BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
  • ಕುಡಿಯುವ ನೀರಿನ ಅಸಮರ್ಪಕ ಸರಬರಾಜು
  • ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ
  • ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ
  • ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ
  • ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ
  • ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ
  • ವೈಭವದಿಂದ ನಡೆದ ಕಳಸೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಾರ್ಚ್ 27ರಂದು ಬೃಹತ್ ಲೋಕ್ ಅದಾಲತ್
Trending

ಮಾರ್ಚ್ 27ರಂದು ಬೃಹತ್ ಲೋಕ್ ಅದಾಲತ್

By News Desk BenkiyabaleUpdated:February 22, 2021 7:51 pm

ತುಮಕೂರು  :

      ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿಗಳು ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ 2021ರ ಮಾರ್ಚ್ 27ರಂದು ಬೃಹತ್ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ರಾಘವೇಂದ್ರ ಶೆಟ್ಟಿಗಾರ್ ಅವರು ತಿಳಿಸಿದರು.

      ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಹೊಸ ನ್ಯಾಯಾಲಯದ ಕಟ್ಟಡದಲ್ಲಿಂದು ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಸಾಮಾನ್ಯರಿಗೆ ತ್ವರಿತ ಹಾಗೂ ವೆಚ್ಚವಿಲ್ಲದೆ ರಾಜೀ ಸಂಧಾನದ ಮೂಲಕ ವ್ಯಾಜ್ಯ ಇತ್ಯರ್ಥಗೊಳಿಸಿ ನ್ಯಾಯ ದೊರಕಿಸಲು ಜನತಾ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಅದರಂತೆ ಮಾರ್ಚ್ 27ರಂದು ಹಮ್ಮಿಕೊಂಡಿರುವ ಬೃಹತ್ ಲೋಕ್ ಅದಾಲತ್‍ನಲ್ಲಿ ಎಲ್ಲಾ ರೀತಿಯ ರಾಜಿಯಾಗಬಹುದಾದ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಈ ಬೃಹತ್ ಲೋಕ್ ಅದಾಲತ್‍ನಲ್ಲಿ ಅತೀ ಶೀಘ್ರವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಪ್ರತಿದಿನ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬೃಹತ್ ಲೋಕ್ ಅದಾಲತ್ ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠೆಕ್ ಗಳು ನಡೆಯುತ್ತಲಿವೆ. ಕೋವಿಡ್ 19 ಸಾಂಕ್ರಾಮಿಕದ ಕಾರಣ ರಾಜೀ ಮಾತುಕತೆಯನ್ನು ಎಲೆಕ್ಟ್ರಾನಿಕ್ ವಿಧಾನಗಳ (ವಿಡಿಯೋ ಕಾನ್ಪರೆನ್ಸಿಂಗ್, ವಾಟ್ಸ್ಆ್ಯಪ್ ವಿಡಿಯೋ ಕಾಲ್) ಮೂಲಕವೂ ಮಾಡಲಾಗುತ್ತಿದೆ ಎಂದರು.

      ವ್ಯಾಜ್ಯಪೂರ್ವ ಪ್ರಕರಣಗಳಾದ ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು ಸೇರಿದಂತೆ ರಾಜಿಯಾಗಬಲ್ಲ ಇತರೆ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದರು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯ ಪ್ರಕರಣಗಳು(ವಿಚ್ಛೇದನ ಪ್ರಕರಣ ಹೊರತುಪಡಿಸಿ), ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು(ಜಿಲ್ಲಾ ಹಾಗೂ ಉಚ್ಛ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ಮಾತ್ರ), ಸಿವಿಲ್ ಪ್ರಕರಣಗಳ(ಬಾಡಿಗೆ, ಅನುಭೋಗದ ಹಕ್ಕುಗಳು ನಿಬರ್ಂಧಕಾಜ್ಞೆ ದಾವೆಗಳು ಹಾಗೂ ಇತರೆ ದಾವೆಗಳು)ನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.

     ಮಾರ್ಚ್ 27ರಂದು ನಡೆಯುವ ಬೃಹತ್ ಲೋಕ್ ಅದಾಲತ್‍ನ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಮನವಿ ಮಾಡಿದ ಅವರು, ಹೈಕೋರ್ಟ್ ನೀಡುವ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಲಾಗುವುದು ಎಂದರು.

ಜಿಲ್ಲೆಯ ನ್ಯಾಯಾಲಯಗಳಲ್ಲಿ ಜನವರಿ ಅಂತ್ಯಕ್ಕೆ 46194 ಸಿವಿಲ್ ಹಾಗೂ 33314 ಕ್ರಿಮಿನಲ್ ಪ್ರಕರಣಗಳು ಸೇರಿ ಒಟ್ಟು 79508 ಪ್ರಕರಣಗಳು ಬಾಕಿ ಇವೆ. ಬಾಕಿ ಪ್ರಕರಣಗಳಲ್ಲಿ ಚೆಕ್, ಮೋಟಾರ್ ಅಪಘಾತ, ಎಂಎಂಡಿಆರ್, ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದ ದಾವೆಗಳು ಹೆಚ್ಚು ಇವೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಶಿಕ್ಷಣ ಇಲಾಖೆಯೊಂದಿಗೆ ಮಾತನಾಡಿ ಪೈಲೆಟ್ ಪ್ರಾಜೆಕ್ಟ್ ಮೂಲಕ ಗ್ರಾಮೀಣ ಭಾಗದಲ್ಲಿ 12368 ಜನನ ಪ್ರಮಾಣ ಪತ್ರಗಳ ವಿತರಣೆಗೆ ಕ್ರಮ ವಹಿಸಲಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಆರ್. ದೇವರಾಜು ಇದ್ದರು.

(Visited 19 times, 1 visits today)
Previous Articleಕೆ.ಸಿ.ಪಾಳ್ಯ ನೀರಿನ ಘಟಕ ದುರಸ್ಥಿ ಮಾಡಿ
Next Article ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ 6938341 ಮಾನವ ದಿನಗಳ ಸೃಜನೆ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm
ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm
ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm
ಇತರೆ ಸುದ್ಧಿಗಳು

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
ಇತರೆ ಸುದ್ಧಿಗಳು

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
ಇತರೆ ಸುದ್ಧಿಗಳು

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm
Our Youtube Channel
Our Picks

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

By News Desk BenkiyabaleFebruary 21, 2026 5:02 pm

ಪಾವಗಡ: ತುಮಕೂರಿನಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಪಾವಗಡ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ…

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.