BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ
  • ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೈತರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸುವ ಕೆಲಸವಾಗಲಿ : ಜೆ.ಸಿ. ಮಾಧುಸ್ವಾಮಿ
Trending

ರೈತರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸುವ ಕೆಲಸವಾಗಲಿ : ಜೆ.ಸಿ. ಮಾಧುಸ್ವಾಮಿ

By News Desk BenkiyabaleUpdated:May 30, 2022 6:50 pm

ತುಮಕೂರು:


ರೈತರ ಮಧ್ಯೆ ಸಾಕಷ್ಟು ಸಮಸ್ಯೆಗಳಿವೆ. ಅದರ ಬಗ್ಗೆ ನಾವ್ಯಾರೂ ಕೂತು ಚರ್ಚೆ ಮಾಡುತ್ತಿಲ್ಲ. ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕಾಗಿದೆ. ಆಗ ಮಾತ್ರ ಜನಪ್ರತಿನಿಧಿಗಳು ರಾಜಕೀಯವಾಗಿ ಯಶಸ್ವಿಯಾಗಲು ಸಾಧ್ಯ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು. ಯಾವ ಪಕ್ಷದಲ್ಲಿ ರೈತರು ಇಂತಹ ಕೆಲಸ ಆಗಬೇಕು ಎಂದು ಹೇಳಿದಾಗ ಆ ಕೆಲಸ ಪ್ರಾಮಾಣಿಕವಾಗಿ ಆಗುತ್ತದೋ ಅಂತಹ ಪಕ್ಷ ಯಶಸ್ವಿಯಾಗುತ್ತದೆ ಎಂದು ತಿಳಿಸಿದರು.
ನಗರದ ರಿಂಗ್ ರಸ್ತೆಯಲ್ಲಿರುವ ಆರ್.ಎಸ್. ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಪಕ್ಷದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದು ಯಶಸ್ಸಿನ ಮೂಲ. ಇದರೊಂದಿಗೆ ಗ್ರಾಮೀಣರ ಬದುಕು, ಕೃಷಿ ಬದುಕನ್ನು ಅರ್ಥ ಮಾಡಿಕೊಳ್ಳಬೇಕು. ಸಣ್ಣ ಸಣ್ಣ ರೈತರ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಬೇಕು. ಈ ಸಂಬಂಧ ಸರ್ಕಾರಕ್ಕೂ ಆಗಿಂದಾಗ್ಗೆ ಸಲಹೆ ಕೊಡಬೇಕು. ಈ ಮೂಲಕ ರೈತರ ಸಮಸ್ಯೆಯನ್ನು ಒಂದೊಂದೇ ಈಡೇರಿಸಲು ಮುಂದಾದರೆ ಸರ್ಕಾರಕ್ಕೂ ಬಹಳ ಸಹಾಯವಾಗುತ್ತದೆ ಎಂದು ಸಲಹೆ ನೀಡಿದರು.
ಸೋತಾಗ ರೈತರ ಸಮಸ್ಯೆಗಳ ಬಗ್ಗೆ ಎಲ್ಲರೂ ಮಾತನಾಡುತ್ತೇವೆ. ಆದರೆ ಗೆದ್ದಾಗ ಅದನ್ನು ಬಗೆಹರಿಸಲು ಯಾರೂ ಮುಂದಾಗುತ್ತಿಲ್ಲ. ರಾಜಕೀಯವಾಗಿ ಸೃಷ್ಠಿಯಾಗುವ ಸಮಸ್ಯೆಗಳನ್ನು ಬಗೆಹರಿಸುವುದು ಕಷ್ಟ. ಆದರೆ ನೈಜವಾಗಿರುವ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಬಹುದು. ಈ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯೋನ್ಮುಖರಾಗೋಣ ಎಂದರು.
ಕಂದಾಯ ಇಲಾಖೆ ಸೇರಿದಂತೆ ಸರ್ಕಾರಿ ಇಲಾಖೆಗಳಲ್ಲಿ ರೈತರ ಕೆಲಸ ಕಾರ್ಯಗಳು ಆಗುವಂತೆ ನೋಡಿಕೊಳ್ಳಬೇಕು. ವಿನಾ ಕಾರಣ ರೈತರನ್ನು ಸಣ್ಣಪುಟ್ಟ ಕೆಲಸಗಳಿಗೆ ತಿಂಗಳುಗಟ್ಟಲೆ ಅಲೆಸುತ್ತಾರೆ. ಇದು ತಪ್ಪಬೇಕು. ಅಧಿಕಾರಿಗಳು ಮಾನವೀಯ ನೆಲೆಗಟ್ಟಿನಲ್ಲಿ ಕೆಲಸ ಮಾಡುವಂತಾಗಬೇಕು ಎಂದರು.
ಸೇನೆಯಲ್ಲಿ ಇರುವ ಎಲ್ಲರೂ ಸಮತೋಲನವಾಗಿ ಕೆಲಸ ಮಾಡಿದರೆ ಮಾತ್ರ ಯುದ್ಧ ಗೆಲ್ಲಬಹುದು. ಹಾಗೆಯೇ ರಾಜಕೀಯದಲ್ಲೂ ಚುನಾವಣೆ ಗೆಲ್ಲಬಹುದು. ಆದರೆ ಆಡಳಿತ ಮಾಡುವುದು ಕಷ್ಟ. ಗೆಲ್ಲುವವರೆಗೆ ಛಲ, ಗುರಿ ಇರುತ್ತದೆ. ಆದರೆ ಗೆದ್ದ ನಂತರ ಶರೀರ ಸುಖ, ವಿಶ್ರಾಂತಿ ಬಯಸುತ್ತದೆ. ದಿನೇ ದಿನೇ ಕಳೆದಂತೆ ನಮ್ಮ ಶಕ್ತಿ, ಜನಪ್ರಿಯತೆ ಕುಗ್ಗುತ್ತಾ ಹೋಗುತ್ತದೆ ಎಂದರು.
ಎಲ್ಲಾ ಶ್ರೇಣಿಗಳು ಸಮರ್ಪಕವಾಗಿ ಕೆಲಸ ಮಾಡಬೇಕು. ಸರ್ಕಾರ ಕೊಡ ಮಾಹಿತಿ ಪಕ್ಷಕ್ಕೆ ಹತ್ತಿರವಾಗಿರಬೇಕು, ಬಹಳ ಶ್ರೇಷ್ಠವಾಗಿರಬೇಕು. ಆಗ ಸಂಘಟನೆಗಳಿಗೆ ಬೆಲೆ ಬರುತ್ತದೆ ಎಂದು ಅವರು ಹೇಳಿದರು.
ಪಕ್ಷದ ಸಭೆಗಳಲ್ಲಿ ಚರ್ಚೆ ಮಾಡುವುದನ್ನು ಅಪರಾಧ ಎಂದು ಯಾರೂ ಭಾವಿಸಬಾರದು. ನಾವೆಲ್ಲರೂ ಕುಳಿತು ಚರ್ಚೆ ಮಾಡಬೇಕು. ಅದನ್ನು ಬೀದಿಗೆ ತರಬಾರದು. ಚರ್ಚೆ ಆರೋಗ್ಯಕರವಾಗಿರಬೇಕು. ವಿನಾ ಕಾರಣ ಬೀದಿಗೆ ತಂದು ನಮ್ಮ ಬಟ್ಟೆ ನಾವೇ ಒಗೆದುಕೊಳ್ಳುವಂತೆ ಮಾಡಬಾರದು ಎಂದರು.
ಮೀನುಗಾರಿಕೆ ಇಲಾಖೆಯಿಂದ 50 ಲಕ್ಷದ ವರೆಗೆ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿತು. ಆದರೆ ಬೇರೆ ಬೇರೆ ಕಡೆ ಇರುವವರು ಅರ್ಜಿ ಹಾಕಿ ಇದರ ಪ್ರಯೋಜನ ಪಡೆಯುತ್ತಾರೆ. ನಿಜವಾದ ರೈತರು ಇದರಿಂದ ವಂಚಿತರಾಗುತ್ತಿದ್ದಾರೆ. ಈ ಬಗ್ಗೆಯೂ ನಾವುಗಳು ಗಮನ ಹರಿಸಿ ನೈಜ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳು ದೊರೆಯುವಂತೆ ಮಾಡಬೇಕು ಎಂದರು.
ಬೆಳೆ ವಿಮೆ ನೀಡುವಲ್ಲಿ ಇನ್ಸುರೆನ್ಸ್‍ನಲ್ಲಿ ಕಂಪೆನಿ ಮತ್ತು ನಮ್ಮ ಕಡೆಯಿಂದ ದೊಡ್ಡ ತೊಂದರೆಯೇನು ಆಗುವುದಿಲ್ಲ. ಆದರೆ ಬ್ಯಾಂಕ್‍ಗಳಿಂದಲೇ ಸಮಸ್ಯೆಯಾಗುತ್ತಿದೆ. ಒಂದು ವರ್ಷದ ಕಾರ್ಯಕ್ರಮದಲ್ಲಿ ಶೇ. 30 ರಷ್ಟು ಬೆಳೆ ಸಾಲ ಕೊಡಲಾಗುತ್ತಿಲ್ಲ. ಇದಕ್ಕೆ ಪಹಣಿಗಳ ಬೆಳೆ ಕಾಲಂನಲ್ಲಿ ಬೆಳೆ ಬಗ್ಗೆ ನಮೂದು ಆಗೆ ಬರೀ ಸೊನ್ನೆ ಸೊನ್ನೆ ಮುದ್ರಿತವಾಗಿರುವುದೇ ದೊಡ್ಡ ಸಮಸ್ಯೆಯಾಗುತ್ತಿದೆ. ಈ ಸಮಸ್ಯೆಯನ್ನು ಅಧಿಕಾರಿಗಳು ಕಂಪ್ಯೂಟರ್ ಮೇಲೆ ಹಾಕುತ್ತಾರೆ. ಆದರೆ ಕಂಪ್ಯೂಟರ್‍ಗೆ ಲೋಡ್ ಮಾಡುವವರು ಯಾರು ಎಂಬುದರ ಬಗ್ಗೆ ಅಧಿಕಾರಿಗಳು ಆತ್ಮಾವಲೋಕ ಮಾಡಿಕೊಳ್ಳುವುದೇ ಇಲ್ಲ. ಇದನ್ನೆಲ್ಲ ಗಮನಿಸಿದರೆ ರೈತರದ್ದು ದುರ್ದೈವದ ಬದುಕಾಗಿದೆ ಎಂದರು. ರೈತರನ್ನು ಅನೇಕ ಸಣ್ಣಪುಟ್ಟ ಸಮಸ್ಯೆಗಳು ಬೆನ್ನತ್ತಿ ಕಾಡುತ್ತಿವೆ. ಇದಕ್ಕೆಲ್ಲ ಪರಿಹಾರ ಕಂಡು ಹಿಡಿದು ಮಾರ್ಗದರ್ಶನ ಮಾಡಲು ಸ್ಥಳೀಯವಾಗಿ ಇರುವ ನಮ್ಮ ಕಾರ್ಯಕರ್ತರನ್ನು ಬಳಸಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು.
ಕೃಷಿ ಪ್ರಕೃತಿ, ಗಾಳಿ, ಭೂಮಿ ನಂಬಿಕೊಂಡು ಮಾಡುವ ಬದುಕು. ಹಾಗಾಗಿ ವೈಜ್ಞಾನಿಕ ಸಾಧನೆಗಳು, ಸಂಶೋಧನೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸುವ ಅಗತ್ಯವಿದೆ. ಉಪಕಸುಬು ಮಾಡುವ ಬಗ್ಗೆಯೂ ರೈತರಿಗೆ ತಿಳಿಸುವ ಕೆಲಸ ಆಗಬೇಕಾಗಿದೆ ಎಂದರು.
ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ. 50 ರಷ್ಟು ಮೀಸಲಾತಿ ಕೊಡಲಾಗುತ್ತಿದೆ. ಒಟ್ಟು ಜನಸಂಖ್ಯೆಯ ಶೇ. 48 ರಷ್ಟು ಮಹಿಳೆಯರು ಕೃಷಿ ಬದುಕಿನಲ್ಲಿ ತೊಡಗಿಕೊಂಡಿದ್ದಾರೆ. ಆದರೆ ರಾಜಕೀಯವಾಗಿ ಮಹಿಳೆಯರನ್ನು ಬೆಳೆಸುವ ಕಾರ್ಯ ಆಗಬೇಕಾಗಿದೆ ಎಂದರು. ರಾಜ್ಯದಲ್ಲಿ 65 ಸಾವಿರ ಬೂತ್‍ಗಳ ಸಂಖ್ಯೆಯಿದ್ದು, ಸುಮಾರು ಒಂದೂವರೆ ಲಕ್ಷ ಮಹಿಳೆಯರನ್ನು ಸದಸ್ಯತ್ವ ಗುರಿಯನ್ನು ಹೊಂದಲಾಗಿದೆ ಎಂದು ಅವರು ಹೇಳಿದರು.
ರೈತ ಮೋರ್ಚಾ ಸಂಘಟನೆಗಳಲ್ಲಿ ಖಾಲಿ ಇರುವ ಪದಾಧಿಕಾರಿಗಳ ಹುದ್ದೆಗಳಿಗೆ ನೇಮಕ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು. ಕೃಷಿಯಲ್ಲಿ ಕಿಸಾನ್ ಡ್ರೋನ್‍ಗಳಿಗೆ ಆದ್ಯತೆ, ಡ್ರೋನ್ ತಂತ್ರಜ್ಞಾನದ ಮೂಲಕ ಬೆಳೆಗಳ ಮೌಲ್ಯಮಾಪನ, ಭೂದಾಖಲೆಗಳ ಗಣಕೀಕರಣ, ಬೆಳೆಗಳಿಗೆ ಔಷಧಿ ಸಿಂಪಡಣೆ, ಇದರಿಂದ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಮತ್ತು ರೈತರ ಕೃಷಿ ವೆಚ್ಚವನ್ನು ಕಡಿಮೆ ಮಾಡುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.
ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್, ಮತಗಟ್ಟೆ ಮಟ್ಟದಲ್ಲಿ ರೈತರ ಸಂಕಷ್ಟಗಳಿಗೆ ಸ್ಪಂದಿಸುವಂತಹ ಹಾಗೂ ರೈತರ ಬಗ್ಗೆ ಕಾಳಜಿ ಹೊಂದಿರುವಂತಹ ಕಾರ್ಯಕರ್ತರನ್ನು ರೈತ ಪರಿಹಾರಿಗಳಾಗಿ ನೇಮಕ ಮಾಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತಪರ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
ನೈಜ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಸದಾ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ಸಭೆಯಲ್ಲಿ ಶಾಸಕ ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯರಾದ ನವೀನ್, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ಶಿವಪ್ರಸಾದ್, ಬಿ.ಕೆ. ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

(Visited 4 times, 1 visits today)
jc madhuswamy tumkur
Previous Articleಕುವೆಂಪುರವರ ನಾಡಗೀತೆಗೆ ಅಪಮಾನ: ರೋಹಿತ್ ಚಕ್ರತೀರ್ಥನನ್ನು ವಜಾಗೊಳಿಸಲು ಒತ್ತಾಯ
Next Article ಕಸಾಯಿ ಖಾನೆ ಮೇಲೆ ಪೊಲೀಸ್ ದಾಳಿ: ನಾಲ್ವರು ಆರೋಪಿಗಳ ಬಂಧನ!
News Desk Benkiyabale

Related Posts

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news
ತಾಜಾ ಸುದ್ಧಿಗಳು
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
Our Youtube Channel
Our Picks

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

By News Desk BenkiyabaleOctober 02, 2026 6:41 pm

ಹುಳಿಯಾರು: ಜನಸಾಮಾನ್ಯರ ಹಾಗೂ ಬಡವರ ಹಸಿವು ನೀಗಿಸಬೇಕಿದ್ದ ಇಲ್ಲಿನ ಇಂದಿರಾ ಕ್ಯಾಂಟೀನ್ ಸೂಕ್ತ ನಿರ್ವಹಣೆ ಮತ್ತು ನಿರ್ಲಕ್ಷ÷್ಯದಿಂದಾಗಿ ಕಳೆದ ಒಂದು…

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.