BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ
  • 2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ
  • ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ
  • ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ
  • ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು
  • ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
  • ಬ್ಯಾಂಕ್‍ಗಳು ರೈತರ ಜಮೀನು ಈ ಹರಾಜು ನಿಲ್ಲಿಸಬೇಕು: ಆಗ್ರಹ
  • ಅಂತಿಮ ಮತದಾರರ ಪಟ್ಟಿ ಪ್ರಕಟ: ಜಿಲ್ಲೆಯಲ್ಲಿ 20.94ಲಕ್ಷ ಮತದಾರರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜ.1ರಿಂದ ರಾಗಿ ಖರೀದಿ ನೋಂದಣಿ ಪ್ರಾರಂಭಿಸಿ – ಡಿಸಿ
Trending

ಜ.1ರಿಂದ ರಾಗಿ ಖರೀದಿ ನೋಂದಣಿ ಪ್ರಾರಂಭಿಸಿ – ಡಿಸಿ

By News Desk BenkiyabaleUpdated:December 24, 2021 6:01 pm

 ತುಮಕೂರು :

      ಜಿಲ್ಲೆಯಲ್ಲಿ 2021-22ನೇ ಮುಂಗಾರು ಋತುವಿನ ಅವಧಿಗೆ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು 2022ರ ಜನವರಿ 1 ರಿಂದ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

      ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸರ್ಕಾರ ನಿಗಧಿಪಡಿಸಿರುವ ಬೆಂಬಲ ಬೆಲೆಯಲ್ಲಿ ರೈತರಿಂದ ರಾಗಿ ಖರೀದಿಸಲು ಜನವರಿ 1 ರಿಂದ 20ರವರೆಗೆ ಕೋವಿಡ್ ನಿಯಮಗಳನ್ನು ಅನುಸರಿಸುವ ಮೂಲಕ ರೈತರ ನೋಂದಣಿಗೆ ಸೂಕ್ತ ಕ್ರಮ ಕೈಗೊಳ್ಳುವುದಲ್ಲದೆ, ವ್ಯವಸ್ಥಿತವಾಗಿ ನೋಂದಣಿ ಪ್ರಕ್ರಿಯೆಯನ್ನು ನಡೆಸಬೇಕೆಂದು ಸೂಚಿಸಿದರು.

      ರೈತರು ನೋಂದಣಿಯನ್ನು ಆಯಾ ಖರೀದಿ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಮಾಡಿಕೊಳ್ಳಬೇಕಾಗುತ್ತದೆ. ಕೃಷಿ ಇಲಾಖೆ ನೀಡಿರುವ ‘FRUITS ID’’ ಯನ್ನು ಮಾತ್ರ ಹಾಜರುಪಡಿಸಿ ನೋಂದಾಯಿಸಿಕೊಳ್ಳಬೇಕು ಎಂದರಲ್ಲದೆ, ಸರ್ಕಾರ ನಿಗಧಿಪಡಿಸಿರುವ ಮಾನದಂಡವನ್ನು ಅನುಸರಿಸಿ ಎಫ್.ಎ.ಕ್ಯೂ. ಗುಣಮಟ್ಟದ ರಾಗಿಯನ್ನು ಮಾತ್ರ ಖರೀದಿ ಮಾಡಬೇಕು. ಕಳಪೆ ಗುಣಮಟ್ಟದ ರಾಗಿ ಖರೀದಿಯಾದರೆ ಸಂಬಂಧಿಸಿದ ಖರೀದಿ ಅಧಿಕಾರಿ ಮತ್ತು ಕೃಷಿ ಇಲಾಖೆಯ ಗ್ರೇಡರ್‍ಗಳನ್ನೇ ಜವಾಬ್ದಾರಿ ಮಾಡಲಾಗುವುದು ಎಂದು ತಿಳಿಸಿದರು.

      ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯನ್ನು ಜನವರಿ 21 ರಿಂದ ಪ್ರಾರಂಭಿಸಬೇಕು. ಸರ್ಕಾರದಿಂದ ಪ್ರತಿ ಕ್ವಿಂಟಾಲ್ ರಾಗಿಗೆ 3377 ರೂ.ಗಳ ಖರೀದಿ ದರವನ್ನು ನಿಗಧಿಪಡಿಸಲಾಗಿದೆ. ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್‍ನಂತೆ ಗರಿಷ್ಟ 20 ಕ್ವಿಂಟಾಲ್‍ವರೆಗೆ ಮಾತ್ರ ರಾಗಿಯನ್ನು ಖರೀದಿಸಲಾಗುವುದು. ಸರ್ಕಾರ ನಿಗಧಿಪಡಿಸಿದ ಪ್ರಮಾಣವನ್ನು ಮೀರಿ ಹೆಚ್ಚುವರಿಯಾಗಿ ರಾಗಿಯನ್ನು ಖರೀದಿಸುವಂತಿಲ್ಲ. ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಹಾಗೂ ನೋಂದಣಿ ಪ್ರಕ್ರಿಯೆಯಲ್ಲಿ ಬೋಗಸ್ ಗ್ರೇಡಿಂಗ್, ಮತ್ತಿತರ ಲೋಪವೆಸಗುವ ಅಧಿಕಾರಿಗಳ ಮೇಲೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಎಚ್ಚರಿಕೆಯಿಂದ ರಾಗಿ ಖರೀದಿ ಮತ್ತು ನೋಂದಣಿ ಪ್ರಕ್ರಿಯೆಯನ್ನು ನಡೆಸಬೇಕೆಂದು ಸೂಚಿಸಿದರು.

      ಪ್ರತಿ ರಾಗಿ ಖರೀದಿ ಕೇಂದ್ರಕ್ಕೆ ಖರೀದಿ ಸಿಬ್ಬಂದಿ ಮತ್ತು ಡಾಟಾ ಎಂಟ್ರಿ ಆಪರೇಟರ್ ಸೇರಿದಂತೆ ಅಗತ್ಯ ಪರಿಕರಗಳನ್ನು ಒದಗಿಸಬೇಕು. ತಿಪಟೂರು ಮತ್ತು ಕುಣಿಗಲ್ ತಾಲ್ಲೂಕುಗಳಲ್ಲಿ ಖರೀದಿ ಪ್ರಮಾಣ ಹೆಚ್ಚಾಗುವ ಸಂಭವವಿರುವುದರಿಂದ ಹೆಚ್ಚುವರಿ ಸಿಬ್ಬಂದಿ ಹಾಗೂ ನುರಿತ ಗ್ರೇಡರ್‍ಗಳನ್ನು ನೇಮಿಸಬೇಕು. ಖರೀದಿ ಪ್ರಕ್ರಿಯೆಗೆ ನಿಯೋಜಿಸುವ ಗ್ರೇಡರ್‍ಗಳಿಗೆ ಅಗತ್ಯ ತರಬೇತಿ ನೀಡಬೇಕು. ಖರೀದಿ ಪ್ರಕ್ರಿಯೆಯು ಮಾರ್ಚ್ 31ರವರೆಗೆ ನಡೆಯಲಿದ್ದು, ರೈತರಿಗೆ ಸಮಸ್ಯೆಯಾಗದಂತೆ ಯಾವುದೇ ದೂರು ಬಾರದಂತೆ ಖರೀದಿ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಡೆಸಬೇಕು ಎಂದರು.

      ಖರೀದಿ ಕೇಂದ್ರಗಳಿಗೆ ರಾಗಿ ಮಾರಾಟ ಮಾಡಲು ಬರುವ ರೈತರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ವ್ಯವಸ್ಥೆ ಮಾಡಬೇಕೆಂದರಲ್ಲದೆ, ಈಖUIಖಿS Iಆ ಯಲ್ಲಿ ನೋಂದಣಿಯಾದ ರೈತರು ಮಾತ್ರ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಗಿ ಮಾರಾಟ ಮಾಡಲು ಅವಕಾಶವಿದೆ ಎಂಬ ಮಾಹಿತಿಯನ್ನು ರೈತರಿಗೆ ನೀಡಬೇಕು. ವಿನಾಕಾರಣ ಅವರನ್ನು ಅಲೆದಾಡಿಸಬಾರದು ಎಂದರು.
ಜಿಲ್ಲೆಯಲ್ಲಿ ಕಳೆದ 2020-21ನೇ ಸಾಲಿನಲ್ಲಿ 8,32,92.350 ಮೆ.ಟನ್ ರಾಗಿ ಖರೀದಿಯಾಗಿದ್ದು, ಈ ಸಾಲಿನಲ್ಲಿಯೂ ಕೂಡ ಹೆಚ್ಚಿನ ಪ್ರಮಾಣದಲ್ಲಿ ರಾಗಿ ಬರಬಹುದೆಂದು ಅಂದಾಜಿಸಲಾಗಿದೆ. ಖರೀದಿ ಕೇಂದ್ರದಲ್ಲಿ ಖರೀದಿಸಿದ ದಾಸ್ತಾನು ಸಂಗ್ರಹ ಮಾಡಲು ಅಗತ್ಯ ಗೋದಾಮುಗಳನ್ನು ಕಾಯ್ದಿರಿಸಬೇಕು. ಕಳೆದ ವರ್ಷ ಎದುರಿಸಿದ ಸಮಸ್ಯೆಗಳು ಮರುಕಳಿಸದಂತೆ ಜಾಗ್ರತೆ ವಹಿಸಬೇಕು. ರೈತರಿಂದ ಯಾವುದೇ ದೂರು ಬಂದರೆ ನಾನು ಸಹಿಸುವುದಿಲ್ಲವೆಂದು ಎಚ್ಚರಿಕೆ ನೀಡಿದರು.

      ರಾಗಿ ಖರೀದಿ ಕೇಂದ್ರಗಳನ್ನು ಎಪಿಎಂಸಿ ಆವರಣಗಳಲ್ಲಿ ತೆರೆಯಬೇಕು. ಈ ಖರೀದಿ ಕೇಂದ್ರದಲ್ಲಿ ಕನಿಷ್ಟ 1000 ದಿಂದ 2000 ಕ್ವಿಂಟಾಲ್ ದಾಸ್ತಾನು ಮಾಡಿಕೊಳ್ಳುವ ಸಾಮಥ್ರ್ಯವಿರುವ ಸ್ಥಳವನ್ನು ಗುರುತಿಸಿ ಸದರಿ ಸ್ಥಳದಲ್ಲಿಯೇ ಖರೀದಿ ಕೇಂದ್ರವನ್ನು ತೆರೆಯಬೇಕು ಎಂದು ತಿಳಿಸಿದರಲ್ಲದೆ, ಆಯಾ ತಾಲ್ಲೂಕು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಎಪಿಎಂಸಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಂದಾಯ, ಕೃಷಿ ಇಲಾಖೆ ಸಿಬ್ಬಂದಿಗಳನ್ನೊಳಗೊಂಡ ತಾಲ್ಲೂಕು ಮಟ್ಟದ ಸಮಿತಿ ರಚಿಸಲಾಗಿದ್ದು, ಸಮಿತಿಯು ರೈತರ ನೋಂದಣಿ ಕೇಂದ್ರ ಮತ್ತು ರಾಗಿ ಕೇಂದ್ರಗಳಿಗೆ ಆಗಿಂದಾಗ್ಗೆ ಭೇಟಿ ನೀಡಿ ಖರೀದಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯುವಂತೆ ಮೇಲ್ವಿಚಾರಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

    ರಾಗಿ ಖರೀದಿ ಪ್ರಕ್ರಿಯೆ ಪ್ರಾರಂಭಿಸುತ್ತಿರುವ ಬಗ್ಗೆ ಆಯಾ ವ್ಯಾಪ್ತಿಯ ಶಾಸಕರು ಮತ್ತು ಜನಪ್ರತಿನಿಧಿಗಳಿಗೆ ಮಾಹಿತಿ ನೀಡಬೇಕೆಂದು ನಿರ್ದೇಶನ ನೀಡಿದರು.

     ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಕುಣಿಗಲ್, ತಿಪಟೂರು, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಗುಬ್ಬಿ, ಮಧುಗಿರಿ, ತುಮಕೂರು, ಸಿರಾ ತಾಲ್ಲೂಕು ಸೇರಿದಂತೆ ಹುಳಿಯಾರಿನಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿತ್ತು. ಈ ಖರೀದಿ ಕೇಂದ್ರಗಳ ಜೊತೆಗೆ ಪ್ರಸಕ್ತ ಸಾಲಿನಲ್ಲಿ ತಿಪಟೂರು ಮತ್ತು ಕುಣಿಗಲ್ ತಾಲ್ಲೂಕಿನಲ್ಲಿ ಹೆಚ್ಚುವರಿಯಾಗಿ ತಲಾ 1 ಖರೀದಿ ಕೇಂದ್ರವನ್ನು ತೆರೆಯಬೇಕೆಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

      ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸಯ್ಯ, ಕೃಷಿ ಇಲಾಖೆಯ ಅಶೋಕ್, ಆಹಾರ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಉಗ್ರಾಣ ನಿಗಮ, ಎಪಿಎಂಸಿ, ಕೆಎಫ್‍ಸಿಎಸ್‍ಸಿ ಅಧಿಕಾರಿ/ಸಿಬ್ಬಂದಿಗಳು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
 

 

 

 

(Visited 29 times, 1 visits today)
Previous Articleಕೋವಿಡ್ ಲಸಿಕಾಕರಣದಲ್ಲಿ ಬೇಜವಾಬ್ದಾರಿ ಸಲ್ಲದು: ಡಿಸಿ
Next Article  ತುಮಕೂರು : ಡಿ.28ರಿಂದ ನೈಟ್ ಕಫ್ರ್ಯೂ ಜಾರಿ
News Desk Benkiyabale

Related Posts

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

October 29, 2026 5:45 pm news

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

October 29, 2026 1:34 pm news

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm news
ತಾಜಾ ಸುದ್ಧಿಗಳು
news

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

October 29, 2026 5:45 pm
news

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

October 29, 2026 1:34 pm
news

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm
news

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ

October 29, 2026 1:29 pm
news

ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು

October 28, 2026 5:59 pm
news

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

October 28, 2026 3:29 pm
Our Youtube Channel
Our Picks

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

October 29, 2026 5:45 pm

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

October 29, 2026 1:34 pm

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ

October 29, 2026 1:29 pm

ಜನರಿಗೆ ಕಲಬೆರಕೆ ರಹಿತ ಪದಾರ್ಥಗಳು ದೊರೆಯಬೇಕು

October 28, 2026 5:59 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರ ವಹಿಸಿ

By News Desk BenkiyabaleOctober 29, 2026 5:45 pm

ಪಾವಗಡ: ತಾಲ್ಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಗುರುವಾರ ಪಾವಗಡಕ್ಕೆ ಭೇಟಿ ನೀಡಿ…

2028ರ ವಿಧಾನಸಭಾ ಚುನಾವಣೆಯಲ್ಲೂ ಎನ್‍ಡಿಎ ಸರ್ಕಾರ

October 29, 2026 1:34 pm

ಬ್ಯಾಂಕುಗಳಲ್ಲಿರುವ ಖಾತೆಗಳಿಗೆ ನಾಮಿನೇಷನ್ ಮಾಡಿಸಿಕೊಳ್ಳಿ

October 29, 2026 1:31 pm

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಎಸ್‍ಐಆರ್ ಅಂತಿಮ ಪಟ್ಟಿ ಪ್ರಕಟ

October 29, 2026 1:29 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.