BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗುತ್ತಿಗೆ ಪದ್ದತಿ ರದ್ದುಪಡಿಸುವಂತೆ ಒತ್ತಾಯಿಸಿ ನೀರುಗಂಟಿಗಳ ಪ್ರತಿಭಟನೆ
ತುಮಕೂರು

ಗುತ್ತಿಗೆ ಪದ್ದತಿ ರದ್ದುಪಡಿಸುವಂತೆ ಒತ್ತಾಯಿಸಿ ನೀರುಗಂಟಿಗಳ ಪ್ರತಿಭಟನೆ

By News Desk BenkiyabaleUpdated:April 20, 2022 6:55 pm

ತುಮಕೂರು :

ಗುತ್ತಿಗೆ ಪದ್ದತಿ ರದ್ದು ಮಾಡಿ, ನೇರ ನೇಮಕಾತಿಗೆ ಅವಕಾಶ ಕಲ್ಪಿಸಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ನೀರು ಸರಬರಾಜು ನೌಕರರ ಸಂಘದ ಸದಸ್ಯರು ಪಾಲಿಕೆಯ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ನಿರತ ವಾಟರ್‍ಮನ್‍ಗಳನ್ನು ಉದ್ದೇಶಿಸಿ ಮಾತನಾಡಿದ ಕೆ.ಕುಮಾರ್, ಮಹಾನಗರ ಪಾಲಿಕೆಯಲ್ಲಿ ಕಳೆದ 20-25 ವರ್ಷಗಳಿಂದ ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ನೀರುಗಂಟಿಗಳಿಗೆ ಹುದ್ದೆ ಇದುವರೆಗೂ ಖಾಯಂ ಆಗಿಲ್ಲ. ಅಲ್ಲದೆ ವೇತನವೂ ಸರಿಯಾದ ಸಮಯಕ್ಕೆ ದೊರೆಯುತ್ತಿಲ್ಲ. ಪ್ರತಿ ಬಾರಿಯೂ ಪ್ರತಿಭಟನೆ ಮಾಡಿಯೇ ವೇತನ ಪಡೆಯಬೇಕಾದ ಸ್ಥಿತಿ ಇದೆ. ಸ್ವತಃ ರಾಜ್ಯಪಾಲರೆ ಪಾಲಿಕೆಗಳಲ್ಲಿ ಗುತ್ತಿಗೆ ನೌಕರರ ಪದ್ದತಿಯನ್ನು ರದ್ದು ಮಾಡುವಂತೆ ಸೂಚನೆ ನೀಡಿದ್ದರೂ ಇದುವರೆಗೂ ಅದನ್ನು ರಾಜ್ಯ ಸರಕಾರಗಳು ಜಾರಿಗೆ ತಂದಿಲ್ಲ. ಈ ಹಿಂದೆ ಹಲವು ಬಾರಿ ಮನವಿ ನೀಡಿದ್ದರೂ ಪ್ರಯೋಜನವಾಗಿಲ್ಲ. ಅಲ್ಲದೆ 5-04-2022 ರಂದು ಮನವಿ ಸಲ್ಲಿಸಿ, 19-04-2022ರೊಳಗೆ ನಮ್ಮ ಸೇವೆ ಖಾಯಂ ಗೊಳಿಸದಿದ್ದಲ್ಲಿ ಬೃಹತ್ ಮುಷ್ಕರ ನಡೆಸುವುದಾಗಿ ತಿಳಿಸಿದ್ದೇವೆ. ಆದರೆ ಇದುವರೆಗೂ ಪಾಲಿಕೆ ಆಡಳಿತ ನಮ್ಮ ಮನವಿಗೆ ಮನ್ನಣೆ ನೀಡಿಲ್ಲ ಎಂದರು.

ನೀರುಗಂಟಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿ, ಅವರೊಂದಿಗೆ ಮುಷ್ಕರದಲ್ಲಿ ಪಾಲ್ಗೊಂಡು ಮಾತನಾಡಿದ 15ನೇ ವಾರ್ಡಿನ ಪಾಲಿಕೆ ಕೌನ್ಸಿಲರ್ ಶ್ರೀಮತಿ ಗಿರಿಜಾ ಧನಿಯಕುಮಾರ್, ಅತಿ ಕಡಿಮೆ ವೇತನಕ್ಕೆ ನೀರುಗಂಟಿಗಳು ದುಡಿಯುತ್ತಿದ್ದಾರೆ. ಇವರ ಸೇವೆಯನ್ನು ಖಾಯಂ ಗೊಳಿಸಬೇಕು ಎಂಬ ಕಾರಣದಿಂದ 2019ರಲ್ಲಿ ನಡೆದ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಈ ವಿಚಾರಗಳನ್ನು ಚರ್ಚೆ ಮಾಡಿ, ಇವರ ಸೇವೆಯನ್ನು ಖಾಯಂಗೊಳಿಸಲು ಪೌರಾಡಳಿತ ಇಲಾಖೆಗೆ ನಿರ್ಣಯ ಕಳುಹಿಸಿಕೊಡಲಾಗಿದೆ.ಆದರೆ ಇದುವರೆಗೂ ರಾಜ್ಯ ಸರಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ. ನೀರುಗಂಟಿಗಳು ಮಕ್ಕಳು ಸಂಸಾರವಿದೆ. ಇಂದಿನ ಬೆಲೆ ಹೆಚ್ಚಳದ ಕಾಲದಲ್ಲಿ ಮಕ್ಕಳ ಓದು,ಮನೆ ಬಾಡಿಗೆ ಇವುಗಳನ್ನು ನಾವು ಪರಿಗಣಿಸ ಬೇಕಿದೆ. ಅಲ್ಲದೆ ನೇರ ಪಾವತಿಯ ಮೂಲಕ ಅವರ ಬೆವರಿನ ಹಣ ಅವರಿಗೆ ಸೇರುವಂತೆ ಮಾಡಬೇಕು.ಈ ನಿಟ್ಟಿನಲ್ಲಿ ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಇಂದೇ ಮೇಯರ್ ಮತ್ತು ಆಯುಕ್ತರೊಂದಿಗೆ ಮಾತನಾಡಿ,ಸಮಸ್ಯೆಯ ಪರಿಹಾರಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು.

ನೀರುಗಂಟಿಗಳು ಹಗಲು ರಾತ್ರಿ ಎನ್ನದೆ ಕೆಲಸ ಮಾಡಿದ್ದರಿಂದ ಇಂದು ನಾವು ನೆಮ್ಮದಿಯಿಂದ ಇದ್ದೇವೆ.ಇಲ್ಲದಿದ್ದಲ್ಲಿ ದಿನಕ್ಕೆ ಕುಡಿಯುವ ನೀರಿನ ವಿಚಾರವಾಗಿಯೇ ಸಾವಿರಾರು ಪೋನ್ ಕರೆಗಳಿಗೆ ಉತ್ತರಿಸಬೇಕಿತ್ತು. ಈಗ ಎಲ್ಲರೂ ಒಗ್ಗೂಡಿ ಕೆಲಸ ಬಹಿಷ್ಕರಿಸಿ ಮುಷ್ಕರ ನಿರತವಾಗಿರುವುದಿಂದ ಮುಂದಿನ ಎರಡು ಮೂರು ದಿನಗಳಲ್ಲಿ ನೀರಿನ ಕೊರತೆ ತಲೆದೊರಲಿದೆ.ಹಾಗಾಗಿ ಪಾಲಿಕೆಯ ಆಡಳಿತ ಶೀಘ್ರವಾಗಿ ಸಮಸ್ಯೆ ಬಗೆಹರಿಸಿ, ಜನರಿಗೆ ಬೇಸಿಗೆಯಲ್ಲಿ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಎಲ್ಲಾ ನೀರುಗಂಟಿಗಳು ಕೆಲಸ ಬಹಿಷ್ಕರಿಸಿ, ಪಾಲ್ಗೊಂಡಿದ್ದರು.

(Visited 16 times, 1 visits today)
Tumkur mahanagara palike
Previous Articleಅಭಿವೃದ್ಧಿಗೆ ಎಲೆಕ್ಟ್ರಾನಿಕ್ಸ್-ಕಮ್ಯೂನಿಕೇಷನ್ ಇಂಜಿನಿಯರಿಂಗ್ ಕ್ಷೇತ್ರ ಅಗತ್ಯ
Next Article ಮಲೇರಿಯಾ ಜಾಗೃತಿ ಜಾಥಾಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.