BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ
  • ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ
  • ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ
  • ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ
  • ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
  • ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ
  • ರಾಹುಲ್‌ಗಾ0ಧಿ ಅವರ ಮೇಲಿನ ಎಫ್‌ಐಆರ್ ಖಂಡಿಸಿ ಪ್ರತಿಭಟನೆ
  • ಕ0ಪನಹಳ್ಳಿ ರಸ್ತೆಗೆ ದುರಸ್ತಿ ಭಾಗ್ಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿಧಾನ ಪರಿಷತ್ ಚುನಾವಣೆ ಸಕಲ ಸಿದ್ಧತೆ- ಜಿಲ್ಲಾಧಿಕಾರಿ
Trending

ವಿಧಾನ ಪರಿಷತ್ ಚುನಾವಣೆ ಸಕಲ ಸಿದ್ಧತೆ- ಜಿಲ್ಲಾಧಿಕಾರಿ

By News Desk BenkiyabaleUpdated:December 09, 2021 3:48 pm

 ತುಮಕೂರು :

      ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಡಿಸೆಂಬರ್ 10ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯನ್ನು ನಿಷ್ಪಕ್ಷಪಾತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಮತದಾನಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 338 ಮತಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಪೈಕಿ 194 ಸಾಮಾನ್ಯ, 95 ಸೂಕ್ಷ್ಮ ಹಾಗೂ 49 ಅತಿಸೂಕ್ಷ್ಮ ಮತಕೇಂದ್ರಗಳೆಂದು ಗುರುತಿಸಲಾಗಿದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಮತ ಕೇಂದ್ರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ. ಎಲ್ಲಾ ಕೇಂದ್ರಗಳಲ್ಲಿಯೂ ಮತದಾನದ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಹಿಸಲಾಗಿದೆ ಎಂದು ಹೇಳಿದರು.

ಈ ಚುನಾವಣೆಯಲ್ಲಿ 2623 ಪುರುಷರು ಹಾಗೂ 2936 ಮಹಿಳೆಯರು ಸೇರಿದಂತೆ ಒಟ್ಟು 5559 ಮತದಾರರು ಮತದಾನ ಮಾಡಲಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಪ್ರತಿ ಮತಕೇಂದ್ರಕ್ಕೂ ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮತದಾರರನ್ನು ಗುರುತು ಹಚ್ಚುವ ಅಧಿಕಾರಿಗಳು ಹಾಗೂ ವೀಕ್ಷಕರು ಸೇರಿದಂತೆ ಒಟ್ಟು 1200 ಅಧಿಕಾರಿ/ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

      ಕೋವಿಡ್ ನಿಯಮಾವಳಿಗಳನ್ವಯ ಮತದಾನದ ಹಿಂದಿನ ದಿನವೇ ಮತಕೇಂದ್ರಗಳನ್ನು ಸ್ಯಾನಿಟೈಸ್ ಮಾಡಿಸಬೇಕು. ಮತದಾನ ಕೇಂದ್ರದ ಒಳಗೆ ಮತದಾರರು ಬರುವಾಗ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಿಸಿ, ಮಾಸ್ಕ್ ಧರಿಸಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಆಶಾ ಕಾರ್ಯಕರ್ತೆಯರು/ಎಎನ್‍ಎಂಗಳನ್ನು ನಿಯೋಜಿಸಲಾಗಿದೆ ಎಂದರಲ್ಲದೆ ಮತಚಲಾವಣೆಗೆ ಬರುವ ಎಲ್ಲಾ ಮತದಾರರು ಕಡ್ಡಾಯವಾಗಿ ಕನಿಷ್ಟ ಮೊದಲ ಡೋಸ್ ಲಸಿಕೆ ಪಡೆದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

      ಜಿಲ್ಲೆಯ ಕೋವಿಡ್ ಪ್ರಕರಣಗಳ ಕುರಿತು ಸುದ್ದಿಗಾರರೊಬ್ಬರ ಪ್ರಶ್ನೆಗೆ ಉತ್ತರಿಸಿದ ಅವರು, ನಗರದ ಸಿದ್ಧಗಂಗಾ ಹಾಗೂ ವರದರಾಜ ನರ್ಸಿಂಗ್ ಕಾಲೇಜಿನ ಒಟ್ಟು 15 ಮಂದಿ ಕೇರಳ ಮೂಲದ ವಿದ್ಯಾರ್ಥಿಗಳಿಗೆ ಕಳೆದ ವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಈ ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷಿಸಲಾಗಿ 1 ಅಥವಾ 2 ಪ್ರಕರಣಗಳು ಮಾತ್ರ ವರದಿಯಾಗಿದೆ ಎಂದರಲ್ಲದೆ, ಜಲ್ಲೆಯಲ್ಲಿ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬಂದಿದೆ. ಸೋಂಕು ಹರಡುವಿಕೆ ನಿಯಂತ್ರಣದಲ್ಲಿದ್ದರೂ ಸಹ ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡಿಕೊಂಡು, ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಮುನ್ನೆಚ್ಚರಿಕೆ ವಹಿಸುವುದನ್ನು ಮರೆಯಬಾರದು ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಥಾಧಿಕಾರಿ ರಾಹುಲ್ ಕುಮಾರ್ ಷಹಪುರವಾಡ್ ಮಾತನಾಡಿ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ 338 ಮತ ಕೇಂದ್ರಗಳಲ್ಲಿಯೂ ಶಾಂತಿಯುತ ಮತದಾನಕ್ಕಾಗಿ ಸುಮಾರು 600 ಮಂದಿ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಈಗಾಗಲೇ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹಾಜರಿದ್ದರು.

(Visited 5 times, 1 visits today)
Previous Articleದೇವೇಗೌಡರ ಸೋಲಿನ ಸೇಡು : ಕಾಂಗ್ರೆಸ್ ಅಭ್ಯರ್ಥಿಗೆ ಕೇಡು…!?
Next Article ವಿಧಾನ ಪರಿಷತ್ ಚುನಾವಣೆ: 338 ಮತಗಟ್ಟೆಗಳ ಸ್ಥಾಪನೆ
News Desk Benkiyabale

Related Posts

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

September 03, 2026 5:43 pm news

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm news

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm news
ತಾಜಾ ಸುದ್ಧಿಗಳು
news

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

September 03, 2026 5:43 pm
news

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm
news

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm
news

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm
news

ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

September 03, 2026 5:37 pm
news

ಕಾಡುಗೊಲ್ಲರು ಕೃಷ್ಣ ಜಯಂತಿ ಬದಲು ಬುಡಕಟ್ಟಿನ ಮೂಲ ಸಂಸ್ಕೃತಿ ಉಳಿಸಿ

September 02, 2026 5:37 pm
Our Youtube Channel
Our Picks

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

September 03, 2026 5:43 pm

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm

ಉಪ ಮುಖ್ಯಮಂತ್ರಿಗಳಿ0ದ ಪ್ರಜಾ ಸೇವಾ ಆಂದೋಲನಕ್ಕೆ ಚಾಲನೆ : ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

September 03, 2026 5:37 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ

By News Desk BenkiyabaleSeptember 03, 2026 5:43 pm

ತುಮಕೂರು: ತಾಲ್ಲೂಕಿನ ನೆಲಹಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದಿಹಳ್ಳಿ ಗ್ರಾಮದ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ವಿಬಿ ಜಿ ರಾಮ್ ಜಿ…

ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ

September 03, 2026 5:42 pm

ನಿರಂತರವಾಗಿ ಕ್ರೀಡೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಜಿ.ಬಿ. ಮಲ್ಲಪ್ಪ ಕರೆ

September 03, 2026 5:41 pm

ಸ್ಲ0ಗಳಲ್ಲಿ ಅರ್ಹ ೧೧೧೦ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಕ್ರಮ: ಡಿಸಿ

September 03, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.