BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ
  • ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಟ್ಟಡ ಕಾರ್ಮಿಕರಿಗೆ ಕಳಪೆ ಪಡಿತರ ಕಿಟ್ ; ತನಿಖೆ ಒತ್ತಾಯಿಸಿ ಪ್ರತಿಭಟನೆ
Trending

ಕಟ್ಟಡ ಕಾರ್ಮಿಕರಿಗೆ ಕಳಪೆ ಪಡಿತರ ಕಿಟ್ ; ತನಿಖೆ ಒತ್ತಾಯಿಸಿ ಪ್ರತಿಭಟನೆ

By News Desk BenkiyabaleUpdated:July 01, 2021 6:29 pm

ತುಮಕೂರು:

      ಕಟ್ಟಡ ಕಾರ್ಮಿಕರಿಗೆ ಲಾಕ್‍ಡೌನ್ ಪರಿಹಾರವಾಗಿ 10 ಸಾವಿರ ಹಾಗೂ ಕಟ್ಟಡ ಕಾರ್ಮಿಕರಿಗೆ ವಿತರಿಸಿರುವ ಕಳಪೆ ಪಡಿತರ ಕಿಟ್ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿ ರಾಜ್ಯ ಕಟ್ಟಡ ಕಾರ್ಮಿಕರ ಸಂಘಟನೆಯ ಸಮನ್ವಯ ಸಮಿತಿ ನೇತೃತ್ವದಲ್ಲಿ ಕಟ್ಟಡ ಕಾರ್ಮಿಕ ಮುಂಡರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಅವರು, ಕೊರೋನಾ ಎರಡನೇ ಅಲೆಯಿಂದಾಗಿ ಸರ್ಕಾರ ಲಾಕ್‍ಡೌನ್ ಘೋಷಿಸಿತು, ಈ ಲಾಕ್‍ಡೌನ್‍ನಿಂದಾಗಿ ಅಸಂಘಟಿತ ವಲಯದ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ, ಕಟ್ಟಡ ಕಾರ್ಮಿಕರಿಗೆ ಕೆಲಸ ದೊರೆಯದೇ ಸಂಕಷ್ಟಕ್ಕೆ ಸಿಲುಕಿದ್ದು, ಪ್ರತಿ ಕಟ್ಟಡ ಕಾರ್ಮಿಕರಿಗೆ 10 ಸಾವಿರ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

      ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಗೂ ಶಾಸಕರಿಗೂ ಏನು ಸಂಬಂಧ, ನೈಜ ಕಟ್ಟಡ ಕಾರ್ಮಿಕರಿಗೆ ಸೌಲಭ್ಯ ದೊರೆಯಬೇಕಾದರೆ, ಶಾಸಕರ ಮಧ್ಯ ಪ್ರವೇಶವನ್ನು ನಿಲ್ಲಿಸಬೇಕು, ಸಂಘಟನೆಯ ಮೂಲಕವೇ ಸೌಲಭ್ಯವನ್ನು ನೀಡಲು ಕ್ರಮವಹಿಸಬೇಕು, ಮೊದಲನೇ ಅಲೆಯ ಅವಧಿಯಲ್ಲಿ ಘೋಷಿಸಿರುವ ಪರಿಹಾರವನ್ನು ಶೀಘ್ರ ನೀಡಬೇಕು, ಎರಡನೇ ಅಲೆ ಪರಿಹಾರವನ್ನು ನೀಡಲು ಕಾರ್ಯಪ್ರವೃತ್ತರಾಗಬೇಕೆಂದು ಆಗ್ರಹಿಸಿದರು.

      ರಾಜ್ಯ ಮತ್ತು ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮಗಳಿಂದಾಗಿ ಕಟ್ಟಡ ನಿರ್ಮಾಣ ಸಾಮಗ್ರಿ ಸೇರಿದಂತೆ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಾಗಿದ್ದು, ಯಾವ ಸಾಮ್ರಾಜ್ಯಶಾಹಿ ವ್ಯವಸ್ಥೆಯಲ್ಲಿಯೂ ಆಗದಂತಹ ಬೆಲೆ ಏರಿಕೆಯೂ ಭಾರತದಂತಹ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಆಗುತ್ತಿದ್ದು, ಸರ್ಕಾರಗಳು ಸರ್ವಾಧಿಕಾರಿ ಧೋರಣೆಯನ್ನು ಕೈಬಿಟ್ಟು ಬೆಲೆ ನಿಯಂತ್ರಣಕ್ಕೆ ಮುಂದಾಗಬೇಕೆಂದು ಒತ್ತಾಯಿಸಿದರು.

      ಕಾರ್ಮಿಕ ಮುಖಂಡ ಬಿ.ಉಮೇಶ್, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆ ಕಾರ್ಮಿಕರ ಪರವಾಗಿ ಕಾರ್ಯನಿರ್ವಹಿಸದೇ ಸರ್ಕಾರ ಹಾಗೂ ಆಡಳಿತ ಪಕ್ಷದ ಶಾಸಕರ ಅಣತಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ, ಕಾರ್ಮಿಕರಿಗೆ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ನೀಡಿರುವ ಪಡಿತರ ಕಿಟ್‍ನಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದ್ದು, ಕಡಿಮೆ ದರದ ವಸ್ತುಗಳನ್ನು ನೀಡಿ ಹೆಚ್ಚಿನ ಬೆಲೆಯ ಕಿಟ್ ನೀಡಿದ್ದು, ಈ ಹಗರಣದ ಬಗ್ಗೆ ಲೋಕಾಯುಕ್ತ ತನಿಖೆಗೆ ಕ್ರಮವಹಿಸಬೇಕೆಂದು ಆಗ್ರಹಿಸಿದರು.
ಐಎನ್‍ಟಿಯುಸಿ ಜಿಲ್ಲಾಧ್ಯಕ್ಷ ಎಸ್.ಪಿ.ನಾಗರಾಜು ಮಾತನಾಡಿ ಸರ್ಕಾರಗಳ ಸರ್ವಾಧಿಕಾರಿ ಧೋರಣೆಯಿಂದಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದು, ನಿರಂತರ ಬೆಲೆ ಏರಿಕೆಯಿಂದಾಗಿ ಜನಜೀವನ ತತ್ತರಗೊಂಡಿದ್ದು, ಕಾರ್ಮಿಕ ಕಲ್ಯಾಣಕ್ಕೆ ಇರುವ ಅನುದಾನವನ್ನು ಬಳಸಲು ಶಾಸಕ ಅಣತಿಯನ್ನು ಕೇಳುತ್ತಿರುವುದು ದುರದೃಷ್ಟಕರ ಎಂದ ಅವರು, ಕಾರ್ಮಿಕರು ಐಕ್ಯತೆಯಿಂದ ಹೋರಾಟ ಮಾಡಿದರೆ ಮಾತ್ರ ಕಾರ್ಮಿಕರ ಕಲ್ಯಾಣ ಸಾಧ್ಯ ಎಂದು ಕರೆ ನೀಡಿದರು.
ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರಾದ ಸೈಯದ್ ಮುಜೀಬ್, ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರು ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಉಪಾಧ್ಯಕ್ಷ ಗೋಪಾಲ್, ಕುಪ್ಪೂರು ವೆಂಕಟೇಶ್, ಅರೇಗುಜ್ಜನಹಳ್ಳಿ ರುದ್ರೇಶ್, ಎಸ್.ಎನ್.ಪಾಳ್ಯ ರಂಗನಾಥ್, ಕಾರ್ಪೆಂಟರ್ ನಾಗರಾಜು, ಎಲೆಕ್ಟ್ರೀಕಲ್ ರವಿಕುಮಾರ್, ಚಂದ್ರಪ್ಪ, ಕೊರಟಗೆರೆ ಕಾರ್ಯದರ್ಶಿ ಗೋವಿಂದರಾಜು, ಶಿರಾ ರಂಗನಾಥಪ್ಪ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಫೆಡರೇಶನ್, ಸಿಐಟಿಯು ಗೌರವಾಧ್ಯಕ್ಷ ಗೋವಿಂದರಾಜು, ಇಬ್ರಾಹಿಂ ಕಲೀಲ್, ಶಂಕರಪ್ಪ,ವೆಂಕಟೇಶ್, ನಾಸಿರುದ್ದೀನ್, ಮಹೇಶ್, ಕೈದಾಳ ರಮೇಶ್, ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾರ್ಮಿಕ ಒಕ್ಕೂಟದ ಐಎನ್ಟಿಯುಸಿ ಉಮೇಶ್.ಬಿ, ನೃಪಾಲ್, ಶ್ರೀನಿವಾಸ್, ಶಾಂತಲಕ್ಷ್ಮೀ ಮಧುಗಿರಿ, ಮೋಹನ್ ಕುಮಾರ್, ನರಸಿಂಹರಾಜು ಇತರರಿದ್ದರು.

(Visited 10 times, 1 visits today)
Previous Articleಪತ್ರಿಕಾ ಮುದ್ರಣಕಾರರಿಗೆ ರಾಮಕೃಷ್ಣ ಸೇವಾಶ್ರಮದಿಂದ ಆಹಾರ ಕಿಟ್‍
Next Article ಪಡಿತರ ವಿತರಣೆಯಲ್ಲಿ ಲೋಪದೋಷ: ಲಿಖಿತ ದೂರು ಸಲ್ಲಿಸಿ
News Desk Benkiyabale

Related Posts

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news
ತಾಜಾ ಸುದ್ಧಿಗಳು
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
Our Youtube Channel
Our Picks

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

By News Desk BenkiyabaleOctober 02, 2026 6:41 pm

ಹುಳಿಯಾರು: ಜನಸಾಮಾನ್ಯರ ಹಾಗೂ ಬಡವರ ಹಸಿವು ನೀಗಿಸಬೇಕಿದ್ದ ಇಲ್ಲಿನ ಇಂದಿರಾ ಕ್ಯಾಂಟೀನ್ ಸೂಕ್ತ ನಿರ್ವಹಣೆ ಮತ್ತು ನಿರ್ಲಕ್ಷ÷್ಯದಿಂದಾಗಿ ಕಳೆದ ಒಂದು…

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.