BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಸೂಚನೆ
Trending

ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಸೂಚನೆ

By News Desk BenkiyabaleUpdated:April 18, 2022 5:26 pm

ತುಮಕೂರು:
ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ವಿಶೇಷ ಮುತುವರ್ಜಿವಹಿಸಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು ಹಾಗೂ ಮನೆಗಳಿಗೆ ಸರಬರಾಜು ಮಾಡುವ ನೀರು ಗುಣಮಟ್ಟದಿಂದ ಕೂಡಿರುವ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಸೂಚಿಸಿದರು.
ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ನೀರಿನ ಮೂಲಗಳನ್ನು ಪರಿಶೀಲಿಸಿ ನೀರು ಸರಿಯಾಗಿ ಶುದ್ಧೀಕರಣವಾಗುತ್ತಿರುವ ಬಗ್ಗೆ ಹೆಚ್ಚು ಮುತುವರ್ಜಿವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ತೆರಿಗೆ ವಸೂಲಾತಿಯ ಬಗ್ಗೆ ಹೆಚ್ಚು ಗಮನ ನೀಡಬೇಕೆಂದರಲ್ಲದೇ ನಿಯಮಾವಳಿಯನ್ವಯ ಮಾರ್ಗಸೂಚಿಗಳನ್ನು ಪಾಲಿಸುವುದರೊಂದಿಗೆ ತೆರಿಗೆಯನ್ನು ವಸೂಲು ಮಾಡಲು ಕ್ರಮವಹಿಸಬೇಕೆಂದರು.
ಆಶ್ರಯ, ವಾಜಪೇಯಿ ಸೇರಿದಂತೆ ವಿವಿಧ ವಸತಿ ಯೋಜನೆಗಳಡಿ ವಸತಿ ಮಂಜೂರಾತಿಗಾಗಿ ಪ್ರಸ್ತಾವನೆ ಕಳುಹಿಸಿಕೊಡಲು ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜನಪ್ಪ ಅವರು ಸಭೆಯ ಗಮನಕ್ಕೆ ತಂದಾಗ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಶೀಘ್ರ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಪ್ರಸ್ತಾವನೆಗಳನ್ನು ಸ್ವೀಕರಿಸಿ ಸಲ್ಲಿಸಬೇಕೆಂದು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಸಫಲ-ವಿಫಲ ಕೊಳವೆ ಬಾವಿಗಳ ಸಂಪೂರ್ಣ ಮಾಹಿತಿಯಿರಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳು ಸೇರಿದಂತೆ ಜಿಲ್ಲೆಯಲ್ಲಿ ತೆರೆದ ಕೊಳವೆ ಬಾವಿಗಳನ್ನು ಹಾಗೆ ಬಿಡದೆ ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ತಾಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿಗಳು, ತಹಶಿಲ್ದಾರರಿಗೆ ಸೂಚಿಸಿದರು.
ಕೋವಿಡ್ ತಡೆಗಟ್ಟಲು ಲಸಿಕಾಕರಣ ಮುಂದುವರೆದಿದ್ದು ಮೊದಲ ಡೋಸ್ ಶೇ.100 ರಷ್ಟು ಪೂರ್ಣಗೊಂಡಿದೆ. ಎರಡನೇ ಡೋಸ್ ಶೇ.97ರಷ್ಟಾಗಿದ್ದು ಶೇ.100ರಷ್ಟು ಪೂರ್ಣಗೊಳಿಸಬೇಕೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ನಿಗಧಿಪಡಿಸಿರುವ ದಿನಗಳಂದು ನಡೆಯಲಿರುವ ಆರೋಗ್ಯ ಮೇಳವನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕಲ್ಲದೆ ಕಾರ್ಯಕ್ರಮಕ್ಕೆ ಸ್ಥಳೀಯ ಜನಪ್ರತಿನಿಧಿಗಳನ್ನು ಆಹ್ವಾನಿಸಬೇಕೆಂದು ತಾಲ್ಲೂಕು ಆಡಳಿತಕ್ಕೆ ಅವರು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಕೆ. ಚನ್ನಬಸಪ್ಪ ಮಾತನಾಡಿ ಸಮಗ್ರ ಸಾರ್ವಜನಿಕ ಕುಂದು-ಕೊರತೆ ನಿವಾರಣಾ ವ್ಯವಸ್ಥೆ (IPಉಖS)ಯಡಿ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕೆಂದರಲ್ಲದೇ, ಆಧಾರ್‍ಕಾರ್ಡ ಸೀಡಿಂಗ್ ಕೆಲಸಗಳನ್ನು ಪೂರ್ಣಗೊಳಿಸಲು ಕಾರ್ಯಪ್ರವೃತ್ತರಾಗಬೇಕೆಂದು ತಿಳಿಸಿದರು.
ಭೂಮಿ ಪೆಂಡೆನ್ಸಿ, ಪೈಕಿ ಪಹಣಿ, 3/9 ಮಿಸ್ ಮ್ಯಾಚ್, ಕಂದಾಯ ಗ್ರಾಮ ರಚನೆ, ನಾಡ ಕಚೇರಿ ಪ್ರಗತಿ ಪರಿಶೀಲನೆ, ರೈಲ್ವೆ ಭೂ ಸ್ವಾಧೀನ ಸೇರಿದಂತೆ ವಿವಿಧ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು.ಸಭೆಯಲ್ಲಿ ಉಪವಿಭಾಗಾಧಿಕಾರಿ ವಿ.ಅಜಯ್, ಪಾಲಿಕೆ ಆಯುಕ್ತೆ ರೇಣುಕಾ, ತಹಸಿಲ್ದಾರ್ ಮೋಹನ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ|| ಕೇಶವರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ಮೋಹನ್‍ದಾಸ್ ಸೇರಿದಂತೆ ಮತ್ತಿತರರು ಹಾಜರಿದ್ದರು.

(Visited 9 times, 1 visits today)
DC tumkur
Previous Articleಜನರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸಿ: ಜಿಲ್ಲಾಧಿಕಾರಿ
Next Article ಈಶ್ವರಪ್ಪ ಬಂಧನಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.