BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಿ – ಸಚಿವ
Trending

ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಿ – ಸಚಿವ

By News Desk BenkiyabaleUpdated:July 08, 2021 6:51 pm

 ತುಮಕೂರು :

      ಜಿಲ್ಲೆಯಲ್ಲಿ ಜುಲೈ 19 ರಿಂದ 22ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜರುಗಿದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸಾರ್ವಜನಿಕ ಶಿಕ್ಷಣ ಇಲಾಖೆ ತುಮಕೂರು(ದ) ಜಿಲ್ಲೆ ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ನಡೆಯಲಿರುವ ಪರೀಕ್ಷೆಯನ್ನು ಶಿಕ್ಷಣ ಇಲಾಖೆಯೊಂದಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿಕೊಂಡು ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕು. ಯಾವುದೇ ಕಾರಣಕ್ಕೂ ಎಲ್ಲಿಯೂ ಸಮಸ್ಯೆಯಾಗದಂತೆ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಬೇಕು ಎಂದು ನಿರ್ದೇಶಿಸಿದರು.
ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು. ಪರೀಕ್ಷೆಯ ಮುನ್ನ ಮತ್ತು ನಂತರ ಪರೀಕ್ಷಾ ಕೇಂದ್ರದ ಎಲ್ಲ ಕೊಠಡಿಗಳು, ಪೀಠೋಪಕರಣ ಹಾಗೂ ಇನ್ನಿತರ ವಸ್ತುಗಳನ್ನು ಸ್ಯಾನಿಟೈಜ್ ಮಾಡಲು ಅಗತ್ಯ ಕ್ರಮ ವಹಿಸಬೇಕು. ಪರೀಕ್ಷೆಗೆ ಹಾಜರಾಗುವ ಮಕ್ಕಳಿಗೆ ಅಗತ್ಯವಿರುವಷ್ಟು ಮಾಸ್ಕ್‍ಗಳ ವ್ಯವಸ್ಥೆಯನ್ನೂ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಪೆÇಲೀಸ್, ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಸಿಬ್ಬಂದಿ, ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ ಹಾಗೂ ಅಧಿಕಾರಿಗಳು ಪರೀಕ್ಷಾ ದಿನದಂದು ಬೆಳಗ್ಗೆ 7.30ಕ್ಕೆ ಹಾಜರಾಗಿ ಪರೀಕ್ಷಾ ಕೇಂದ್ರಗಳನ್ನು ತೆರೆಯಬೇಕು ಎಂದು ತಿಳಿಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಮತ್ತು ಶಿಕ್ಷಕರಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಲಸಿಕೆ ಪಡೆಯದ ಹೊರತು ಕರ್ತವ್ಯಕ್ಕೆ ನಿಯೋಜನೆ ಮಾಡುವಂತಿಲ್ಲ ಎಂದು ಸೂಚಿಸಿದರು.
ಯಾವುದೇ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತರಾಗದಂತೆ ಕ್ರಮ ವಹಿಸುವುದು ಸೇರಿದಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರೂಪಿಸಿದ ಎಸ್‍ಒಪಿ ಅನುಷ್ಠಾನದಂತೆ ಸಿದ್ಧತೆ ಕೈಕೊಂಡು ಅಗತ್ಯವಿರುವ ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ಬರಲು ವಾಹನ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ತಿಳಿಸಿದರು.
ಮಕ್ಕಳು ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಆರಂಭವಾಗುವ ನಿಗಧಿತ ಸಮಯಕ್ಕೆ ಮುಂಚಿತವಾಗಿಯೇ ಬಂದು ಪರೀಕ್ಷೆ ಮುಕ್ತಾಯದ ಬಳಿಕ ತೆರಳುತ್ತಾರೆ. ಹಾಗಾಗಿ ಮಕ್ಕಳು ಹಸಿವಿನಿಂದ ಬಳಲಬಾರದೆಂಬ ನಿಟ್ಟಿನಲ್ಲಿ ಅನಿವಾರ್ಯವಿರುವ ಮಕ್ಕಳಿಗೆ ಊಟದ ವ್ಯವಸ್ಥೆಯನ್ನೂ ಮಾಡಬೇಕು ಎಂದು ಸೂಚಿಸಿದರು.


ಪರೀಕ್ಷಾ ಕೇಂದ್ರಗಳಲ್ಲಿ ಜವಾಬ್ದಾರಿಯಿಂದ ಪ್ರಶ್ನೆಪತ್ರಿಕೆಯನ್ನು ರವಾನಿಸಬೇಕು. ತಹಸೀಲ್ದಾರ್ ಹಾಗೂ ಇಒಗಳು ಶಿಕ್ಷಣಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಪ್ರಶ್ನೆಪತ್ರಿಕೆ ರವಾನೆಗೆ ಸೂಕ್ತ ಕ್ರಮ ವಹಿಸುವಂತೆ ನಿರ್ದೇಶಿಸಿದರು.
ಕೋವಿಡ್ ಸೋಂಕಿನ ಲಕ್ಷಣಗಳುಳ್ಳ ಹಾಗೂ ಸೋಂಕಿನ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಕರೆದೊಯ್ಯಲು ಪ್ರತ್ಯೇಕವಾಗಿ ವಾಹನ ವ್ಯವಸ್ಥೆ ಮಾಡಬೇಕು ಹಾಗೂ ಪ್ರತ್ಯೇಕ ಕೊಠಡಿಯಲ್ಲಿಯೇ ಪರೀಕ್ಷೆ ಬರೆಯಲು ಕ್ರಮ ವಹಿಸಬೇಕು. ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಆರೋಗ್ಯ ತಪಾಸಣೆ ಹಿನ್ನೆಲೆಯಲ್ಲಿ ಇಬ್ಬರು ಆರೋಗ್ಯ ಕಾರ್ಯಕರ್ತರನ್ನು ನಿಯೋಜಿಸಬೇಕು. ಒಂದು ಬೆಂಚಿನಲ್ಲಿ ಇಬ್ಬರಿಗೆ ಮಾತ್ರವೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಜವಾಬ್ದಾರಿಯಿಂದ ಸುಸೂತ್ರವಾಗಿ ನಡೆಸಬೇಕು. ಉಡಾಫೆ ತೋರದೆ ಅವರವರ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ನಿಯಮಾನುಸಾರ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ರವಾನೆ ಮಾಡಬೇಕು. ಪರೀಕ್ಷಾ ಕೇಂದ್ರದಲ್ಲಿಯೂ ನಿಯಮಾನುಸಾರವೇ ಪ್ರಶ್ನೆಪತ್ರಿಕೆ ತೆರೆಯಬೇಕು. ಲಸಿಕೆ ಪಡೆದವರನ್ನು ಮಾತ್ರ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಬೇಕು. ಅತ್ಯಂತ ವ್ಯವಸ್ಥಿತವಾಗಿ ಪರೀಕ್ಷೆಯನ್ನು ನಡೆಸಬೇಕು. ಮಕ್ಕಳನ್ನು ಕರೆತಂದ ಪೆÇೀಷಕರು ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಬಿಟ್ಟು ಕೇಂದ್ರದಿಂದ ದೂರ ಇರಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಮಾತನಾಡಿ, ಪರೀಕ್ಷೆಗೂ ಮುನ್ನ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಬೇಕು. ಶೌಚಾಲಯಗಳನ್ನು ಶುಚಿಗೊಳಿಸುವುದರ ಜೊತೆಗೆ ಸಮರ್ಪಕ ನೀರು ಒದಗಿಸಬೇಕು. ಜೊತೆಗೆ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಕಲ್ಪಿಸಬೇಕು. ವಿದ್ಯಾರ್ಥಿಗಳು ಸಮಯ ನೋಡಿಕೊಂಡು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿಯೂ ಗಡಿಯಾರ ಹಾಕಬೇಕು. ಹೊಸ ವಿಧಾನದ ಪರೀಕ್ಷೆಯಾಗಿರುವುದರಿಂದ ವಿದ್ಯಾರ್ಥಿಗಳು ಗೊಂದಲವಾಗದಂತೆ ಪರೀಕ್ಷಾ ನೋಂದಣಿ ಸಂಖ್ಯೆಯನ್ನು ನಮೂದಿಸಿ, ಬಳಿಕ ಪರೀಕ್ಷೆ ಬರೆಯುವ ಕ್ರಮವನ್ನು ಒಮ್ಮೆ ವಿವರವಾಗಿ ಮಾಹಿತಿ ನೀಡಬೇಕೆಂದು ನಿರ್ದೇಶಿಸಿದರು.


ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮಾತನಾಡಿ, ಪರೀಕ್ಷಾ ತಯಾರಿ ಕುರಿತು ಸಭೆಗೆ ಮಾಹಿತಿ ಒದಗಿಸಿದರು.
ತುಮಕೂರು(ದ) ಶೈಕ್ಷಣಿಕ ಜಿಲ್ಲೆಯಲ್ಲಿ 90 ಕ್ಲಸ್ಟರ್ ಸಹಿತ ಹಾಗೂ 49 ಕ್ಲಸ್ಟರ್ ರಹಿತ ಸೇರಿ 139 ಪರೀಕ್ಷಾ ಕೇಂದ್ರಗಳಿದ್ದು, ಪರೀಕ್ಷೆಗೆ 23685 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಅಂತೆಯೇ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 32 ಕ್ಲಸ್ಟರ್ ಸಹಿತ ಹಾಗೂ 49 ಕ್ಲಸ್ಟರ್ ರಹಿತ ಸೇರಿ ಒಟ್ಟು 81 ಕೇಂದ್ರಗಳಿದ್ದು, 12845 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.
ಎರಡೂ ಶೈಕ್ಷಣಿಕ ಜಿಲ್ಲೆಗಳಲ್ಲಿ 122 ಕ್ಲಸ್ಟರ್ ಸಹಿತ ಹಾಗೂ 98 ಕ್ಲಸ್ಟರ್ ರಹಿತ ಸೇರಿ ಒಟ್ಟು 220 ಪರೀಕ್ಷಾ ಕೇಂದ್ರಗಳಿದ್ದು, 36530 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 7 ಕ್ಲಸ್ಟರ್ ಸಹಿತ, 11ಕ್ಲಸ್ಟರ್ ರಹಿತ ಸೇರಿ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ 2534 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್ ಸೇರಿದಂತೆ ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್‍ಗಳು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

 

(Visited 7 times, 1 visits today)
Previous Articleಕೃಷಿ ಅಧಿಕಾರಿಗಳಿಂದ ಮಿಡತೆ ಹತೋಟಿ ಮಾರ್ಗದರ್ಶನ
Next Article 4,000 ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ
News Desk Benkiyabale

Related Posts

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.