BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ
  • ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ
  • ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ
  • ೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ
  • ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ
  • ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಉಳ್ಳವರಿಗೆ ಸರಕಾರಿ ಗೋಮಾಳದ ಸಾಗುವಳಿ ಚೀಟಿ
Trending

ಉಳ್ಳವರಿಗೆ ಸರಕಾರಿ ಗೋಮಾಳದ ಸಾಗುವಳಿ ಚೀಟಿ

By News Desk BenkiyabaleUpdated:July 12, 2021 6:05 pm

ತುಮಕೂರು:

      ಸುಮಾರು 40 ವರ್ಷಗಳಿಂದ ಸರಕಾರಿ ಗೋಮಾಳವನ್ನು ಉಳುಮೆ ಮಾಡುತ್ತಾ ಜೀವನ ನಡೆಸುತ್ತಾ ಇದ್ದ ಕುಟುಂಬವನ್ನು ಒಕ್ಕಲೆಬ್ಬಿಸಿ, ಸದರಿ ಜಾಗವನ್ನು ಶ್ರೀಮಂತ ಕುಟುಂಬವೊಂದಕ್ಕೆ ಸಾಗುವಳಿ ಚೀಟಿ ಮಾಡಿಕೊಟ್ಟಿರುವ ಕೊರಟಗೆರೆ ತಹಶೀಲ್ದಾರ ಅವರ ಕ್ರಮವನ್ನು ಖಂಡಿಸಿ ಸೋಮವಾರ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಆನಂದಪಟೇಲ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಸಂತ್ರಸ್ತ ಕುಟುಂಬದೊಂದಿಗೆ ಸುರಿವ ಮಳೆಯ ನಡುವೆಯೂ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನಾನಿರತ ರೈತ ಸಂಘ ಮತ್ತು ಹಸಿರುಸೇನೆಯ ಕಾರ್ಯಕರ್ತರು, ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ ಪಟೇಲ್,ಕೊರಟಗೆರೆ ತಾಲೂಕು ಅಕ್ಕಾಜಿಹಳ್ಳಿ ಸರ್ವೆ ನಂ 33 ರಲ್ಲಿ ಬರುವ 641 ಎಕರೆ ಸರಕಾರಿ ಗೋಮಾಳದಲ್ಲಿ ಕಾಮಣ್ಣ ಬಿನ್. ಲೇ ಚಿಕ್ಕನರಸಪ್ಪ ಮತ್ತು ದಾಳಿ ನರಸಪ್ಪ ಬಿನ್ ಲೇ ಚಿಕ್ಕನರಸಪ್ಪ ಎಂಬುವವರು ತಲಾ ಎರಡು ಎಕರೆಯಂತೆ ಕಳೆದ 35-40 ವರ್ಷಗಳಿಂದ ಉಳುಮೆ ಮಾಡಿ, ಮೆಕ್ಕೇಜೋಳ,ರಾಗಿ ಇನ್ನಿತರ ದಿನಸಿ,ಕಾಳು, ಆಹಾರಧಾನ್ಯಗಳನ್ನು ಬೆಳೆದು ಜೀವನ ನಡೆಸುತಿದ್ದು,ಸದರಿ ಜಮೀನಿಗಾಗಿ ಸರಕಾರಕ್ಕೆ ಫಾರಂ ನಂ 50-53 ಮತ್ತು 57 ರಲ್ಲಿ ಅರ್ಜಿ ಸಲ್ಲಿಸಿರುತ್ತಾರೆ.ತಾಲೂಕು ಆಡಳಿತವೂ ಸಹ ಇವರ ಅರ್ಜಿ ಸಂಖ್ಯೆ 11415 ರ ಅನ್ವಯ 2003ರ ಡಿಸೆಂಬರ್ 04 ರಂದು ಸರ್ವೆ ನಕಾಶೆ ತಯಾರಿಸಿ, ಜಮೀನು ಗುರುತಿಸಿಕೊಟ್ಟಿದೆ. ಇದಕ್ಕೆ ಮೇಲಿನವರು ಕಿಮ್ಮತ್ತನ್ನು ಸಹ ಕಟ್ಟಿದ್ದಾರೆ.
ಆದರೆ ಕೊರಟಗೆರೆ ತಹಶೀಲ್ದಾರರು ಏಕಾಎಕಿ ಕೊರಟಗೆರೆ ತಾಲೂಕಿನವರಲ್ಲದ ಬೆಂಗಳೂರಿನಲ್ಲಿ ವಾಸವಾಗಿರುವ ಸರಸ್ವತಿ ಕೋಂ ರಾಮಣ್ಣ, ಉಮೇಶ್ ಬಿನ್ ಕಾಮಯ್ಯ, ರಾಹುಲ್ ಬಿನ್ ಗಜೇಂದ್ರಕುಮಾರ್, ಕಲಾವತಿ ಕೋಂ ಸಿದ್ದರಾಮಯ್ಯ ಅವರುಗಳಿಗೆ 2017ರಲ್ಲಿ ಸಾಗುವಳಿ ಚೀಟಿ ನೀಡಿ, ಸುಮಾರು 40 ವರ್ಷಗಳಿಂದ ಉಳುಮೇ ಮಾಡಿ, ಜೀವನ ನಡೆಸುತ್ತಿದ್ದ ಕಾಮಣ್ಣ ಮತ್ತು ನರಸಪ್ಪ ಅವರುಗಳ ಕುಟುಂಬವನ್ನು ಪೊಲೀಸ್ ಬಲ ಬಳಸಿ ಒಕ್ಕಲೆಬ್ಬಿಸಿ ಅನುಭವದಲ್ಲಿದ್ದ ಭೂಮಿಯಿಂದ ಆಚೆಗೆ ಕಳುಹಿಸಿದ್ದಾರೆ. ಇದು ಅನ್ಯಾಯ ಮತ್ತು ಅಕ್ರಮ, ಕೊರಟಗೆರೆ ತಹಶೀಲ್ದಾರರು ಸರಕಾರದ ಗೋಮಾಳದ ಜಮೀನುಗಳನ್ನು ಖಾಸಗಿ ಭೂಮಾಫೀಯದವರಿಗೆ ಮಾರಾಟ ಮಾಡುವ ಮೂಲಕ ಹತ್ತಾರು ವರ್ಷಗಳ ಕಾಲ ಭೂಮಿಯನ್ನು ಉಳುಮೆ ಮಾಡಿದವರನ್ನು ನಿರ್ಗತಿಕರನ್ನಾಗಿಸುತ್ತಿದ್ದಾರೆ. ಸರಕಾರ ಕೂಡಲೇ ಬೆಂಗಳೂರಿನ ವ್ಯಕ್ತಿಗಳಿಗೆ ನೀಡಿರುವ ಸಾಗುವಳಿ ಪತ್ರವನ್ನು ರದ್ದುಗೊಳಿಸಿ,ಕಾಮಣ್ಣ ಮತ್ತು ನರಸಪ್ಪ ಅವರಿಗೆ ಮರು ಮಂಜೂರು ಮಾಡಿಕೊಡಬೇಕೆಂಬುದು ರೈತ ಸಂಘ ಮತ್ತು ಹಸಿರು ಸೇನೆಯ ಒತ್ತಾಯವಾಗಿದೆ. ಜಿಲ್ಲಾಡಳಿತ ಈ ಬಗ್ಗೆ ನಿರ್ಲಕ್ಷ ತೋರಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಆನಂದ ಪಟೇಲ್ ತಿಳಿಸಿದರು.
ರೈತ ಸಂಘ ಮತ್ತು ಹಸಿರು ಸೇನೆಯ ಕಾರ್ಯಾಧ್ಯಕ್ಷ ಧನಂಜಯ್‍ಆರಾಧ್ಯ ಮಾತನಾಡಿ, ಮಾಜಿ ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರರ ಕ್ಷೇತ್ರದಲ್ಲಿ ಬಡವರಿಗೆ, ರೈತರಿಗೆ ನ್ಯಾಯವಿಲ್ಲದಂತಾಗಿದೆ. ಅಧಿಕಾರಿಗಳು ತಮ್ಮ ಮನಸೋ ಇಚ್ಚೆ, ಸರಕಾರಿ ಗೋಮಾಳಗಳನ್ನು ಯಾರಿಗೆ ಬೇಕು ಅವರಿಗೆ ಮಾರಾಟ ಮಾಡುತ್ತಿದ್ದಾರೆ.ಬಡವರು ಬದುಕುವುದೇ ಕಷ್ಟವಾಗಿದೆ.ಕೂಡಲೇ ಶಾಸಕರು ಗಮನಹರಿಸಿ, ರೈತರಾದ ಕಾಮಣ್ಣ ಮತ್ತು ನರಸಪ್ಪ ಅವರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು. ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ನುಡಿದರು.
ಈ ಸಂಬಂಧ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಶಿರಾ ಅಧ್ಯಕ್ಷರಾದ ಸಣ್ಣದ್ಯಾಮಯ್ಯ, ಕೊರಟಗೆರೆ ಅಧ್ಯಕ್ಷರಾದ ಸಿದ್ದರಾಜು, ಶಿವಾನಂದ್, ಪುಟ್ಟರಾಜು ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.

(Visited 54 times, 1 visits today)
Previous Articleಸಿಲಿಂಡರ್ ಸ್ಪೋಟ : ಲಕ್ಷಾಂತರ ರೂಪಾಯಿ ನಷ್ಟ
Next Article ಸಾಂಕ್ರಾಮಿಕ ಖಾಯಿಲೆ ಹರಡುವ ಭೀತಿಯಲ್ಲಿ ಜನ
News Desk Benkiyabale

Related Posts

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm ಇತರೆ ಸುದ್ಧಿಗಳು

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm news

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm news
ತಾಜಾ ಸುದ್ಧಿಗಳು

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm

ಸಿದ್ದರಾಮಯ್ಯ ಬಜೆಟ್‌ನಲ್ಲಿ ನಾಟಕಕ್ಕೆ ೧ ಕೋಟಿ

June 09, 2026 3:03 pm
Our Youtube Channel
Our Picks

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm

ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ

June 09, 2026 3:09 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

By News Desk BenkiyabaleJune 11, 2026 5:15 pm

ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸಬಲೀಕರಣ ಘಟಕ, ತುಮಕೂರು ಹಾಗೂ ನಿಟ್ಟೂರು…

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm

೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ

June 09, 2026 3:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.