ತುಮಕೂರು:
ಸಚಿವ ಸಂಪುಟಕ್ಕೆ ವಿಜಯೇಂದ್ರ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಸಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ, ರಾಜ್ಯ ನಾಯಕರ ಅಪೇಕ್ಷೆ ಏನಿದೆ. ಸಮಯ ಸಂದರ್ಭ ನೋಡಿಕೊಂಡು ನಿರ್ಧಾರ ಮಾಡುತ್ತಾರೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದ್ದರೂ ನಿಭಾಯಿಸುತ್ತೀನಿ ಎಂದರು.
ತುಮಕೂರಿನ ಕಾರ್ಯಕ್ರಮವೊಂದಕ್ಕೆ ಭಾಗಿಯಾಗಿ ಮಾತನಾಡಿದ ಅವರು, ಮುಂದಿನ ಬಾರಿ ತುಮಕೂರಿನಲ್ಲಿ ತಮ್ಮ ಸ್ಪರ್ಧೆ ವಿಚಾರಕ್ಕೆ ಸಂಬಂಧಪಟ್ಟಂತೆ ಎಲ್ಲದಕ್ಕೂ ಕಾಲವೇ ಉತ್ತರ ನೀಡುತ್ತದೆ. ಶಿರಾ ಮತ್ತು ಕೆ.ಆರ್ ಪೇಟೆ ಚುನಾವಣೆಯಲ್ಲಿ ಕೆಲಸ ಮಾಡಿದ್ದೆ ಕಾರ್ಯಕರ್ತರ ಜೊತೆ ಕೆಲಸ ಮಾಡಿದ್ದಕ್ಕೆ ಸಂತೋಷ ಸಿಕ್ಕಿದೆ. ಸ್ವಾಮೀಜಿ ಹುಟ್ಟುಹಬ್ಬದ ನೆಪದಲ್ಲಿ ರಾಜಕೀಯ ಮಾಡುವ ಪ್ರಮೇಯ ಉದ್ಭವ ಆಗಿಲ್ಲ ಎಂದರು.
ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮದ ವಿಚಾರಕ್ಕೆ ಪ್ರತಿಕ್ರಿಯಿಸಿ ಕಾಂಗ್ರೆಸ್ ಪಕ್ಷದ ಮುಖಂಡರು ಮೂರ್ಖರಿದ್ದಾರೆ. 50 ರಿಂದ 60 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರುವ ಮಾನಸಿಕತೆಯಲ್ಲಿ ಇಲ್ಲ. ಹೀಗಾಗಿ ಬಿಜೆಪಿ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಾರೆ. ಚುನಾವಣೆ ಯಾವಾಗ ಬರುತ್ತೆ ಮತ್ತೆ ಯಾವಾಗ ಅಧಿಕಾರಕ್ಕೆ ಬರ್ತಿವೋ ಎನ್ನುವ ಆತುರದಲ್ಲಿ ಹಗಲುಗನಸು ಕಾಣುತ್ತಿದ್ದಾರೆ. ಅವರ ಕನಸು ನನಸಾಗಲ್ಲ ಬಿಜೆಪಿ ಮತ್ತೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದರು.
ಕಾಂಗ್ರೆಸ್ ಮಹಾನ್ ನಾಯಕರು ಅನ್ನಿಸಿಕೊಂಡವರು ಯಾವಾಗ ಮುಖ್ಯಮಂತ್ರಿ ಗಾದಿ ಮೇಲೆ ಕೂರ್ತೀವಿ ಅಂತ ಕನಸು ಕಾಣುತ್ತಿದ್ದಾರೆ ಎಂದು ಡಿಕೆಶಿಗೆ ವಿಜಯೇಂದ್ರ ಟಾಂಗ್ ನೀಡಿದರು.
ಈ ಮಹಾನ್ ನಾಯಕರು ಕೇವಲ ಬಿಜೆಪಿ ಪಕ್ಷದವರ ವಿರುದ್ದ ಮಾತ್ರವಲ್ಲ ತಮ್ಮ ಪಕ್ಷದ ಶಾಸಕರು ಮುಖಂಡರ ವಿರುದ್ಧವೂ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಒಳಜಗಳ ಮತ್ತು ಪಕ್ಷದ ನಡುವೆ ಅವಿಶ್ವಾಸ ಬರುವ ದಿನಗಳಲ್ಲಿ ಬಿಜೆಪಿಗೆ ವರವಾಗುತ್ತದೆ ಈ ಕಾಂಗ್ರೆಸ್ ಮಹಾ ನಾಯಕರು ಯಾವುದೇ ರೀತಿಯ ರಿವೇಂಜ್ ತೀರಿಸಿಕೊಂಡರೂ ಕೂಡ ರಾಜ್ಯದ ಪ್ರಜ್ಞಾವಂತ ಜನರು ಇದೆಲ್ಲವನ್ನು ವೀಕ್ಷಣೆ ಮಾಡುತ್ತಾ ಇರುತ್ತಾರೆ. ಬಿಜೆಪಿಗೆ ಇದು ವರದಾನ ಎಂದು ತಿಳಿಸಿದರು.
(Visited 7 times, 1 visits today)
				
		
		
		
	
									 
					



