BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಆದೇಶ ಹಿಂಪಡೆಯಲು ಸಂಪಾದಕರ ಸಂಘ ಆಗ್ರಹ
  • 1.66 ಕೋಟಿ ಉಳಿತಾಯ ಖಾತೆಗಳ ಮರು-ಕೆವೈಸಿ ಬಾಕಿ
  • ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ
  • ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ
  • ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ
  • ಕನ್ನಡ ಭಾಷೆ ಉಳಿವಿಗಾಗಿ ಬೈಕ್‍ನಲ್ಲಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ
  • ನೀನಾಸಂ ಮೂಲದ ಸದುಭಿರುಚಿ ನಾಟಕಗಳು
  • ರಸ್ತೆಗೆ ಅಡ್ಡಲಾಗಿ ಕಾಂಪೌಂಡ್ ನಿರ್ಮಾಣ: ಕ್ರಮಕ್ಕೆ ಒತ್ತಾಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಗರ್ ಹುಕುಂ ಸಾಗುವಳಿದಾರರ ಹಕ್ಕು ರಕ್ಷಣೆಗೆ ಆಗ್ರಹ
ಇತರೆ ಸುದ್ಧಿಗಳು

ಬಗರ್ ಹುಕುಂ ಸಾಗುವಳಿದಾರರ ಹಕ್ಕು ರಕ್ಷಣೆಗೆ ಆಗ್ರಹ

By News Desk BenkiyabaleUpdated:June 10, 2022 5:36 pm

ತುಮಕೂರು:

ರೈತರ ಮೇಲೆ ಅರಣ್ಯ ಇಲಾಖೆಯ ದೌರ್ಜನ್ಯ, ದಬ್ಬಾಳಿಕೆ-ಕಿರುಕುಳ ಖಂಡಿಸಿ, ಬಗರ್ ಹುಕುಂ ಸಾಗುವಳಿದಾರರ ಹಕ್ಕು ರಕ್ಷಣೆಗಾಗಿ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಜೂ. 14 ರಿಂದ ರೈತರ ಬೃಹತ್ ಅನಿರ್ಧಿಷ್ಟಾವಧಿ ಧರಣಿಯನ್ನು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿದೆ.
ದೌರ್ಜನ್ಯ, ದಬ್ಬಾಳಿಕೆ ಬಳಸಿ ಅರಣ್ಯ ಇಲಾಖೆ ಮೂಲಕ ಕಿತ್ತುಕೊಂಡಿರುವ ಬಗರ್ ಹುಕಂ ಸಾಗುವಳಿ ಭೂಮಿ ಮರಳಿಸಲು, ಎಲ್ಲಾ ಬಗರ್ ಹುಕಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು, ಸಾಗುವಳಿ ಮಂಜೂರಾತಿ ಆದೇಶ ಪಡೆದಿರುವ ಎಲ್ಲಾ ಬಗರ್‍ಹುಕುಂ ರೈತರಿಗೆ ಪಹಣಿ ವಿತರಿಸಲು, ಬಗರ್ ಹುಕುಂ ಸಕ್ರಮ ಕೋರಿ ಅರ್ಜಿ ಸಲ್ಲಿಸಲು ಅವಕಾಶವನ್ನು ವಿಳಂಬ ಮಾಡದೇ ಕಲ್ಪಿಸಲು, ವಸತಿ ರಹಿತರಿಗೆ ಮನೆ-ನಿವೇಶನಕ್ಕಾಗಿ ಸರ್ಕಾರಿ ಭೂಮಿ ಲಭ್ಯ ಇಲ್ಲದ ಕಡೆ ಭೂ ಸ್ವಾಧೀನದ ಮೂಲಕ ಮನೆ -ನಿವೇಶನ ಒದಗಿಸಲು, ವಿವಿಧ ಯೋಜನೆಗಳಿಗೆ ಭೂ ಸ್ವಾಧೀನಕ್ಕೆ ಒಳಗಾದ ಬಗರ್ ಹುಕುಂ ಸಾಗುವಳಿದಾರರು ಸೇರಿದಂತೆ ಎಲ್ಲಾ ರೈತರಿಗೆ ಪರಿಹಾರದ ಹಣ ನೀಡಲು ಆಗ್ರಹಿಸಿ ರೈತರ ಬೃಹತ್ ಧರಣಿಯನ್ನು ನಡೆಸಲಾಗುತ್ತಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಹ ಕಾರ್ಯದರ್ಶಿ ಟಿ. ಯಶವಂತ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜಿಲ್ಲೆಯ ಎಲ್ಲಾ ಹತ್ತು ತಾಲ್ಲೂಕುಗಳಿಂದ ನೂರಾರು ರೈತರು ಈ ಧರಣಿಯಲ್ಲಿ ಭಾಗವಹಿಸುತ್ತಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ಟೌನ್‍ಹಾಲ್‍ನಿಂದ ಮೆರವಣಿಗೆ ಮೂಲಕ ಬಂದು ಧರಣಿ ಕುಳಿತುಕೊಳ್ಳಲಾಗುವುದು ಎಂದರು.
ಕೋವಿಡ್ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಅರಣ್ಯ ಇಲಾಖೆಯವರು ಗುಬ್ಬಿ ತಾಲ್ಲೂಕು ಚೇಳೂರು ಹೋಬಳಿ ಗಂಗಯ್ಯನ ಪಾಳ್ಯ, ಅಮ್ಮನಘಟ್ಟ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಹಲವಾರು ಕಡೆ ರೈತರನ್ನು ಬಲಾತ್ಕಾರವಾಗಿ ಒಕ್ಕಲೆಬ್ಬಿಸಿದ್ದಾರೆ. ಹತ್ತಾರು ವರ್ಷಗಳಿಂದ ಕಷ್ಟಪಟ್ಟು ಬೆಳೆಸಿದ ನೂರಾರು ತೆಂಗು, ಮಾವು ಮುಂತಾದ ಲಕ್ಷಾಂತರ ರೂ. ಬೆಲೆ ಬಾಳುವ ಮರಗಳು ಹಾಗೂ ಬೆಳೆಗಳನ್ನು ನಾಶಪಡಿಸಿದ್ದಾರೆ. ಈ ಸಂದರ್ಭದ ಆಕ್ರಂದನ, ನೋವುಗಳು ಮಾಧ್ಯಮದಲ್ಲಿ ಬಂದಾಗ ಮೊಸಳೆ ಕಣ್ಣೀರು ಸುರಿಸುವ ಸರ್ಕಾರಗಳು ಸ್ವಲ್ಪ ದಿನದ ನಂತರ ಮತ್ತೊಬ್ಬ ರೈತರನ್ನು ಒಕ್ಕಲೆಬ್ಬಿಸಲು ಮುಂದಾಗುತ್ತಿದ್ದಾರೆ. ಇದಕ್ಕೆ ಕೊನೆ ಯಾವಾಗ ಎಂದು ಈ ಬೃಹತ್ ಪ್ರತಿಭಟನಾ ಧರಣಿಯಲ್ಲಿ ಪ್ರಶ್ನಿಸಲಾಗುವುದು ಎಂದು ಅವರು ತಿಳಿಸಿದರು.
ಜಿಲ್ಲೆಯ ಸಾವಿರಾರು ರೈತರು, ಕೃಷಿ ಕೂಲಿಕಾರರು, ದಲಿತರು 40-50 ವರ್ಷಗಳಿಂದ ಬಗರ್ ಹುಕಂ ಸಾಗುವಳಿ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ. ಸಾಗುವಳಿ ಸಕ್ರಮ ಚೀಟಿಗಳು ಇರುವ ರೈತರನ್ನು ಸಹ ಒಕ್ಕಲೆಬ್ಬಿಸುವ ಆಕ್ರಮಣಗಳಿಗೆ ಗುರಿ ಮಾಡಲಾಗಿದೆ. ಫಾರಂ 50, 53, 57 ರಲ್ಲಿ ಸಕ್ರಮ ಕೋರಿ ಅರ್ಜಿ ಸಲ್ಲಿಸಿರುವ ರೈತರನ್ನು ಕಾನೂನು ಬಾಹಿರವಾಗಿ ಒಕ್ಕಲೆಬ್ಬಿಸಲಾಗಿದೆ. ತಮ್ಮ ಹತ್ತಿರ ಇರುವ ಕಂದಾಯ ದಾಖಲಾತಿಗಳನ್ನು ತೋರಿಸಿದರೂ ಅರಣ್ಯ ಇಲಾಖೆಯ ದೌರ್ಜನ್ಯದ ಅಹಂಕಾರ ತಣಿಯುತ್ತಿಲ್ಲ ಎಂದು ದೂರಿದರು.
ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ. ಅಜ್ಜಪ್ಪ ಮಾತನಾಡಿ, ಕೋವಿಡ್ ಪೂರ್ವದಲ್ಲಿ ಅರಣ್ಯ ಇಲಾಖೆ ಕಿರುಕುಳದ ವಿರುದ್ಧ, ರೈತರು ಉಳುಮೆ ಮಾಡುತ್ತಿದ್ದ ಭೂಮಿಯನ್ನು ಸರ್ಕಾರ ಕೂಡಲೇ ಸಕ್ರಮ ಮಾಡಬೇಕು. ಅರಣ್ಯ ಇಲಾಖೆಯು ದಲಿತರು, ಬಡವರಿಂದ ಬಲಾತ್ಕಾರವಾಗಿ ಕಿತ್ತುಕೊಂಡಿರುವ ಕೃಷಿ ಭೂಮಿಯನ್ನು ವಾಪಸ್ಸು ನೀಡಬೇಕು. ಗುಬ್ಬಿ ತಾಲ್ಲೂಕಿನ ಗಂಗಯ್ಯನ ಪಾಳ್ಯದಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ 2020 ರಲ್ಲಿ ಫೆಬ್ರವರಿ 25-28 ರಂದು ಪಾದಯಾತ್ರೆ ನಡೆಸಲಾಗಿತ್ತು. ಈ ಹೋರಾಟದ ಫಲವಾಗಿ ಅವತ್ತಿನ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ರೈತರ ಸಭೆ ನಡೆದು ರೈತರ ಮತ್ತು ಅರಣ್ಯ ಇಲಾಖೆಯ ನಡುವೆ ವಿವಾದ ಇರುವ ಕೃಷಿ ಭೂಮಿಗಳ ಸರ್ವೆ ನಡೆಸಬೇಕು. ಎಲ್ಲಾ ಬಗರ್ ಹುಕಂ ಭೂಮಿಗಳ ಸಕ್ರಮದ ಪ್ರಕ್ರಿಯೆಯನ್ನು ವೇಗಗೊಳಿಸಬೇಕು ಎಂದು ತೀರ್ಮಾನ ಮಾಡಿ ಸರ್ವೆ ವರದಿಗಳು ಬಂದ ನಂತರ ಮತ್ತೊಂದು ಸಭೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಇಲ್ಲಿಯವರೆಗೂ ಸರ್ವೆ ನಡೆಸಲಿಲ್ಲ. ಈಗಲೂ ಅರಣ್ಯ ಇಲಾಖೆಯ ತಕರಾರುಗಳಿಂದ ಬಗರ್ ಹುಕಂ ಸಾಗುವಳಿ ಸಕ್ರಮವಾಗುತ್ತಿಲ್ಲ ಎಂದು ಅವರು ಆರೋಪಿಸಿದರು.
ಈಗ ಮತ್ತೆ ಮುಂಗಾರು ಶುರುವಾಗುತ್ತಿರುವ ಹಿನ್ನೆಲೆಯಲ್ಲಿ ಭೂಮಿಯನ್ನು ಪಡೆದುಕೊಳ್ಳುವ ಹೋರಾಟವನ್ನು ಕೈಗೆತ್ತಿಕೊಳ್ಳಲು ಕರ್ನಾಟಕ ಪ್ರಾಂತ ರೈತ ಸಂಘ ನಿರ್ಧರಿಸಿ ಗುಬ್ಬಿ ತಾಲ್ಲೂಕಿನ ಚೇಳೂರಿನಲ್ಲಿ ಜಿಲ್ಲಾ ಮಟ್ಟದ ಭೂ ಸಮಾವೇಶವನ್ನು ಕಳೆದ ಮೇ 10 ರಂದು ಸಂಘಟಿಸಿತ್ತು. ಈ ಸಮಾವೇಶದ ಕರೆಯ ಮೇರೆಗೆ ಜೂನ್ 14 ರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ ಬೃಹತ್ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಳ್ಳಲಾಗಿದೆ. ಸಾಗುವಳಿ ಸ್ವಾಧೀನದ ಹಕ್ಕನ್ನು ಖಾತರಿ ಪಡಿಸಿಕೊಳ್ಳಲು, ಮರು ಸ್ವಾಧೀನಕ್ಕೆ ಇರುವ ಅಡ್ಡಿಯನ್ನು ನಿವಾರಿಸಿಕೊಳ್ಳಲು ಈ ಬೃಹತ್ ಧರಣಿಯಲ್ಲಿ ಜಿಲ್ಲೆಯ ಎಲ್ಲಾ ಬಗರ್ ಹುಕುಂ ಸಾಗುವಳಿದಾರರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ ಅಜ್ಜಪ್ಪ, ದೊಡ್ಡ ನಂಜಯ್ಯ, ನರಸಿಂಹಮೂರ್ತಿ, ಬಸವರಾಜು ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಸಿಇಟಿ ಪರೀಕ್ಷೆ: ಅಗತ್ಯ ಕ್ರಮಕ್ಕೆ ಡೀಸಿ ಸೂಚನೆ
Next Article ಮಾನವ ಪರಿಸರ ಸಂರಕ್ಷಣಾ ಪಡೆಯ ಕಚೇರಿ ಉದ್ಘಾಟನೆ
News Desk Benkiyabale

Related Posts

ಆದೇಶ ಹಿಂಪಡೆಯಲು ಸಂಪಾದಕರ ಸಂಘ ಆಗ್ರಹ

November 05, 2026 5:33 pm news

1.66 ಕೋಟಿ ಉಳಿತಾಯ ಖಾತೆಗಳ ಮರು-ಕೆವೈಸಿ ಬಾಕಿ

November 05, 2026 5:31 pm news

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm news
ತಾಜಾ ಸುದ್ಧಿಗಳು
news

ಆದೇಶ ಹಿಂಪಡೆಯಲು ಸಂಪಾದಕರ ಸಂಘ ಆಗ್ರಹ

November 05, 2026 5:33 pm
news

1.66 ಕೋಟಿ ಉಳಿತಾಯ ಖಾತೆಗಳ ಮರು-ಕೆವೈಸಿ ಬಾಕಿ

November 05, 2026 5:31 pm
news

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm
news

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm
news

ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ

November 04, 2026 5:28 pm
news

ಕನ್ನಡ ಭಾಷೆ ಉಳಿವಿಗಾಗಿ ಬೈಕ್‍ನಲ್ಲಿ ರಾಜ್ಯಾದ್ಯಂತ ಜಾಗೃತಿ ಅಭಿಯಾನ

November 04, 2026 5:27 pm
Our Youtube Channel
Our Picks

ಆದೇಶ ಹಿಂಪಡೆಯಲು ಸಂಪಾದಕರ ಸಂಘ ಆಗ್ರಹ

November 05, 2026 5:33 pm

1.66 ಕೋಟಿ ಉಳಿತಾಯ ಖಾತೆಗಳ ಮರು-ಕೆವೈಸಿ ಬಾಕಿ

November 05, 2026 5:31 pm

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm

ಡಿಸೆಂಬರ್ ಅಂತ್ಯದೊಳಗೆ ಕೊಳವೆ ಬಾವಿ ಕೊರೆದು, ವಿದ್ಯುದ್ದೀಕರಣಗೊಳಿಸಿ ಹಸ್ತಾಂತರಿಸಲು ಸೂಚನೆ

November 04, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಆದೇಶ ಹಿಂಪಡೆಯಲು ಸಂಪಾದಕರ ಸಂಘ ಆಗ್ರಹ

By News Desk BenkiyabaleNovember 05, 2026 5:33 pm

ತುಮಕೂರು: ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ದಾಖಲೆ ಸಲ್ಲಿಕೆ ಹಾಗೂ ತಪಾಸಣೆ ಸಂಬಂಧ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ…

1.66 ಕೋಟಿ ಉಳಿತಾಯ ಖಾತೆಗಳ ಮರು-ಕೆವೈಸಿ ಬಾಕಿ

November 05, 2026 5:31 pm

ರಕ್ಷಣೆಗಾಗಿ ವಕೀಲರ ಸರಪಳಿ ಪ್ರತಿಭಟನೆ

November 04, 2026 5:32 pm

ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಒತ್ತಾಯ

November 04, 2026 5:29 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.