BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಯಾವುದೇ ರೈತನೂ ಬೆಳೆ ವಿಮೆಯಿಂದ ವಂಚಿತವಾಗಬಾರದು: ಸಿಇಒ
Trending

ಯಾವುದೇ ರೈತನೂ ಬೆಳೆ ವಿಮೆಯಿಂದ ವಂಚಿತವಾಗಬಾರದು: ಸಿಇಒ

By News Desk BenkiyabaleUpdated:June 14, 2021 7:03 pm

ತುಮಕೂರು  :

      ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ)ಯೋಜನೆ ಬಗ್ಗೆ ರೈತರಿಗೆ ವಿಮಾ ಕಂಪನಿಗಳು ಹಾಗೂ ಇಲಾಖೆಗಳು ಜಾಗೃತಿ ಮೂಡಿಸಬೇಕಲ್ಲದೆ ಅರ್ಹನಿರುವ ಯಾವುದೇ ರೈತನೂ ವಿಮಾ ಯೋಜನೆಯಿಂದ ವಂಚಿತವಾಗದಂತೆ ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚಿಸಿದರು.

      ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ)ಯೋಜನೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಿಂದ ರೈತರಿಗಾಗುವ ಅನುಕೂಲದ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು. ರೈತರಿಗೆ ಸಮಸ್ಯೆ ಉಂಟಾಗದಂತೆ ವಿಮಾ ಮೊತ್ತ ಪಾವತಿಗೆ ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶಿಸಿದರು.

      ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯಡಿ ಎಲ್ಲಾ ರೈತರು ಬೆಳೆ ವಿಮೆ ಮಾಡಿಸಿ ಗರಿಷ್ಟ ಪ್ರಯೋಜನ ಪಡೆಯಬೇಕು. ಹವಾಮಾನ ಆಧಾರಿತ ಬೆಳೆ ವಿಮೆ ವ್ಯಾಪ್ತಿಗೆ ಒಳಪಡಲು ರೈತರು ಹೆಚ್ಚು ಆಸಕ್ತಿ ತೋರಬೇಕು. ಅಂತೆಯೇ ತೋಟಗಾರಿಕೆ ಇಲಾಖೆಯ ವ್ಯಾಪ್ತಿಗೊಳಪಡುವ ಬೆಳೆಗಳ ವಿಮಾ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದರು.

      ರೈತರು ವಿಮಾ ಮೊತ್ತ ಪಾವತಿಸಿದ ತಕ್ಷಣವೇ ಬ್ಯಾಂಕ್ ಗಳು ವಿಮಾ ಯೋಜನೆಗೆ ನೋಂದಣಿ(eಟಿಡಿoಟಟ) ಮಾಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. ವಿಳಂಬದಿಂದ ವಿಮಾ ಮೊತ್ತ ಪಾವತಿಸಿದ ರೈತನಿಗೆ ಮೋಸ ಆದರೆ ಅದಕ್ಕೆ ಬ್ಯಾಂಕ್ ಗಳನ್ನೇ ನೇರ ಹೊಣೆ ಮಾಡಲಾಗುವುದು. ಅಂತೆಯೇ ವಿಮಾ ಕಂಪನಿಗಳು ಸಹ ಸಮರ್ಪಕವಾಗಿ ವಿಮಾ ಮೊತ್ತ ಪಾವತಿಸಬೇಕು. ಎಲ್ಲಾ ದಾಖಲೆಗಳು ಸರಿಯಿದ್ದು ಅಧಿಕಾರಿಗಳ ತಪ್ಪಿನಿಂದ ರೈತನಿಗೆ ಮೋಸವಾದರೆ ರೈತನಿಗೆ ಸಿಗಬೇಕಾದ ವಿಮಾ ಮೊತ್ತವನ್ನು ಅಧಿಕಾರಿಗಳೇ ಭರಿಸಬೇಕು ಎಂದು ಎಚ್ಚರಿಕೆ ನೀಡಿದರು.
ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ, ವಿಮಾ ಮೊತ್ತ ಒದಗಿಸದೆ ರೈತರಿಗೆ ಅನ್ಯಾಯ ಮಾಡಿದ ವಿಮಾ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು. ಕಳೆದ ಬಾರಿಗಿಂತ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ರೈತರು ವಿಮಾ ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳುವುದಕ್ಕೆ ಆದ್ಯತೆ ನೀಡಬೇಕು. ಅದರಲ್ಲೂ ಕಡಿಮೆ ನೋಂದಣಿಯಾಗಿರುವ ಕುಣಿಗಲ್ ತಾಲೂಕಿನಲ್ಲಿ ಹೆಚ್ಚು ನೋಂದಣಿ ಮಾಡಿಸಬೇಕು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಸುಲೋಚನಾ ಅವರಿಗೆ ಸೂಚಿಸಿದರು.
ರೈತರು ಕೊನೆ ಅವಧಿಯಲ್ಲಿ ವಿಮಾ ಮೊತ್ತ ಪಾವತಿಗೆ ಬರುತ್ತಾರೆ. ಬಹುತೇಕ ಎಲ್ಲಾ ರೈತರು ಒಮ್ಮೆಲೆ ಬರುವುದರಿಂದ ವಿಳಂಬದಂತಹ ಸಮಸ್ಯೆಯಾಗುತ್ತದೆ. ಹಾಗಾಗಿ ರೈತರು ಆರಂಭದಲ್ಲೇ ವಿಮಾ ಕಂತು ಪಾವತಿಸಬೇಕು. ಈ ನಿಟ್ಟಿನಲ್ಲಿಯೂ ಜಾಗೃತಿ ಮೂಡಿಸಬೇಕೆಂದು ಸಭೆಯಲ್ಲಿದ್ದ ಬ್ಯಾಂಕ್ ಅಧಿಕಾರಿಗಳು ಮನವಿ ಮಾಡಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಸುಲೋಚನಾ ಮಾತನಾಡಿ, ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ)ಯೋಜನೆಯಡಿ 2021ರ ಮುಂಗಾರು ಹಂಗಾಮಿನಲ್ಲಿ ಸ್ಥಳ ನಿರ್ಧಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆ(ಇನಂಡೇಷನ್)ಯಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರ ನೀಡಲಾಗುವುದು. ವಿಮೆ ಮಾಡಿಸಿರುವ ರೈತರು ಬೆಳೆ ನಷ್ಟದ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ವಿಮಾ ಸಂಸ್ಥೆಯ ಕಛೇರಿಗಳಿಗೆ ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣವನ್ನು 72 ಗಂಟೆಗಳೊಳಗಾಗಿ ತಿಳಿಸಬೇಕು. ನಷ್ಟದ ಬಗೆಗಿನ ಮಾಹಿತಿಯನ್ನು ಸ್ವೀಕರಿಸಿದ ಮೇಲೆ ವಿಮಾ ಸಂಸ್ಥೆಗಳು 48 ಗಂಟೆಯೊಳಗಾಗಿ ಬೆಳೆ ನಷ್ಟದ ಪ್ರದೇಶಕ್ಕೆ ಭೇಟಿ ನೀಡಿ ನಷ್ಟ ನಿರ್ಧರಿಸುತ್ತಾರೆ. ಇದಲ್ಲದೆ ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಟ ಶೇಕಡಾ 25 ರಷ್ಟು ಬೆಳೆ ವಿಮಾ ನಷ್ಟ ಪರಿಹಾರ ನೀಡಲಾಗುವುದು. ಹಾಗೂ ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿ ಶೇ.50ಕ್ಕಿಂತ ಹೆಚ್ಚು ಬೆಳೆ ನಷ್ಟ ಸಂಭವಿಸಿದರೆ ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆ ವಿಮಾ ನಷ್ಟ ಪರಿಹಾರದಲ್ಲಿ ಶೇಕಡಾ 25ರಷ್ಟು ಹಣವನ್ನು ಪರಿಹಾರವಾಗಿ ಒದಗಿಸಲಾಗುವುದು. ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರದೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರ ಒದಗಿಸಲಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.
ಫ್ಯೂಚರ್ ಜನರಲಿ ಜನರಲ್ ಇನ್ಸೂರೆನ್ಸ್ ಕಂಪನಿಯನ್ನು ಜಿಲ್ಲೆಯಲ್ಲಿ ವಿಮಾ ಯೋಜನೆ ಅನುμÁ್ಠನ ಮಾಡಲು ನಿಗದಿಪಡಿಸಲಾಗಿದೆ. ಈ ಯೋಜನೆಯಡಿ ರೈತರು ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಒದಗಿಸಿ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.
ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘು ಮಾತನಾಡಿ, ತೋಟಗಾರಿಕೆ ಇಲಾಖೆಯಡಿ ಬೆಳೆಗಳಿಗೆ ವಿಮೆ ಮಾಡಿಸಲು ರೈತರು ಮುಂದಾಗಿದ್ದಾರೆ. ಉತ್ತಮ ಆಸಕ್ತಿಯೊಂದಿಗೆ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ರೈತರಿಗೆ ಹೆಚ್ಚು ಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿದರು. ಸಭೆಯಲ್ಲಿ ಕೃಷಿ, ತೋಟಗಾರಿಕೆ ಸೇರಿದಂತೆ ವಿಮಾ ಸಂಸ್ಥೆ ಅಧಿಕಾರಿಗಳು ಹಾಜರಿದ್ದರು.
ಸಭೆ ಬಳಿಕ ರೈತ ಉತ್ಪಾದಕಾ ಸಂಘ ಸ್ಥಾಪನೆ ಕುರಿತು ಜರುಗಿದ ಸಭೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿಯು ತಾಲೂಕಿನ ಮುಖ್ಯ ಬೆಳೆಯಾಧಾರಿತ ರೈತ ಉತ್ಪಾದಕ ಸಂಘ ಸ್ಥಾಪನೆಗೆ ನಿರ್ಧರಿಸಲಾಯಿತು. ಸಂಘ ಸ್ಥಾಪನೆಗೆ ಕೈಗೊಂಡ ನಿರ್ಧಾರಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ನಿರ್ಣಯ ಕೈಗೊಳ್ಳಲಾಯಿತು.

(Visited 8 times, 1 visits today)
Previous Articleರಸ್ತೆಯಲ್ಲಿ ಸಂಚರಿಸುವವರಿಗೆ ಕೊರೋನಾ ಪರೀಕ್ಷೆ
Next Article ಸಂಚಾರಿ ವಿಜಯ್ ದರ್ಶನಕ್ಕೆ ಕಿಕ್ಕಿರಿದ ಜನ
News Desk Benkiyabale

Related Posts

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.