BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ
  • ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು
  • ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ
  • ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ
  • ಪ್ರಜಾ ಸೇವಾ ಅಭಿಯಾನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ
  •  ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ
  • ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ
  • ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿದ್ಯುತ್ ಅವಘಡ: ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ
ಇತರೆ ಸುದ್ಧಿಗಳು

ವಿದ್ಯುತ್ ಅವಘಡ: ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ

By News Desk BenkiyabaleUpdated:August 04, 2022 5:40 pm

ತುಮಕೂರು:


ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಮನೆಗೆ ನೀರು ನುಗ್ಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಮೃತಪಟ್ಟಿದ್ದ ಈರಣ್ಣನವರ ಪತ್ನಿ ಭಾಗ್ಯರತ್ನ ಅವರಿಗೆ ಸರ್ಕಾರದ ವತಿಯಿಂದ 5 ಲಕ್ಷ ರೂ. ಪರಿಹಾರವನ್ನು ಶಾಸಕ ಜ್ಯೋತಿಗಣೇಶ್ ವಿತರಿಸಿದರು.
ನಗರದ ಉಪ್ಪಾರಹಳ್ಳಿಯ ಶಿವಮೂಕಾಂಬಿಕ ನಗರದಲ್ಲಿ ವಾಸವಾಗಿದ್ದ ಈರಣ್ಣನವರು ಕಳೆದ ಮೂರು ದಿನಗಳ ಹಿಂದೆ ಮಳೆ ನೀರು ಮನೆ ನುಗ್ಗಿ ವಿದ್ಯುತ್ ಅವಘಡದಿಂದ ಸಾವನ್ನಪ್ಪಿದ್ದರು. ಇವರ ಕುಟುಂಬಕ್ಕೆ ಶಾಸಕ ಜ್ಯೋತಿಗಣೇಶ್ ಅವರು ಸಾಂತ್ವನ ಹೇಳಿ, ಸರ್ಕಾರದ ವತಿಯಿಂದ ವಿತರಿಸುವ 5 ಲಕ್ಷ ರೂ. ಪರಿಹಾರ ಚೆಕ್‍ನ್ನು ಕುಟುಂಬದವರಿಗೆ ವಿತರಿಸಿ ಧೈರ್ಯ ತುಂಬಿದರು.
ನಂತರ ಮಾತನಾಡಿದ ಶಾಸಕ ಜ್ಯೋತಿಗಣೇಶ್ ಅವರು, ಮಳೆಯಲ್ಲಿ ಉಪ್ಪಾರಹಳ್ಳಿ ಶಿವಮೂಕಾಬಿಂಕ ನಗರದಲ್ಲಿನ ಈರಣ್ಣನವರ ಮನೆಯಲ್ಲಿ ನೀರು ತುಂಬಿಕೊಂಡಿದ್ದರಿಂದ ಉಂಟಾದ ವಿದ್ಯುತ್ ಅವಘಡದಿಂದ ಈರಣ್ಣನವರು ಸಾವನ್ನಪ್ಪಿದ್ದಾರೆ. ಇದು ಅತ್ಯಂತ ದುಃಖಕರ ಸಂಗತಿ. ಅತಿಯಾದ ಮಳೆಯಿಂದಾಗಿ ಅವಾಂತರ, ಅವಘಡಗಳು ಸಂಭವಿಸುತ್ತಲೇ ಇವೆ. ಅವಘಡಗಳು ಆಗದಂತೆ ಅಧಿಕಾರಿಗಳು ಸಹ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿದ್ದಾರೆ ಎಂದರು.
ಮೃತ ಈರಣ್ಣನವರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಸಾಂತ್ವನ ಹೇಳಿ 5 ಲಕ್ಷ ರೂ. ಪರಿಹಾರವನ್ನು ವಿತರಿಸಲಾಗಿದೆ. ಅಲ್ಲದೆ ಪಾಲಿಕೆ ವತಿಯಿಂದಲೂ 1 ಲಕ್ಷ ರೂ. ಪರಿಹಾರವನ್ನು ನೀಡಲಾಗಿದೆ ಎಂದರು.
ಕಳೆದ 30 ವರ್ಷದಲ್ಲಿ ಜುಲೈ ತಿಂಗಳಲ್ಲಿ ಅತಿ ಹೆಚ್ಚು ಮಳೆ ಒಂದೇ ರಾತ್ರಿಯಲ್ಲಿ ಸುರಿದಿರುವುದು ಈ ಬಾರಿ ಮಾತ್ರ. ಈ ಪ್ರಮಾಣದಲ್ಲಿ ಮಳೆಯಾದರೆ ಯಾರು ಏನೂ ಮಾಡಲಾಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಈ ಕುಟುಂಬದವರಿಗೆ ಬೆಸ್ಕಾಂ ವತಿಯಿಂದಲೂ ಸಹಾಯ ಮಾಡಲಾಗುವುದು ಎಂದು ಅವರು ಹೇಳಿದರು.
ಮೃತ ಈರಣ್ಣನವರ ಪುತ್ರ ವಿನಯಕುಮಾರ್ ಹಾಗೂ ಪುತ್ರಿ ಪಂಕಜಾ ಮಾತನಾಡಿ, ಅನಿರೀಕ್ಷಿತ ಘಟನೆಯಿಂದ ನಮ್ಮ ತಂದೆಯನ್ನು ಕಳೆದುಕೊಂಡು ಶಾಕ್‍ನಲ್ಲಿದ್ದೇವೆ. ನಮ್ಮ ತಂದೆಯನ್ನು ಯಾರೂ ವಾಪಸ್ ತಂದು ಕೊಡಲು ಸಾಧ್ಯವಿಲ್ಲ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಶಾಸಕರು, ತಹಶೀಲ್ದಾರರು, ಪಾಲಿಕೆ ಆಯುಕ್ತರು, ಪಾಲಿಕೆ ಸದಸ್ಯರು ನಮ್ಮೊಂದಿಗಿದ್ದು ಧೈರ್ಯ ತುಂಬಿದ್ದಾರೆ. ಅವರುಗಳಿಗೆ ಧನ್ಯವಾದ ಸಲ್ಲಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನ್‍ಕುಮಾರ್, ಕಂದಾಯ ನಿರೀಕ್ಷಕ ಅಜಯ್, ಗ್ರಾಮ ಲೆಕ್ಕಿಗ ರವಿ, ಪಾಲಿಕೆ ಸದಸ್ಯ ಶಿವರಾಮ್ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
Mla jyothiganesh tumkur
Previous Articleಒತ್ತುವರಿ ರಾಜಗಾಲುವೆ ತೆರವುಗೊಳಿಸಲು ಆಗ್ರಹ
Next Article ಅರಕೆರೆಯಲ್ಲಿ ನರೇಗಾ ಕಳಪೆ ಕಾಮಗಾರಿ: ಗ್ರಾಮಸ್ಥರಿಗೆ ಸ್ಪಂದಿಸದ ಅಧಿಕಾರಿಗಳು
News Desk Benkiyabale

Related Posts

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm news

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm news

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm news
ತಾಜಾ ಸುದ್ಧಿಗಳು
news

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm
news

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm
news

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm
news

ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ

September 29, 2026 4:54 pm
news

ಪ್ರಜಾ ಸೇವಾ ಅಭಿಯಾನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ

September 29, 2026 4:53 pm
news

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

September 28, 2026 5:12 pm
Our Youtube Channel
Our Picks

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm

ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ

September 29, 2026 4:54 pm

ಪ್ರಜಾ ಸೇವಾ ಅಭಿಯಾನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ

September 29, 2026 4:53 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

By News Desk BenkiyabaleSeptember 29, 2026 5:00 pm

ತುಮಕೂರು: ಪ್ರಸ್ತುತ ಸಂದರ್ಭದಲ್ಲಿ ತುಮಕೂರು ಅರಸೀಕೆರೆ ಮಾರ್ಗದಲ್ಲಿ ಪ್ರಯಾಣಿಸುವ ರೈಲು ಪ್ರಯಾಣಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವುಗಳ ನಿವಾರಣೆಗೆ ವೇದಿಕೆ…

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm

ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ

September 29, 2026 4:54 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.