BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
  • ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗ್ರಾಮ-ಒನ್ ಕೇಂದ್ರಗಳಲ್ಲಿ ಎಬಿಎಆರ್‍ಕೆ ಕಾರ್ಡ್ ನೀಡಿ – ಡಿಸಿ
Trending

ಗ್ರಾಮ-ಒನ್ ಕೇಂದ್ರಗಳಲ್ಲಿ ಎಬಿಎಆರ್‍ಕೆ ಕಾರ್ಡ್ ನೀಡಿ – ಡಿಸಿ

By News Desk BenkiyabaleUpdated:February 14, 2022 7:22 pm

ತುಮಕೂರು :

       ಜಿಲ್ಲೆಯಲ್ಲಿ ಕಾರ್ಯಾರಂಭ ಮಾಡಿರುವ ಗ್ರಾಮ-ಒನ್ ಕೇಂದ್ರಗಳಲ್ಲಿ ಮೊದಲಾದ್ಯತೆಯ ಮೇರೆಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (ಂಃಂಖಏ) ಯೋಜನೆಯಡಿ ಆರೋಗ್ಯ ಕಾರ್ಡ್‍ಗಳನ್ನು ನೀಡಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

      ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಾತನಾಡಿದ ಅವರು ಗ್ರಾಮ-ಒನ್ ಯೋಜನೆಯು ಮುಖ್ಯಮಂತ್ರಿಯವರ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆಯಡಿ ನೂರಕ್ಕೂ ಹೆಚ್ಚು ಸರ್ಕಾರಿ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲಾಗುತ್ತಿದೆ. ಯೋಜನೆಯಡಿ ಸರ್ಕಾರಿ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶ ಹೊಂದಿದ್ದು, ಇದರಿಂದ ಜನರು ಸರ್ಕಾರಿ ಕೆಲಸಗಳಿಗಾಗಿ ನಗರಗಳಿಗೆ ಬಂದು-ಹೋಗುವುದು ತಪ್ಪುತ್ತದೆ ಎಂದರಲ್ಲದೆ, ತಹಶೀಲ್ದಾರ್, ತಾಲ್ಲೂಕು ಆರೋಗ್ಯಾಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಇಂದಿನಿಂದ 9 ಮತ್ತು 10ನೇ ತರಗತಿಯನ್ನು ಪ್ರಾರಂಭಿಸಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಕೋವಿಡ್-19 ಮೂರನೇ ಅಲೆಯು ನಿಯಂತ್ರಣಕ್ಕೆ ಬರುತ್ತಿದ್ದರೂ ಲಸಿಕಾಕರಣವನ್ನು ಪೂರ್ಣಗೊಳಿಸದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಎರಡನೇ ಡೋಸ್ ಲಸಿಕಾಕರಣವು ಶೇ. 91ರಷ್ಟು ಮಾತ್ರ ಪೂರ್ಣಗೊಂಡಿದ್ದು, ಬಾಕಿ ಇರುವ ಲಸಿಕಾಕರಣವನ್ನು ಶೀಘ್ರವಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲೆಯಲ್ಲಿ 15-18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆಯ ಮೊದಲನೇ ಡೋಸ್ ಶೇ.75ರಷ್ಟು, ಎರಡನೇ ಡೋಸ್ ಶೇ.24ರಷ್ಟು ಪೂರ್ಣಗೊಂಡಿದ್ದು ಲಸಿಕಾಕರಣವಾಗಬೇಕಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಶಾಲಾ-ಕಾಲೇಜುಗಳಿಂದ ಪಡೆದು ಶೇ.100ರಷ್ಟು ಲಸಿಕಾಕರಣವನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲೆಯಲ್ಲಿ ಬೂಸ್ಟರ್ ಡೋಸ್ ಲಸಿಕಾಕರಣವು ಶೇ.44ರಷ್ಟಾಗಿದ್ದು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಆದ್ಯತೆಯ ಮೇಲೆ ಲಸಿಕೆಯನ್ನು ನೀಡಿ ಶೇ.100ರಷ್ಟು ಗುರಿ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಕಂದಾಯ ಗ್ರಾಮ ರಚನೆಗಳ ಬಗ್ಗೆ ತಹಶೀಲ್ದಾರ್‍ಗಳು ಹೆಚ್ಚು ಕಾರ್ಯ ಪ್ರವೃತ್ತರಾಗಬೇಕು ಎಂದರಲ್ಲದೆ, ಪೈಕಿ-ಪಹಣಿ ಒಟ್ಟುಗೂಡಿಸುವಿಕೆ, 3/9 ಮಿಸ್‍ಮ್ಯಾಚ್, ಭೂಮಿ ಪೆಂಡೆನ್ಸಿ ಪ್ರಕರಣಗಳು ತ್ವರಿತ ವಿಲೇವಾರಿಯಾಗದ ಬಗ್ಗೆ ಬೇಸರ ವ್ಯಕ್ತಿಪಡಿಸಿದ ಅವರು, ಸದರಿ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಕಾಲ, ನಾಡಕಚೇರಿ ಪರಿಶೀಲನೆ, ನಮೂನೆ 1-5 ಸಿದ್ದಪಡಿಸುವ ಪ್ರಗತಿ, ನಮೂನೆ 50-53 ವಿಲೇವಾರಿ ಹಾಗೂ ನಮೂನೆ 57ರ ಗಣಕೀಕರಣ, ಸ್ಮಶಾನ ಹಾಗೂ ವಿವಿಧ ಉದ್ದೇಶಗಳಿಗೆ ಸರ್ಕಾರಿ ಜಮೀನು ಕಾಯ್ದಿರಿಸುವುದು ಸೇರಿದಂತೆ ವಿವಿಧ ಕೆಲಸಗಳು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ನಿರ್ದೇಶಿಸಿದರು.
ಘನತ್ಯಾಜ್ಯ ವಿಲೇವಾರಿಗಾಗಿ ಸೂಕ್ತ ಸ್ಥಳ ಕಾಯ್ದಿರಿಸುವ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಜಿಲ್ಲಾಧಿಕಾರಿಯವರ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಅವರು ತಹಶೀಲ್ದಾರ್, ಕಾರ್ಯನಿರ್ವಾಹಣಾಧಿಕಾರಿಗಳು ಈ ಕುರಿತು ಕ್ರಮವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮಾತನಾಡಿ, ಕಂದಾಯ ಇಲಾಖೆಯು ಸ್ಮಶಾನಕ್ಕಾಗಿ ಈಗಾಗಲೇ ಭೂಮಿಯನ್ನು ಮಂಜೂರು ಮಾಡುತ್ತಿದ್ದು ಸರ್ಕಾರಿ ಭೂಮಿ ಲಭ್ಯವಿಲ್ಲದಿದ್ದಲ್ಲಿ ಹೊಸ ಜಾಗ ಮಂಜೂರಾತಿಗೆ ಪ್ರಸ್ತಾವನೆಯನ್ನು ಸಲ್ಲಿಸಿ, ಸ್ಥಳ ಪರಿಶೀಲಿಸಿ ‘ಹದ್ದುಬಸ್ತ್’ ಮಾಡಿಸಿಕೊಟ್ಟರೆ ನರೇಗಾ ಯೋಜನೆಯಡಿ ಸ್ಮಶಾನವನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ ಕೋವಿಡ್‍ನಿಂದ ಮೃತಪಟ್ಟ 953 ಜನರ ಪೈಕಿ 706 ಮೃತರ ದಾಖಲೆಗಳು ಸ್ವೀಕೃತಗೊಂಡಿವೆ. ಉಳಿದ 247 ಪ್ರಕರಣಗಳಿಗೆ ಸರಿಯಾದ ಮಾಹಿತಿಯನ್ನು ನಮೂದಿಸಿ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ವಿ.ಅಜಯ್, ತಹಶೀಲ್ದಾರ್ ಜಿ.ವಿ.ಮೋಹನ್ ಕುಮಾರ್, ಪಾಲಿಕೆ ಆಯುಕ್ತೆ ರೇಣುಕಾ, ಡಿಎಚ್‍ಓ ಡಾ.ನಾಗೆಂದ್ರಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮೋಹನ್‍ದಾಸ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

(Visited 11 times, 1 visits today)
Previous Articleಹಿಜಾಬ್ ವಿಚಾರವಾಗಿ ನಡೆಯುತ್ತಿರುವ ವಿದ್ಯಮಾನಗಳು ಖಂಡನೀಯ
Next Article ತುಮಕೂರು : ಹಿಜಾಬ್ ಪ್ರಕರಣ ; ಇಂದಿನಿಂದ ನಿಷೇಧಾಜ್ಞೆ!!
News Desk Benkiyabale

Related Posts

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm news

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm news

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm news
ತಾಜಾ ಸುದ್ಧಿಗಳು

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm
Our Youtube Channel
Our Picks

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

By News Desk BenkiyabaleJune 27, 2026 5:34 pm

ತುಮಕೂರು: ಮನುಷ್ಯನಿಗೆಗುರಿ ಮತ್ತು ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ ಎಂದು ಮಾಜಿ ಸಚಿವ, ಮಧುಗಿರಿ ಕ್ಷೇತ್ರದ ಶಾಸಕ…

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.