BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ
  • ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವರ್ಷದ ಅಂತ್ಯದೊಳಗೆ ಎಲ್ಲರಿಗೂ ಲಸಿಕೆ: ಸಚಿವ ಡಾ||ಕೆ.ಸುಧಾಕರ್
Trending

ವರ್ಷದ ಅಂತ್ಯದೊಳಗೆ ಎಲ್ಲರಿಗೂ ಲಸಿಕೆ: ಸಚಿವ ಡಾ||ಕೆ.ಸುಧಾಕರ್

By News Desk BenkiyabaleUpdated:May 20, 2021 6:48 pm

ತುಮಕೂರು:

      ರಾಜ್ಯದ ಎಲ್ಲರಿಗೂ 2021ರ ವರ್ಷದ ಅಂತ್ಯದೊಳಗೆ ಕೋವಿಡ್ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.

      ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್-19 ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್ ಪೋರ್ಟಲ್‍ನಲ್ಲಿ ಯಾರು ಎಲ್ಲಿಯಾದರೂ ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬಹುದಾದ ವ್ಯವಸ್ಥೆಯಿರುವುದರಿಂದ ಬೆಂಗಳೂರಿಗರು ಅಕ್ಕಪಕ್ಕದ ನೆರೆಯ ಜಿಲ್ಲೆಯಲ್ಲಿ ಲಸಿಕೆ ಪಡೆಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಆಯಾ ಜಿಲ್ಲೆಯ ಜನರು ಜಿಲ್ಲೆಯಲ್ಲಿ ಮಾತ್ರ ಲಸಿಕೆ ಪಡೆಯುವಂತೆ ಮಾಡುವ ಸಲುವಾಗಿ ರಾಜ್ಯಮಟ್ಟದ ಪೋರ್ಟಲ್ ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

      ರಾಜ್ಯದಲ್ಲಿ 2015 ವೈದ್ಯರ ನೇಮಕಾತಿ ಆದೇಶ ಆಗಿದ್ದು, ನೇಮಕಾತಿ ಆದೆ ೀಶ ನೀಡಲಾಗುತ್ತಿದೆ. ತುಮಕೂರು ಜಿಲ್ಲೆಯಲ್ಲಿಯೂ ಖಾಲಿ ಇರುವ ಎಲ್ಲಾ ಹುದ್ದೆಗಳಿಗೆ ವೈದ್ಯರು ನೇಮಕಗೊಳ್ಳಲಿದ್ದಾರೆ. ಸೋಮವಾರದಿಂದ ಬುಧವಾರದೊಳಗೆ ನೇಮಕಗೊಂಡ ವೈದ್ಯರು ಸೇವೆಗೆ ಹಾಜರಾಗಲಿದ್ದಾರೆ. ಇದರಿಂದ ವೈದ್ಯರ ಕೊರತೆ ಸಮಸ್ಯೆ ಬಗೆಹರಿಯಲಿದೆ. ಇದರ ಜೊತೆಗೆ ಆರೋಗ್ಯ ಸಿಬ್ಬಂದಿಗಳನ್ನು ನೇಮಕ ಮಾಡಲಾಗುತ್ತಿದೆ ಎಂದು ಹೇಳಿದರು.

     ಆರೋಗ್ಯ ಇಲಾಖೆಯಿಂದ ಜಿಲ್ಲೆಗೆ 6 ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ನೀಡಲಾಗುವುದು. ಈಗಾಗಲೇ ಜಿಲ್ಲಾಸ್ಪತ್ರೆಗೆ ಬುಧವಾರ 25 ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗಿದ್ದು, ಕೋವಿಡ್ ಔಷಧಗಳನ್ನು ಅಗತ್ಯಕ್ಕಿಂತಲೂ ಹೆಚ್ಚುವರಿಯಾಗಿ ಪೂರೈಕೆ ಮಾಡಲಾಗುವುದು. ಸೋಂಕು ದೃಢಪಟ್ಟ ಸೋಂಕಿತನಿಗೆ 4-5 ಗಂಟೆಯೊಳಗೆ ಕೋವಿಡ್ ಮೆಡಿಕಲ್ ಕಿಟ್ ಅನ್ನು ತಲುಪಿಸಬೇಕು. ಪ್ರತಿ ತಾಲೂಕಿನಲ್ಲಿಯೂ ಶಾಸಕರು, ಅಧಿಕಾರಿಗಳು ಕ್ರಿಯಾಶೀಲರಾಗಿ ಪರಿಣಾಮಕಾರಿಯಾಗಿ ಸೋಂಕಿತರಿಗೆ ಮೊದಲನೆ ದಿನದಿಂದಲೇ ಆರೈಕೆ ಮಾಡಲು ಪ್ರಾರಂಭಿಸಬೇಕು. ಇದರಿಂದ ಸೋಂಕಿತರಿಗೆ ಗಂಭೀರ ಸಮಸ್ಯೆಗಳು ಉಂಟಾಗಲ್ಲ.
   

      ಸೋಂಕಿತರಿಗೆ ತಡವಾಗಿ ಚಿಕಿತ್ಸೆ ನೀಡಿದರೆ ಗಂಭೀರ ಸ್ಥಿತಿಗೆ ತಲುಪುತ್ತಾರೆ. ಹಾಗಾಗಿ ಪ್ರಾರಂಭದಿಂದಲೇ ಸೋಂಕಿತರಿಗೆ ಚಿಕಿತ್ಸೆ ನೀಡುವ ಕಾರ್ಯ ಪರಿಣಾಮಕಾರಿಯಾಗಿ ನಡೆಯಬೇಕು ಎಂದು ನಿರ್ದೇಶಿಸಿದರು.

ಮೂರನೇ ಅಲೆ ಕಡಿವಾಣಕ್ಕೆ ಆರೋಗ್ಯ ಇಲಾಖೆ ಮೂಲಭೂತ ಸೌಕರ್ಯಗಳನ್ನು ಹೆಚ್ಚು ಮಾಡಿಕೊಂಡು ಸಮರ್ಪಕವಾಗಿ ನಿಯಂತ್ರಿಸುವ ನಿಟ್ಟಿನಲ್ಲಿಯೂ ಕಾರ್ಯೋನ್ಮುಖವಾಗುತ್ತಿದೆ. ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಖಾಸಗಿ ಆಂಬುಲೆನ್ಸ್‍ಗಳಿಗೂ ದರ ನಿಗಧಿ ಮಾಡುವ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಶ್ರೀದೇವಿ ಮತ್ತು ಸಿದ್ಧಾರ್ಥ ಮೆಡಿಕಲ್ ಕಾಲೇಜು ಸೇರಿದಂತೆ ಎರಡೂ ಕಾಲೇಜುಗಳು ಕನಿಷ್ಟ 500 ಆಮ್ಲಜನಕ ಹಾಸಿಗೆಗಳನ್ನು ಹೆಚ್ಚು ಮಾಡಬೇಕು. ಅಂತಿಮ ವರ್ಷದ ನಸಿರ್ಂಗ್ ವಿದ್ಯಾರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಸೇವೆಗೆ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

      ಸರ್ಕಾರದ ಆದೇಶದಂತೆ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ 75% ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 50% ಹಾಸಿಗೆಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಸಂಬಂಧಿಸಿದ ಆರೋಗ್ಯಾಧಿಕಾರಿಗಳಿಗೆ ನಿರ್ದೇಶಿಸಿದರು.

       ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಬಿಇಎಲ್, ರೋಟರಿ, ವಿಪ್ರೋ ಸಂಸ್ಥೆಯವರು ಆಮ್ಲಜನಕ ಘಟಕ ಸ್ಥಾಪನೆಗೆ ಮುಂದೆ ಬಂದಿದ್ದಾರೆ. ಹಾಗಾಗಿ ಎಲ್ಲಾ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸ್ವಯಂ ಆಮ್ಲಜನಕ ಉತ್ಪಾದನೆ ಮಾಡಿಕೊಳ್ಳಲು ಅವಕಾಶ ಇದೆ. ಆದ್ದರಿಂದ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳಿಗು ಇನ್ನೂ 50 ಹೆಚ್ಚುವರಿ ಹಾಸಿಗೆಗಳ ವ್ಯವಸ್ಥೆ ಮಾಡಿಕೊಡಬೇಕು. ಅಲ್ಲದೆ, ಚಿಕ್ಕನಾಯಕನಹಳ್ಳಿ ಹಾಗೂ ಹುಳಿಯಾರಿಗೆ 50-100 ಹಾಸಿಗೆಗಳ ಸಮುದಾಯ ಆಸ್ಪತ್ರೆ ಕೊಡಬೇಕು. ಇದರಿಂದ ಮುಂಬರುವ ಕೋವಿಡ್ ಅಲೆಯಲ್ಲಿ ಪ್ರತಿ ತಾಲೂಕಿನಲ್ಲಿಯೂ 100 ಹಾಸಿಗೆಗಳ ವ್ಯವಸ್ಥೆಯಾಗಲಿದ್ದು, ಜಿಲ್ಲೆಯಲ್ಲಿ ಕೋವಿಡ್ ನಿಗ್ರಹವನ್ನು ಸಮರ್ಪಕವಾಗಿ ಮಾಡಬಹುದು ಎಂದು ಸಚಿವರಿಗೆ ಮನವಿ ಮಾಡಿದರು.
ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ ಅವರು, ಜಿಲ್ಲಾಸ್ಪತ್ರೆಯಲ್ಲಿನ ಸಿಟಿ ಸ್ಕ್ಯಾನ್ ವಾರಗಟ್ಟಲೆ ಕೆಲಸ ಮಾಡುತ್ತಿಲ್ಲ ಎಂಬ ಸಬೂಬು ಕೊಡಬಾರದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸುರೇಶ್ ಬಾಬು ಅವರಿಗೆ ಸೂಚಿಸಿದರು.

      ಜನರಲ್ ಬೆಡ್ ಮೇಲೆ ಚಿಕಿತ್ಸೆ ನೀಡಿ ಐಸಿಯು ಬೆಡ್ ಚಿಕಿತ್ಸೆಯ ಬಿಲ್ ಮಾಡಿದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕೈಗಾರಿಕೋದ್ಯಮಿಗಳು ಹಾಗೂ ಸಂಘ ಸಂಸ್ಥೆಗಳು 50 ಸಾವಿರ ಮಾಸ್ಕ್ ಮತ್ತು 5 ಸಾವಿರ ಸ್ಯಾನಿಟೈಸರ್, 500-600 ಪಲ್ಸ್ ಆಕ್ಸಿಮೀಟರ್ ದಾನ ನೀಡಿದ್ದು, ಗ್ರಾಮ ಮಟ್ಟದಲ್ಲಿ ಆಶಾ-ಅಂಗನವಾಡಿ ಕಾರ್ಯಕರ್ತೆಯರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

(Visited 13 times, 1 visits today)
Previous Articleಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ನಿರ್ವಹಣೆ ಕುರಿತು ಪರಿಶೀಲಿಸಿದ ಸಚಿವ ಡಾ.ಕೆ. ಸುಧಾಕರ್
Next Article ತುಮಕೂರು : ಮೂರನೇ ಅಲೆ ನಿಯಂತ್ರಣಕ್ಕೆ ಸಿದ್ಧತೆ ಆರಂಭಿಸಿ
News Desk Benkiyabale

Related Posts

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm ಕರ್ನಾಟಕ ಸುದ್ಧಿಗಳು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm ತುಮಕೂರು

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news
ತಾಜಾ ಸುದ್ಧಿಗಳು
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm
ತುಮಕೂರು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

By News Desk BenkiyabaleSeptember 11, 2026 4:32 pm

ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನದಡಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳ ವಿಲೇವಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು…

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.