BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
  • ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್
  • ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ
  • ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ
  • ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೋವಿಡ್ ಮಾರ್ಗಸೂಚಿ ಅನುಸರಿಸಿ ತರಗತಿ ಆರಂಭಿಸಿ: ಡಿಸಿ
Trending

ಕೋವಿಡ್ ಮಾರ್ಗಸೂಚಿ ಅನುಸರಿಸಿ ತರಗತಿ ಆರಂಭಿಸಿ: ಡಿಸಿ

By News Desk BenkiyabaleUpdated:December 29, 2020 6:41 pm

ತುಮಕೂರು : 

      ಕೋವಿಡ್-19 ಮಾರ್ಗಸೂಚಿಯನ್ವಯ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು 6 ರಿಂದ 9ನೇ ತರಗತಿಗಳಿಗೆ ವಿದ್ಯಾಗಮ ಹಾಗೂ 10ನೇ ಮತ್ತು 12ನೇ ತರಗತಿಗಳನ್ನು ಜನವರಿ 1ರಿಂದ ಪ್ರಾರಂಭ ಮಾಡಬೇಕೆಂದು ಡಿಡಿಪಿಐ ಹಾಗೂ ಬಿಇಓಗಳಿಗೆ ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್ ಅವರು ಸೂಚಿಸಿದರು.

       ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಶಾಲಾ ತರಗತಿಗಳ ಪ್ರಾರಂಭಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಮಿತಿಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಶಾಲೆ ಪ್ರಾರಂಭಕ್ಕೆ ಮುನ್ನ ಪೋಷಕರ ಸಭೆ ನಡೆಸುವ ಮೂಲಕ ಕೋವಿಡ್-19ರ ಹಿನ್ನಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳು ಶಾಲೆಗೆ ಹಾಜರಾಗುವ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವ ಬಗ್ಗೆ ಮತ್ತು ಸ್ಯಾನಿಟೈಸ್ ಮಾಡುವ ಬಗ್ಗೆ ಮತ್ತು ಆಗಿಂದಾಗ್ಗೆ ಲಿಕ್ಟಿಡ್ ಸೋಪಿನಲ್ಲಿ ಕೈತೊಳೆಯುವ ಬಗ್ಗೆ ಸೂಕ್ತ ಮಾರ್ಗದರ್ಶನವನ್ನು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತಿಳಿಸಬೇಕು ಎಂದರು.

      ವಿದ್ಯಾರ್ಥಿಗಳಲ್ಲಿ ಕೆಮ್ಮು, ನೆಗಡಿ, ಸೀತ, ಜ್ವರದಂತಹ ಲಕ್ಷಣಗಳು ಕಂಡುಬಂದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸದೇ ಮುಂಜಾಗ್ರತವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು.

      ಶಾಲೆಯಲ್ಲಿನ 10 ವಿದ್ಯಾರ್ಥಿಗಳಿಗೆ ಒಬ್ಬ ಶಿಕ್ಷಕರನ್ನು ಉಸ್ತುವಾರಿ ಶಿಕ್ಷಕರನ್ನಾಗಿ ನೇಮಿಸಬೇಕು. ಈ ಶಿಕ್ಷಕರು ಈ 10 ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಸಂಪೂರ್ಣ ನಿಗಾ ಇಡುವ ಜವಾಬ್ದಾರಿಯನ್ನು ನಿರ್ವಹಿಸಬೇಕು. ಯಾವುದೇ ವಿದ್ಯಾರ್ಥಿಯನ್ನು ಬಲವಂತವಾಗಿ ಶಾಲೆಗೆ ಬರುವಂತೆ ಒತ್ತಾಯಿಸಬಾರದು. ವಿದ್ಯಾರ್ಥಿಗಳು ಶಾಲೆಗೆ ಬರುವ ಬಗ್ಗೆ ಪೋಷಕರ ಒಪ್ಪಿಗೆ ಪತ್ರವನ್ನು ತರಬೇಕಿದೆ ಎಂದು ಅವರು ನಿರ್ದೇಶನ ನೀಡಿದರು.

      ಶಿಕ್ಷಕರುಗಳು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಕೋವಿಡ್-19 ಪರೀಕ್ಷೆ ಮಾಡಿಸಬೇಕು ಈ ಬಗ್ಗೆ ಒತ್ತಡವಾಗದಂತೆ ಕ್ರಮಬದ್ಧವಾದ ಯೋಜನೆ ರೂಪಿಸಿ ಪರೀಕ್ಷೆ ಬಗ್ಗೆ ಕ್ರಮವಹಿಸುವಂತೆ ಉಪನಿರ್ದೇಶಕರಿಗೆ ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.

      ಪ್ರಸ್ತುತ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದ ದಿನಗಳಲ್ಲಿ ಬೆಳಗಿನ ಅವಧಿಯಲ್ಲಿ ತರಗತಿಗಳು ನಡೆಯುತ್ತವೆ. 6ರಿಂದ 9ನೇ ತರಗತಿಯವರೆಗೆ ಪರ್ಯಾಯ ದಿನಗಳಲ್ಲಿ ವಿದ್ಯಾಗಮ ಕಾರ್ಯಕ್ರಮ ನಡೆಯಬೇಕು ಎಂದರಲ್ಲದೇ ಈ ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ನೀಡಿರುವ ಮಾರ್ಗದರ್ಶನದಂತೆ 15 ರಿಂದ 20 ವಿದ್ಯಾರ್ಥಿಗಳಿರುವಂತ ತಂಡಗಳನ್ನು ರಚಿಸಿಕೊಳ್ಳಲು ತಿಳಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಗುಂಪುಗೂಡಿಕೆ, ಆಟೋಟಗಳು, ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸದಂತೆ ಕ್ರಮವಹಿಸಲು ಉಪನಿರ್ದೇಶಕರಿಗೆ ಸೂಚಿಸಿದರು.

      ತರಗತಿಗೆ ಬರಲು ಇಚ್ಛಿಸದ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳನ್ನು ಮುಂದುವರೆಸಲು ಸೂಚಿಸಿದರಲ್ಲದೇ ಶಾಲೆ ಪ್ರಾರಂಭದ ನಂತರ ತಾಲ್ಲೂಕು ಹಂತದ ವಿವಿಧ ಅಧಿಕಾರಿಗಳ ತಂಡ ರಚಿಸಿ ಸದರಿ ತಂಡಗಳು ಶಾಲೆಗಳಿಗೆ ಭೇಟಿ ನೀಡಿ ಶಾಲೆಗಳಲ್ಲಿ ಕೋವಿಡ್-19ರ ಮುಂಜಾಗ್ರತ ಕ್ರಮಗಳನ್ನು ಅನುಸರಿಸುತ್ತಿರುವ ಬಗ್ಗೆ ವರದಿ ತರಿಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಿಗೆ ತಿಳಿಸಿದರು.

       ನಗರ ಮತ್ತು ಗ್ರಾಮೀಣ ಭಾಗದ ಎಲ್ಲಾ ಶಾಲೆಗಳಲ್ಲಿ ಸ್ಯಾನಿಟೈಸ್ ಮಾಡುವ ಬಗ್ಗೆ ಸಭೆಯಲ್ಲಿದ್ದ ನಗರಸಭೆಯ ಅಧಿಕಾರಿಗಳಿಗೆ ಸೂಚಿಸಿದರು. ಶಾಲೆಗಳ ಶೌಚಾಲಯಗಳಲ್ಲಿ ನೀರಿನ ವ್ಯವಸ್ಥೆಯನ್ನು ಮಾಡಬೇಕು. 1ರಿಂದ 5ನೇ ತರಗತಿಯವರೆಗಿನ ವಿದ್ಯಾರ್ಥಿಗಳನ್ನು ಮುಂದಿನ ಸೂಚನೆವರೆವಿಗೂ ಶಾಲೆಗಳಿಗೆ ಕರೆಸಬಾರದು. ಖಾಸಗಿ ಶಾಲೆಯ ಬಸ್ಸುಗಳಲ್ಲಿ ಬಸ್ಸು ಸಾಮಥ್ರ್ಯದ ಶೇ.50ರಷ್ಟು ವಿದ್ಯಾರ್ಥಿಗಳನ್ನು ಮಾತ್ರ ಕರೆತರಬೇಕು. ಬಸ್ಸುಗಳನ್ನು ಸ್ಯಾನಿಟೈಸ್ ಮಾಡಬೇಕು. ಶಾಲೆಗಳಲ್ಲಿ ಪಲ್ಸ್ ಆಕ್ಸಿಮೀಟರ್ ಮತ್ತು ಥರ್ಮಲ್ ಸ್ಕ್ಯಾನರ್‍ಗಳನ್ನು ಖರೀದಿಸಲು ಕ್ರಮವಹಿಸುವಂತೆ ಅವರು ಸೂಚಿಸಿದರು.

      ಕೋವಿಡ್-19ರ ಹಿನ್ನಲೆಯಲ್ಲಿ ಇಲಾಖೆಯು ನೀಡಿರುವ ಎಸ್.ಓ.ಪಿ.ಯನ್ನು ಆಧರಿಸಿ ಅಗತ್ಯ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಎಚ್ಚರಿಕೆ ವಹಿಸುವಂತೆ ಅವರು ತಿಳಿಸಿದರು.

      ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ, ಡಿಡಿಪಿಐಗಳಾದ ರೇವಣ್ಣ ಸಿದ್ಧಪ್ಪ, ಸಿ.ನಂಜಯ್ಯ, ಸಮಾಜ ಕಲ್ಯಾಣ ಇಲಾಖೆಯ ಪ್ರೇಮ್‍ನಾಥ್, ಡಿಡಿಪಿಯು ನರಸಿಂಹಮೂರ್ತಿ, ಎಲ್ಲಾ ತಾಲೂಕು ಬಿಇಒಗಳು ಸೇರಿದಂತೆ ಮತ್ತಿತರು ಭಾಗವಹಿಸಿದ್ದರು.

 

(Visited 8 times, 1 visits today)
Previous Articleಹೆಚ್ಚಿದ ಅಪರಾಧ ಕೃತ್ಯದಿಂದ ಗುಬ್ಬಿ ನಾಗರೀಕರಲ್ಲಿ ಆತಂಕ
Next Article 9 ವರ್ಷಗಳಿಂದ ಸಂಘ-ಸಮಾಜದ ಅಭಿವೃದ್ಧಿಗೆ ದುಡಿಯುತ್ತಿದ್ದೇನೆ : ಟಿ.ಆರ್.ಸುರೇಶ್
News Desk Benkiyabale

Related Posts

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm news
ತಾಜಾ ಸುದ್ಧಿಗಳು
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
news

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm
news

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
news

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
news

ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ

September 17, 2026 5:39 pm
Our Youtube Channel
Our Picks

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm

ತುಮಕೂರು ದಸರಾ-ಸನ್ಮಾನಕ್ಕೆ ಸ್ಥಳೀಯ ಉತ್ಪನ್ನಗಳ ಖರೀದಿಗೆ ಆದ್ಯತೆ: ಸೋನಿಯಾ ವರ್ಣೇಕರ್

September 18, 2026 5:33 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

By News Desk BenkiyabaleSeptember 18, 2026 5:39 pm

ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಫ್‌ಎಸ್ ಹಾಗೂ ಭಾರತೀಯ ಮೀಸಲು ಪಡೆಯ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ…

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm

ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ

September 18, 2026 5:36 pm

ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ

September 18, 2026 5:34 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.