BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
  • ಕುಡಿಯುವ ನೀರಿನ ಅಸಮರ್ಪಕ ಸರಬರಾಜು
  • ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ
  • ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ
  • ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ
  • ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ
  • ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ
  • ವೈಭವದಿಂದ ನಡೆದ ಕಳಸೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸೆಮಿ ಲಾಕ್‍ಡೌನ್ : ಜನರ ಓಡಾಟದಿಂದ ಹೆಚ್ಚಿದ ಆತಂಕ
Trending

ಸೆಮಿ ಲಾಕ್‍ಡೌನ್ : ಜನರ ಓಡಾಟದಿಂದ ಹೆಚ್ಚಿದ ಆತಂಕ

By News Desk BenkiyabaleUpdated:June 14, 2021 7:00 pm

ತುಮಕೂರು:

      ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಸೆಮಿ ಲಾಕ್‍ಡೌನ್ ಜಾರಿಗೊಳಿಸಿರುವುದರಿಂದ ಕಲ್ಪತರುನಾಡು ತುಮಕೂರಿನಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆಯಾದರೂ ರಸ್ತೆಗಿಳಿದಿರುವ ವಾಹನಗಳ ಸಂಚಾರ ಭರಾಟೆ, ಜನರ ಓಡಾಟ ಮತ್ತಷ್ಟು ಆತಂಕ ಸೃಷ್ಠಿಸಿದೆ.

      ಸರ್ಕಾರ, ಜಿಲ್ಲಾಡಳಿತಗಳು ಏನೇ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಜಾರಿ ಮಾಡಿದರೂ ಅದಕ್ಕೆ ಕ್ಯಾರೆ ಎನ್ನದೆ ಜನರು ಮಾತ್ರ ತಮಗಿಷ್ಟ ಬಂದಂತೆ ಅಡ್ಡಾಡುತ್ತಿರುವುದು ನಿಯಂತ್ರಣಕ್ಕೆ ಬರುತ್ತಿರುವ ಕೊರೋನಾ ಸೋಂಕು ಮತ್ತೆ ಹಬ್ಬುವ ಲಕ್ಷಣಗಳು ಗೋಚರಿಸುತ್ತಿವೆ.

      ಬೆಳಿಗ್ಗೆಯಿಂದಲೇ ಆಟೋ ರಿಕ್ಷಾಗಳು, ಕಾರುಗಳು, ದ್ವಿಚಕ್ರ ವಾಹನಗಳು ಎಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆಗಿಳಿದಿದ್ದು, ಯಾರ ಭಯವೂ ಇಲ್ಲದೆ ಸಂಚರಿಸುತ್ತಿರುವುದು ಕಂಡು ಬರುತ್ತಿದೆ.
ಇನ್ನು ಆಟೋ ರಿಕ್ಷಾಗಳಿಗೆ ಇಬ್ಬರು ಪ್ರಯಾಣಿಕರನ್ನು ಮಾತ್ರ ಕೂರಿಸಿಕೊಳ್ಳುವಂತೆ ಆದೇಶ ಮಾಡಿದ್ದರೂ ಕೆಲ ಆಟೋಗಳವರು ಮೂರು, ನಾಲ್ವರನ್ನು ಕೂರಿಸಿಕೊಂಡಿದ್ದರೆ, ಮತ್ತೆ ಕೆಲವರು ನಿಯಮದಂತೆ ಇಬ್ಬರನ್ನು ಕೂರಿಸಿಕೊಂಡು ಅವರಿಂದ ದುಬಾರಿ ಪ್ರಯಾಣ ದರ ವಸೂಲಿ ಮಾಡುತ್ತಿರುವುದು ಕಂಡು ಬರುತ್ತಿದೆ.

ಇನ್ನು ಅಗತ್ಯ ಇರುವ ದಿನಸಿ, ಹಾಲು, ತರಕಾರಿ, ಮಾಂಸದ ಅಂಗಡಿಗಳು ವ್ಯಾಪಾರ ವಹಿವಾಟಿನ ಅವಧಿ ಇಂದಿನಿಂದ 2 ಗಂಟೆವರೆಗೆ ವಿಸ್ತರಿಸಿರುವುದರಿಂದ ಜನ 10 ಗಂಟೆ ಬಳಿಕವೇ ಅಂಗಡಿ ಮುಂಗಟ್ಟುಗಳಿಗೆ ತೆರಳುತ್ತಿರುವುದು ಸಾಮಾನ್ಯವಾಗಿದೆ.

ನಿನ್ನೆವರೆಗೆ ಕಾರು, ದ್ವಿಚಕ್ರ ವಾಹನಗಳಲ್ಲಿ ನಗರ ಪ್ರವೇಶಿಸಿದರೆ ವಾಹನಗಳು ಸೀಜ್ ಆಗುತ್ತವೆ ಎಂಬ ಭಯ, ಆತಂಕ ಇತ್ತು. ಆದರೆ ಇಂದು ಯಾವುದೇ ಭಯ ಇಲ್ಲದೇ ಇರುವುದರಿಂದ ಕಾರು, ದ್ವಿಚಕ್ರ ವಾಹನಗಳಲ್ಲಿ ಜನ ಮಾರುಕಟ್ಟೆ, ದಿನಸಿ ಅಂಗಡಿಗಳಿಗೆ ಲಗ್ಗೆಯಿಟ್ಟಿರುವುದರಿಂದ ಸಹಜವಾಗಿಯೇ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

      ಇನ್ನು ತುಮಕೂರಿನಲ್ಲಿ ಮೊನ್ನೆ ಜಿಲ್ಲಾ ಸಚಿವರು ಜ್ಯೂಯಲರಿ, ಜವಳಿ ಹಾಗೂ ಗ್ಯಾರೇಜ್‍ಗಳನ್ನು ಮಧ್ಯಾಹ್ನ 2 ಗಂಟೆವರೆಗೆ ತೆರೆಯಲು ಅವಕಾಶ ನೀಡಿರುವುದರಿಂದ ಘೋಷಿಸಿದ್ದರು. ಆದರೆ ಮತ್ತೆ ರಾತ್ರಿ ಏಕಾಏಕಿ ಈ ಅಂಗಡಿಗಳನ್ನು ತೆರೆಯಲು ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

        ಜಿಲ್ಲಾಡಳಿತದ ಗೊಂದಲದ ತೀರ್ಮಾನಗಳಿಂದಾಗಿ ಎಂ.ಜಿ. ರಸ್ತೆ, ಗುಂಚಿ ಸರ್ಕಲ್, ಮಂಡಿ ಪೇಟೆಯಲ್ಲಿರುವ ಜವಳಿ, ಜ್ಯೂಯಲರಿ ಅಂಗಡಿಗಳ ಮಾಲೀಕರು ರಾತ್ರಿ ಜಾರಿಗೊಳಿಸಿರುವ ಆದೇಶದ ಮಾಹಿತಿ ಕೊರತೆಯಿಂದಾಗಿ ಬೆಳಿಗ್ಗೆ ತಮ್ಮ ಅಂಗಡಿ ಮಳಿಗೆಗಳ ಬಾಗಿಲು ತೆರೆದು, ಮತ್ತೆ ಜಿಲ್ಲಾಡಳಿತದ ಆದೇಶವನ್ನು ಪತ್ರಿಕೆಗಳಿಗೆ ಓದಿ ಆಡಳಿತ ವರ್ಗಕ್ಕೆ ಹಿಡಿಶಾಪ ಹಾಕುತ್ತಾ ಮನೆಗಳಿಗೆ ವಾಪಸ್ಸಾದ ಪ್ರಸಂಗವೂ ಕಂಡು ಬಂತು. ಖಾಸಗಿ, ಸಾರಿಗೆ ಬಸ್‍ಗಳು, ನಗರ ಸಾರಿಗೆ ಬಸ್‍ಗಳ ಸಂಚಾರ ಇಲ್ಲದಿದ್ದರೂ ಸಹ ಆಟೋರಿಕ್ಷಾಗಳು ಮತ್ತು ಕಾರುಗಳ ಸಂಚಾರದಿಂದ ನಗರದ ಬಹುತೇಕ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ. ಈ ಸಂಚಾರ ದಟ್ಟಣೆಯನ್ನು ಗಮನಿಸಿದರೆ ಸೆಮಿ ಲಾಕ್‍ಡೌನ್ ಸಹ ಜಾರಿ ಇಲ್ಲ ಎಂಬಂತೆ ಭಾಸವಾಗುತ್ತಿದೆ.

(Visited 4 times, 1 visits today)
Previous Articleಕೋವಿಡ್‍ನಿಂದ ಮೃತಪಟ್ಟ ಕುಟುಂಬಗಳಿಗೆ ಬಿ.ಸುರೇಶ್ಗೌಡ ಧನ ಸಹಾಯ
Next Article ರಸ್ತೆಯಲ್ಲಿ ಸಂಚರಿಸುವವರಿಗೆ ಕೊರೋನಾ ಪರೀಕ್ಷೆ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm
ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm
ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm
ಇತರೆ ಸುದ್ಧಿಗಳು

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
ಇತರೆ ಸುದ್ಧಿಗಳು

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
ಇತರೆ ಸುದ್ಧಿಗಳು

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm
Our Youtube Channel
Our Picks

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

By News Desk BenkiyabaleFebruary 21, 2026 5:02 pm

ಪಾವಗಡ: ತುಮಕೂರಿನಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಪಾವಗಡ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ…

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.