BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಳಪೆ ಕಾಮಗಾರಿಯಡಿ ಅರೆಬರೆ ಕಟ್ಟಿದ ಸರ್ಕಾರಿ ಶಾಲಾ ಕಟ್ಟಡ
  • ಶ್ರೀ ರಾಮನನ್ನು ಜಗತ್ತಿಗೆ ಪರಿಚಯಿಸಿದ ಮರ‍್ಷಿ ವಾಲ್ಮೀಕಿ : ಕೋಟಗುಡ್ಡದಲ್ಲಿ ಅದ್ದೂರಿ ಜಯಂತಿ ಆಚರಣೆ
  • ವಿಜೃಂಭಣೆಯಿಂದ ನಡೆದ ಶ್ರೀ ಮರ‍್ಷಿ ವಾಲ್ಮೀಕಿ ಜಯಂತೋತ್ಸವ ಆಚರಣೆ
  • ಯುವಕರು ಕ್ರೀಡೆಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ
  • ನ್ಯಾಯಾಧೀಶರ ಮೇಲೆ ಶೂ ಎಸೆದಿದ್ದು ಸಂವಿಧಾನಕ್ಕೆ ಮಾಡಿದಂತ ಅಪಚಾರ: ಕೃಷ್ಣಸ್ವಾಮಿ ಆಕ್ರೋಶ
  • ಅ.೨೪, ೨೫ರಂದು ಜಿಲ್ಲಾ ಯುವಜನೋತ್ಸವ
  • ಗವಾಯಿ ಅವರ ಮೇಲೆ ಶೂ ಎಸೆದಿರುವ ಪ್ರಕರಣ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಿ.7ರಿಂದ ರಾಜ್ಯ ಮಟ್ಟದ ಯುವಜನೋತ್ಸವ: ಡಿಸಿ ರಾಕೇಶ್ ಕುಮಾರ್
ತುಮಕೂರು ಜಿಲ್ಲಾ ಸುದ್ಧಿಗಳು

ಡಿ.7ರಿಂದ ರಾಜ್ಯ ಮಟ್ಟದ ಯುವಜನೋತ್ಸವ: ಡಿಸಿ ರಾಕೇಶ್ ಕುಮಾರ್

By News Desk BenkiyabaleUpdated:December 05, 2018 6:12 pm

ತುಮಕೂರು:

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಸಂಘಗಳ ಒಕ್ಕೂಟ, ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾಯತ್ ಸಂಯುಕ್ತಾಶ್ರಯದಲ್ಲಿ 2018-19ನೇ ಸಾಲಿನ ರಾಜ್ಯ ಮಟ್ಟದ ಯುವಜನೋತ್ಸವವು ಡಿಸೆಂಬರ್ 7 ರಿಂದ 9ರವರೆಗೆ ಮೂರು ದಿನಗಳ ಕಾಲ ತುಮಕೂರು ನಗರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್‍ಕುಮಾರ್ ಕೆ. ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಜನೋತ್ಸವ ಪ್ರಯುಕ್ತ ಗಾಜಿನಮನೆಯಲ್ಲಿ ಡಾ: ಗುಬ್ಬಿವೀರಣ್ಣ ವೇದಿಕೆ, ಬಾಲಭವನದಲ್ಲಿ ಅಮರ ಶಿಲ್ಪಿ ಜಕಣಾಚಾರಿ ವೇದಿಕೆ, ವಿಶ್ವವಿದ್ಯಾನಿಲಯದಲ್ಲಿ ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿ ವೇದಿಕೆ, ಕನ್ನಡಭವನದಲ್ಲಿ ಬಿ.ಎಂ.ಶ್ರೀ ವೇದಿಕೆ ಹಾಗೂ ವಿಶ್ವವಿದ್ಯಾನಿಲಯದಲ್ಲಿ ವಿಶ್ವೇಶ್ವರಯ್ಯ ಆಡಿಟೋರಿಯಂನಲ್ಲಿ ತೀ.ನಂ.ಶ್ರೀ ವೇದಿಕೆಯನ್ನು ನಿರ್ಮಿಸಿ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸ್ಪರ್ಧೆಗಳನ್ನು ನಡೆಸಲಾಗುವುದು ಎಂದು ಅವರು ತಿಳಿಸಿದರು.

ಡಿಸೆಂಬರ್ 7ರಂದು ಸಂಜೆ 4 ಗಂಟೆಗೆ ಮುಖ್ಯ ವೇದಿಕೆಯಾದ ಡಾ: ಗುಬ್ಬಿ ವೀರಣ್ಣ ವೇದಿಕೆ (ಗಾಜಿನಮನೆ, ಅಮಾನಿಕೆರೆ)ಯಲ್ಲಿ ಸನ್ಮಾನ್ಯ ಉಪ ಮುಖ್ಯ ಮಂತ್ರಿಗಳು ಹಾಗೂ ಮಾನ್ಯ ಗೃಹ, ಬೆಂಗಳೂರು ನಗರಾಭಿವೃದ್ದಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಜಿ.ಪರಮೇಶ್ವರ ಇವರು ಈ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಮಕೂರು ನಗರ ಶಾಸಕರಾದ ಶ್ರೀ ಜಿ.ಬಿ ಜ್ಯೋತಿಗಣೇಶ್ ರವರು ವಹಿಸಲಿದ್ದು ಮಾನ್ಯ ಕಾರ್ಮಿಕ ಇಲಾಖೆ ಸಚಿವರಾದ ಶ್ರೀ ವೆಂಕಟರಮಣಪ್ಪ ಹಾಗೂ ಮಾನ್ಯ ಸಣ್ಣ ಕೈಗಾರಿಕಾ ಇಲಾಖೆ ಸಚಿವರಾದ ಶ್ರೀ ಎಸ್ ಆರ್ ಶ್ರೀನಿವಾಸ್ ಇವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಮಾನ್ಯ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಲೋಕಸಭಾ ಸದಸ್ಯರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ದಿನಾಂಕ:07-12-2018ರಂದು ಸಂಜೆ 4.00 ಗಂಟೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಪೂರ್ವ ಭಾವಿಯಾಗಿ ಟೌನ್ ಹಾಲ್ ವೃತ್ತದಿಂದ ಗಾಜಿನ ಮನೆಯವರೆಗೆ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಏರ್ಪಡಿಸಲಾಗಿದೆ. ರಾಜ್ಯ ಮಟ್ಟದ ಯುವಜನೋತ್ಸವದ ವಿಶೇಷ ಆಕರ್ಷಣೆಯಾಗಿ ದಿನಾಂಕ:07-12-2018 ರಂದು ಉದ್ಘಾಟನೆ ನಂತರ ಸಂಜೆ 6 ಗಂಟೆಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಟಾನ ಇವರ ಕಲಾ ತಂಡಗಳಿಂದ ‘ಸಾಂಸ್ಕøತಿಕ ಸಂಜೆ’ ಆಯೋಜಿಸಿದ್ದು, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಕಲೆಗಳನ್ನು ಪ್ರದರ್ಶಿಸಲಿದ್ದಾರೆ. ಅಂದೇ 6 ಗಂಟೆಯಿಂದ ವಿವಿಧ ಸ್ಪರ್ಧೆಗಳು ಜರುಗಲಿದ್ದು, ಅಮರ ಶಿಲ್ಪಿ ಜಕಣಾಚಾರಿ ವೇದಿಕೆಯಲ್ಲಿ ಮಣಿಪುರಿ, ಓಡಿಸ್ಸಿ ಹಾಗೂ ಕಥಕ್ ನೃತ್ಯ; ಶಿವಕುಮಾರ ಸ್ವಾಮೀಜಿ ವೇದಿಕೆಯಲ್ಲಿ ಏಕಾಂಕ ನಾಟಕ; ಬಿ.ಎಂ.ಶ್ರೀ ವೇದಿಕೆಯಲ್ಲಿ ಸಿತಾರ್ ಮತ್ತು ಗಿಟಾರ್ ವಾದನ; ತೀ.ನಂ.ಶ್ರೀ ವೇದಿಕೆಯಲ್ಲಿ ವೀಣಾವಾದನ ಕಲಾಸ್ಪರ್ಧೆಗಳು ನಡೆಯಲಿವೆ ಎಂದು ಅವರು ಹೇಳಿದರು.

Displaying DSC_9261.JPG

ಡಿಸೆಂಬರ್ 8ರಂದು ಉತ್ಸವದ ಎರಡನೇ ದಿನದಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ ಮುಕ್ತಾಯದವರೆಗೆ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಡಾ: ಗುಬ್ಬಿ ವೀರಣ್ಣ ವೇದಿಕೆಯಲ್ಲಿ ಜನಪದ ನೃತ್ಯ, ಅಮರ ಶಿಲ್ಪಿ ಜಕಣಾಚಾರಿ ವೇದಿಕೆಯಲ್ಲಿ ಭರತನಾಟ್ಯ ಹಾಗೂ ಕುಚುಪುಡಿ; ಶಿವಕುಮಾರ ಸ್ವಾಮೀಜಿ ವೇದಿಕೆಯಲ್ಲಿ ಏಕಾಂಕ ನಾಟಕ; ಬಿ.ಎಂ.ಶ್ರೀ ವೇದಿಕೆಯಲ್ಲಿ ಕರ್ನಾಟಕ ಸಂಗೀತ ಮತ್ತು ಹಾರ್ಮೋನಿಯಂ; ತೀ.ನಂ.ಶ್ರೀ ವೇದಿಕೆಯಲ್ಲಿ ಕೊಳಲು, ಮೃದಂಗ ಮತ್ತು ತಬಲ ವಾದನ ಕಾರ್ಯಕ್ರಮಗಳು ಜರುಗಲಿವೆ ಎಂದು ಅವರು ತಿಳಿಸಿದರು.

ಡಿಸೆಂಬರ್ 9ರ ಸಮಾರೋಪ ದಿನದಂದು ಬೆಳಿಗ್ಗೆ 9 ಗಂಟೆಯಿಂದ ಮುಕ್ತಾಯದವರೆಗೆ ವಿವಿಧ ಕಲಾ ಸ್ಪರ್ಧೆಗಳು ನಡೆಯಲಿದ್ದು, ಅಮರ ಶಿಲ್ಪಿ ಜಕಣಾಚಾರಿ ವೇದಿಕೆಯಲ್ಲಿ ಜನಪದಗೀತೆ; ಶಿವಕುಮಾರ ಸ್ವಾಮೀಜಿ ವೇದಿಕೆಯಲ್ಲಿ ಹಿಂದೂಸ್ಥಾನಿ ಸಂಗೀತ; ತೀ.ನಂ.ಶ್ರೀ ವೇದಿಕೆಯಲ್ಲಿ ಆಶುಭಾಷಣ ಸ್ಪರ್ಧೆ ನಡೆಯಲಿದೆ. ಸಮಾರೋಪ ಸಮಾರಂಭದ ನಂತರ ಖ್ಯಾತ ಗಾಯಕರುಗಳಾದ ಶ್ರೀಮತಿ ಡಾ|| ಶಮಿತಾ ಮಲ್ನಾಡ್ ಮತ್ತು ಶ್ರೀ ಹೇಮಂತ್ ಇವರಿಂದ ‘ಗಾನ ನೃತ್ಯ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.

ದಿನಾಂಕ:09-12-2018ರಂದು ಸಂಜೆ 4 ಗಂಟೆಗೆ ಗಾಜಿನ ಮನೆಯ ಡಾ: ಗುಬ್ಬಿ ವೀರಣ್ಣ ವೇದಿಕೆಯಲ್ಲಿ ಸಮಾರೋಪ ದಿನದ ಕಾರ್ಯಕ್ರಮಗಳ ಉದ್ಘಾಟನೆಯನ್ನು ಸನ್ಮಾನ್ಯ ಉಪ ಮುಖ್ಯ ಮಂತ್ರಿಗಳು ಹಾಗೂ ಮಾನ್ಯ ಗೃಹ, ಬೆಂಗಳೂರು ನಗರಾಭಿವೃದ್ದಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಜಿ.ಪರಮೇಶ್ವರ ಇವರು ಮುಖ್ಯ ವೇದಿಕೆ ಗಾಜಿನ ಮನೆ ಇಲ್ಲಿ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ತುಮಕೂರು ನಗರ ಶಾಸಕರು ವಹಿಸಲಿದ್ದಾರೆ. ಮಾನ್ಯ ಕಾರ್ಮಿಕ ಇಲಾಖೆ ಸಚಿವರಾದ ಶ್ರೀ ವೆಂಕಟರಮಣಪ್ಪ ಹಾಗೂ ಮಾನ್ಯ ಸಣ್ಣ ಕೈಗಾರಿಕಾ ಇಲಾಖೆ ಸಚಿವರಾದ ಶ್ರೀ ಎಸ್ ಆರ್ ಶ್ರೀನಿವಾಸ್ ಇವರ ಘನ ಉಪಸ್ಥಿತಿಯಲ್ಲಿ ಮಾನ್ಯ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಜಿಲ್ಲೆಯ ಎಲ್ಲಾ ಲೋಕಸಭಾ ಸದಸ್ಯರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ರಾಜ್ಯ ಮಟ್ಟದ ಯುವ ಜನೋತ್ಸವ ಕಾರ್ಯಕ್ರಮ ತುಮಕೂರಿನಲ್ಲಿ ಆಯೋಜಿಸುತ್ತಿರುವುದು ತುಮಕೂರು ಜಿಲ್ಲೆಯ ಘನತೆಯ ದ್ಯೋತಕವಾಗಿದೆ. ರಾಜ್ಯಾದ್ಯಂತ 30 ಜಿಲ್ಲೆಗಳಿಂದ 15 ರಿಂದ 29 ವರ್ಷ ವಯೋಮಿತಿಯ 1700 ವಿವಿಧ ಕಲಾವಿದÀರು 18 ರೀತಿಯ ಕಲಾ ಪ್ರಕಾರಗಳಲ್ಲಿ ಸ್ಪರ್ಧಿಸಲಿರುವುದರಿಂದ ರಾಜ್ಯಾದ್ಯಂತದಿಂದ ಆಗಮಿಸಿರುವ ಕಲಾವಿದರಿಗೆ ಪ್ರೋತ್ಸಾಹಿಸಲು ತುಮಕೂರು ಜಿಲ್ಲೆಯ ಜನತೆ ಹಾಗೂ ವಿಶೇಷವಾಗಿ ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಎಂದು ತಿಳಿಸಿದರು.

ಯುವಜನೋತ್ಸವದಲ್ಲಿ ಭಾಗವಹಿಸುವ ಸ್ಫರ್ಧಿಗಳಿಗೆ ತುಮಕೂರು ನಗರದ 13 ಸರ್ಕಾರಿ ವಸತಿ ನಿಲಯಗಳಲ್ಲಿ ಹಾಗೂ ಸಿದ್ದಗಂಗಾ ಮಠದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಸ್ಪರ್ಧಾಳುಗಳಿಗೆ ಕಾರ್ಯಕ್ರಮ ನಡೆಯುವ ಸ್ಥಳಗಳಿಂದ ಊಟದ ವ್ಯವಸ್ಥೆ ಮಾಡಿರುವ ಸ್ಥಳಗಳಿಗೆ, ವಸತಿ ನೀಡಿರುವ ಸ್ಥಳಗಳಿಗೆ ತೆರಳಲು ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕಾರ್ಯಕ್ರಮ ನಡೆಯುವ ಮುಖ್ಯ ವೇದಿಕೆಯಲ್ಲಿ ಆಂಬುಲೆನ್ಸ್ ವ್ಯವಸ್ಥೆಯೊಂದಿಗೆ ವೈದ್ಯಕೀಯ ಸಿಬ್ಬಂದಿಯನ್ನು ಮತ್ತು ಇತರೆ ವೇದಿಕೆಗಳಲ್ಲಿ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಿ 24×7 ರೀತಿಯಲ್ಲಿ ಕಾರ್ಯನಿರ್ವಹಿಸಲು ವ್ಯವಸ್ಥೆಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

ಇಲ್ಲಿಯವರೆಗೂ 823 ಯುವಕರು ಹಾಗೂ 623 ಯುವತಿಯರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಇನ್ನೂ 1700 ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮಕ್ಕಾಗಿ ಕ್ರೀಡಾ ಇಲಾಖೆಯಿಂದ 25 ಲಕ್ಷ ರೂ. ಹಾಗೂ ಜಿಲ್ಲಾ ಪಂಚಾಯತಿಯಿಂದ ಕ್ರೀಡಾ ಇಲಾಖೆಗೆ ನೀಡಬೇಕಾಗಿದ್ದ 25ಲಕ್ಷ ರೂ. ಒಟ್ಟು 50 ಲಕ್ಷ ರೂ. ಖರ್ಚು ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

ತುಮಕೂರು ಜಿಲ್ಲೆಯಿಂದ 47 ಮಂದಿ ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂದ ಅವರು ಯುವಜನೋತ್ಸವವನ್ನು ಉತ್ಸವದ ರೀತಿಯಲ್ಲಿ ಆಚರಿಸಬೇಕಿದೆ. ಇದಕ್ಕಾಗಿ ತುಮಕೂರು ನಗರದಲ್ಲಿ ವಿದ್ಯುತ್ ದೀಪಗಳಿಂದ ಶೃಂಗರಿಸಲಾಗುವುದು. ಇದರ ಹೊಣೆಯನ್ನು ಮಹಾನಗರಪಾಲಿಕೆಗೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ. ಸಿಇಓ ಅನೀಸ್ ಕಣ್ಮಣಿ ಜಾಯ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಟಿ. ಜಯಲಕ್ಷ್ಮಿ ಮತ್ತಿತರರು ಹಾಜರಿದ್ದರು.

(Visited 26 times, 1 visits today)
Previous Articleಕೇಂದ್ರ ನೆರವು ನೀಡದಿದ್ದರೂ ರೈತರ ಸಾಲಮನ್ನಾ ಖಚಿತ: ಸಿಎಂ ಕುಮಾರಸ್ವಾಮಿ
Next Article ಲ್ಲಾ ಉಸ್ತುವಾರಿ ಸಚಿವರ ಕಛೇರಿ ಉದ್ಘಾಟನೆ
News Desk Benkiyabale

Related Posts

October 10, 2025 1:18 pm ತುಮಕೂರು

ನ್ಯಾಯಾಧೀಶರ ಮೇಲೆ ಶೂ ಎಸೆದಿದ್ದು ಸಂವಿಧಾನಕ್ಕೆ ಮಾಡಿದಂತ ಅಪಚಾರ: ಕೃಷ್ಣಸ್ವಾಮಿ ಆಕ್ರೋಶ

October 10, 2025 1:15 pm ತುಮಕೂರು

ಅ.೨೪, ೨೫ರಂದು ಜಿಲ್ಲಾ ಯುವಜನೋತ್ಸವ

October 10, 2025 1:13 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕಳಪೆ ಕಾಮಗಾರಿಯಡಿ ಅರೆಬರೆ ಕಟ್ಟಿದ ಸರ್ಕಾರಿ ಶಾಲಾ ಕಟ್ಟಡ

October 13, 2025 3:11 pm
ಇತರೆ ಸುದ್ಧಿಗಳು

ಶ್ರೀ ರಾಮನನ್ನು ಜಗತ್ತಿಗೆ ಪರಿಚಯಿಸಿದ ಮರ‍್ಷಿ ವಾಲ್ಮೀಕಿ : ಕೋಟಗುಡ್ಡದಲ್ಲಿ ಅದ್ದೂರಿ ಜಯಂತಿ ಆಚರಣೆ

October 13, 2025 2:56 pm
ಇತರೆ ಸುದ್ಧಿಗಳು

ವಿಜೃಂಭಣೆಯಿಂದ ನಡೆದ ಶ್ರೀ ಮರ‍್ಷಿ ವಾಲ್ಮೀಕಿ ಜಯಂತೋತ್ಸವ ಆಚರಣೆ

October 13, 2025 2:47 pm
ಇತರೆ ಸುದ್ಧಿಗಳು

ಯುವಕರು ಕ್ರೀಡೆಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ

October 13, 2025 2:36 pm
ತುಮಕೂರು

October 10, 2025 1:18 pm
ತುಮಕೂರು

ನ್ಯಾಯಾಧೀಶರ ಮೇಲೆ ಶೂ ಎಸೆದಿದ್ದು ಸಂವಿಧಾನಕ್ಕೆ ಮಾಡಿದಂತ ಅಪಚಾರ: ಕೃಷ್ಣಸ್ವಾಮಿ ಆಕ್ರೋಶ

October 10, 2025 1:15 pm
Our Youtube Channel
Our Picks

ಕಳಪೆ ಕಾಮಗಾರಿಯಡಿ ಅರೆಬರೆ ಕಟ್ಟಿದ ಸರ್ಕಾರಿ ಶಾಲಾ ಕಟ್ಟಡ

October 13, 2025 3:11 pm

ಶ್ರೀ ರಾಮನನ್ನು ಜಗತ್ತಿಗೆ ಪರಿಚಯಿಸಿದ ಮರ‍್ಷಿ ವಾಲ್ಮೀಕಿ : ಕೋಟಗುಡ್ಡದಲ್ಲಿ ಅದ್ದೂರಿ ಜಯಂತಿ ಆಚರಣೆ

October 13, 2025 2:56 pm

ವಿಜೃಂಭಣೆಯಿಂದ ನಡೆದ ಶ್ರೀ ಮರ‍್ಷಿ ವಾಲ್ಮೀಕಿ ಜಯಂತೋತ್ಸವ ಆಚರಣೆ

October 13, 2025 2:47 pm

ಯುವಕರು ಕ್ರೀಡೆಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ

October 13, 2025 2:36 pm

ನಗರದಲ್ಲಿ ಇಂದಿನಿ0ದ ರಾಜ್ಯ ಮಟ್ಟದ ಖೋ ಖೋ ಪಂದ್ಯಾವಳಿ: ಹೆಚ್.ಡಿ.ಕುಮಾರ್

October 09, 2025 3:44 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕಳಪೆ ಕಾಮಗಾರಿಯಡಿ ಅರೆಬರೆ ಕಟ್ಟಿದ ಸರ್ಕಾರಿ ಶಾಲಾ ಕಟ್ಟಡ

By News Desk BenkiyabaleOctober 13, 2025 3:11 pm

ಚಿಕ್ಕನಾಯಕನಹಳ್ಳಿ: ಕಳಪೆ ಕಾಮಗಾರಿಯಡಿ ಅರೆಬರೆ ಕಟ್ಟಿದ ಸರ್ಕಾರಿ ಶಾಲಾ ಕಟ್ಟಡವನ್ನು ಕೆಆರ್‌ಎಸ್‌ಪಕ್ಷದ ಹೋರಾಟದ ಫಲವೆಂಬ0ತೆ ಜೆಸಿಬಿ ಮೂಲಕ ಕಟ್ಟಡವನ್ನು ಕೆಡವಿ…

ಶ್ರೀ ರಾಮನನ್ನು ಜಗತ್ತಿಗೆ ಪರಿಚಯಿಸಿದ ಮರ‍್ಷಿ ವಾಲ್ಮೀಕಿ : ಕೋಟಗುಡ್ಡದಲ್ಲಿ ಅದ್ದೂರಿ ಜಯಂತಿ ಆಚರಣೆ

October 13, 2025 2:56 pm

ವಿಜೃಂಭಣೆಯಿಂದ ನಡೆದ ಶ್ರೀ ಮರ‍್ಷಿ ವಾಲ್ಮೀಕಿ ಜಯಂತೋತ್ಸವ ಆಚರಣೆ

October 13, 2025 2:47 pm

ಯುವಕರು ಕ್ರೀಡೆಗಳ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ

October 13, 2025 2:36 pm
News by Date
October 2025
M T W T F S S
 12345
6789101112
13141516171819
20212223242526
2728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.