BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
  • ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!
  • ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ
  • ೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ
  • ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ: ಸಮಸ್ಯೆ ಪರಿಹಾರಕ್ಕೆ ಕ್ರಮ
  • ಆರು ತಿಂಗಳ ಇಂಧನ ಬವಣೆಗೆ ಮುಕ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು ವಿ.ವಿಯ 14ನೇ ಘಟಿಕೋತ್ಸವ : 73 ವಿದ್ಯಾರ್ಥಿಗಳಿಗೆ 92 ಚಿನ್ನದ ಪದಕ
ಇತರೆ ಸುದ್ಧಿಗಳು

ತುಮಕೂರು ವಿ.ವಿಯ 14ನೇ ಘಟಿಕೋತ್ಸವ : 73 ವಿದ್ಯಾರ್ಥಿಗಳಿಗೆ 92 ಚಿನ್ನದ ಪದಕ

By News Desk BenkiyabaleUpdated:March 05, 2021 7:35 pm

ತುಮಕೂರು : 

     ತುಮಕೂರು ವಿಶ್ವವಿದ್ಯಾನಿಲಯದ 14ನೇ ವಾರ್ಷಿಕ ಘಟಿಕೋತ್ಸವದಲ್ಲಿ 73 ವಿದ್ಯಾರ್ಥಿಗಳಿಗೆ ಒಟ್ಟು 92 ಚಿನ್ನದ ಪದಕ, ಆರು ನಗದು ಬಹುಮಾನ ಹಾಗೂ 147 ಪಿಎಚ್‍ಡಿ ಪದವಿ ಹಾಗೂ 3 ಡಿಲಿಟ್ ಪದವಿ ಪ್ರದಾನ ಮಾಡಲಾಯಿತು.

      ತುಮಕೂರು ನಗರದ ವಿಶ್ವವಿದ್ಯಾನಿಲಯದ ಶ್ರೀ ಶ್ರೀ ಶ್ರೀ ಶಿವಕುಮಾರ ಸಭಾಂಗಣದಲ್ಲಿ ನಡೆದ ಘಟಿಕೋತ್ಸವದಲ್ಲಿ ಘನತೆವೆತ್ತ ರಾಜ್ಯಪಾಲ ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ವಾಜುಭಾಯಿ ವಾಲಾ ಅವರು, 73 ವಿದ್ಯಾರ್ಥಿಗಳಿಗೆ ಚಿನ್ನದ ಪದಕ, 147 ಪಿಎಚ್‍ಡಿ ಅಭ್ಯರ್ಥಿಗಳಿಗೆ ಮತ್ತು 3 ಡಿಲಿಟ್ ಪದವಿ ಪ್ರದಾನ ಹಾಗೂ ಸಾಮಾಜಿಕ ಸೇವಾ ಕ್ಷೇತ್ರದಲ್ಲಿನ ಕೊಡುಗೆಗಾಗಿ ಐ.ಎಸ್. ಪ್ರಸಾದ್ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದರು.

ಉದಾರ ಶಿಕ್ಷಣ ಪರಿಕಲ್ಪನೆಯಲ್ಲಿ ತುಮಕೂರು ವಿವಿಗೆ ವಿಶಿಷ್ಟ ಸ್ಥಾನ:

ತುಮಕೂರು ವಿಶ್ವವಿದ್ಯಾಲಯವು ರಾಷ್ಟ್ರೀಯ ಶಿಕ್ಷಣ ನೀತಿಯ ಉದಾರ ಶಿಕ್ಷಣ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸುವಲ್ಲಿ ವಿಶಿಷ್ಟ ಸ್ಥಾನ ಹೊಂದಿದೆ ಎಂದು ರಾಜಸ್ಥಾನ ಕೇಂದ್ರೀಯ ವಿಶ್ವವಿದ್ಯಾನಿಲಯದ ಕುಲಾಧಿಪತಿ, ಇಸ್ರೋ ಭಾರತ ಸರ್ಕಾರ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿ-2020 ಮತ್ತು ಕರ್ನಾಟಕ ಜ್ಞಾನ ಆಯೋಗದ ವಿಶ್ರಾಂತ ಅಧ್ಯಕ್ಷ ಡಾ. ಕೃಷ್ಣಸ್ವಾಮಿ ಕಸ್ತೂರಿರಂಗನ್ ತಿಳಿಸಿದರು.

     ತುಮಕೂರು ವಿಶ್ವವಿದ್ಯಾನಿಲಯದ 14ನೇ ಘಟಿಕೋತ್ಸವದ ತಮ್ಮ ಭಾಷಣದಲ್ಲಿ ಮಾತನಾಡಿದ ಅವರು, ರಾಷ್ಟ್ರ ನಿರ್ಮಾಣದ ಅಡಿಪಾಯಗಳಾಗಿರುವ ವಿಶ್ವವಿದ್ಯಾನಿಲಯಗಳು ಶೈಕ್ಷಣಿಕ ಸ್ವಾತಂತ್ರ್ಯ ಮತ್ತು ಸ್ಪೂರ್ತಿಯ ಚಿಲುಮೆಗಳನ್ನು ಸಂಕೇತಿಸುತ್ತವೆ. ಹೊಸ ಆಲೋಚನೆಗಳು ಮತ್ತು ಜ್ಞಾನವನ್ನು ಉತ್ಪಾದಿಸಲು ಮತ್ತು ಪ್ರಸಾರ ಮಾಡುವ ದೀರ್ಘಕಾಲಿಕ ಮೂಲಗಳಾಗಿ ಕಾರ್ಯನಿರ್ವಹಿಸುತ್ತವೆ. ಸಮಯ-ಪರೀಕ್ಷಿತ ವಿಧಾನಗಳು ಮತ್ತು ಮೌಲ್ಯ ವ್ಯವಸ್ಥೆಗಳೊಂದಿಗೆ ಕೇಂದ್ರ ಸ್ಥಾನ ಪಡೆದಿವೆ ಎಂದು ಹೇಳಿದರು.

      ತುಮಕೂರು ಜಿಲ್ಲೆ ಪ್ರಾಚೀನ ಭಾರತದ ಹೆಮ್ಮೆ ಮತ್ತು ಆಧುನಿಕ ಭಾರತದ ಭವಿಷ್ಯವನ್ನು ಪ್ರತಿನಿಧಿಸುತ್ತದೆ. ಪಶ್ಚಿಮದ ಗಂಗರು, ವಿಜಯನಗರದ ಅರಸರು ಹಾಗೂ ಮೈಸೂರಿನ ಒಡೆಯರ ಆಡಳಿತಕ್ಕೆ ಒಳಪಟ್ಟ ತುಮಕೂರು ಶ್ರೀಮಂತ ಸಾಂಸ್ಕøತಿಕ ಪರಂಪರೆಯನ್ನು ಹೊಂದಿದೆ ಎಂದರು.

      ಉನ್ನತ ಶಿಕ್ಷಣ ಸದಾ ಕ್ರಿಯಾತ್ಮಕ ಪ್ರಕ್ರಿಯೆಯಾಗಿದೆ. ಭಾರತದಲ್ಲಿ ಶಿಕ್ಷಣ ಗಮನಾರ್ಹ ರೀತಿಯಲ್ಲಿ ಬೆಳೆದಿದ್ದು, ಪ್ರಪಂಚದ ಅತಿದೊಡ್ಡ ವ್ಯವಸ್ಥೆಗಳಲ್ಲಿ ಒಂದಾಗಿದೆ. ಅತ್ಯಂತ ಕ್ರಿಯಾಶೀಲ ಮನಸ್ಸುಗಳ ಲಭ್ಯತೆಯಿಂದಾಗಿ ಮತ್ತು ಆತ್ಮವಿಶ್ವಾಸ ಪ್ರದರ್ಶಿಸುವ ಯುವಕರಿಂದಾಗಿ ಭಾರತ ಬಾಹ್ಯಾಕಾಶ ವಿಜ್ಞಾನದಲ್ಲಿ ಸರ್ವೋಚ್ಛ ಸ್ಥಾನದಲ್ಲಿದ್ದು, ಸಮರ್ಥ ಇಂಜಿನಿಯರ್ ಮತ್ತು ವಿಜ್ಞಾನಿಗಳನ್ನು ಉತ್ಪಾದಿಸುತ್ತಿದೆ. ಹೊಸ ಶಿಕ್ಷಣ ನೀತಿಯು ಭಾರತೀಯ ಭಾಷೆಗಳು, ಕಲೆ ಮತ್ತು ಸಂಸ್ಕøತಿಗಳನ್ನು ಪ್ರೋತ್ಸಾಹಿಸುವ ಕಾರ್ಯಕ್ಕೆ ವಿಶೇಷ ಆದ್ಯತೆಯನ್ನು ನೀಡುತ್ತದೆ. ಭಾರತವು ಕಲೆ ಮತ್ತು ಕೌಶಲ್ಯಗಳ ಮಿಳಿತವಾಗಿ ಸಾಹಿತ್ಯ, ಆಚಾರ, ಭಾಷೆ ಸೇರಿದಂತೆ ಪಾರಂಪರಿಕ ಇತಿಹಾಸ ಸಂಸ್ಕøತಿಯನ್ನು ಹೊಂದಿದೆ ಎಂದು ನುಡಿದರು.

      ಶಿಕ್ಷಣ ಒಂದೇ ಹೆಜ್ಜೆಯಲ್ಲಿ ಸಂಪೂರ್ಣಗೊಳ್ಳುವ ಪ್ರಕ್ರಿಯೆಯಾಗದೆ ವ್ಯಕ್ತಿತ್ವ ನಿರ್ಮಾಣಕ್ಕಾಗಿ ಸಮಗ್ರವಾಗಿರಬೇಕು. ಒಬ್ಬ ವಿದ್ಯಾವಂತ ಪ್ರಜೆಯಾಗಿ ತಮ್ಮ ಸಮಯದ ಒಂದಂಶವನ್ನಾದರೂ ಸಮಾಜಕ್ಕೆ ಮೀಸಲಾಗಿಡಬೇಕು. ನಿಮ್ಮ ಯಶಸ್ಸಿಗಾಗಿ ಮತ್ತು ಕಾಣುತ್ತಿರುವ ಕನಸುಗಳ ಸಾಧನೆಗಾಗಿ ನನ್ನ ಶುಭಾಶಯ ಬಯಸುತ್ತೇನೆ. ಭರವಸೆ, ಶ್ರದ್ಧೆ ಹಾಗೂ ದೃಢನಿರ್ಧಾರಗಳು ಭವಿಷ್ಯದ ಗುರಿ ಸಾಧಿಸುತ್ತವೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

     ವಿಶ್ವವಿದ್ಯಾನಿಲಯದ ಕುಲಪತಿ ಕರ್ನಲ್(ಪ್ರೊ.) ವೈ.ಎಸ್. ಸಿದ್ದೇಗೌಡ ವಾರ್ಷಿಕ ವರದಿ ಮಂಡಿಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದ ಘಟಿಕೋತ್ಸವದಲ್ಲಿ 9707 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದ್ದಾರೆ. ಇದರಲ್ಲಿ 1715 ಸ್ನಾತಕೋತ್ತರ, 7992 ಸ್ನಾತಕ ಹಾಗೂ 147 ಅಭ್ಯರ್ಥಿಗಳು ಪಿಎಚ್‍ಡಿ ಪದವಿ ಪಡೆದಿದ್ದು, ಒಟ್ಟು 73 ವಿದ್ಯಾರ್ಥಿಗಳು 92 ಚಿನ್ನದ ಪದಕಗಳನ್ನು ಹಾಗೂ ಆರು ನಗದು ಬಹುಮಾನಗಳನ್ನು ಪ್ರದಾನಮಾಡಲಾಗಿದೆ ಎಂದರು.

ಪ್ರಸಾದ್ ಐ.ಎಸ್. ಅವರಿಗೆ ಗೌರವ ಡಾಕ್ಟರೇಟ್:

      ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಆರೋಗ್ಯ, ಶೈಕ್ಷಣಿಕ ಹಾಗೂ ಯುವ ಸಬಲೀಕರಣ ಕ್ಷೇತ್ರಕ್ಕೆ ಸಲ್ಲಿಸಿದ ಕೊಡುಗೆಗಾಗಿ ಗೌರವ ಡಾಕ್ಟರೇಟ್ ಪಡೆದ ಐ.ಎಸ್. ಪ್ರಸಾದ್, ಕಿದ್ವಾಯಿ ಕ್ಯಾನ್ಸರ್ ಡ್ರಗ್ಸ್ ಫೌಂಡೇಶನ್‍ನ ಕಾರ್ಯನಿರ್ವಹಣ ಅಧ್ಯಕ್ಷರಾಗಿದ್ದರು. ಈ ಸಮಯದಲ್ಲಿ ಕ್ಯಾನ್ಸರ್ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಕೊಡಿಸುವ ಮೂಲಕ ಸುಮಾರು 36 ಕೋಟಿ ರೂ.ಗಳ ವೈದ್ಯಕೀಯ ವೆಚ್ಚ ಉಳಿತಾಯ ಮಾಡಿದ್ದಾರೆ. ಲಯನ್ಸ್ ಕ್ಲಬ್ ಆಫ್ ಬೆಂಗಳೂರು ವೆಸ್ಟ್ ಟ್ರಸ್ಟ್‍ನ ಗೌರವ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಇವರು ಬೆಂಗಳೂರಿನಲ್ಲಿ ಅನೇಕ ನೇತ್ರ ಚಿಕಿತ್ಸಾ ಆಸ್ಪತ್ರೆಗಳ ಸ್ಥಾಪನೆಗೆ ಕಾರಣರಾಗಿದ್ದು, ಟ್ರಸ್ಟ್ ಮೂಲಕ 1.50 ಲಕ್ಷಕ್ಕೂ ಅಧಿಕ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸುವಲ್ಲಿ ನೆರವಾಗಿದ್ದಾರೆ.

       ಘಟಿಕೋತ್ಸವದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ ಸೇರಿದಂತೆ ಸಿಂಡಿಕೇಟ್ ಸದಸ್ಯರು, ವಿಶ್ವವಿದ್ಯಾನಿಲಯದ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

(Visited 9 times, 1 visits today)
Previous Article60 ವರ್ಷದ ವ್ಯಕ್ತಿಗೆ ಸೊಂಟದ ಕೀಲು ಮರುಜೋಡಣೆ ಯಶಸ್ವಿ
Next Article ಹುಳಿಯಾರು ಕುಡಿಯುವ ನೀರಿನ ಘಟಕಗಳ ದುರಸ್ಥಿಗೆ ಡಿಸಿ ಸೂಚನೆ
News Desk Benkiyabale

Related Posts

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm news
ತಾಜಾ ಸುದ್ಧಿಗಳು
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm
news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm
news

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
news

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
news

೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ

July 20, 2026 5:26 pm
Our Youtube Channel
Our Picks

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

By News Desk BenkiyabaleJuly 21, 2026 5:46 pm

ತುಮಕುರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟಿಯ ಹೆದ್ದಾರಿ (ಎನ್‌ಹೆಚ್)-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿ, ಕೆಪಿಟಿಸಿಎಲ್ ವಿದ್ಯುತ್…

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.