BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
  • ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ
  • ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ
  • ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ
  • ಡಾ.ಶಿವಕುಮಾರ ಶ್ರೀಗಳ ಪುಣ್ಯಸಂಸ್ಮರಣೆ: ದಾಸೋಹದಿನ ಆಚರಣೆ
  • ರೇಷ್ಮೆ ಕೃಷಿ ಬೆಳಗಾರರ ಗುಂಪು ಸಭೆ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶೀಘ್ರದಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
ಇತರೆ ಸುದ್ಧಿಗಳು

ಶೀಘ್ರದಲ್ಲೇ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

By News Desk BenkiyabaleUpdated:July 09, 2022 6:54 pm

ತುಮಕೂರು:


ಕಾಂಗ್ರೆಸ್ ಸಂಪ್ರದಾಯಕ ಮತದಾರರಾದ ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಮುಂಬರುವ ಸೆಪ್ಟಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ತಿಂಗಳಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ, ವರ್ಗದ ಕಾರ್ಯಕರ್ತರ ಬೃಹತ್ ಸಮಾವೇಶ ಹಮ್ಮಿಕÉೂಳ್ಳಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಿ.ಜಿ.ನಿಂಗರಾಜು ತಿಳಿಸಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷ ನೀಡುತ್ತಿರುವ ಸುಳ್ಳು ಭರವಸೆಗಳನ್ನು ನಂಬಿ, ದಲಿತ ಯುವಕರು ಕಾಂಗ್ರೆಸ್ ಪಕ್ಷದಿಂದ ದೂರವಾಗುತ್ತಿದ್ದಾರೆ. ಪರಿಶಿಷ್ಟ ಜಾತಿ ಮತ್ತು ವರ್ಗಗಳ ಯುವಜನತೆಗೆ ಬಿಜೆಪಿ ಹಿಡನ್ ಅಜೆಂಡಾವನ್ನು ತಿಳಿಸಿ, ಕಾಂಗ್ರೆಸ್ ಪಕ್ಷ ತನ್ನ ಆಡಳಿತದ ಅವಧಿಯಲ್ಲಿ ತಳಸಮುದಾಯದ ಏಳಿಗೆಗೆ ನೀಡಿರುವ ಕೊಡುಗೆಗಳನ್ನು ನೆನಪು ಮಾಡಿ, ಅವರನ್ನು ಕಾಂಗ್ರೆಸ್ ಪಕ್ಷದತ್ತ ಸೆಳೆಯುವ ನಿಟ್ಟಿನಲ್ಲಿ ಈ ಸಮಾವೇಶ ಮಹತ್ವವನ್ನು ಪಡೆದುಕೊಳ್ಳಲಿದೆ ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಮಂಚೂಣಿ ಘಟಕಗಳಾಗಿರುವ ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಓಬಿಸಿ, ಮಹಿಳಾ, ಅಲ್ಪಸಂಖ್ಯಾತ, ಕಾರ್ಮಿಕ, ವಕೀಲ, ವೈದ್ಯ ವಿಭಾಗಗಳನ್ನು ಕಾಂಗ್ರೆಸ್ ಪಕ್ಷದ ಪೇರೆಂಟ್ ಬಾಡಿ ಕಡೆಗಣಿಸಿದ್ದರ ಫಲವಾಗಿ ಇಂತಹ ದುಸ್ಥಿತಿ ಬಂದಿದೆ. ಮತ್ತೊಮ್ಮೆ ಪಕ್ಷವನ್ನು ಸಂಘಟಿಸಿ, ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಮಂಚೂಣಿ ಘಟಕಗಳನ್ನು ಬಲ ಪಡಿಸಿ ಚುನಾವಣೆಯಲ್ಲಿ ಸಕ್ರಿಯವಾಗಿ ದುಡಿಸಿಕೊಳ್ಳುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷರು, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೇರಿದಂತೆ ಜಿಲ್ಲೆಯ ಎಲ್ಲಾ ನಾಯಕರನ್ನು ಒಳಗೊಂಡಂತೆ ಬೃಹತ್ ಸಮಾವೇಶ ನಡೆಸುವ ಮೂಲಕ ಸಂಪ್ರದಾಯಕ ಮತಗಳನ್ನು ಒಗ್ಗೂಡಿಸುವ ಕೆಲಸ ಇದಾಗಿದೆ ಎಂದು ಬಿ.ಜಿ.ನಿಂಗರಾಜು ತಿಳಿಸಿದರು.
ಯುವಮುಖಂಡ ಇಕ್ಬಾಲ್ ಅಹಮದ್ ಮಾತನಾಡಿ, ಪರೋಕ್ಷ ಸಂವಿಧಾನ ಬದಲಾವಣೆಯ ಪ್ರಯತ್ನಗಳು ಸರಕಾರಿ ಸಂಸ್ಥೆಗಳ ಖಾಸಗೀಕರಣದ ಮೂಲಕ ನಡೆಯುತ್ತಿವೆ.ಇದರಿಂದಾಗಿ ಮೀಸಲಾತಿ ಎಂಬುದೇ ಅಪ್ರಸ್ತುತವಾಗುತ್ತಿದೆ.ಇದರ ವಿರುದ್ದ ದ್ವನಿ ಎತ್ತಲು ಇಂತಹ ಸಮಾವೇಶಗಳು ಅತಿ ಅಗತ್ಯವಾಗಿ ಬೇಕಾಗಿವೆ ಎಂದರು.
ಮಾಜಿ ಶಾಸಕ ಡಾ.ರಫೀಕ್ ಅಹಮದ್ ಮಾತನಾಡಿ, ಇಂದು ನಾವೆಲ್ಲರೂ ಒಂದೆಡೆ ಕುಳಿತು ಮಾತನಾಡುತ್ತಿದ್ದೇವೆ ಎಂದರೆ ಅದಕ್ಕೆ ಸಂವಿಧಾನ ಕಾರಣ. ಅಂತಹ ಸಂವಿಧಾನವನ್ನೇ ಬದಲಾಯಿಸುವ ಕೆಲಸವನ್ನು ಬಿಜೆಪಿ ಪಕ್ಷ ಮಾಡುತ್ತಿದೆ.ದೇಶದಲ್ಲಿ ಇಂದು 10ಲಕ್ಷ ಮಕ್ಕಳು ಪ್ರಾಥಮಿಕ ಶಿಕ್ಷಣದಿಂದ ಹೊರಗುಳಿದಿದ್ದಾರೆ ಎಂದು ಸಮೀಕ್ಷೆ ಹೇಳುತ್ತಿದೆ. ಮತ್ತೊಮ್ಮೆ ದಲಿತರು, ಅಲ್ಪಸಂಖ್ಯಾತರು, ಬಡವರ ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ.ಈ ವರ್ಗಗಳು ಶಿಕ್ಷಣ ಪಡೆದು ಸಂಘಟಿತರಾದರೆ ಹಕ್ಕುಗಳನ್ನು ಪಡೆಯುತ್ತಾರೆ.ಹಾಗಾಗಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ಬರದಂತೆ ತಡೆಯುವ ಪ್ರಯತ್ನ ಇದಾಗಿದೆ. ಇದರ ವಿರುದ್ದ ಸಂಘಟಿತರಾಗಲು ಮುಂಬರುವ ಸಮಾವೇಶವನ್ನು ನಾವೆಲ್ಲರೂ ಆಸ್ತ್ರವಾಗಿ ಬಳಸಿಕೊಳ್ಳ ಬೇಕೆಂದು ಸಲಹೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅತೀಕ್ ಅಹಮದ್ ಮಾತನಾಡಿ, ಒಂದು ಸಮಾವೇಶ ಎಂದರೆ ಒಬ್ಬರು ಮಾಡುವ ಕೆಲಸವಲ್ಲ. ಪಕ್ಷದ ಎಲ್ಲಾ ವಿಭಾಗಗಳು ಮುಖಂಡರು,ಅಲ್ಪಸಂಖ್ಯಾತರು, ದಲಿತ ಮತ ಪಡೆದಿರುವ ಪಕ್ಷದ ಇತರೆ ಮುಖಂಡರುಗಳು ಕೈ ಜೋಡಿಸಬೇಕಿದೆ. ಪಕ್ಷವೆಂಬ ಮರದ ರಂಬೆ, ಕೊಂಬೆಗಳಾಗಿರುವ ವಿವಿಧ ಮಂಚೂಣಿ ಘಟಕಗಳು ಮತದ ಬೇರಿಗೆ ಬಲ ತುಂಬುವ ಕೆಲಸ ಮಾಡಬೇಕಾಗಿದೆ. ಸಮಾವೇಶದ ಸಂದರ್ಭದಲ್ಲಿ ಪಕ್ಷ ನೀಡುವ ಜವಾಬ್ದಾರಿಯನ್ನು ನಿಬಾಯಿಸು ವುದಾಗಿ ಭರವಸೆ ನೀಡಿದರು.
ಕಾಂಗ್ರೆಸ್ ಪಕ್ಷದ ತುಮಕೂರು ಜಿಲ್ಲಾ ಉಸ್ತುವಾರಿ ಕೇಶವ ಮೂರ್ತಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ ಬಂದ 75 ವರ್ಷಗಳು ತುಂಬುತ್ತಿದ್ದು, ಅದರ ಅಂಗವಾಗಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 75 ಕಿ.ಮಿ. ಪಾದಯಾತ್ರೆ ನಡೆಸುವ ಕಾರ್ಯಕ್ರಮವನ್ನು ಎಐಸಿಸಿ ಮತ್ತು ಕೆಪಿಸಿಸಿ ನೀಡಿದೆ. ಜಿಲ್ಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲು ಎಲ್ಲರು ಸನ್ನದ್ದರಾಗಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕ ಉಪಾಧ್ಯಕ್ಷರಾದ ಎಂ.ಎನ್.ಹನುಮಂತರಾಯಪ್ಪ, ರಂಗಧಾಮಯ್ಯ, ಮರಿಚನ್ನಮ್ಮ, ಶಿವಾಜಿ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಗೀತಾ ರುದ್ರೇಶ್, ದಿನೇಶಕುಮಾರ್, ಮಧುಗಿರಿ ರಂಗಸ್ವಾಮಿ, ಗೀತಾ, ಯುವಘಟಕದ ಉಪಾಧ್ಯಕ್ಷ ಮೋಹನ್‍ಕುಮಾರ್, ಮಾರುತಿ ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿವಿಧ ತಾಲೂಕು ಘಟಕಗಳ ಮುಖಂಡರು,ಉಪಸ್ಥಿತರಿದ್ದರು.

(Visited 5 times, 1 visits today)
Congress tumkur
Previous Articleಭೂ ಹಗರಣ: ಯಾರೇ ಆಗಲಿ ಜೈಲಿಗೆ ಕಳಿಸುವೆ- ಶಾಸಕ ಶ್ರೀನಿವಾಸ್
Next Article ಬಕ್ರೀದ್ ಹಬ್ಬ: ಗೋಹತ್ಯೆ ಮಾಡುತ್ತಿದ್ದ ಮೂವರ ಬಂಧನ!
News Desk Benkiyabale

Related Posts

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm
ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm
ಇತರೆ ಸುದ್ಧಿಗಳು

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
ಇತರೆ ಸುದ್ಧಿಗಳು

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
ಇತರೆ ಸುದ್ಧಿಗಳು

ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ

January 22, 2026 4:20 pm
Our Youtube Channel
Our Picks

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

By News Desk BenkiyabaleJanuary 27, 2026 4:05 pm

ತುಮಕೂರು: ಜಿಲ್ಲೆಯಾದ್ಯಂತ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸಂದರ್ಭದಲ್ಲಿ ಗ್ರಾಮೀಣಭಾಗದ ಕಾರ್ಯ ನಿರತ ಪತ್ರಕರ್ತರನ್ನು ಪರಿಗಣಿಸುವಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ…

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.