BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
  • ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
  • ಜಿಲ್ಲಾ ನಿವೃತ್ತ ನೌಕರರ ಸಂಘದಿAದ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಯಶಸ್ವಿ
  • ಪೆರಿಯಾರ್ ಇ.ವಿ ರಾಮಸ್ವಾಮಿ ಅವರ ಜನ್ಮ ದಿನ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜೂ.12: ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ
ಇತರೆ ಸುದ್ಧಿಗಳು

ಜೂ.12: ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ

By News Desk BenkiyabaleUpdated:June 06, 2022 5:48 pm

ತುಮಕೂರು:


ಜೂನ್ 12ರಂದು ನಡೆಯಲಿರುವ ‘ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ’ದ ಅಂಗವಾಗಿ ಜೂನ್ 9ರಂದು ಪ್ರಬಂಧ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಾಭಂಗಣದಲ್ಲಿ ಶನಿವಾರ ನಡೆದ ‘ವಿಶ್ವ ಬಾಲಕಾರ್ಮಿಕ ವಿರೋಧಿ’ ದಿನ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜೂನ್ 12ರಂದು ವಿಶ್ವ ಬಾಲಕಾಮಿಕ ವಿರೋಧಿ ದಿನ ಕಾರ್ಯಕ್ರಮದ ಅಂಗವಾಗಿ ಜೂ. 9ರಂದು ಬೆಳಿಗ್ಗೆ. 10 ಗಂಟೆಗೆ ನಗರದ ಬಾಲಭವನದ ಆವರಣದಲ್ಲಿ ಪ್ರೌಢಶಾಲಾ ಮಕ್ಕಳಿಗೆ ‘ಬಾಲಕಾರ್ಮಿಕರ ಸಂಕಷ್ಟಗಳು’ ವಿಷಯ ಕುರಿತು ಚಿತ್ರಕಲೆ ಸ್ಪರ್ಧೆ, ಪಿಯುಸಿ ವಿದ್ಯಾರ್ಥಿಗಳಿಗೆ ‘ಬಾಲಕಾರ್ಮಿಕತೆಯಿಂದ ಸಮಾಜದ ಮೇಲೆ ಪರಿಣಾಮ’ ವಿಷಯದ ಕುರಿತು ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಪ್ರತಿ ಸ್ಪರ್ಧೆಗಳಲ್ಲೂ ಕನಿಷ್ಠ 10 ಜನ ವಿದ್ಯಾರ್ಥಿಗಳು ಭಾಗವಹಿಸಬೇಕು. ಸ್ಪರ್ಧೆಯ ಸಂಪೂರ್ಣ ಜವಾಬ್ದಾರಿಯನ್ನು ಡಿಡಿಪಿಐ ವಹಿಸಿಕೊಳ್ಳಬೇಕೆಂದು ಡಿಡಿಪಿಐ ನಂಜಯ್ಯನವರಿಗೆ ತಿಳಿಸಿದರು.
ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳ ಪಟ್ಟಿಯನ್ನು ಜೂನ್ 10ರೊಳಗೆ ಬಾಲಕಾರ್ಮಿಕ ಇಲಾಖೆಗೆ ತಲುಪಿಸುವುದು ಹಾಗೂ ವಿಜೇತರಾದ ಮಕ್ಕಳಿಗೆ ಪ್ರಥಮ ಬಹುಮಾನ 3000 ರೂ. ಎರಡನೇ ಬಹುಮಾನ 2000 ರೂ. ಮೂರನೇ ಬಹುಮಾನ 1000 ರೂ. ನೀಡಲಾಗುವುದು. ಈ ಕಾರ್ಯಕ್ರಮಕ್ಕೆ ಬಾಲಭವನದಲ್ಲಿ ಸ್ಥಳಾವಕಾಶವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿ ನಿದೇರ್ಶಕರು ಒದಗಿಸುವುದರ ಜೊತೆಗೆ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಬೆಳಗಿನ ಪ್ರಾರ್ಥನೆ ನಂತರ ಜೂನ್ 10 ರಿಂದ ಜೂನ್ 18ರವರೆಗೆ ಬಾಲಕಾರ್ಮಿಕ ವಿರೋಧಿ ದಿನದ ಪ್ರಮಾಣ ವಚನ ಭೋದಿಸುವುದು ಹಾಗೂ ಮಕ್ಕಳ ಸಹಾಯವಾಣಿ 1098 ದೂರವಾಣಿ ಸಂಖ್ಯೆ ಬಗ್ಗೆ ಮಾಹಿತಿ ತಿಳಿಸಬೇಕು. ಈ ಕಾರ್ಯಕ್ರಮವನ್ನು ಆಯೋಜಿಸಲು ಸರ್ಕಾರದಿಂದ ಬಿಡುಗಡೆಯಾಗಿರುವ ಅನುದಾನವನ್ನು ಆಧರಿಸಿ, ಪ್ರಚಾರ ಕಾರ್ಯಕ್ರಮಗಳು ಮತ್ತು ಬೀದಿ ನಾಟಕಗಳನ್ನು ಕಾರ್ಮಿಕ ಇಲಾಖೆಯಿಂದ ಒದಗಿಸಬೇಕೆಂದು ಜಿಲ್ಲಾ ಕಾರ್ಮಿಕಾಧಿಕಾರಿಗಳಿಗೆ ಸೂಚಿಸಿದರು.
ಈ ಕಾರ್ಯಕ್ರಮವನ್ನು ಸಾಂಕೇತಿಕವಾಗಿ ಆಚರಿಸಲು ಜಿಲ್ಲೆಯಾದ್ಯಂತ ತಹಶೀಲ್ದಾರ್ ಅವರ ನೇತೃತ್ವದಲ್ಲಿ ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು ಅನಿರೀಕ್ಷಿತ ತಪಾಸಣೆಗಳನ್ನು ಕೈಗೊಳ್ಳಲು ಕ್ರಮವಹಿಸಬೇಕು. ಜೂನ್ 12ರಂದು ಜಿಲ್ಲಾ ಮಟ್ಟದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನ ಕಾರ್ಯಕ್ರಮದ ನಂತರ ಜೂನ್ 20ರವರೆಗೆ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಅವರ ಅನುಕೂಲಕ್ಕೆ ತಕ್ಕಂತೆ ತಹಶೀಲ್ದಾರ್ ಹಾಗೂ ಕಾರ್ಮಿಕ ನಿರೀಕ್ಷಕರು ಕಾರ್ಯಕ್ರಮ ಆಯೋಜಿಸಿ ವರದಿ ಮಾಡಬೇಕು. ಈ ಉದ್ದೇಶಕ್ಕಾಗಿ ಸರ್ಕಾರ ಬಿಡುಗಡೆ ಮಾಡಿರುವ ಆಯವ್ಯಯದಲ್ಲಿ ಪ್ರತಿ ತಾಲ್ಲೂಕಿಗೆ ಕಾರ್ಮಿಕ ಅಧಿಕಾರಿ ಅನುದಾನ ಬಿಡುಗಡೆ ಮಾಡುವರು ಎಂದು ತಿಳಿಸಿದರು.
ಜೂನ್ 12ರಂದು ಅಂದರೆ, ವಿಶ್ವ ಬಾಲಕಾಮಿಕ ವಿರೋಧಿ ದಿನದಂದು, ಜಾಗೃತಿ ಜಾಥಾವನ್ನು ಬೆಳಿಗ್ಗೆ 9ಗಂಟೆಗೆ ಎಲ್ಲಾ ಅಧಿಕಾರಿಗಳು, ಸರ್ಕಾರೇತರ ಸಂಘ-ಸಂಸ್ಥೆಗಳು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಅಮಾನಿಕೆರೆ ಗ್ಲಾಸ್‍ಹೌಸ್ ಆವರಣದಲ್ಲಿ ಸೇರ್ಪಡೆಯಾಗಬೇಕು.
ಬಾಲಕಾರ್ಮಿಕ ವಿರೋಧಿ ದಿನದ ಅಂಗವಾಗಿ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿದ ನಂತರ ಜಾಗೃತಿ ಜಾಥಾ ನಡೆಸಬೇಕು. ಈ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ನಗರದ ಎಲ್ಲಾ ಶಿಕ್ಷಕರು, ಬಿ.ಆರ್.ಸಿ.ಗಳು ಹಾಗೂ ಕನಿಷ್ಠ 200 ಜನ ಪ್ರೌಢ ಶಾಲಾ ಮಕ್ಕಳು ಮತ್ತು ಪಿಯುಸಿ ವಿದ್ಯಾರ್ಥಿಗಳು ಹಾಜರಾಗುವಂತೆ ಕ್ರಮವಹಿಸಬೇಕು. ಜಾಗೃತಿ ಜಾಥಾವು ಗ್ಲಾಸ್‍ಹೌಸ್ ಆವರಣದಿಂದ ಎಂ.ಜಿ.ರಸ್ತೆ, ಗಾಯತ್ರಿ ಚಿತ್ರ ಮಂದಿರ ಮುಂಭಾಗದಿಂದ ಟೌನ್‍ಹಾಲ್ ವ್ರತ್ತದ ಮೂಲಕ ಖಾಸಗಿ ಬಸ್ ನಿಲ್ದಾಣದವರೆಗೆ ಚಲಿಸಿ ಮುಕ್ತಾಯಗೊಳ್ಳಬೇಕು ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಕಾರ್ಮಿಕಾಧಿಕಾರಿ ರಮೇಶ್, ಡಿಡಿಪಿಐ ನಂಜಯ್ಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

(Visited 3 times, 1 visits today)
tumkur Tumkur dc yspatil
Previous Articleಚಡ್ಡಿ ಸುಡುತ್ತೇವೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
Next Article ಸುಸ್ಥಿರ ಪರಿಸರ ನಮ್ಮೆಲ್ಲರ ಹೊಣೆ: ಶಾಸಕ ರಾಜೇಶ್‍ಗೌಡ
News Desk Benkiyabale

Related Posts

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm news
ತಾಜಾ ಸುದ್ಧಿಗಳು
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm
news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
news

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
news

ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ

September 18, 2026 5:37 pm
Our Youtube Channel
Our Picks

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm

ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ

September 18, 2026 5:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

By News Desk BenkiyabaleSeptember 19, 2026 6:07 pm

ತುಮಕೂರು: ರಾಜ್ಯ ಹೈಕೋರ್ಟ್ ನೈಸ್ ಭೂಮಿಯನ್ನುರೈತರಿಗೆ ವಾಪಸು ನೀಡಬೇಕೆಂದು ಮತ್ತುಅಕ್ರಮವಾಗಿ ಸಂಗ್ರಹಿಸುತ್ತಿರುವಟೋಲ್ ಸಂಗ್ರಹ ನಿಲ್ಲಿಸಬೇಕೆಂದು ತೀರ್ಪು ನೀಡಿದ್ದರೂ ಅದನ್ನು ಜಾರಿಗೆ…

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.