಯಲ್ಲಿ ಕನ್ನಡ ಧ್ವಜವನ್ನು ಹಾರಿಸಲು ಕನ್ನಡಪರ ಸಂಘಟನೆಗಳು ಸಿದ್ದಗೊಂಡಿವೆ. ಕನ್ನಡದ ಅಸ್ತಿತ್ವಕ್ಕಾಗಿ ಹೋರಾಟ ಅನಿವಾರ್ಯ, ನಮ್ಮನ್ನು ಜೈಲಿಗೆ ಹಾಕಿದರೂ ಚಿಂತೆಯಿಲ್ಲ ಹೋರಾಟ ಮಾಡಿಯೇ ತೀರುತ್ತೇವೆ ಎಂದರು.

      ರಾಜ್ಯ ಸರ್ಕಾರದ ಅಧಿಕಾರಿಗಳಲ್ಲಿ ಹೊಂದಾಣಿಕೆ ಇಲ್ಲ ಎಂಬುದಕ್ಕೆ ಇಬ್ಬರು ಐಪಿಎಸ್ ಅಧಿಕಾರಿಗಳು ತಮಗೆ ಮನ ಬಂದಂತೆ ಕೆಸರೆರಚಾಟ, ಜಟಾಪಟಿ ನಡೆಸುತ್ತಿರುವುದೇ ಸಾಕ್ಷಿಯಾಗಿದೆ. ನಿರ್ಭಯ ನಿಧಿ ಟೆಂಡರ್‍ಗೆ ಸಂಬಂಧಿಸಿದಂತೆ ಅವ್ಯವಹಾರ ನಡೆದಿದೆ ಒಬ್ಬರಿಗೊಬ್ಬರು ಆರೋಪ-ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದಾರೆ. ಈ ವಿಚಾರದಲ್ಲಿ ಮುಖ್ಯ ಕಾರ್ಯದರ್ಶಿ ಮಾತಿಗೂ ಬೆಲೆ ಇಲ್ಲ ಎಂದರು.

    ನಿರ್ಭಯಾ ನಿಧಿ ಯೋಜನೆಗೆ 612 ಕೋಟಿ ಅವಶ್ಯಕತೆ ಇಲ್ಲ. ನಿರ್ಭಯ ಎನ್ನುವ ಹೆಸರಿನಲ್ಲಿ ಲೂಟಿ ಹೊಡೆಯಲು ಸಂಚು ನಡೆದಿದೆ ಎಂದು ಅವರು ದೂರಿದರು.

       ಟ್ರಾಫಿಕ್‍ಗಳಲ್ಲೂ ಪೊಲೀಸರಂತೆ ಗೊಂಬೆ ನಿಲ್ಲಿಸಲಾಗಿತ್ತು. ಇದಕ್ಕಾಗಿ ಕೋಟಿ ಕೋಟಿ ಖರ್ಚಾಗಿತ್ತು. ಆದರೆ ಈಗ ಆ ಗೊಂಬೆಗಳೇ ಇಲ್ಲ ಎಂದರು.  ಪೊಲೀಸರ ಹಿತರಕ್ಷಣೆಗಾಗಿ ಔರಾದ್‍ಕರ್ ವರದಿಯನ್ನು ಕೂಡಲೇ ಜಾರಿ ಮಾಡಬೇಕು. ಪೊಲೀಸರ ವಾಸದ ಮನೆಗಳು ಮೋರಿಯಾಗಿವೆ. ಅದನ್ನು ಸರಿಪಡಿಸಿ ಅನುಕೂಲ ಕಲ್ಪಿಸಬೇಕು ಎಂದ ಅವರು ಜನವರಿ ಅಂತ್ಯದವರೆಗೂ ಕಾಯುತ್ತೇವೆ. ಅಷ್ಟರೊಳಗೆ ಔರಾದ್‍ಕರ್ ವರದಿ ಜಾರಿ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

(Visited 16 times, 1 visits today)
Previous Articleಹುಳಿಯಾರಿನಲ್ಲಿ ಅವರೆಕಾಯಿ ಮಾರಾಟ ಜೋರು
Next Article ಗ್ರಾಮ ಪಂಚಾಯಿತಿ ಚುನಾವಣೆ : ಇಂದು ಮತ ಎಣಿಕೆ
News Desk Benkiyabale

Related Posts

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm news

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm news

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm news
ತಾಜಾ ಸುದ್ಧಿಗಳು

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm
Our Youtube Channel
Our Picks

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

By News Desk BenkiyabaleJune 22, 2026 5:23 pm

ತುಮಕೂರು: ರೈಲ್ವೆ ಇಲಾಖೆಯ ಕನ್ನಡ ಕಡೆಗಣನೆ ಮುಂದುವರೆದಿದೆ. ಈ ತಿಂಗಳ ೨೫ರಂದು ಕರ್ನಾಟಕದಲ್ಲಿಯೇ ನಡೆಯುವ ನೈರುತ್ಯ ರೈಲ್ವೆಯ ಗೂಡ್ಸ್ ಟ್ರೇನ್…

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.