BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
  • ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ
  • ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ
  • ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಭಿವೃದ್ದಿಯಲ್ಲಿ ಪಂಚಾಯತ್ ವ್ಯವಸ್ಥೆಯ ಕೊಡುಗೆ ಅಪಾರ: ಸಿಇಓ ವಿದ್ಯಾಕುಮಾರಿ
ತುಮಕೂರು

ಅಭಿವೃದ್ದಿಯಲ್ಲಿ ಪಂಚಾಯತ್ ವ್ಯವಸ್ಥೆಯ ಕೊಡುಗೆ ಅಪಾರ: ಸಿಇಓ ವಿದ್ಯಾಕುಮಾರಿ

By News Desk BenkiyabaleUpdated:May 10, 2022 5:44 pm

ತುಮಕೂರು
ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ಮಹಾತ್ಮಗಾಂಧೀಜಿ ಅವರ ಗ್ರಾಮ ಸ್ವರಾಜ್ ಕನಸನ್ನು ನನಸು ಮಾಡುವಲ್ಲಿ ಕರ್ನಾಟಕದಲ್ಲಿ ಬಹು ಹಿಂದಿನಿಂದಲೇ ಪ್ರಯತ್ನಗಳು ನಡೆದಿವೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ: ಕೆ.ವಿದ್ಯಾಕುಮಾರಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ರಾಜ್ಯ ಪಂಚಾಯತ್ ರಾಜ್ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಸಂವಿಧಾನಕ್ಕೆ 73ನೇ ತಿದ್ದುಪಡಿ ಮಾಡಿ ದೇಶದಾದ್ಯಂತ ಮೂರು ಹಂತದ ವಿಕೇಂದ್ರಿಕರಣ ವ್ಯವಸ್ಥೆಯನ್ನು ಭಾರತ ಸರ್ಕಾರ ಶಾಸನಬದ್ದವಾಗಿ ಜಾರಿಗೊಳಿಸಿದ್ದು, ಈ ಕೀರ್ತಿಯು ಕರ್ನಾಟಕ ರಾಜ್ಯಕ್ಕೆ ಸಲ್ಲುತ್ತದೆ ಎಂದ ಅವರು 1993ರ ಮೇ 10 ರಂದು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ ಅಧಿಕೃತವಾಗಿ ಆಸ್ತಿತ್ವಕ್ಕೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಪಂಚಾಯತ್ ರಾಜ್ ದಿನವನ್ನು ಆಚರಿಸಲಾಗುತ್ತದೆ ಎಂದು ವಿವರಿಸಿದರು.
ಸಂವಿಧಾನದ 73ನೇ ತಿದ್ದುಪಡಿಯನ್ವಯ 3 ಹಂತದ ಆಡಳಿತ ವ್ಯವಸ್ಥೆಗಳಾದ ಗ್ರಾಮಪಂಚಾಯತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಆಸ್ತಿತ್ವಕ್ಕೆ ಬಂದಿದೆ. ಪಂಚಾಯತ್ ವಿಕೇಂದ್ರೀಕರಣದ ಮೂಲ ಉದ್ದೇಶಗಳಾದ ಮಹಿಳೆಯರ ಅಭಿವೃದ್ಧಿ, ಮಕ್ಕಳ ಹಕ್ಕುಗಳ ರಕ್ಷಣೆ, ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಆರೋಗ್ಯ, ಶಿಕ್ಷಣ, ನೈರ್ಮಲ್ಯವನ್ನು ಕಾಪಾಡುವುದಾಗಿದೆ ಎಂದರಲ್ಲದೇ ಈ ಎಲ್ಲಾ ಅವಕಾಶಗಳಿಗೆ ಪಂಚಾಯತ್ ರಾಜ್ ಅಧಿನಿಯಮ ಅವಕಾಶ ಕಲ್ಪಿಸುತ್ತದೆ ಎಂದು ತಿಳಿಸಿದರು.
ಪಂಚಾಯತ್ ರಾಜ್ ವ್ಯವಸ್ಥೆಯಡಿ ಕಾರ್ಯನಿರ್ವಹಿಸುವ ಗ್ರಾಮ, ತಾಲ್ಲೂಕು, ಜಿಲ್ಲಾ ಪಂಚಾಯಿತಿಗಳಲ್ಲಿ ಚುನಾಯಿತ ಪ್ರತಿನಿಧಿಗಳಿದ್ದು ಯೋಜನೆಗಳನ್ನು ರೂಪಿಸಿ ಅನುμÁ್ಠನಕ್ಕೆ ತರುವ ಹೊಣೆಗಾರಿಕೆ ಸ್ಥಳೀಯ ಸರ್ಕಾರಗಳಿಗಿದೆ ಎಂದು ತಿಳಿಸಿದರು.
ಕಳೆದ 29 ವರ್ಷಗಳಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಗೆ ಅಮೂಲಾಗ್ರವಾದ ಕ್ರಾಂತಿಕಾರಕವಾದ ಸುಧಾರಣೆಗಳನ್ನು ತರಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮವನ್ನು ಜಾರಿಗೊಳಿಸುವಲ್ಲಿಯೂ ದಿಟ್ಟ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ದಿಶೆಯಲ್ಲಿ ಪಾರದರ್ಶಕತೆಗೆ, ಉತ್ತರದಾಯಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಶಾಖಾ ಮುಖ್ಯಸ್ಥರಾದ ಉಪಕಾರ್ಯದರ್ಶಿ (ಅಭಿವೃದ್ಧಿ) ಅಥಿಕ್ ಪಾಷ, ಉಪಕಾರ್ಯದರ್ಶಿ (ಆಡಳಿತ) ಕೃಷ್ಣಮೂರ್ತಿ, ಯೋಜನಾ ನಿರ್ದೇಶಕರಾದ ನರಸಿಂಹಮೂರ್ತಿ, ಯೋಜನಾಧಿಕಾರಿಗಳಾದ ಸಣ್ಣಮಸಿಯಪ್ಪ, ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಕಾರ್ಯಪಾಲಕ ಅಭಿಯಂತರ ಶ್ರೀನಾಥ್ ಸೇರಿದಂತೆ ಜಿಲ್ಲಾ ಪಂಚಾಯತಿ ನೌಕರರು/ಸಿಬ್ಬಂದಿ ಹಾಜರಿದ್ದರು.

(Visited 9 times, 1 visits today)
tumkur
Previous Articleಮೇ.16: ವಿದ್ಯುತ್ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
Next Article ರೋಗವಾಹಕ ಆಶ್ರಿತ ರೋಗಗಳ ಬಗ್ಗೆ ಎಚ್ಚರಿಕೆ ಅಗತ್ಯ
News Desk Benkiyabale

Related Posts

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm news

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm news

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm news
ತಾಜಾ ಸುದ್ಧಿಗಳು
news

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm
news

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm
news

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm
news

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm
news

ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ

August 10, 2026 5:42 pm
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
Our Youtube Channel
Our Picks

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm

ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ

August 10, 2026 5:42 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

By News Desk BenkiyabaleAugust 10, 2026 5:47 pm

ತುಮಕೂರು: ಕನ್ನಡ ಉಳಿಸುವ ಪ್ರಶ್ನೆ ಸವಾಲಾಗಿರುವ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಆದ್ಯತೆ ಕನ್ನಡದ ಉಳಿವಿಗೆ ಮುಖ್ಯವಾಗುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ…

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.