BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  •  ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ
  • ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ
  • ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ
  • ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ
  • ಎಸ್‌ಐಆರ್ ಪ್ರಕ್ರಿಯೆಗಳನ್ನು ರದ್ದು ಮಾಡಬೇಕೆಂದು ಪ್ರತಿಭಟನೆ
  • ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ
  • ನಗರದ ಹಲವು ವಾರ್ಡ್ಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ: ಪರಿಹಾರಕ್ಕೆ ಒತ್ತಾಯ
  • ಎಸ್.ಐ.ಆರ್ ಹೆಸರಿನಲ್ಲಿ ಮತದಾನದ ಹಕ್ಕನ್ನು ಕಸಿಯುವ ಕೆಲಸ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮೊಸರಲ್ಲಿ ಕಲ್ಲು ಹುಡುಕುವುದೇ ವಿರೋಧ ಪಕ್ಷಗಳ ಕೆಲಸ
ಇತರೆ ಸುದ್ಧಿಗಳು

ಮೊಸರಲ್ಲಿ ಕಲ್ಲು ಹುಡುಕುವುದೇ ವಿರೋಧ ಪಕ್ಷಗಳ ಕೆಲಸ

By News Desk BenkiyabaleUpdated:June 20, 2022 5:33 pm

ತುಮಕೂರು:


ಮೊಸರಲ್ಲಿ ಕಲ್ಲು ಹುಡುಕುವುದು, ಟೀಕೆ ಮಾಡುವುದೇ ವಿರೋಧ ಪಕ್ಷಗಳ ಕೆಲಸ. ಪಠ್ಯ ಪುಸ್ತಕಗಳ ಪರಿಷ್ಕರಣೆ ವಿಚಾರದಲ್ಲಿ ನೂರಕ್ಕೆ ನೂರರಷ್ಟು ರಾಜಕಾರಣ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಇಂದಿಲ್ಲಿ ವಾಗ್ದಾಳಿ ನಡೆಸಿದರು.
ಕೆಲವರಿಗೆ ಸರ್ಕಾರದ ನೆಗೆಟಿವ್ ಹುಡುಕುವುದೇ ಕಾಯಕವಾಗಿದೆ. ಅವರಿಗೆ ಬೇರೆ ಕೆಲಸ ಇಲ್ಲ. ಸರ್ಕಾರ ಮಾಡಿರುವ ಒಳ್ಳೆಯ ಕೆಲಸಗಳನ್ನು ಅವರು ನೋಡುವುದೇ ಇಲ್ಲ ಎಂದು ವಿಪಕ್ಷಗಳ ವಿರುದ್ಧ ಹರಿಹಾಯ್ದರು.
ಮಾಯಸಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಪಠ್ಯ ಪುಸ್ತವನ್ನು ಇನ್ನು ಯಾರು ಓದೇ ಇಲ್ಲ. ಆದರೂ ಕುವೆಂಪು ರವರ ವಿಚಾರವನ್ನು ಮುಂದಿಟ್ಟುಕೊಂಡು ದೊಡ್ಡ ಸದ್ದು ಮಾಡುತ್ತಿದ್ದಾರೆ.
ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಕುವೆಂಪು ಅವರ ವಿಚಾರಕ್ಕೆ ಸಂಬಂಧ ಪಟ್ಟ ಪಠ್ಯವನ್ನು 8 ಪ್ಯಾರಕ್ಕೆ ಮಾಡಿದ್ದೆವು. ಆದರೆ ಸಿದ್ದರಾಮಯ್ಯ ಸರ್ಕಾರ ಬಂದ ಅದರಲ್ಲಿ ಒಂದು ಪ್ಯಾರ ಕಡಿತ ಮಾಡಿ 7 ಪ್ಯಾರಕ್ಕೆ ಇಳಿಸಿದ್ದರು. ಆದರೆ ಮತ್ತೆ ಬಿಜೆಪಿಯ ಬಿ.ಸಿ. ನಾಗೇಶ್ ಶಿಕ್ಷಣ ಸಚಿವರಾದ ಮೇಲೆ ಕುವೆಂಪುರವರ ಪಠ್ಯವನ್ನು 10 ಪ್ಯಾರಕ್ಕೆ ಹೆಚ್ಚಿಸಿದ್ದೇವೆ. ಇದು ಯಾರಿಗೂ ಗೊತ್ತೇ ಇಲ್ಲ, ಈ ಬಗ್ಗೆ ಯಾರು ಮಾತನಾಡುತ್ತಲೇ ಇಲ್ಲ ಎಂದರು.
ನಾಡಪ್ರಭು ಕೆಂಪೇಗೌಡರ ಬಗ್ಗೆ ಒಂದು ಅಧ್ಯಾಯ ಇರಲಿಲ್ಲ. ಬೆಂಗಳೂರು-ಮೈಸೂರು ಹೆಸರು ಬಂದ ತಕ್ಷಣ ಟಿಪ್ಪು ಹೆಸರು ತೋರಿಸುತ್ತಿದ್ದರು. ಟಿಪ್ಪು ಅವರೇನು ಕನ್ನಡದವರಾ, ಅವರು ಪರ್ಶಿಯನ್, ಉರ್ದು ಭಾಷೆಯವರು. ಅವರ ಕತ್ತಿ ಮೇಲೂ ಉರ್ದು ಭಾಷೆಯಲ್ಲಿ ಬರೆದುಕೊಂಡಿದ್ದರು. ಆದರೂ ಅವರನ್ನು ವೈಭವೀಕರಿಸುವ ಕೆಲಸ ಮಾಡಿದ್ದರು. ಆದರೆ ಮೊದಲ ಬಾರಿಗೆ ನಾಗೇಶ್ ಅವರು ಶಿಕ್ಷಣ ಸಚಿವರಾದ ನಂತರ ಕೆಂಪೇಗೌಡರ ಹೆಸರನ್ನು ಸೇರಿಸಿದ್ದಾರೆ. ಈ ಬಗ್ಗೆ ಏಕೆ ವಿರೋಧ ಪಕ್ಷದವರು ಚಕಾರ ಎತ್ತುತ್ತಿಲ್ಲ ಎಂದು ಪ್ರಶ್ನಿಸಿದರು.
ಕಾಮಾಲೆ ಕಣ್ಣಿಗೆ ಎಲ್ಲವೂ ಹಳದಿಯಾಗಿಯೇ ಕಾಣುತ್ತದೆ. ಆದ್ದರಿಂದ ಹಳದಿ ಕನ್ನಡಕವನ್ನು ಬಿಟ್ಟು ಬಿಳಿ ಕನ್ನಡಕವನ್ನು ಹಾಕಿಕೊಳ್ಳಬೇಕು ಎಂದು ವಿಪಕ್ಷ ನಾಯಕರ ಹೇಳಿಕೆಗಳಿಗೆ ತಿರಗೇಟು ನೀಡಿದ ಸಚಿವ ಅಶೋಕ್, ಬಿಳಿ ಕನ್ನಡಕ ಹಾಕಿಕೊಂಡಾಗ ಎಲ್ಲ ಸತ್ಯ ಕಾಣುತ್ತದೆ. ತಾವು ಮಾಡಿದ್ದೆಲ್ಲ ಸತ್ಯ ಎಂಬ ಭ್ರಮೆಯಲ್ಲಿ ಅವರು ಇದ್ದಾರೆ ಎಂದರು.
ಡಿ.ಕೆ. ಶಿವಕುಮಾರ್ ಅವರ ಮಂತ್ರಿಗಳಾಗಿ ಕೆಲಸ ಮಾಡಿದಂತಹವರು. ಈಗ ಪಠ್ಯವನ್ನು ಹರಿದು ಹಾಕಿ ಬಿಟ್ಟರೆ ಮಾಧ್ಯಮದಲ್ಲಿ ಹೆಚ್ಚು ಪ್ರಚಾರ ಸಿಗುತ್ತದೆ ಎಂದು ತಿಳಿದುಕೊಂಡಿದ್ದಾರೆ. ಆದರೆ ಹೊಸ ಪಠ್ಯ ಪುಸ್ತಕವನ್ನು ಯಾರು ಓದಿದ್ದಾರೆ ಪ್ರಶ್ನಿಸಿದರು.
ಈ ಹಿಂದೆ ಕಾಗೇರಿ ಅವರು ಶಿಕ್ಷಣ ಮಂತ್ರಿಯಾಗಿದ್ದಾಗ ಯಾವ ರೀತಿ ಪಠ್ಯ ಪುಸ್ತಕ ಇತ್ತು. ಸಿದ್ದರಾಮಯ್ಯನವರ ಸರ್ಕಾರ ಬಂದ ಮೇಲೆ ಯಾರ ರೀತಿಯ ಪಠ್ಯ ಪುಸ್ತಕ ಇತ್ತು. ಆ ಬಗ್ಗೆಯೆಲ್ಲಾ ಯಾರೂ ಮಾತನಾಡುತ್ತಿಲ್ಲ.
ಕೇವಲ ಸರ್ಕಾರದ ವಿರುದ್ಧ ಟೀಕೆ ಮಾಡುವುದೇ ಇವರ ಕೆಲಸವಾಗಿದೆ ಎಂದ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಪಠ್ಯ ಪುಸ್ತಕವನ್ನು ಓದಿ, ನಂತರ ಪ್ರತಿಕ್ರಿಯೆ ನೀಡಲಿ. ಯಾರೋ ತಂದು ಕೊಟ್ಟ ಪಠ್ಯವನ್ನು ಹರಿದು ಹಾಕುವುದು ಸರಿಯಿಲ್ಲ ಎಂದು ಡಿಕೆಶಿ ಅವರಿಗೆ ಸಲಹೆ ನೀಡಿದರು.

(Visited 1 times, 1 visits today)
tumkur
Previous Articleಅಧಿಕಾರಿಗಳು-ಸಾಮಾನ್ಯರ ಅಂತರ ತಪ್ಪಿಸಲು ಗ್ರಾಮ ವಾಸ್ತವ್ಯ: ಆರ್. ಅಶೋಕ್
Next Article ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಸಚಿವ ಆರ್.ಅಶೋಕ್
News Desk Benkiyabale

Related Posts

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

September 28, 2026 5:12 pm news

ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ

September 28, 2026 5:10 pm ಇತರೆ ಸುದ್ಧಿಗಳು

ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ

September 28, 2026 5:09 pm news
ತಾಜಾ ಸುದ್ಧಿಗಳು
news

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

September 28, 2026 5:12 pm
ಇತರೆ ಸುದ್ಧಿಗಳು

ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ

September 28, 2026 5:10 pm
news

ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ

September 28, 2026 5:09 pm
news

ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ

September 28, 2026 5:08 pm
news

ಎಸ್‌ಐಆರ್ ಪ್ರಕ್ರಿಯೆಗಳನ್ನು ರದ್ದು ಮಾಡಬೇಕೆಂದು ಪ್ರತಿಭಟನೆ

September 28, 2026 5:06 pm
news

ನಗು ಮನಸ್ಸಿಗೆ ನೆಮ್ಮದಿ ನೀಡುವ ಔಷಧಿ

September 26, 2026 5:58 pm
Our Youtube Channel
Our Picks

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

September 28, 2026 5:12 pm

ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ

September 28, 2026 5:10 pm

ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ

September 28, 2026 5:09 pm

ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ

September 28, 2026 5:08 pm

ಎಸ್‌ಐಆರ್ ಪ್ರಕ್ರಿಯೆಗಳನ್ನು ರದ್ದು ಮಾಡಬೇಕೆಂದು ಪ್ರತಿಭಟನೆ

September 28, 2026 5:06 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

By News Desk BenkiyabaleSeptember 28, 2026 5:12 pm

ತುಮಕೂರು: ಮನುಷ್ಯನ ಪ್ರೀತಿಯ ಪ್ರಾಣಿಯಾಗಿರುವ ನಾಯಿ ಮತ್ತು ಬೆಕ್ಕುಗಳಿಂದ ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವರೇಬಿಸ್ ದಿನಾಚರಣೆಯ ಗುರಿಯಾಗಿದ್ದು, ಪ್ರತಿಯೊಬ್ಬರೂ…

ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ

September 28, 2026 5:10 pm

ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ

September 28, 2026 5:09 pm

ತಂದೆ ಕಳೆದುಕೊಂಡ ೧೪ರ ಬಾಲಕನ ಹೆಗಲ ಮೇಲೆ ಕುಟುಂಬದ ಹೊರೆ

September 28, 2026 5:08 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.