BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
  • ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು
  • ೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ
  • ಅಗತ್ಯ ವಸ್ತುಗಳ ಖರೀದಿ, ನಿಜವಾದ ಹಸಿವು ನೀಗುವ ಶಕ್ತಿ
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿರೆ 7 ದಿನ ರಜೆ
Trending

ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿರೆ 7 ದಿನ ರಜೆ

By News Desk BenkiyabaleUpdated:January 13, 2022 7:40 pm

ತುಮಕೂರು :

      ಜಿಲ್ಲೆಯಲ್ಲಿ ಪ್ರತಿದಿನವೂ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟು ವರದಿ ಬಂದ ದಿನದಿಂದ ಆಯಾ ಶಾಲೆಗಳಿಗೆ 7 ದಿನಗಳ ಕಾಲ ರಜೆ ಘೋಷಿಸಲು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಮ್ಮ ಕಚೇರಿಯಲ್ಲಿ ಗುರುವಾರ ಬೆಳಿಗ್ಗೆ ವಿವಿಧ ಅಧಿಕಾರಿಗಳೊಂದಿಗೆ ಜûೂಮ್ ಮೀಟಿಂಗ್ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ದೃಢಪಡುವ (ಪಾಸಿಟಿವಿಟಿ) ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿರುವುದು ಕಂಡು ಬಂದಿದ್ದು, ಮಕ್ಕಳಲ್ಲೂ ಸಹ ಕೋವಿಡ್ ಸೋಂಕು ಹೆಚ್ಚಾಗಿ ಹರಡುತ್ತಿದೆ. ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಸಂಬಂಧಿಸಿದ ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ನಿರ್ದೇಶಿಸಿದರು.
ಕೋವಿಡ್ ಮೊದಲ ಹಾಗೂ ಎರಡನೇ ಅಲೆಗಿಂತ 3ನೇ ಅಲೆ ಹರಡುವಿಕೆಯ ಸ್ವರೂಪ ಭಿನ್ನವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಸಂಬಂಧಿಸಿದ ಅಧಿಕಾರಿಗಳ ಪರಿಶ್ರಮ ಅಗತ್ಯವಿದೆ ಎಂದರಲ್ಲದೆ, ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಎಲ್ಲಾ ಡಿಡಿಪಿಐ, ಬಿಆರ್‍ಸಿ, ಸಿಆರ್‍ಸಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಕೆಮ್ಮು, ನೆಗಡಿಯಂತಹ ಕೋವಿಡ್ ಗುಣಲಕ್ಷಣಗಳಿದ್ದು, ಕೋವಿಡ್ ಪರೀಕ್ಷೆಗೆ ಒಳಗಾಗಿ ಸೋಂಕು ದೃಢಪಟ್ಟ ಶಾಲಾ ವಿದ್ಯಾರ್ಥಿಗಳು ಶಾಲೆಗೆ ಬರುವ ಅಗತ್ಯವಿಲ್ಲ. ಮಕ್ಕಳು ಶಾಲೆ ಪ್ರವೇಶಕ್ಕೂ ಮುನ್ನ ಕಡ್ಡಾಯ ಮಾಸ್ಕ್ ಧರಿಸಿರುವ ಹಾಗೂ ಕೋವಿಡ್ ಗುಣಲಕ್ಷಣಗಳಿರುವ ಬಗ್ಗೆ ಶಿಕ್ಷಕರು ಕಡ್ಡಾಯವಾಗಿ ಪರಿಶೀಲಿಸಬೇಕು. ಗುಣಲಕ್ಷಣಗಳು ಕಂಡು ಬಂದರೆ ಕೂಡಲೇ ಕೋವಿಡ್ ಪರೀಕ್ಷೆಗೊಳಪಡಿಸಲು ಕ್ರಮ ಕೈಗೊಳ್ಳಬೇಕು. ಪ್ರಾಥಮಿಕ ಶಾಲಾ ಮಕ್ಕಳಲ್ಲಿ ಮಾಸ್ಕ್ ಧಾರಣೆ ಕುರಿತು ಅರಿವು ಮೂಡಿಸಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದನ್ನು ಕಲಿಸಬೇಕು ಎಂದು ಸಲಹೆ ನೀಡಿದರು.
ಕೋವಿಡ್ ಲಕ್ಷಣ ಕಂಡು ಬಂದ ಮಕ್ಕಳನ್ನು ಶಾಲೆಯಲ್ಲಿ ಪ್ರತ್ಯೇಕಿಸಿ ಮನೆಗೆ ಮರಳುವಂತೆ ಕ್ರಮ ಕೈಗೊಳ್ಳಬೇಕಲ್ಲದೆ, ಮಕ್ಕಳ ಪೋಷಕರಿಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಹಾಗೂ 7 ದಿನಗಳ ಕಾಲ ಮಕ್ಕಳನ್ನು ಶಾಲೆಗೆ ಕಳುಹಿಸಬಾರದೆಂದು ಮನವರಿಕೆ ಮಾಡಬೇಕು ಎಂದು ತಿಳಿಸಿದರು.
ಮಕ್ಕಳಲ್ಲಿ ಗಂಭೀರ ಪ್ರಮಾಣದಲ್ಲಿ ಕೋವಿಡ್ ಗುಣಲಕ್ಷಣ ಕಂಡು ಬಂದರೆ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಿಸಬೇಕು. ಮಧುಗಿರಿ, ಮತ್ತಿತರ ಕಡೆ ಸೋಂಕು ದೃಢಪಟ್ಟ ಮಕ್ಕಳನ್ನೆಲ್ಲಾ ಆಸ್ಪತ್ರೆಗೆ ದಾಖಲಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಸರ್ಕಾರದ ನಿಯಮದನ್ವಯ ಪಾಸಿಟಿವ್ ಬಂದವರನ್ನೆಲ್ಲಾ ಆಸ್ಪತ್ರೆಗೆ ದಾಖಲಿಸಿದರೆ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಹಾಸಿಗೆಗಳ ಕೊರತೆ ನಿರ್ಮಾಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಪಾಸಿಟಿವ್ ಬಂದವರನ್ನೆಲ್ಲಾ ದಾಖಲು ಮಾಡದೆ ವೈದ್ಯರ ಸಲಹೆ ಮೇರೆಗೆ ಅವಶ್ಯಕತೆ ಇದ್ದಾಗ ಮಾತ್ರ ಆಸ್ಪತ್ರೆಗೆ ದಾಖಲು ಮಾಡಬೇಕು ಎಂದು ಸಲಹೆ ನೀಡಿದರು.
ಯಾವುದೇ ಮಗುವಿಗೆ ಕೋವಿಡ್ ಗುಣಲಕ್ಷಣಗಳ ಬಗ್ಗೆ ಶಿಕ್ಷಕರು ಗಮನಿಸುತ್ತಿರಬೇಕು. ಶಾಲಾ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ವರದಿಯಾದಲ್ಲಿ ಖಾಸಗಿ ಸೇರಿದಂತೆ ಆಯಾ ಶಾಲೆಗೆ 7 ದಿನಗಳ ರಜೆ ನೀಡಲು ಸಂಬಂಧಿಸಿದ ಶಾಲಾ ಮುಖ್ಯಸ್ಥರಿಗೆ ಅಧಿಕಾರ ನೀಡಲಾಗಿದೆ. ಕೋವಿಡ್ ಸೋಂಕಿತ ಮಕ್ಕಳು ಸಹಜ ಸ್ಥಿತಿಗೆ ಮರಳಿ ಗುಣಮುಖರಾದಾಗ ಹೋಂ ಐಸೋಲೇಷನ್‍ಗೆ ಸಲಹೆ ನೀಡಬೇಕು ಎಂದು ತಿಳಿಸಿದರು.
ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ಕಟ್ಟುನಿಟ್ಟಾಗಿ ಕೋವಿಡ್ ನಿಯಮಗಳ ಪಾಲನೆಗೆ ಸಂಬಂಧಿಸಿದಂತೆ ಬಗ್ಗೆ ವಾರ್ಡನ್‍ಗಳಿಗೆ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ. ವಸತಿ ನಿಲಯಗಳ ಮಕ್ಕಳಿಗೆ ಪಾಸಿಟಿವ್ ದೃಢಪಟ್ಟರೆ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಿ ಪರೀಕ್ಷೆಗೊಳಪಡಿಸಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ತಿಳಿಸಿದರು.
ವಿದ್ಯಾರ್ಥಿನಿಲಯಗಳಲ್ಲೂ ಸಹ ಪಾಸಿಟಿವ್ ಪ್ರಕರಣ ವರದಿ ಬಂದ ನಂತರ ಆಯಾ ತರಗತಿ ಮಕ್ಕಳನ್ನು ತಪಾಸಣೆ ನಡೆಸಿ ಪ್ರತ್ಯೇಕ ಕೋಣೆಯಲ್ಲಿರಿಸಬೇಕು. ಉಳಿದವರ ಜೊತೆ ಬೆರೆಯದ ಹಾಗೆ ನಿಗಾವಹಿಸಬೇಕು. ಪಾಸಿಟಿವ್ ದೃಢಪಟ್ಟ ಮಕ್ಕಳ ಪೋಷಕರು ತಮ್ಮ ಮಕ್ಕಳನ್ನು ಮನೆಗೆ ಕರೆದೊಯ್ಯಲು ಮನವಿ ಮಾಡಿದಾಗ ಅನುಸರಿಸಬೇಕಾದ ಕೋವಿಡ್ ನಿಯಮ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿ ಹೇಳಿ ಮಕ್ಕಳನ್ನು ಪೋಷಕರೊಂದಿಗೆ ಕಳುಹಿಸಬೇಕೆಂದು ತಿಳಿಸಿದರು.
ಕೋವಿಡ್ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರತೀ ದಿನ 10,000 ಪರೀಕ್ಷೆ ನಡೆಸಲು ಸರ್ಕಾರ ನಿಗಧಿಪಡಿಸಿದ್ದು, ಅದರನ್ವಯ ತುಮಕೂರು ತಾಲ್ಲೂಕಿಗೆ 2500; ಶಿರಾ-1500; ಗುಬ್ಬಿ, ತಿಪಟೂರು ಹಾಗೂ ಮಧುಗಿರಿಗೆ ತಲಾ 1200; ಉಳಿದ ಎಲ್ಲಾ ತಾಲ್ಲೂಕುಗಳಿಗೆ ತಲಾ 1000 ಕೋವಿಡ್ ಪರೀಕ್ಷೆ ನಡೆಸಬೇಕು ಎಂದು ಆರೋಗ್ಯ ಇಲಾಖೆಗೆ ಸೂಚನೆ ನೀಡಿದರು. ಪಾಸಿಟಿವಿಟಿ ದರವನ್ನು ನಿಯಂತ್ರಿಸುವ ಸಲುವಾಗಿ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಶಾಲೆಗಳಲ್ಲಿ 15-18 ವರ್ಷದೊಳಗಿನ ಮಕ್ಕಳಿಗೆ ಲಸಿಕಾಕರಣ ಕಾರ್ಯವನ್ನು ಮುಂದುವರೆಸಲಾಗುವುದು. ಕೋವಿಡ್ 2ನೇ ಡೋಸ್ ಬಾಕಿಯಿರುವ 1,84,000 ಲಸಿಕಾಕರಣವನ್ನು ಪೂರ್ಣಗೊಳಿಸಬೇಕು. ಮೊದಲ ಡೋಸ್ ಪೂರ್ಣಗೊಳಿಸಲು 40,000 ಬಾಕಿಯಿದ್ದು, ಆದಷ್ಟು ಬೇಗ ಪೂರ್ಣಗೊಳಿಸಬೇಕು. ಪಾವಗಡ, ತುಮಕೂರು ನಗರ, ತಿಪಟೂರು, ಗುಬ್ಬಿ, ತುರುವೇಕೆರೆ, ಚಿಕ್ಕನಾಯಕನಹಳ್ಳಿಯಲ್ಲಿ ಲಸಿಕಾಕರಣ ಪ್ರಮಾಣ ಕಡಿಮೆ ಇದ್ದು, ಗಂಭೀರವಾಗಿ ಪರಿಗಣಿಸಿ ಶೀಘ್ರ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ನಾಗೇಂದ್ರಪ್ಪ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ: ಸನತ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ: ಮೋಹನ್ ದಾಸ್, ಡಿಡಿಪಿಐ ಸಿ.ನಂಜಯ್ಯ ಹಾಜರಿದ್ದರು.

(Visited 7 times, 1 visits today)
Previous Article ತುಮಕೂರು : ಹಾಸಿಗೆಗಳನ್ನು ಮೀಸಲಿಡಲು ಆಸ್ಪತ್ರೆಗಳಿಗೆ ಡೀಸಿ ಸೂಚನೆ
Next Article ಕೊರಟಗೆರೆ : ಸರಕಾರಿ ಬಸ್ ಹರಿದು ಬಿಕ್ಷುಕ ಮತ್ತು ರೈತ ಸಾವು!!
News Desk Benkiyabale

Related Posts

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm news

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm news

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm news
ತಾಜಾ ಸುದ್ಧಿಗಳು

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am

೬ ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ಶಾಸಕ

June 25, 2026 10:51 am
Our Youtube Channel
Our Picks

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm

ಹುಳಿಯಾರು ಕೆರೆ: ತ್ಯಾಜ್ಯ ಮುಕ್ತಿಗೆ ಮುಂದಾದ ಅಧಿಕಾರಿಗಳು

June 25, 2026 10:54 am
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

By News Desk BenkiyabaleJune 26, 2026 5:28 pm

ಕೊರಟಗೆರೆ: ತೋಟದ ಮನೆಯಲ್ಲಿದ್ದ ವೃದ್ದೆಯ ಕೈ ಕಾಲು ಕಟ್ಟಿ ಉಸಿರುಗಟ್ಟಿಸಿ ಕೊಲೆಮಾಡಿ ಮೈಮೇಲಿದ್ದ ಚಿನ್ನಾಭರಣ ದೋಚಿದ್ದ ಕಳ್ಳರನ್ನು ಕೊರಟಗೆರೆ ಸಿಪಿಐ…

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm

ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ

June 25, 2026 5:34 pm

ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ

June 25, 2026 5:31 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.