BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ
  • ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ
  • ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ
  • ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ
  • ೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ
  • ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು
  • ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ
  • ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » 15 ದಿನಗಳಲ್ಲಿ ಸಹಜ ಸ್ಥಿತಿಗೆ ರಾಜ್ಯ : ಸಚಿವ ಜೆ.ಸಿ.ಮಧುಸ್ವಾಮಿ
Trending

15 ದಿನಗಳಲ್ಲಿ ಸಹಜ ಸ್ಥಿತಿಗೆ ರಾಜ್ಯ : ಸಚಿವ ಜೆ.ಸಿ.ಮಧುಸ್ವಾಮಿ

By News Desk BenkiyabaleUpdated:May 26, 2021 6:29 pm

ಹುಳಿಯಾರು:

ಲಾಕ್‍ಡೌನ್ ಪರಿಣಾಮ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಕ್ಷಿಣಿಸುತ್ತಿದ್ದು ಹದಿನೈದು ದಿನಗಳಲ್ಲಿ ಶೇ.5 ಕ್ಕಿಂತ ಕಡಿಮೆಗೆ ಬರಲಿದೆ. ಆಗ ಯಾವುದಕ್ಕೂ ನಿರ್ಬಂಧವಿಲ್ಲದೆ ಸಹಜ ಸ್ಥಿತಿಗೆ ರಾಜ್ಯ ಬರಲಿದೆ. ಆದರೆ ಕೊರೋನಾ ವೈರಸ್ ಮಾತ್ರ ಇರಲಿದ್ದು ಜನರು ಈಗಿನಂತೆ ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಹುಳಿಯಾರು ಮಾತಾ ಚಾರಿಟಬಲ್ ಟ್ರಸ್ಟ್‍ನ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು ಹುಳಿಯಾರಿನ 8, 10, 12, 13 ವಾರ್ಡ್‍ಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದಾರೆ. ಕೋವಿಡ್ ಲಕ್ಷಣ ಹೊಂದಿ ಹೋಂ ಐಸೋಲೇಷನ್ ನೆಪದಲ್ಲಿ ಮನೆಯಲ್ಲಿಯೇ ಉಳಿಯುತ್ತಿರುವವರು, ಸರಿಯಾಗಿ ಮಾರ್ಗಸೂಚಿ ಪಾಲಿಸದೆ ಆಚೆಕಡೆ ಸುತ್ತಾಡುತ್ತಿರುವುದರ ಮೂಲಕ ಕೋವಿಡ್ ಹೆಚ್ಚಳಕ್ಕೆ ಕಾರಣರಾಗುತ್ತಿದ್ದಾರೆ. ಹಾಗಾಗಿ ಮೇ. 19 ನೇ ತಾರೀಖಿನಿಂದ ಪಾಸಿಟಿವ್ ಬಂದಿರುವವರನ್ನು ಕೂಡಲೇ ಕೋವಿಡ್ ಕೇರ್ ಸೆಂಟರ್‍ಗೆ ಸ್ಥಳಾಂತರಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಪಟ್ಟಣ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಹುಳಿಯಾರಿನ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕೋವಿಡ್ ಕೇರ್ ಸೆಂಟರ್‍ಗೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳುವಂತೆಯೂ ಹಾಗೂ ಅಗತ್ಯವಿರುವ ಡಾಕ್ಟರ್ ಹಾಗೂ ಸ್ಟಾಫ್ ನರ್ಸಗಳನ್ನು ಕೂಡಲೇ ಅಲ್ಲಿಗೆ ಕಳುಹಿಸಿ ಕೊಡುವಂತೆ ತಾಲೂಕು ವೈದ್ಯಾಧಿಕಾರಿಗೆ ಆದೇಶಿಸಿದರು. ಹುಳಿಯಾರಿನಲ್ಲಿ ಇದುವರೆಗೂ ಕೋವಿಡ್‍ನಿಂದಾಗಿ ಒಂಬತ್ತು ಜನ ಮೃತಪಟ್ಟಿದ್ದು, ಕೋವಿಡ್ ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ತಿಳಿಸಿದರಲ್ಲದೆ ಪಾಸಿಟಿವ್ ಬಂದವರನ್ನು ಪೊಲೀಸರ ಸಹಾಯ ಪಡೆದೆ ಕಡ್ಡಾಯವಾಗಿ ಕೇರ್ ಸೆಂಟರ್‍ಗೆ ಕಳುಹಿಸುವಂತೆ ತಿಳಿಸಿದರು.

ನೋಟಿಸ್ ನೀಡಲು ಸೂಚನೆ: ಮೆಡಿಕಲ್ ಸ್ಟೋರ್‍ಗಳಲ್ಲಿ ಕೋವಿಡ್‍ಗೆ ಸಂಬಂಧಪಟ್ಟಂತೆ ಯಾವುದೇ ಪ್ರಿಸ್ಕ್ರಿಪ್ಷನ್ ಇಲ್ಲದೇ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದು, ಜನರು ವೈದ್ಯರ ಬಳಿ ಹೋಗದೆ ಇವರುಗಳಲ್ಲಿಯೇ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿರುವುದು ಅಪಾಯಕ್ಕೆ ದಾರಿ ಮಾಡಿಕೊಟ್ಟಿದೆ. ಆ ಬಗ್ಗೆ ಎಲ್ಲಾ ಮೆಡಿಕಲ್ ಅಂಗಡಿಗಳಿಗೂ ಕೂಡಲೇ ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ ಖಾಸಗಿ ಕ್ಲಿನಿಕ್ಕಿನಲ್ಲಿ ಚಿಕಿತ್ಸೆ ಕೊಡುವ ವೈದ್ಯರು ಕೆಮ್ಮು ಜ್ವರದ ಲಕ್ಷಣ ಕಂಡು ಬಂದವರನ್ನು ಕೋವಿಡ್ ಟೆಸ್ಟ್ ಮಾಡಿಸಬೇಕು ಹಾಗೂ ಅದನ್ನು ಸಂಬಂಧಪಟ್ಟ ತಾಲೂಕು ಆಡಳಿತದ ಗಮನಕ್ಕೆ ತರಬೇಕು ಎಂದರು.

ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು. ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಹಾಗೂ ತರಕಾರಿ ದಿನಸಿ ಸಮಾನು ತರುವ ನೆಪದಲ್ಲಿ ಪಟ್ಟಣದಲ್ಲಿ ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಸಮಸ್ಯೆ ಆಲಿಸಿದ ಸಚಿವರು ಪ್ರತಿನಿತ್ಯವೂ ಇಲಾಖೆಯ ಮಾರ್ಗಸೂಚಿಯಂತೆ ಐಸೋಲೇಶನ್‍ನಲ್ಲಿರುವವರ ಆರೋಗ್ಯ ತಪಾಸಣೆ ತಪ್ಪದೇ ಮಾಡುವಂತೆಯೂ ಹಾಗೂ ಸೋಕಿತರ ಮನೆಗಳ ಬಳಿ ಹೋದಾಗ ಯಾವುದೇ ಸಮಸ್ಯೆ ಬಂದಲ್ಲಿ ಕೂಡಲೇ ಪಿಎಸ್‍ಐ ಅವರ ಗಮನಕ್ಕೆ ತರುವಂತೆಯೂ ಹೇಳಿದರು.

ಸಭೆಯಲ್ಲಿ ತಹಸಿಲ್ದಾರ್ ಬಿ.ತೇಜಸ್ವಿನಿ, ತಿಪಟೂರು ಉಪ ವಿಭಾಗದ ಡಿವೈಎಸ್ಪಿ ಚಂದನ್ ಕುಮಾರ್, ತಾಲೂಕು ವೈದ್ಯಾಧಿಕಾರಿ ನವೀನ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್, ಪಿಎಸ್‍ಐ ರಮೇಶ್ ಸೇರಿದಂತೆ ಆಶಾ ಕಾರ್ಯಕರ್ತೆಯರು, ಪಟ್ಟಣ ಪಂಚಾಯಿತಿ ಸದಸ್ಯರುಗಳು, ಇತರೆ ಇಲಾಖೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

(Visited 1 times, 1 visits today)
Previous Articleಹೆಚ್ಚು ಪ್ರಕರಣಗಳಿರುವ ಗ್ರಾಮಗಳಿಗೆ ಸಿಇಒ ಭೇಟಿ
Next Article ಉಚಿತ ಲಸಿಕಾ ಕಾರ್ಯಕ್ರಮಕ್ಕೆ ಪಾಲಿಕೆ ಮೇಯರ್ ಚಾಲನೆ
News Desk Benkiyabale

Related Posts

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm news

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am news

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am news
ತಾಜಾ ಸುದ್ಧಿಗಳು

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm
Our Youtube Channel
Our Picks

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

By News Desk BenkiyabaleJuly 10, 2026 12:00 pm

ತುಮಕೂರು: ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ೧೭ನೇ ಪಟ್ಟಾಭಿಷೇಕ ಹಾಗೂ ೪೦ನೇ ಜನ್ಮ ವರ್ಧಂತ್ಯೋತ್ಸವ ಅಂಗವಾಗಿ…

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.